📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಅಕ್ರಮ ಡಿಸೇಲ್ ದಾಸ್ತಾನು ಪ್ರಕರಣ: 4,175 ಲೀಟರ್ ಡಿಸೇಲ್ ಕಂದಾಯ ಇಲಾಖೆಯಿಂದ ಹರಾಜು – ₹2.35 ಲಕ್ಷಕ್ಕೆ ಮಾರಾಟ!

    ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದಲ್ಲಿ ಅಕ್ರಮವಾಗಿ ಡಿಸೇಲ್ ದಾಸ್ತಾನು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂದಾಯ ಇಲಾಖೆ ಸರಕಾರದ ನಿಯಮಾನುಸಾರ ಹರಾಜು ಪ್ರಕ್ರಿಯೆ ನಡೆಸಿ ವಶಪಡಿಸಿಕೊಂಡ ಡಿಸೇಲ್ ಅನ್ನು ಸಾರ್ವಜನಿಕವಾಗಿ ಮಾರಾಟ ಮಾಡಿದೆ.

    ಮಾ.27 ರಂದು ನಡೆದ ಹರಾಜು ಪ್ರಕ್ರಿಯೆಯಲ್ಲಿ ಒಟ್ಟು 7 ಮಂದಿ ಭಾಗವಹಿಸಿದ್ದರು. ಈ ವೇಳೆ ಪುತ್ತೂರು ತಾಲೂಕಿನ ಹಿರೆಬಂಡಾಡಿ ನಿವಾಸಿ ನಾರಾಯಣ ಗೌಡ ಅವರು ಪ್ರತಿ ಲೀಟರ್‌ಗೆ ₹60ರಂತೆ ಒಟ್ಟು 4,175 ಲೀಟರ್ ಡಿಸೇಲ್ ಅನ್ನು ₹2,35,800ಕ್ಕೆ ಪಡೆದುಕೊಂಡಿದ್ದಾರೆ.

    🔍 ಪ್ರಕರಣದ ಹಿನ್ನೆಲೆ:

    ಮಾ.9ರ ಮಧ್ಯರಾತ್ರಿ ವೇಳೆ ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿಣಿ ಸಿ.ಕೆ ಅವರ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ, ಕಣಿಯೂರು ಗ್ರಾಮದ ಮುದೆಲ್ತಿಯಾರ್ ನಿವಾಸದ ಹಿಂಭಾಗದ ಶೆಡ್‌ನಲ್ಲಿ ಯಾವುದೇ ಅನುಮತಿ ಇಲ್ಲದೆ ಸಂಗ್ರಹಿಸಿದ್ದ 4,175 ಲೀಟರ್ ಡಿಸೇಲ್ ವಶಪಡಿಸಿಕೊಂಡಿದ್ದರು.
    ಈ ದಾಳಿಯಲ್ಲಿ 20 ಬ್ಯಾರಲ್‌ಗಳಲ್ಲಿ 4,000 ಲೀಟರ್ ಹಾಗೂ 5 ಕ್ಯಾನ್‌ಗಳಲ್ಲಿ 175 ಲೀಟರ್ ಡಿಸೇಲ್ ಪತ್ತೆಯಾಗಿದ್ದು, ಸುಮಾರು ₹3.5 ಲಕ್ಷ ಮೌಲ್ಯದ ಡಿಸೇಲ್ ವಶಪಡಿಸಿಕೊಳ್ಳಲಾಗಿದೆ.

    Also Read  ಎಷ್ಟೇ ಚಾಣಾಕ್ಷತನ ತೋರಿದರೂ, ಡಿಜಿಟಲ್ ಕಣ್ಣುಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.” AI ಸಣ್ಣ ಸುಳಿವು’ → ‘ನಿಖರ ಪತ್ತೆ’ ಜನರ ಭದ್ರತೆಗಾಗಿ ತಂತ್ರಜ್ಞಾನವೇ ಶಕ್ತಿಯುತ ಆಯುಧ ..!

    ಈ ಸಂಬಂಧ ಜಗದೀಶ್ (35) ಮತ್ತು ಹರೀಶ್ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಂಬಂಧಿತ ಕಾನೂನುಗಳಡಿ ಕ್ರಮ ಕೈಗೊಳ್ಳಲಾಗಿದೆ.

    ಹರಾಜಿನಲ್ಲಿ ಭಾಗವಹಿಸಿದ ಅಧಿಕಾರಿಗಳು:

    ಹರಾಜು ಪ್ರಕ್ರಿಯೆಯಲ್ಲಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ಆಹಾರ ಇಲಾಖೆಯ ಸಂತೋಷ್ ಜಿ, ವಿಶ್ವ ಕೆ, ಹರೀಶ್ ಕೆ, ಉಪ್ಪಿನಂಗಡಿ ಸಬ್‌ ಇನ್ಸ್‌ಪೆಕ್ಟರ್ ಸುತೇಶ್ ಹಾಗೂ ಇತರ ಸಿಬ್ಬಂದಿ ಉಪಸ್ಥಿತರಿದ್ದರು.


    ##IllegalStock #RaidSuccess##PoliceAction#belthangadi news#latest news

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    30ಕ್ಕೂ ಹೆಚ್ಚು ರಾಕ್ಷಸರ ಕಪಿಮುಷ್ಟಿಯಲ್ಲಿ ನಲುಗಿದ 13 ವರ್ಷದ ಮಗು!-ಶ್ರೀಗಂಗಾನಗರದ ಪೈಶಾಚಿಕ ಕೃತ್ಯ
    ತಪ್ಪೊಪ್ಪಿಕೊಂಡ ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಆರೋಪಿ ಶಾರೀಕ್…!ಶಿಕ್ಷೆ ಏನು?
    ಪತ್ರ ಕಳುಹಿಸುವ ಅಂಚೆ ಕಚೇರಿ ಈಗ ಜೀವವಿಮೆಗೂ ಆಸರೆ ..!ಅಂಚೆ ಕಚೇರಿಯಲ್ಲೇ ಕುಟುಂಬದ ಭವಿಷ್ಯಕ್ಕೆ ಭದ್ರತೆ!
    ಹಳಿಯಾಳದಲ್ಲಿ ನೀರಿನ ಹಾಹಾಕಾರ… ಮಾರ್ಚ್ 16ರಂದು ಬೃಹತ್ ಪ್ರತಿಭಟನೆ 
    ಹತ್ತು ವರ್ಷದಿಂದ ಪೊಲೀಸರಿಗೆ ಬೇಕಾದ ಆರೋಪಿಯನ್ನು ಕೊನೆಗೂ ಬಂಧಿಸಿದ ಪೊಲೀಸರು
    ಸೈಡ್ ಕೊಡಲಿಲ್ಲ ಎಂಬ ಸಣ್ಣ ವಿಚಾರ… ದೊಡ್ಡ ಜಗಳದ ವೈರಲ್ ವಿಡಿಯೋ… ಪೊಲೀಸ್ ಕೇಸ್… ಕೊನೆಗೆ ಬಂಧನ!
    ಬೆಚ್ಚಿಬಿದ್ದ ರಾಷ್ಟ್ರ ರಾಜಧಾನಿ, ಯಂಗ್ ಜಡ್ಜ್ ಆತ್ಮಹತ್ಯೆ
    ಬೆಳಕು-ನೆರಳಿನ ಕಾವ್ಯ: ಕಾಲವನ್ನೇ ಕಟ್ಟಿಹಾಕುವ ಛಾಯಾಚಿತ್ರಗಳ ವೈಭವ
    ನೂತನ ಸಚಿವ ಲಕ್ಷ್ಮಣ ಸವದಿ ಎದುರು ಹೈಡ್ರಾಮಾ: ಸಮಸ್ಯೆ ಹೇಳಿಕೊಳ್ಳುತ್ತಿದ್ದ ವ್ಯಕ್ತಿಗೆ ಶಾಸಕರಿಂದ ಬೆದರಿಕೆ ಆರೋಪ
    ಫ್ಲೈದುಬೈ ವಿಮಾನ ಘಟನೆ ಪ್ರಾರ್ಥನೆ ನೆಪದಲ್ಲಿ ಹಮ್ಮಾಮಿ ದಾಳಿ; ಅಲ್‌ಖೈದಾ ಬೆಂಬಲ-ನಂಟು ಬಹಿರಂಗ ! ಇತ್ತ ಸ್ಮಿತ್ ಮಚ್ಚಾರ್‌ಗೆ ಇಸ್ರೇಲ್ ವಿಶೇಷಗೌರವ ಮೋದಿ ಜೊತೆಗೆ ಆಹ್ವಾನ…!!
    ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆಯ ಕ್ರೆಡಿಟ್ ಪಡೆದುಕೊಳ್ಳಲು ಶುರುವಾಯಿತು ಫೈಟ್
    ಷೇರು ವ್ಯವಹಾರದ ಲಾಭವೂ ಆದಾಯವೇ: ಜೀವನಾಂಶ ₹50 ಸಾವಿರದಿಂದ ₹1.20 ಲಕ್ಷಕ್ಕೆ ಏರಿಸಿದ ಹೈಕೋರ್ಟ್
    “ಪ್ರಜಾಪ್ರಭುತ್ವದ ಮೇಲೆ ದಾಳಿ”ಸುಪ್ರೀಂ ಕೋರ್ಟ್ ಕಿಡಿ: ಇದು ಪ್ರತಿಭಟನೆ ಅಲ್ಲ, ಸಂಚು!”
    ಈ ಬಾರಿ ಮಕ್ಕಳೊಟ್ಟಿಗೆ PUC ಎಕ್ಸಾಮ್ ಪಾಸಾದಅಮ್ಮಂದಿರೇ ಮನಸ್ಸಿದ್ದರೆ ಮಾರ್ಗ ಇದೆ ಅನ್ನೋದಕ್ಕೆ…ಪ್ರೇರಣೆ…!
    7 ಲಕ್ಷದ ಸುಪಾರಿ ನೀಡಿ ತಾಯಿಯನ್ನು accident ಮಾಡಿ ಕೊಂದ ಮಗಳ ವಿಕೃತ ಘಟನೆ..!
    ಅಳಕೆ ಮಾರುಕಟ್ಟೆ ಬಳಿ ಕಸ ಸುರಿದ ಮಹಿಳೆಗೆ ₹1,000 ದಂಡ..ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆದರೆ ದಂಡ ಖಚಿತ! 
    “ಬೆಡ್‌ರೂಮ್ ರಾಜಕೀಯ”ಪಪ್ಪು ಯಾದವ್ ಹೇಳಿಕೆ ಸ್ಫೋಟಕ ಚರ್ಚೆ…!ಪಪ್ಪು ತಪ್ಪಾಗ್ ಮಾತಾಡಿದ್ದು ತಪ್ಪು 
    “ಭಾರತೀಯ ಕುಟುಂಬ ಆಸ್ತಿ ವಿವಾದಗಳಲ್ಲಿ ಮಧ್ಯಸ್ಥಿಕೆಯ ಮಹತ್ವವನ್ನು ಮತ್ತೊಮ್ಮೆ ಎತ್ತಿಹಿಡಿದ ಸುಪ್ರೀಂ ಕೋರ್ಟ್”
    ನಿವೇಶನ ಮೋಸದ ಆರೋಪ: ಶಾಸಕ ಎಸ್ ಟಿ ಸೋಮಶೇಖರ್ ಬೆಂಬಲಿಗ ಕೇಬಲ್ ಕೃಷ್ಣನ ಮೇಲೆ ಹಿಗ್ಗಾಮುಗ್ಗಾ ಹಲ್ಲೆ..!
    ಎಲ್ಪಿಜಿ ಗ್ಯಾಸ್ ದರದಲ್ಲಿ ಏರಿಕೆ:  ಮಧ್ಯಮ ವರ್ಗದವರಲ್ಲಿ ಹತಾಶೆ
    ವಿಶ್ವದ ಅತ್ಯುತ್ತಮ ಶಾಲೆಗಳ ಪಟ್ಟಿಯಲ್ಲಿ ಭಾರತದ 7 ಶಾಲೆಗಳು …!ವಿಶ್ವದ ಗಮನ ಸೆಳೆದ ಸಾಧನೆ ಅಂಥದ್ದೇನಿದೆ!?
    ಜಾರಕಿಹೊಳಿ ಮನೆಗೆ ED ದಾಳಿ; ಕರ್ನಾಟಕ ರಾಜಕಾರಣದಲ್ಲಿ ಮತ್ತೆ ಕಾವು!
    ತುಳು ವಿಕಿಪೀಡಿಯಾಗೆ ದಶಮಾನೋತ್ಸವ ಸಂಭ್ರಮ
    ಒಂದೆಡೆ ‘ನಶಾ ಮುಕ್ತ ಯುವ ಭಾರತ’ ಅಭಿಯಾನ; ಮತ್ತೊಂದೆಡೆ ಪಬ್ ಸಂಸ್ಕೃತಿಯ ಸೆಳೆತ..! ಮಣಿಪಾಲದಲ್ಲಿ ಅಪ್ರಾಪ್ತರ ಮದ್ಯಪಾನ ಬಯಲು
    ಏನಿದು ‘ಲಾಸ್ಟ್ ಲೈವ್’ ಮತ್ತು ಅಂತಿಮ ಸಂಸ್ಕಾರದ ವಿಡಿಯೋ ಅಸಲಿ ಸಮಾಚಾರ? ವೈರಲ್ ಆದ ಬಿಹಾರದ ಭರತ್ ತಿವಾರಿ ಎನ್‌ಕೌಂಟರ್ ಕೇಸ್…
    AIಗೆ ಒಂದು ಪ್ರಶ್ನೆ ಕೇಳಿದ್ರೆ…ಲಕ್ಷಾಂತರ ಲೀಟರ್ ನೀರು ಆವಿಯಾಗುತ್ತೆ…..!ಅದೇಗೆ.??AIಜಗತ್ತನ್ನು ಬದಲಾಯಿಸುತ್ತಿದೆ… ಆದರೆ ಶುದ್ಧ ನೀರಿನ ಜಲಮೂಲಗಳನ್ನು ಖಾಲಿ ಮಾಡುತ್ತಿದೆ.
    ಮೇ 22 ಮಂಗಳೂರು ಎಂದಿಗೂ ಮರೆಯದ ದಿನ…
    ದಿಲ್ಲಿಯಲ್ಲಿ ವಾಗ್ದಾಳಿ.. ಗಲ್ಲಿಯಲ್ಲಿ ಒಪ್ಪಂದ?! ದೇಶದ ಅತ್ಯಂತ ಕಾಂಟ್ರವರ್ಸಿಯಲ್ ಬಿಡ್ ತೆರೆಮರೆಯಲ್ಲಿ ನಡೆದ ಆ ಒಂದು ನಡೆ ಕಾಂಗ್ರೆಸ್ ಸರ್ಕಾರಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದ್ದು ಯಾಕೆ?!
    ವಿಶ್ವ ಸಂಸ್ಥೆಯು ಯಾವ ಪುರುಷಾರ್ಥಕ್ಕೆ? ಬಲವರ್ಧನೆಯ  ಅಗತ್ಯತೆ
    2047ರ ಕನಸಿನ ಭಾರತಕ್ಕಾಗಿ ದೆಹಲಿಯಲ್ಲಿ ಮೆಗಾ ಮಂಥನ… ಏನಿದೆ ಈ ಮಾಸ್ಟರ್ ಪ್ಲಾನ್‌ನಲ್ಲಿ?