📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು ಪತ್ತೆ – ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೈಂದೂರು   : ಸರ್ಕಾರ ಬಡಜನರಿಗೆ ನೀಡುತ್ತಿರುವ ಉಚಿತ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಯತ್ನಿಸಿದ್ದ ಪ್ರಕರಣ ಬೈಂದೂರು ತಾಲೂಕಿನ ಬಿಜೂರು ಗ್ರಾಮದ ಹರಕೇರಿ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ.ಸರ್ಕಾರದ ಯೋಜನೆ – ಜನರ ಹಕ್ಕು, ದುರುಪಯೋಗಕ್ಕೆ ಅವಕಾಶ ಬೇಡ!”ಸಮಾಜದ ಜವಾಬ್ದಾರಿಯುತ ನಾಗರಿಕರಾಗಿ ನಾವು ಎಲ್ಲರೂ ಸೇರಿ ಈ ರೀತಿಯ ಅಕ್ರಮಗಳನ್ನು ತಡೆದರೆ ಮಾತ್ರ ಸರ್ಕಾರದ ಯೋಜನೆಗಳು ನಿಜವಾದ ಅಗತ್ಯವಿರುವವರಿಗೆ ತಲುಪತ್ತದೆ .

ಬೈಂದೂರು ತಾಲೂಕಿನ ಆಹಾರ ನಿರೀಕ್ಷಕರಾದ ವಿನಯಕುಮಾರ್ ಅವರಿಗೆ ಹರಕೇರಿ ಪ್ರದೇಶದಲ್ಲಿ ಉಚಿತ ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಲಾಗಿದೆ ಎಂಬ ಗುಪ್ತ ಮಾಹಿತಿ ದೊರಕಿತ್ತು. ಈ ಮಾಹಿತಿಯ ಆಧಾರದಲ್ಲಿ ಅಧಿಕಾರಿಗಳು 07/03/2026 ರಂದು ಬೆಳಿಗ್ಗೆ ಸುಮಾರು 9:30 ಗಂಟೆಯ ವೇಳೆಗೆ ಸ್ಥಳಕ್ಕೆ ದಾಳಿ ನಡೆಸಿದರು.

ದಾಳಿ ಸಂದರ್ಭದಲ್ಲಿ ಆರೋಪಿಗಳಾದ ಅಬ್ದುಲ್ ಮಜೀದ ಮತ್ತು ಐಶಾ ವಾಸೀಂ ಅವರು KA-15-8917 ಸಂಖ್ಯೆಯ ಮೂರು ಚಕ್ರದ ಗೂಡ್ಸ್ ವಾಹನದಲ್ಲಿ ಸರ್ಕಾರದ ಉಚಿತ ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿಕೊಂಡಿರುವುದು ಪತ್ತೆಯಾಯಿತು. ಆರೋಪಿಗಳು ಈ ಅಕ್ಕಿಯನ್ನು ಯಾರಿಂದಲೋ ಖರೀದಿಸಿ ನಂತರ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ದಾಸ್ತಾನು ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ.

ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಒಟ್ಟು 15 ಪಾಲಿಥಿನ್ ಚೀಲಗಳಲ್ಲಿ ತುಂಬಿದ್ದ ಸುಮಾರು 400 ಕಿಲೋಗ್ರಾಂ ತೂಕದ ಅಕ್ಕಿಯನ್ನು ವಶಪಡಿಸಿಕೊಂಡರು. ಈ ಅಕ್ಕಿಯ ಮೌಲ್ಯ ಸುಮಾರು ₹9,200 ಎಂದು ಅಂದಾಜಿಸಲಾಗಿದೆ.
ಸ್ವಾಧೀನಪಡಿಸಿಕೊಂಡ ಅಕ್ಕಿಯನ್ನು ನಂತರ ತಲ್ಲೂರು TAMPMC ಗೋಡಾಮಿಗೆ ಸಾಗಿಸಿ ಸುರಕ್ಷಿತವಾಗಿ ಇರಿಸಲಾಗಿದೆ.

ಅನ್ನಭಾಗ್ಯ ಯೋಜನೆ ಹೇಗೆ ದುರುಪಯೋಗವಾಗುತ್ತದೆ? ಕೆಲವರು ರೇಷನ್ ಕಾರ್ಡ್ ಹೊಂದಿರುವವರಿಂದ ಅಕ್ಕಿ ಖರೀದಿಸುವುದು,ಅದನ್ನು ದಾಸ್ತಾನು ಮಾಡುವುದು ನಂತರ ಮಾರುಕಟ್ಟೆಯಲ್ಲಿ ಹೆಚ್ಚು ಬೆಲೆಗೆ ಮಾರಾಟ ಮಾಡುವುದು. ಇದರಿಂದ ನಿಜವಾಗಿಯೂ ಅಗತ್ಯವಿರುವ ಬಡ ಕುಟುಂಬಗಳಿಗೆ ಸಿಗಬೇಕಾದ ಅಕ್ಕಿ ಮಾರುಕಟ್ಟೆಗೆ ಹೋಗುವ ಅಪಾಯ ಉಂಟಾಗುತ್ತದೆ.

ಈ ಘಟನೆ ಕುರಿತು ಆಹಾರ ನಿರೀಕ್ಷಕರಾದ ವಿನಯಕುಮಾರ್ ಅವರು ನೀಡಿದ ದೂರಿನ ಆಧಾರದ ಮೇಲೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 23/2026 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, Essential Commodities Actನ ಕಲಂ 3, 6 ಮತ್ತು 7ರಡಿ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸರ್ಕಾರ ಬಡಜನರ ಕಲ್ಯಾಣಕ್ಕಾಗಿ ನೀಡುವ ಉಚಿತ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಈ ರೀತಿಯಾಗಿ ಅಕ್ರಮವಾಗಿ ಖರೀದಿ ಮಾಡಿ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಯತ್ನಿಸುವ ಘಟನೆಗಳು ಸಮಾಜದಲ್ಲಿ ಆತಂಕ ಮೂಡಿಸುತ್ತಿವೆ.
ಆದ್ದರಿಂದ ನಿಮ್ಮ ರೇಷನ್ ಅಕ್ಕಿಯನ್ನು ಮಾರಾಟ ಮಾಡಬೇಡಿ,ಯಾರಾದರೂ ಅಕ್ರಮವಾಗಿ ಸಂಗ್ರಹಿಸುತ್ತಿದ್ದರೆ ಅಥವಾ ಖರೀದಿಸುತ್ತಿದ್ದರೆ ಮಾಹಿತಿ ನೀಡಿ,ಹತ್ತಿರದ ಆಹಾರ ಇಲಾಖೆ ಅಥವಾ ಪೊಲೀಸ್ ಠಾಣೆಗೆ ತಿಳಿಸಿ ಈ ಹಿನ್ನೆಲೆಯಲ್ಲಿ ಸಂಬಂಧಿತ ಅಧಿಕಾರಿಗಳು ಇಂತಹ ಅಕ್ರಮ ಚಟುವಟಿಕೆಗಳನ್ನು ತಡೆಯಲು ಕಠಿಣ ಕ್ರಮ ಕೈಗೊಳ್ಳುವಂತೆ ಎಚ್ಚರಿಕೆ ನೀಡಿದ್ದಾರೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಡೇಟಾದಲ್ಲಿ ಸತ್ತಿದ್ದಾರೆ: ಬಡ ಮಹಿಳೆ ತಾನು ಜೀವಂತ ಸಾಬೀತುಪಡಿಸಲು ಹರಸಾಹಸ…ಬಡಜನರು “ಡೇಟಾ” ಅಲ್ಲ — ಅವರು ಜೀವಂತ ಮಾನವರು. 
“ಪಾಲಕ್ಕಾಡ್‌ನಲ್ಲಿ ಮೋದಿ ಚಂಡೆ ಸದ್ದು—ಕೇರಳದಲ್ಲಿ ಚುನಾವಣಾ ಕಹಳೆ!” 
ಘರ್ ವಾಪ್ಸಿ ಯಾದ ಯೋಗೇಶ್ ಶೆಟ್ಟಿ ಜೆಪ್ಪು
ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ
ಬ್ರಹ್ಮಾವರ, ಮಂದಾರ್ತಿ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಹೇಳೋರು ಕೇಳೋರು ಯಾರು ಇಲ್ವಾ?
50 ಸಾವಿರ ಸಾಲಕ್ಕೆ ಸವಣೂರು ಪೇಟೆಯಲ್ಲಿ ರಕ್ತಸಿಕ್ತ ಘರ್ಷಣೆ ..
ಎಲ್ಲೆಡೆ LPG ಗ್ಯಾಸ್ ಸಿಲಿಂಡರ್ ಸಂಕಷ್ಟ: ಇದು ಜೀವನೋಪಾಯದ ಪ್ರಶ್ನೆ… ತಕ್ಷಣ ಸಮರ್ಪಕ ಕ್ರಮ ಸರ್ಕಾರದ ಹೊಣೆ.
ಹೆಸರು ಬದಲಾವಣೆ ಪಶ್ಚಿಮ ಬಂಗಾಳ ಪೆಂಡಿಂಗ್, ಕೇರಳ ಪ್ರಗತಿಯಲ್ಲಿ
ಮೂಡಬಿದಿರೆ ಇನ್‌ಸ್ಪೆಕ್ಟರ್ ಪ್ರಕರಣಕ್ಕೆ ಟ್ವಿಸ್ಟ್: ಆರೋಪ ಮಾಡಿದ ಮಹಿಳೆಯ ವಿರುದ್ಧವೇ ಸಹೋದರಿಯ ಬಾಂಬ್!
ಬ್ಯಾಂಕುಗಳ ಮೇಲೆ ಭೀಕರ ದಾಳಿಯ ಮುನ್ಸೂಚನೆ ನೀಡಿದ ಇರಾನ್- ಮಿನಿಮಮ್ 1000 ಮೀಟರ್ ದೂರವಿರಿ
ಹಾವು ಮುಂಗುಸಿ ಅಂತಾಗಿದ್ದವರು ಒಂದಾದರು
ಮಸೀದಿ ಹುಂಡಿಗೂ ಲಗ್ಗೆ ಇಟ್ಟ ಕಳ್ಳರು….!
Lokayukta Raid In Hassan: ಬಾಗಿಲು ತೆರೆಯದೆ AEE ಹೈಡ್ರಾಮಾ, ಮನೆ ಏರಿದ ಲೋಕಾ ಪೊಲೀಸರು | AEE Satyanarayan
ರೀಲ್ಸ್ ಮಾಡುವ ಕನಸು… ಕ್ಷಣದಲ್ಲೇ ದುರ್ಘಟನೆ,  ಜೀವವನ್ನೇ ಕಳೆದುಕೊಂಡ ಬಾಲಕ.
ಸಚಿವ ಜಮೀರ್ ಕಥೆ ಗೋವಿಂದ!!!?
ಭೀಕರ ಅಪಘಾತ ಮಹಿಳೆ ಬಲಿ
ಪ್ರತೀಕಾರದ ದಾಳಿಗೆ ‘ ರೌಡಿಶೀಟರ್ ಟ್ಯಾಬ್ಲೆಟ್’ ಆರೀಫ್ ಖತಂ .!
ಕಾರಿಗೆ ಮಹಿಳೆ ಡಿಕ್ಕಿ..ಗುಳಿಗಜ್ಜನೆ ಕಾಪಾಡಿದ್ದ..! ಎದೆ ಜಲ್ಲೆನಿಸುವ ದೃಶ್ಯ
ಅಪ್ರಾಪ್ತನ ಕ್ರೌರ್ಯಕ್ಕೆ ಬಳ್ಳಾರಿ ವಸತಿ ಶಾಲೆಯ ದೌರ್ಜನ್ಯವೇ ಸಾಕ್ಷಿ… ಈ ಕ್ರೌರ್ಯದ ಹಿಂದೆ ಮನೋರೋಗ ಅಡಗಿದೆಯಾ? 
ದ್ವಿತೀಯ ಪಿ.ಯು.ಸಿ ಪರೀಕ್ಷಾ ಹಾಜರಾತಿ
ಇರಾನ್ ಬಿಕ್ಕಟ್ಟು ವೀಸಾ ವಿಸ್ತರಿಸಲು ವಿದೇಶಿ ಪ್ರಜೆಗಳು ಹತ್ತಿರದ FRRO ಅನ್ನು ಸಂಪರ್ಕಿಸಲು ಭಾರತ ಸಲಹೆ
ಕಂದಾಯ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ
🔴 ಯುದ್ಧದ ಹೊತ್ತಿನಲ್ಲಿ ಮಾನವೀಯ ರಾಜತಾಂತ್ರಿಕತೆ: ಇರಾನ್‌ಗೆ ಭಾರತದಿಂದ ಮೊದಲ ವೈದ್ಯಕೀಯ ನೆರವು:
ಪಿವಿ ಎಸ್ ಸಂಸ್ಥೆಯ ಆಡಳಿತದಲ್ಲಿ ಯಾರ ಹಸ್ತಕ್ಷೇಪವು ಇಲ್ಲ – ಸರೋಜಿನಿ ಕುಶೆ
ವರದಕ್ಷಿಣ ಪ್ರಕರಣ:5.5 ತಿಂಗಳ ಮಗುವಿಗೂ ದೈಹಿಕ ಹಿಂಸೆ….!
ಮಂಗಳೂರು ಜಾರಂದಾಯ ಸ್ಥಾನದ ದೈವ ನರ್ತನ ವಿವಾದ – ಸ್ಪಷ್ಟನೆ- ಮರುಪ್ರಶ್ನೆ-ಇತ್ಯರ್ಥವಾಗುತ್ತಾ..?!
Top 5, ಹೆಚ್ಚು ಅನುದಾನ ಪಡೆದ ಇಲಾಖೆಗಳು ಯಾವವು ಗೊತ್ತಾ?
ಬಾಲಗರ್ಭಿಣಿಯರ ಸಂಖ್ಯೆ 5975….!!
ಅಸ್ಸಾಂನಲ್ಲಿ ಮತದಾನದ ಹಿನ್ನೆಲೆ ಹಿಂಸಾಚಾರ: 30ಕ್ಕೂ ಹೆಚ್ಚು ಮಂದಿ ಗಾಯ, 7 ಜನರ ಬಂಧನ
ಯುವ ಜನಾಂಗದ ಹೋರಾಟ ಕಿಚ್ಚಾಗದಂತೆ ನೋಡಿಕೊಳ್ಳಿ