📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಇಂದು ಮಂಗಳೂರಲ್ಲಿ ತಲೆಮೇಲೆ ಸುತ್ತು ಹೊಡೆದಂತೆ ಬಾರಿ ಶಬ್ದದೊಂದಿಗೆ ಹೆಲಿಕಾಪ್ಟರ್‌..!ಆಶ್ಚರ್ಯ ಮತ್ತು ಆತಂಕದ ಹಿಂದಿದೆ ಭದ್ರತಾ ‘ಮೆಗಾ ಡ್ರಿಲ್’ ..!ಅಸಲಿ ಕಾರಣವೇನು

    ಮಂಗಳೂರು ನಗರದ ವಿವಿಧ ಭಾಗಗಳಲ್ಲಿ ಇಂದು ಬೆಳಗ್ಗೆ ಆಕಾಶದಲ್ಲಿ ಕೆಳಮಟ್ಟದಲ್ಲಿ ಹೆಲಿಕಾಪ್ಟರ್ ಹಾರಾಟ ಕಂಡು ಗಾಬರಿಗೊಂಡ ಸಾರ್ವಜನಿಕ‌ ಅನೇಕರು ಈ ಬಗ್ಗೆ ಆತಂಕ ವ್ಯಕ್ತಪಡಿಸಿದ ಘಟನೆಯೂ ನಡೆದಿದೆ. ಎನ್ ಎಸ್ ಜಿಯ ಕಾರ್ಯದಕ್ಷತೆ ಕುರಿತಂತೆ ಮಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ಅಣಕು ಕಾರ್ಯಾಚರಣೆಯ ಭಾಗವಾಗಿ ಈ ಹೆಲಿಕಾಪ್ಟರ್ ಹಾರಾಟ ನಡೆಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದು, ಸಾರ್ವಜನಿಕರು ಗಾಬರಿ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

    ನಗರದ ಹಂಪನಕಟ್ಟೆ, ಕಾರ್‌ಸ್ಟ್ರೀಟ್ , ಮಾರ್ಕೆಟ್ ರೋಡ್ , ಬಂದರ್ ಸೇರಿದಂತೆ ವಿವಿಧ ಪ್ರದೇಶಗಳ ಮೇಲೆ ಹೆಲಿಕಾಪ್ಟರ್ ಹಲವು ಬಾರಿ ಸುತ್ತು ಹಾಕಿದ ಹಿನ್ನೆಲೆಯಲ್ಲಿ, ಕೆಲಕಾಲ ಜನರಲ್ಲಿ ಆತಂಕವೂ ಮೂಡಿತ್ತು. ಸಾಮಾಜಿಕ ಜಾಲತಾಣಗಳಲ್ಲಿಯೂ ಹೆಲಿಕಾಪ್ಟರ್ ಹಾರಾಟದ ದೃಶ್ಯಗಳು ವೈರಲ್ ಆದವು .

    Also Read  ಹಾರ್ಮುಜ್ ಬಳಿ ಹಡಗುಗಳ ಹಿಂತಿರುಗುವ ಸರಣಿ!ಜಾಗತಿಕ ತೈಲ ಸರಬರಾಜಿಗೆ ಶಾಕ್ ⚠️

    ರಾಷ್ಟ್ರೀಯ ಭದ್ರತಾ ದಳ ತಂಡವು ದ.ಕ. ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಭಯೋತ್ಪಾದನಾ ನಿಗ್ರಹ ಅಣಕು ಕಾರ್ಯಾಚರಣೆ ನಡೆಸುತ್ತಿದ್ದು, ಇದರ ಭಾಗವಾಗಿ ಮಂಗಳೂರಿನ ವಿವಿಧ ಕಡೆ ಇಂದು ಹೆಲಿಕಾಪ್ಟರ್ ಹಾರಾಟ ನಡೆಸಿದೆ. ಇದು ನಾಗರಿಕರಲ್ಲಿ ಸಂಚಲನ ಮೂಡಿಸಿತು.

    NSG ಭಾರತ ಸರ್ಕಾರದ ಗೃಹ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ವಿಶೇಷ ಭಯೋತ್ಪಾದನಾ ನಿಗ್ರಹ ಪಡೆ. ತುರ್ತು ಭಯೋತ್ಪಾದನಾ ದಾಳಿಗಳು, ಒತ್ತೆಯಾಳು ರಕ್ಷಣೆ ಹಾಗೂ ಅತ್ಯಂತ ಗಂಭೀರ ಭದ್ರತಾ ಪರಿಸ್ಥಿತಿಗಳನ್ನು ಎದುರಿಸಲು ಈ ಪಡೆ ವಿಶೇಷ ತರಬೇತಿ ಪಡೆದಿದೆ. ಇಂತಹ ಅಣಕು ಕಾರ್ಯಾಚರಣೆಗಳು ಪಡೆಗಳ ಸಿದ್ಧತೆ, ಸ್ಥಳೀಯ ಭೌಗೋಳಿಕ ಪರಿಸ್ಥಿತಿಯ ಅರಿವು ಹಾಗೂ ವಿವಿಧ ಇಲಾಖೆಗಳ ನಡುವಿನ ಸಮನ್ವಯವನ್ನು ಪರೀಕ್ಷಿಸಲು ಸಹಕಾರಿಯಾಗುತ್ತವೆ.

    ಇದು ಯಾವುದೇ ತುರ್ತು ಪರಿಸ್ಥಿತಿ ಅಥವಾ ಭದ್ರತಾ ಬೆದರಿಕೆಯ ಸೂಚನೆಯಲ್ಲ ಎಂದು ತಿಳಿದುಬಂದಿದೆ. ರಾಷ್ಟ್ರೀಯ ಭದ್ರತಾ ದಳ (NSG) ಹಾಗೂ ಸ್ಥಳೀಯ ಭದ್ರತಾ ವ್ಯವಸ್ಥೆಗಳ ಸಹಯೋಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಭಯೋತ್ಪಾದನಾ ನಿಗ್ರಹ ಅಣಕು ಕಾರ್ಯಾಚರಣೆ ನಡೆಸಲಾಗುತ್ತಿದೆ. ಇದರ ಭಾಗವಾಗಿ ಹೆಲಿಕಾಪ್ಟರ್ ಮೂಲಕ ತ್ವರಿತವಾಗಿ ಭದ್ರತಾ ಪಡೆಗಳನ್ನು ನಿರ್ದಿಷ್ಟ ಸ್ಥಳಕ್ಕೆ ತಲುಪಿಸುವುದು, ಕಟ್ಟಡಗಳ ಮೇಲೆ ಇಳಿಯುವಿಕೆ, ರಕ್ಷಣಾ ಕಾರ್ಯಾಚರಣೆ ಹಾಗೂ ತುರ್ತು ಪರಿಸ್ಥಿತಿಯಲ್ಲಿ ಕಾರ್ಯಾಚರಣೆ ನಡೆಸುವಂತಹ ಅಭ್ಯಾಸಗಳನ್ನು ನಡೆಸಲಾಗುತ್ತಿದೆ.

    Also Read  ಅಂಗಳ, ಶೆಡ್, ಗೋದಾಮು ಮಾತ್ರವಲ್ಲ… ಡೈನಿಂಗ್ ಹಾಲ್‌ಗೂ ಬಂದ 8 ಅಡಿ ಕಾಳಿಂಗ!

    ಮಂಗಳೂರಿನಂತಹ ಪ್ರಮುಖ ಕರಾವಳಿ ನಗರದಲ್ಲಿ ಬಂದರು, ವಿಮಾನ ನಿಲ್ದಾಣ, ಪ್ರಮುಖ ಸರ್ಕಾರಿ ಕಟ್ಟಡಗಳು ಹಾಗೂ ಜನಸಂದಣಿ ಪ್ರದೇಶಗಳಿರುವ ಹಿನ್ನೆಲೆಯಲ್ಲಿ ಇಂತಹ ಭದ್ರತಾ ಅಭ್ಯಾಸಗಳು ಮಹತ್ವದ್ದಾಗಿವೆ.ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಗಳಲ್ಲಿ NSG ದೇಶದ ವಿಶೇಷ ತರಬೇತಿ ಪಡೆದ ಫೆಡರಲ್ ಕೌಂಟರ್-ಟೆರರಿಸಂ ಪಡೆಯಾಗಿ ಕಾರ್ಯನಿರ್ವಹಿಸುತ್ತದೆ. NSG ತರಬೇತಿ ಕೇಂದ್ರವು ಬಾಂಬ್ ನಿಷ್ಕ್ರಿಯಗೊಳಿಸುವಿಕೆ, ಕೌಂಟರ್-IED ಕಾರ್ಯಾಚರಣೆಗಳು ಮತ್ತು ನಗರ ಪ್ರದೇಶಗಳಲ್ಲಿನ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಿಗೆ ವಿಶೇಷ ತರಬೇತಿ ನೀಡುತ್ತದೆ. ರಾಜ್ಯ ಪೊಲೀಸ್ ಪಡೆಗಳೊಂದಿಗೆ ಜಂಟಿ ಅಭ್ಯಾಸಗಳನ್ನು ನಡೆಸುವುದು ಇದರ ತರಬೇತಿ ವ್ಯವಸ್ಥೆಯ ಪ್ರಮುಖ ಭಾಗವಾಗಿದೆ.

    ##Mangaluru #NSGMockDrill #DakshinaKannada #SecurityExercise #KarnatakaNews #BreakingNews #HelicopterNews

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    108 ವರ್ಷಗಳ ಇತಿಹಾಸದಲ್ಲಿ ಪಾಟ್ನಾವಿಶ್ವವಿದ್ಯಾಲಯದಲ್ಲಿ ಹೊಸ ಅಧ್ಯಾಯ- ಮಹಿಳೆಯರ ಐತಿಹಾಸಿಕ ಹೆಜ್ಜೆ!
    ಸರ್ಕಾರಕ್ಕೆ CJP ಸವಾಲು…ದೆಹಲಿ ಪ್ರತಿಭಟನೆಗೆ ಹಿಂಸಾತ್ಮಕ ತಿರುವು..ಲಾಠಿಚಾರ್ಜ್, ಅಶ್ರುವಾಯು, ಇಂಟರ್ನೆಟ್ ಶಟ್‌ಡೌನ್..
    ಪಶ್ಚಿಮ ಬಂಗಾಳ ಅಪ್ರಾಪ್ತೆಯ ಸಾವು, ಸಾರ್ವಜನಿಕರಿಂದ ಶಂಕಿತನ ಲಿಂಚಿಂಗ್ ..!ಬಾಲಕಿಯ ಹತ್ಯೆ ಬೆನ್ನಲ್ಲೇ ಭುಗಿಲೆದ್ದ ಹಿಂಸಾಚಾರ;
    ತಮಿಳುನಾಡು ರಾಜಕೀಯದಲ್ಲಿ ದಿನಕ್ಕೊಂದು ಟ್ವಿಸ್ಟ್ -TVK wave ಎಷ್ಟು ದೂರ ಸಾಗುತ್ತದೆ?
    ದಾವಣಗೆರೆ ಬೆಚ್ಚಿಬಿದ್ದಿದೆ! 41 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ..
    ರೀಲ್ಸ್ ಮಾಡುವ ಕನಸು… ಕ್ಷಣದಲ್ಲೇ ದುರ್ಘಟನೆ,  ಜೀವವನ್ನೇ ಕಳೆದುಕೊಂಡ ಬಾಲಕ.
    ಫೈವ್ ಸ್ಟಾರ್ ಹೋಟೆಲ್‌ಗಳಲ್ಲೇ ಹಾಳಾದ ಹಾಲು, ಕೊಳೆತ ತರಕಾರಿ ಪತ್ತೆ!ಫುಡ್ ಸೇಫ್ಟಿ ದಾಳಿ ಅಧಿಕಾರಿಗಳೇ ಬೆಚ್ಚಿಬಿದ್ದರು….!
    ಘೋರ ಭಾನುವಾರ, ಒಂದೇ ಕುಟುಂಬದ ಎಂಟು ಮಹಿಳೆಯರ ದುರ್ಮರಣ
    ಜೈಲಿನೊಳಗೆ ಮೊಬೈಲ್ ಮಾಫಿಯಾ: ಖತರ್ನಾಕ್ ಐಡಿಯಾ..!
    ಜಿಲ್ಲಾ ಸರ್ಜನ್ ಡಾ. ಅಶೋಕ್ರನ್ನು ತಕ್ಷಣವೇ ಅಮಾನತು ಮಾಡಿ- ದ.ಸಂ.ಸ. ಆಗ್ರಹ
    ಸಂಸದ ಸಂಜಯ್ ಅರೋರ ಬಂಧನ…. ಉಳಿದ ಮೂರು ಸಂಸದರನ್ನು ಸೆಳೆಯಲು ಈ ಅನೈತಿಕ ಮಾರ್ಗ ಎಂದು ಎಎಪಿ.
    BRICS ಸಭೆಯಲ್ಲಿ UAE ಮೇಲೆ ಇರಾನ್ ಕಿಡಿ! ಇಸ್ರೇಲ್–ಇರಾನ್ ಯುದ್ಧ – ಇಸ್ರೇಲ್‌ಗೆ UAE ಗುಪ್ತ ಬೆಂಬಲವೇ?
    ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆಯ ಪೋಸ್ಟ್ ಗಳನ್ನು ಹಾಕಿದ ಆರೋಪಿಯ ಬಂಧನ
    ಏನಿದು ‘ಲಾಸ್ಟ್ ಲೈವ್’ ಮತ್ತು ಅಂತಿಮ ಸಂಸ್ಕಾರದ ವಿಡಿಯೋ ಅಸಲಿ ಸಮಾಚಾರ? ವೈರಲ್ ಆದ ಬಿಹಾರದ ಭರತ್ ತಿವಾರಿ ಎನ್‌ಕೌಂಟರ್ ಕೇಸ್…
    ಬೆಂಗಳೂರಲ್ಲಿ Bowring Hospital ಬಳಿ ಗೋಡೆ ಕುಸಿತ ಮನ ಕಲುಕುವ ಘಟನೆ ಬಿಸಿಲಿನಿಂದ ತಪ್ಪಿಸಿಕೊಳ್ಳಲು ನಿಂತವರು… ಏಳು ಮಂದಿಯ ದುರಂತ ಅಂತ್ಯ.!
    🚨 ಬ್ರೇಕಿಂಗ್ ‼️ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ: ಜುಲೈ 2 (ಗುರುವಾರ) ರಜೆ ಘೋಷಣೆ
    ಜಸ್ಟ್ one click ನಲ್ಲೇ ಎಲ್ಲಾ ಸರ್ಟಿಫಿಕೇಟ್…!2026–27ರಿಂದ ಅಂಕಪಟ್ಟಿ ಹಾರ್ಡ್ ಕಾಪಿ ಇಲ್ಲ..
    ತಿಮರೋಡಿ ಸೇರಿ ನಾಲ್ವರಿಗೆ ಕೇಸ್…
    ಅಪ್ಪಿಕೊಳ್ಳುವ ಅಮ್ಮನ ಕೈಗಳೇ ಕತ್ತು ಹಿಸುಕಿ ಉಸಿರು ನಿಲ್ಲಿಸಿದ್ರೆ … ಎಂಥ ದುರ್ವಿಧಿ..!
    ದರ್ಬೆ ಗಲಾಟೆ: ಸಾಕ್ಷ್ಯಾಧಾರದ ಆಧಾರದಲ್ಲೇ ಕಾನೂನು ಕ್ರಮ – ಎಸ್ಪಿ ಅರುಣ್ ಕೆ
    ಕಸ ಎಸೆದರೆ ದುಪ್ಪಟ್ಟು ದಂಡ: ಬೆಂಗಳೂರು ಶುರು ಮಾಡಿದೆ, ಮಂಗಳೂರು ಯಾವಾಗ? ಈಗ ಮಾತಲ್ಲ, ಕಠಿಣ ಕಾರ್ಯಾಚರಣೆ ಬೇಕು,ಕಟ್ಟುನಿಟ್ಟಿನ ಕ್ರಮಗಳಾಗ್ಬೆಕ್ ..
    ಕುಂದಾಪುರದಲ್ಲಿ ಎರಡು ಮಕ್ಕಳ ತಾಯಿ ನಾಪತ್ತೆ. ಸ್ನೇಹಿತರ ಜೊತೆಯಲ್ಲಿ ಹೋಗಿರುವ ಶಂಕೆ
    ಮೋದಿ ಸರ್ಕಾರಕ್ಕೆ ಮತ್ತೊಂದು ಶಾಕ್ …ಕೇಂದ್ರ ಸಚಿವ ಸಂಪುಟಕ್ಕೆ ರವನೀತ್ ಸಿಂಗ್ ಬಿಟ್ಟು ರಾಜೀನಾಮೆ
    ಭೋಪಾಲ್ ತ್ವಿಷಾ ಶರ್ಮಾ ಪ್ರಕರಣ ಪೋಷಕರ ಪಟ್ಟು-ಅಂತ್ಯಕ್ರಿಯೆ ಮಾಡುವುದಿಲ್ಲ “ನ್ಯಾಯ ಸಿಗುವವರೆಗೂ ನಾವು ದೇಹವನ್ನು ಸ್ವೀಕರಿಸುವುದಿಲ್ಲ” 
    ನ್ಯಾಯಾಂಗಕ್ಕೆ ಕಳಂಕ ತರುವುದನ್ನು ನೋಡಿಯೂ ಕೈಕಟ್ಟಿ ಕೂರಲಾಗದು
    🚨 “ಮಂಗಳೂರು ಜಿಲ್ಲಾಕಾರಾಗೃಹದಲ್ಲಿ ಗಲಾಟೆ: ಜೈಲು ಅಧೀಕ್ಷಕರ ಮೇಲೆಯೇ ಕೈದಿಗಳ ಹಲ್ಲೆಯತ್ನ!”
    ಕಾಂಗ್ರೆಸ್ ನಿಂದ ”MLC ಮಾಡಿಸುತ್ತೇನೆ” ಎಂದು 1.5 ಕೋಟಿ ವಂಚನೆ ಆರೋಪ
    ಕೋವಿಡ್ ಶೀಲ್ಡ್ ಸೈಡ್ ಎಫೆಕ್ಟ್ ಒಪ್ಪಿಕೊಂಡ ಕಂಪನಿ
    ಒಂದು ವಾಟ್ಸ್ಯಾಪ್ ಮೆಸೇಜ್… ಕೋರ್ಟ್ ವರೆಗೂ ಎಳೆದ ಶಾಕ್ ಘಟನೆಯ ಸುತ್ತ..
    ಹತ್ತು ವರ್ಷದ ಮಗಳ ಹುಟ್ಟುಹಬ್ಬದ ಸಂಭ್ರಮ…  ವಿಧಿಯಾಟದಲ್ಲಿ ಕಣ್ಣೀರಾಗಿ ಮಾರ್ಪಟ್ಟ ದುರಂತ ಕಥೆ