📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಉಪಚುನಾವಣೆ ಮುಗಿಯುತಿದ್ದಂತೆಯೇ, ವಿದ್ಯುತ್ ದರ ಏರಿಸುತ್ತಿರುವ ರಾಜ್ಯ ಸರ್ಕಾರ

    ಕರ್ನಾಟಕದ ಜನರಿಗೆ ಒಂದು ಕಡೆಯಿಂದ ಬಿಸಿಲಿನ ತಾಪದ  ನೋವಾದರೆ ಇನ್ನೊಂದು ಕಡೆಯಿಂದ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿರೋ ನೋವು. ಸಾಲದೂ ಎಂಬಂತೆ, ವಿದ್ಯುತ್ ದರ ಏರಿಕೆಯ ಬಿಸಿ ತಟ್ಟುತ್ತಿದೆ.

    2024 ಹಾಗೂ 25ರ ಆರ್ಥಿಕ ವರ್ಷದಲ್ಲಿ ಕೆ ಇ ಆರ್ ಸಿ ವಾರ್ಷಿಕ ಲಾಭವಾಗಿ 34.0 84 ಕೋಟಿ  ಆದಾಯದ ನಿರೀಕ್ಷೆ ಮಾಡಿತ್ತು. ಆ ನಿರೀಕ್ಷೆಗೆ ತಕ್ಕಂತೆ ಆದಾಯವಾಗಿಲ್ಲವಂತೆ. ಕೇವಲ 32.019 ಕೋಟಿ ಆದಾಯವನ್ನಷ್ಟೇ ಗಳಿಸಲು ಸಾಧ್ಯವಾಯಿತಂತೆ. 2.068 ಕೋಟಿ ಆದಾಯದ ಕೊರತೆ ಉಂಟಾಗಿದ್ದು, ಅದನ್ನು ಸರಿದೂಗಿಸಲು ಗ್ರಾಹಕರಿಗೆ ಅದರ ಹೊರೆ ಹೊರಿಸಲು ಪ್ಲಾನ್ ರೂಪಿಸಿದೆ ವಿದ್ಯುತ್ ಕಂಪನಿಗಳು.

    ಹೌದು ಕೆ ಇ ಆರ್ ಸಿ ಗೆ ಎಸ್ಕಾಂ ಸಂಸ್ಥೆಗಳು ಈಗಾಗಲೇ ವಿದ್ಯುತ್ ದರದ ಹೆಚ್ಚಳಕ್ಕೆ ಮನವಿ ಮಾಡಿದ್ದು, ಆ ಮನವಿಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ ಅನ್ನೋದು ಈಗ ಗೌಪ್ಯವಾಗಿಲ್ಲದ ವಿಚಾರವಾಗಿದೆ. 

    Also Read  ಉಡುಪಿ ಮಹಿಳೆಗೆ ಮುಂಬೈನಲ್ಲಿ ಕಂಬಿ! ₹3.10 ಕೋಟಿ ವಂಚನೆ ಉಡುಪಿ ಮೂಲದ ಮಹಿಳೆ ಅರೆಸ್ಟ್!

    ಒಂದು ಮೂಲದ ಪ್ರಕಾರ ಇದು ಒಂದು ತಿಂಗಳ ಮೊದಲೇ ವಿದ್ಯುತ್ ದರ ಹೆಚ್ಚಳವಾಗಬೇಕಾಗಿದ್ದ ವಿಷಯವಾಗಿತ್ತಂತೆ. ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣೆಯವರೆಗೆ ದರ ಹೆಚ್ಚಳವಾಗದಂತೆ ನೋಡಿಕೊಳ್ಳುವ ಕೆಲಸವನ್ನು ಸಿದ್ದರಾಮಯ್ಯನವರ ಸರ್ಕಾರ ಮಾಡಿದೆ. ಈಗ ಚುನಾವಣೆ ಮುಗಿದಿದೆ. ಇನ್ನೇನು ಜನರ ಅವಶ್ಯಕತೆ ಸಧ್ಯಕ್ಕಿಲ್ಲ ಎಂಬ ತೀರ್ಮಾನಕ್ಕೆ ಸರ್ಕಾರ ಬಂದಂತಿದೆ. ಅದಿಲ್ಲಾಂದ್ರೆ, ಚುನಾವಣೆಯ ಹೊಸ್ತಿಲಿನಲ್ಲಿ ಯಾವುದೇ ಬೆಲೆ ಏರಿಕೆಯ ಕಾರ್ಯ ಮಾಡದವರು, ಚುನಾವಣೆಯ ನಂತರ ಬೆಲೆ ಏರಿಸುವುದು ಎಷ್ಟು ಸರಿ? 

    ಅದೇನೇ ಇರಲಿ, ಒಂದು ಕಡೆಯಲ್ಲಿ ಬಿಸಿಲಿನ ತಾಪ ಹೆಚ್ಚುತ್ತಿದೆ. ವಿದ್ಯುತ್ ಬಳಕೆ ಅನಿವಾರ್ಯವೂ ಹೌದು. ಅಂತರಾಷ್ಟ್ರೀಯ ಮಟ್ಟದಲ್ಲಿನ ಅನೇಕ ಘಟನೆಗಳಿಂದಾಗಿ ಕಚ್ಚಾ ತೈಲದಲ್ಲೂ ಬೆಲೆ ಗಗನಕ್ಕೇರುವ ಸಾಧ್ಯತೆ ಸ್ಪಷ್ಟವಾಗಿರುವ ಕಾರಣ, ಅಗತ್ಯ ವಸ್ತುಗಳ ಎಲ್ಲಾ ಬೆಲೆಯ ಮೇಲೂ, ಇದರ ಪರಿಣಾಮ ಉಂಟಾಗುವದಲ್ಲಿ ಎರಡು ಮಾತೇ ಇಲ್ಲ. ಹೀಗಿರುವಾಗ ವಿದ್ಯುತ್ ಬೆಲೆಯನ್ನೂ ಸಹ ಇದೇ ಸಂದರ್ಭದಲ್ಲಿ ಏರಿಸುವುದು ಎಷ್ಟರ ಮಟ್ಟಿಗೆ ಸರಿ ಎಂಬ ಪ್ರಶ್ನೆ ಏಳುತ್ತಿದೆ. ಸರ್ಕಾರವು ಯಾವುದೇ ಪಕ್ಷದ್ದಿರಲಿ, ಸರ್ಕಾರ ಅಂದ ಮೇಲೆ ಜನಸಾಮಾನ್ಯರ ನೋವು ನಲಿವು ಕಷ್ಟ ಕಾರ್ಪಣ್ಯಗಳ ಬಗ್ಗೆ ಅರಿವನ್ನು ಹೊಂದಿರಬೇಕಾಗುತ್ತದೆ. ಜನರ ಸದ್ಯದ ಪರಿಸ್ಥಿತಿಯ ಬಗ್ಗೆ ಅರಿವಿಲ್ಲದೆ, ತಮಗೆ ಬೇಕಾದ ಹಾಗೆ ಕ್ರಮ ಕೈಗೊಳ್ಳುತ್ತಾ ಹೋದರೆ ಅಂತಹ ಸರ್ಕಾರದ ಬಗ್ಗೆ ಆಡಳಿತದ ಬಗ್ಗೆ ಜನಸಾಮಾನ್ಯರಲ್ಲಿ ಅಸಮಾಧಾನ ಎದ್ದೇಳದೆ ಇರಲು ಸಾಧ್ಯನಾ? 

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಮೂಡಿಗೆರೆ ತಾಲ್ಲೂಕಿನಲ್ಲಿ ಭಾರಿ ಗಾಳಿ-ಮಳೆ ಅಬ್ಬರ
    ಈ ಸುದ್ದಿ ಸಿನಿಮಾ ಇತಿಹಾಸದಲ್ಲೇ ದೊಡ್ಡ ಬಾಕ್ಸ್ ಆಫೀಸ್ ಸ್ಫೋಟಗಳಲ್ಲಿ ಒಂದಾಗಿದೆ. ‘Spider-Man: Brand New Day’ 
    ವಿಜಯ್ ತಳಪತಿ ಸಂಗೀತಾ ವಿಚ್ಛೇದನ ವಿಚಾರ: 27 ವರ್ಷದ ದಾಂಪತ್ಯಕ್ಕೆ ತೆರೆ? ₹250 ಕೋಟಿ ಸೆಟ್ಲ್‌ಮೆಂಟ್ ಚರ್ಚೆ!!
    ಸ್ವಯಂಪ್ರೇರಿತ ಲೈಂಗಿಕ ಕೆಲಸ -ವೇಶ್ಯಾವಾಟಿಕೆ ವೃತ್ತಿ ಅಪರಾಧವಲ್ಲ ಕಾನೂನುಬಾಹಿರವಲ್ಲ! -ಇತಿಹಾಸ ಸೃಷ್ಟಿಸಿದ ಸುಪ್ರೀಂ ಕೋರ್ಟ್!
    ಮಂಗಳೂರು ಸಿಟಿ ಪೊಲೀಸರ ಭರ್ಜರಿ ಬೇಟೆ – ನಿಷೇಧಿತ ಎಂಡಿಎಂ, ಗಾಂಜಾ ಮರಾಟಗಾರರ ಬಂಧನ
    ಶಾಲೆಗಳ ಸುತ್ತ ಜಂಕ್ ಫುಡ್‌ಗೆ ಬ್ರೇಕ್: ಮಕ್ಕಳ ಆರೋಗ್ಯ ರಕ್ಷಣೆಗೆ FDA ಅಲರ್ಟ್!
    Old Monk, Royal Challengeಗೆ ಭಾರೀ ಶಾಕ್..! FSSAI ಲ್ಯಾಬ್ ವರದಿಯಲ್ಲಿ ಬಯಲಾಯ್ತಾ ದೊಡ್ಡ ರಹಸ್ಯ?
    ವೇಣೂರಿನಲ್ಲಿ ಬಾಲಕಿಗೆ ಶಾಲಾ ರಿಕ್ಷಾಚಾಲಕನಿಂದಲೇ ಲೈಂಗಿಕದೌರ್ಜನ್ಯ: ಮಕ್ಕಳಿಗೆ ಯಾರನ್ನು ನಂಬಬೇಕು? ಯಾರಿಗೆ ಹೇಳಬೇಕು? — ಪೋಷಕರೇ ಎಚ್ಚರ
    108 ವರ್ಷಗಳ ಇತಿಹಾಸದಲ್ಲಿ ಪಾಟ್ನಾವಿಶ್ವವಿದ್ಯಾಲಯದಲ್ಲಿ ಹೊಸ ಅಧ್ಯಾಯ- ಮಹಿಳೆಯರ ಐತಿಹಾಸಿಕ ಹೆಜ್ಜೆ!
    ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಹೆಸರಲ್ಲಿ ನಡಿತಿರೋದೇನು?
    ತುಳು ವಿಕಿಪೀಡಿಯಾಗೆ ದಶಮಾನೋತ್ಸವ ಸಂಭ್ರಮ
    ಕಾಂಗ್ರೆಸ್ ಜನರ ವಿಶ್ವಾಸದಿಂದ ದಿನದಿಂದ ದಿನಕ್ಕೂ ದೂರ ಹೋಗುತ್ತಿರುವುದಕ್ಕೆ ಸಾಕ್ಷಿನೇ ಇದು
    ಉಡುಪಿಯ ಹಲವು ಉದ್ಯಮಿಗಳು ಹಾಗೂ ಪುಡಿ ರಾಜಕಾರಣಿಗಳ ಎದೆಯಲ್ಲಿ ಭಯ ಸೃಷ್ಟಿಸಿದ ಹನಿಟ್ರ್ಯಾಪ್, ವಂಚನೆ ಆರೋಪಿ ಜೀನತ್ ಬಂಧನ ….!
    ಸಂಕಷ್ಟದಲ್ಲಿರುವ ರಾಜ್ಯದ ಜನತೆಗೆ ಬರೆ ಹಾಕಿದ ರಾಜ್ಯ ಸರ್ಕಾರ!
    ಬ್ರಹ್ಮಾವರ ಅಪಾರ್ಟ್‌ಮೆಂಟ್ ರೂಮಿನಲ್ಲಿ ಯುವತಿಯ ನಿಗೂಢ ಸಾವು
    ಬೆಂಗಳೂರು ಟು ಮುಂಬೈ  ಐದೇ ಘಂಟೆ ಪ್ರಯಾಣ- ಎಕ್ಸ್ಪ್ರೆಸ್ ಹೈವೇಗೆ ಅಸ್ತು
    🚨 “ಮಂಗಳೂರು ಜಿಲ್ಲಾಕಾರಾಗೃಹದಲ್ಲಿ ಗಲಾಟೆ: ಜೈಲು ಅಧೀಕ್ಷಕರ ಮೇಲೆಯೇ ಕೈದಿಗಳ ಹಲ್ಲೆಯತ್ನ!”
    ಒಂದು ತಪ್ಪು ಹೆಜ್ಜೆ…25 ಅಡಿ ಬಾವಿಗೆ ಬಿದ್ದ ಆನೆ …ನೋಡಿ ಈ ಸ್ಮಾರ್ಟ್ ಆಪರೇಷನ್!
    🚨4 ವರ್ಷಗಳಿಂದ ಪೊಲೀಸರಿಗೆ ತಪ್ಪಿಸಿಕೊಂಡಿದ್ದ 17 ಪ್ರಕರಣಗಳ ಆರೋಪಿಯ ಡ್ರಾಮಾಟಿಕ್ ಬಂಧನ!
    ಕರ್ನಾಟಕಕ್ಕೆ ಮಳೆ ಅಲರ್ಟ್‌ | ಸೆ.24ರಂದು ಕರಾವಳಿಗೆ ರೆಡ್‌ ಅಲರ್ಟ್‌
    ಈ ಬಾರಿ ಮಕ್ಕಳೊಟ್ಟಿಗೆ PUC ಎಕ್ಸಾಮ್ ಪಾಸಾದಅಮ್ಮಂದಿರೇ ಮನಸ್ಸಿದ್ದರೆ ಮಾರ್ಗ ಇದೆ ಅನ್ನೋದಕ್ಕೆ…ಪ್ರೇರಣೆ…!
    14ರ ಸೊಂಟಕ್ಕೆ ಕೈ ಹಾಕಿದ ಮದರಸಾ ಮೌಲ್ವಿಗೆ 20 ವರ್ಷ ಕಠಿಣ ಶಿಕ್ಷೆ
    165 ಹೆಣ್ಮಕ್ಕಳು ತಮ್ಮದಲ್ಲದ ತಪ್ಪಿಗೆ ಹತ್ಯೆಗೆ ಒಳಗಾದರು 
    ಡೆಲಿವರಿ ಬಾಯ್ ಗೆ “₹500 ಟಿಪ್… !” video viral ಅಸಲಿ ಕಥೆ ಏನು..!?
    ನಿಮ್ಮ ಪ್ರೊಫೈಲ್ ಪಿಕ್ಚರ್ ಸೇಫ್ ಇದೆಯೇ?ಸ್ಮಾರ್ಟ್‌ಫೋನ್ ಬಳಕೆದಾರರೇ ಎಚ್ಚರ! AI ಡೀಪ್‌ಫೇಕ್ ಮಾಯಾಜಾಲ, ಸೈಬರ್ ಕ್ರೈಂ ಪೊಲೀಸರ ಅಧಿಕೃತ ವಾರ್ನಿಂಗ್!
    ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ….
    “ಜೆನ್‌ ಜಿಯ ಧ್ವನಿ ದೇಶದ್ರೋಹವಲ್ಲ” – ಶಿಕ್ಷಣ ಸುಧಾರಣೆಗೆ ಎದ್ದ ಯುವ ಆಕ್ರೋಶಕ್ಕೆ RSS ಮೋಹನ್ ಭಾಗವತ್ ಬೆಂಬಲ…..
    ಅಮ್ಮನ ಅಂತ್ಯಕ್ರಿಯೆಯಲ್ಲಿ ಗಳಗಳನೇ ಕಣ್ಣೀರಿಟ್ಟು,ಚಿತೆಯ ಮುಂದೆ ಕುಸಿದುಬಿದ್ದ ಚಿನ್ಮಯ್ ದಾಸ್!ಐದು ಗಂಟೆಯ ಪೆರೋಲ್… ಜೈಲಿನಿಂದ ಬಂದ ಸನ್ಯಾಸಿ ಮಗ…
    ಕೆಪಿಎಸ್‌ಸಿ ನೇಮಕಾತಿ ಅಕ್ರಮಕ್ಕೆ ಇ.ಡಿ. ಶಾಕ್: 21 ಕಡೆ ಏಕಕಾಲದ ದಾಳಿ
    ಶೋಕಿ ಜೀವನಕ್ಕೆ ಸ್ಕೀಮ್ ಸ್ಕ್ಯಾಮ್:ಗಿಫ್ಟ್ ಆಸೆ-ದೊಡ್ಡ ಕನಸು ತೋರಿಸಿ, ಹಣದೊಂದಿಗೆ ಪರಾರಿ—ಇದುವೇ ನಕಲಿ ಸ್ಕೀಮ್‌ಗಳ ಅಸಲಿ ಕಥೆ!