📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಕಾರ್ಕಳದ ವೈದ್ಯಕೀಯ ವಿದ್ಯಾರ್ಥಿನಿ ಭೀಕರ  ಅಪಘಾತಕ್ಕೆ ಬಲಿ

ಶಿವಮೊಗ್ಗ, ಮಾರ್ಚ್ 13:
ಶಿವಮೊಗ್ಗ ನಗರದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ವೈದ್ಯಕೀಯ ಸ್ನಾತಕೋತ್ತರ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ.

ಮೃತರನ್ನು ಕಾರ್ಕಳ ಸಮೀಪದ ಲಾವಣ್ಯ (25) ಎಂದು ಗುರುತಿಸಲಾಗಿದೆ. ಅವರು ಶಿವಮೊಗ್ಗದ Shimoga Institute of Medical Sciences (SIMS) ನಲ್ಲಿ ಮೊದಲನೇ ವರ್ಷದ ಸ್ನಾತಕೋತ್ತರ ವೈದ್ಯಕೀಯ ಅಧ್ಯಯನ ಮಾಡುತ್ತಿದ್ದರು.

ಅಪಘಾತದ ವಿವರ

ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಹೊಸ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿಗಾಗಿ ನೀರು ಪೂರೈಸಲು ಟ್ಯಾಂಕರ್ ಒಳಗೆ ಪ್ರವೇಶಿಸಿತ್ತು. ಇದೇ ವೇಳೆ ಲಾವಣ್ಯ ಅವರು ಸ್ಕೂಟಿಯಲ್ಲಿ ಸಾಗುತ್ತಿದ್ದಾಗ ಅಪಘಾತ ಸಂಭವಿಸಿದೆ.

ಟ್ಯಾಂಕರ್ ಹಿಂಬದಿ ಚಕ್ರಕ್ಕೆ ಸ್ಕೂಟಿ ಸಿಲುಕಿದ ಪರಿಣಾಮ, ಟ್ಯಾಂಕರ್ ಚಕ್ರವು ಲಾವಣ್ಯ ಅವರ ತಲೆಯ ಮೇಲೆ ಹರಿದಿದ್ದು ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮತ್ತೊಬ್ಬ ವಿದ್ಯಾರ್ಥಿಗೆ ಗಾಯ

ಸ್ಕೂಟಿಯ ಹಿಂಬದಿ ಕುಳಿತಿದ್ದ ಓವೇರಿಯಾ (28) ಎಂಬ ವೈದ್ಯಕೀಯ ವಿದ್ಯಾರ್ಥಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರು ಬೆಂಗಳೂರಿನ ಜೆಪಿ ನಗರ ಮೂಲದವರಾಗಿದ್ದು, SIMS ನಲ್ಲಿ ಅಂತಿಮ ವರ್ಷದ ಎಂಡಿ (MD) ವ್ಯಾಸಂಗ ಮಾಡುತ್ತಿದ್ದಾರೆ.

ಕುಟುಂಬದ ದುಃಖ,ಲಾವಣ್ಯ ಅವರು ತಮ್ಮ ಕುಟುಂಬದಲ್ಲಿ ಒಬ್ಬಳೇ ಮಗಳು ಆಗಿದ್ದು, ಅವರ ಅಕಾಲಿಕ ಸಾವಿನಿಂದ ಕುಟುಂಬದವರು ಮತ್ತು ಸ್ನೇಹಿತರು ತೀವ್ರ ದುಃಖದಲ್ಲಿ ಮುಳುಗಿದ್ದಾರೆ.

ಅಪಘಾತದ ಬಳಿಕ ಪೊಲೀಸರು

ಟ್ಯಾಂಕರ್ ವಾಹನವನ್ನು ವಶಕ್ಕೆ ಪಡೆದಿದ್ದಾರೆ, ಚಾಲಕನನ್ನು ಬಂಧಿಸಿದ್ದಾರೆ.ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.

ಈ ಘಟನೆ ನಂತರ ಆಸ್ಪತ್ರೆ ಆವರಣದಲ್ಲಿ ನಡೆಯುತ್ತಿರುವ ನಿರ್ಮಾಣ ಕಾಮಗಾರಿಗಳ ವೇಳೆ ಸುರಕ್ಷತಾ ಕ್ರಮಗಳ ಬಗ್ಗೆ ಪ್ರಶ್ನೆಗಳು ಕೇಳಿಬಂದಿವೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಭೀಕರ ಅಪಘಾತಕ್ಕೆ ಸ್ಥಳೀಯ ನಾಯಕ ಸೇರಿ ಇಬ್ಬರು ದುರ್ಮರಣ 
ಉದ್ಯಮಿ ಧೀರಜ್ ಜೈನ್ ಗಪ್ ಚುಪ್ಪಾಗಿ ನಡೆಸಿದ ಮಾನವೀಯ ನಡೆಗೆ ಸಾಕ್ಷಿ ನೋಡಿ
ಇರಾನ್ ದಾಳಿಗೆ ಬೆಂಜಿಮನೇತನ್ಯಹೋ ಕೊಲ್ಲಲ್ಪಟ್ಟಿದ್ದಾರಾ?
ಸಂಕಷ್ಟದಲ್ಲಿರುವ ರಾಜ್ಯದ ಜನತೆಗೆ ಬರೆ ಹಾಕಿದ ರಾಜ್ಯ ಸರ್ಕಾರ!
ತೆರಿಗೆ ನಮ್ಮದು… ಪಾಲು ಬೇರೆ ರಾಜ್ಯಗಳಿಗೆ!
ಟ್ರಂಪ್-“Strait of Hormuz ತಕ್ಷಣ ತೆರೆಯಿರಿ…! “ ಇರಾನ್-“ಕೀ ಗಳನ್ನು ಕಳೆದುಕೊಂಡಿದ್ದೇವೆ…!”
ಸ್ಪೇನ್ ಅಧ್ಯಕ್ಷರ ವಿರುದ್ಧ ಟ್ರಂಪ್ ಗುಡುಗು 
“ಕಾಂತರಾ” ಖ್ಯಾತಿಯ ಸಪ್ತಮಿ ಗೌಡ, ದುಮುಕಿದ್ದು  ಹೋರಾಟದ ಅಂಗಳಕ್ಕೆ
ಹೆಸರು ಬದಲಾವಣೆ ಪಶ್ಚಿಮ ಬಂಗಾಳ ಪೆಂಡಿಂಗ್, ಕೇರಳ ಪ್ರಗತಿಯಲ್ಲಿ
ನ್ಯಾಯಾಂಗಕ್ಕೆ ಕಳಂಕ ತರುವುದನ್ನು ನೋಡಿಯೂ ಕೈಕಟ್ಟಿ ಕೂರಲಾಗದು
ರಾಜ್ಯಮಟ್ಟದಲ್ಲಿ ಸದ್ದು ಮಾಡಿದ ತೆರಿಗೆ ವಂಚನೆ ಪ್ರಕರಣದ ನಂತರವೂ ಅಧಿಕಾರಿಗಳು ಪಾಠ ಕಲಿತಿಲ್ಲವೇ….!?
ವಿಷ ಸೇವನೆ ಸ್ವಯಂ ಆಗಿತ್ತೇ ಅಥವಾ ಪ್ರಚೋದನೆ ಕಾರಣವೇ ….?!
ಪಾಕಿಸ್ತಾನದಲ್ಲಿ ಹಿಂದೂ ಯುವತಿಯ ಸಾಧನೆ
ತಪ್ಪೊಪ್ಪಿಕೊಂಡ ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಆರೋಪಿ ಶಾರೀಕ್…!ಶಿಕ್ಷೆ ಏನು?
ಇರಾನ್–ಇಸ್ರೇಲ್ ಯುದ್ಧ: ಯುದ್ಧ ನಿಲ್ಲಿಸಲು ಇರಾನ್‌ನ 3 ಷರತ್ತುಗಳು… ಅಮೇರಿಕಾ ಕಂಗಾಲು
8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ವೆಟ್-ವೆಲ್‌ಗಳ ಕಳಪೆ ನಿರ್ವಹಣೆಚರಂಡಿ-ಬಾವಿಗಳಿಗೆ ಡ್ರೈನೇಜ್ ನೀರು..
ಘರ್ಷಣೆಗಳ ನಡುವೆಯೂ ಜನರ ಮತದ ಹಕ್ಕು ಅಚಲ…ಸಂಕ್ಷಿಪ್ತ ನೋಟ..
ಕರ್ನಾಟಕದಲ್ಲಿ ಯುಗಾದಿ ಹಬ್ಬಕ್ಕೂ ಮುನ್ನವೇ  ಮುಂಗಾರು  ಮಳೆರಂಗು – 5 ಜಿಲ್ಲೆಗಳಲ್ಲಿ ಆಲಿಕಲ್ಲು ಅಬ್ಬರ!
ದೇವಳದ ಗೋಲ್ಮಾಲ್ ತಡೆಗೆ ಉಪ-ಮುಖ್ಯಮಂತ್ರಿ ಬುಲಾವ್!
ಮನೆಗಣತಿ ಮಂಗಳೂರು ಮಹಾನಗರ ಪಾಲಿಕೆ-ಸ್ಪೀಕರ್ ಯು ಟಿ ಖಾದರ್ ಚಾಲನೆ
ಮಾರ್ಚ್ 7 ರಂದು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಆಗಮನ
ದಕ್ಷಿಣಕನ್ನಡ ಜಿಲ್ಲಾಡಳಿತ ರೈತರ ಪರವಾಗಿ ನಿಲ್ಲುತ್ತಿಲ್ಲ ಎಂಬ ಅಸಮಾಧಾನ
ಬ್ರಹ್ಮಾವರ, ಮಂದಾರ್ತಿ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಹೇಳೋರು ಕೇಳೋರು ಯಾರು ಇಲ್ವಾ?
ಇದು IPLನಲ್ಲಿ ಹೊಸ ಹೀರೋ ಹುಟ್ಟಿದಂತೇ…ಆದ್ರೆ ಕ್ರಿಕೆಟ್ ಅಲ್ಲ, ಬಾಕ್ಸಿಂಗ್‌ನಲ್ಲಿ! 🥊🔥
ಗ್ಯಾಸ್ ಅಭಾವ ಮತ್ತು ಬೆಲೆ ಏರಿಕೆ, ಸುಳ್ಳು ಎನ್ನುತ್ತಿದೆ-HPCL
ಇ-ಸಿಗರೇಟ್‌ಗೆ ಭಾರಿ ಡಿಮ್ಯಾಂಡ್ – ಗೋಣಿ ಚೀಲದಲ್ಲಿಸಂಗ್ರಹಿಸಿಟ್ಟ ಆರೋಪಿ ಬಂಧನ..!
ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ….
ಗೃಹ ಸಚಿವರಾದ ಜಿ ಪರಮೇಶ್ವರ್ ರವರ ಒಡೆತನದ ಸಂಸ್ಥೆಯಲ್ಲಿ ನಡೆದಿದೆ ಎಂಬ ವಿಡಿಯೋ ವೈರಲ್….!
ಆಸಿಡ್ ದಾಳಿಗೊಳಗಾದ ಮಹಿಳೆಯರಿಗೆ ₹50 ಸಾವಿರ ಮಾಸಾಶನ: ಆಸಿಡ್ ಮಾರಾಟಕ್ಕೆ ಕಡಿವಾಣ ಹಾಕಲು ಸರ್ಕಾರ ಕ್ರಮ