📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಕಾರ್ಕಳ ಮಹಾಮಸ್ತಕಾಭಿಷೇಕಕ್ಕೆ ₹1.59 ಕೋಟಿ ಅನುದಾನ: ಮೊದಲ ಕಂತು ಬಿಡುಗಡೆ…

    ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಪ್ರತಿ 12 ವರ್ಷಗಳಿಗೊಮ್ಮೆ ನಡೆಯುವ ಐತಿಹಾಸಿಕ ಶ್ರೀ ಗೊಮ್ಮಟೇಶ್ವರ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವಕ್ಕಾಗಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅನುದಾನ ನೀಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಈ ಮನವಿಯನ್ನು ಪರಿಗಣಿಸಿದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮಹೋತ್ಸವದ ಸಿದ್ಧತೆಗಾಗಿ ₹1.59 ಕೋಟಿ ಅನುದಾನವನ್ನು ಮಂಜೂರು ಮಾಡಿದೆ.

    2027ರ ಫೆಬ್ರವರಿಯಲ್ಲಿ ನಡೆಯಲಿರುವ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವದ ಹಿನ್ನೆಲೆ ಈ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಮಂಜೂರಾದ ಮೊತ್ತದಲ್ಲಿ ಮೊದಲ ಕಂತಾಗಿ ₹119.25 ಲಕ್ಷವನ್ನು ಉಡುಪಿ ಜಿಲ್ಲಾಧಿಕಾರಿಗಳಿಗೆ ಬಿಡುಗಡೆ ಮಾಡಲಾಗಿದೆ. ಈ ಹಣವನ್ನು ಮಹೋತ್ಸವಕ್ಕೆ ಅಗತ್ಯವಾದ ಮೂಲಭೂತ ಸೌಕರ್ಯಗಳ ನಿರ್ಮಾಣಕ್ಕೆ ಬಳಸಲಾಗುತ್ತದೆ.

    ಅನುದಾನದ ಸಮರ್ಪಕ ಬಳಕೆಗೆ ಸರ್ಕಾರವು ಹಲವು ಷರತ್ತುಗಳನ್ನು ವಿಧಿಸಿದೆ. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಸಮಿತಿಯನ್ನು ರಚಿಸಿ ಕಾಮಗಾರಿಗಳ ಮೇಲ್ವಿಚಾರಣೆ ಮಾಡಬೇಕು. ಅನುದಾನವನ್ನು ಉದ್ದೇಶಿತ ಕಾಮಗಾರಿಗಳಿಗೆ ಮಾತ್ರ ಬಳಸಿಕೊಳ್ಳಬೇಕು ಹಾಗೂ ಲೆಕ್ಕಪತ್ರಗಳನ್ನು ಸರಿಯಾಗಿ ನಿರ್ವಹಿಸಬೇಕು.

    Also Read  ಪಿವಿ ಎಸ್ ಸಂಸ್ಥೆಯ ಆಡಳಿತದಲ್ಲಿ ಯಾರ ಹಸ್ತಕ್ಷೇಪವು ಇಲ್ಲ - ಸರೋಜಿನಿ ಕುಶೆ

    ಹಣ ಬಳಕೆ ಪ್ರಮಾಣಪತ್ರ (Utilization Certificate) ಅನ್ನು ಜಿಲ್ಲಾಧಿಕಾರಿಗಳ ಸಹಿಯೊಂದಿಗೆ ಸಲ್ಲಿಸುವುದು ಕಡ್ಡಾಯವಾಗಿದ್ದು, ಕಾಮಗಾರಿಗಳ ಪ್ರಗತಿ ಕುರಿತು ನಿಯಮಿತ ವರದಿ ನೀಡಬೇಕು. ಅನುದಾನದ ದುರ್ಬಳಕೆ ಕಂಡುಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ.

    ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ, ಸರ್ಕಾರದ ಅನುದಾನದ ಕುರಿತು ನಾಮಫಲಕ ಅಳವಡಿಸಬೇಕು. ಕಾಮಗಾರಿ ಪೂರ್ಣಗೊಂಡ ನಂತರ ಸ್ಥಳ ಪರಿಶೀಲನೆ ನಡೆಸಿ ಜಿಪಿಎಸ್ ಛಾಯಾಚಿತ್ರಗಳೊಂದಿಗೆ ವರದಿ ಸಲ್ಲಿಸಲು ಸೂಚಿಸಲಾಗಿದೆ.

    ಮಹಾಮಸ್ತಕಾಭಿಷೇಕ ಮಹೋತ್ಸವದ ಸಂಪೂರ್ಣ ಜವಾಬ್ದಾರಿ ಸಂಬಂಧಿತ ಸಮಿತಿಯ ಮೇಲಿದೆ ಎಂದು ಸರ್ಕಾರದ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

    #community fest#government fund#Karkala Mahamasthkabhisheka#minority department

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಬೈಂದೂರಿನಲ್ಲಿ ಹಳೆ ವೈಷಮ್ಯದಿಂದ ಮನೆಗೆ ನುಗ್ಗಿ ಹಲ್ಲೆಗೆ ಯತ್ನ
    ದುಬೈ ಕನಸು… ಜೈಲು ವಾಸ್ತವ!ಡ್ರಗ್ ಮಾಫಿಯಾದ ಗುರಿಯೇ ಯುವಕರು..!!ಭವಿಷ್ಯ ಕಳೆದುಕೊಳ್ಳುವ ಮುನ್ನ ಎಚ್ಚರ!
    “ಅಮ್ಮಾ… ಉಸಿರಾಡಲು ಆಗ್ತಿಲ್ಲ!” — 2 ಗಂಟೆಯ ಕೊನೆಯ ಕರೆ ಬಳಿಕ 4:30ಕ್ಕೆ ಶವ… ನಿಮಿಷಾಳಿಗೆ ಏನಾಯ್ತು?
    ತಿರುಪತಿಯಲ್ಲಿ ಒಂದಿಡೀ ಕುಟುಂಬವೇ ನಾಶ!
    ಶಿವಮೊಗ್ಗದಲ್ಲಿ17 ವರ್ಷದ ಬಾಲಕಿ ನಾಪತ್ತೆ ಎಂದು ನಂಬಿಸಿದ್ದ ಬೆಚ್ಚಿಬೀಳಿಸಿದ ರಹಸ್ಯ ಬಯಲು ..!ಶವವನ್ನು ಸೂಟ್‌ಕೇಸ್‌ನಲ್ಲಿ ಸಾಗಿಸಿ ಕಾಡಿಗೆ ಎಸೆದರು..!
    ಬಂಟ್ವಾಳದಲ್ಲಿ ಸಿನಿಮೀಯ ರೀತಿಯಲ್ಲಿ ದರೋಡೆ: ತಲವಾರು ತೋರಿಸಿ ₹8.52 ಲಕ್ಷ ದೋಚಿದ ದುಷ್ಕರ್ಮಿಗಳು… ಪ್ರಕರಣದ ಸುತ್ತ ಸಂಶಯದ ಹುತ್ತ
     “ತಪ್ಪು ಮಾಡಿದ್ರೆ ಕೈ-ಕಾಲು ಕತ್ತರಿಸ್ಬೇಕು, ಆಗಲೇ ಕಾನೂನಿನ ಭಯ ಬರೋದು! “ಗಲ್ಫ್ ದೇಶಗಳ ಮಾದರಿ ಶಿಕ್ಷೆ ಜಾರಿಯಾಗ್ಬೇಕು ಅನ್ನೋ ನ್ಯಾಯಮೂರ್ತಿಗಳ ನಿಲುವಿಗೆ ಇಡೀ ರಾಜ್ಯವೇ ಜೈ ಅಂತಿದೆ!
    ಲಾಲ್‌ಬಾಗ್ ಸಿಗ್ನಲ್ ಬಳಿ ಚಾಕು ಇರಿತದ ಘಟನೆ…!
    ಮಹಿಳೆಯ ಸ್ಕೂಟಿಯನ್ನೇ ಕದ್ದ ಕಳ್ಳರು….. ಹೆಚ್ಚುತ್ತಿರುವ ವಾಹನ ಕಳ್ಳತನ
    ಮಂಗಳೂರಿನ ಟ್ರಾಫಿಕ್‌ಗೆ ಬ್ರೇಕ್ ಹಾಕಲು ಜಿಲ್ಲಾಡಳಿತದ ಮಾಸ್ಟರ್ ಪ್ಲಾನ್!ಯಾವೆಲ್ಲ ಬದಲಾವಣೆ ಬರಲಿದೆ?
    ಆರು ಲಕ್ಷ ರೂ. ಶುಲ್ಕದ ಸಂಕಷ್ಟಕ್ಕೆ ಮಾನವೀಯ ಸ್ಪಂದನೆ: ವಿದ್ಯಾರ್ಥಿನಿಯ ಕನಸಿಗೆ ಸಚಿವ ಬಾಲಕೃಷ್ಣ ಬೆನ್ನೆಲುಬು
    ಸ್ಕ್ಯಾಮರ್‌ಗೆ 60 ಸೆಕೆಂಡ್ ಸಾಕು… RBIಗೆ ಈಗ 60 ನಿಮಿಷ ಬೇಕಂತೆ!ಹಣ ಕಳಿಸುವ ಮುನ್ನ ಯೋಚಿಸಲು 1 ಗಂಟೆ!
    ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆಯ ಪೋಸ್ಟ್ ಗಳನ್ನು ಹಾಕಿದ ಆರೋಪಿಯ ಬಂಧನ
    ರಾಂಚಿ ‘ಜೆನ್-ಜಿ’ ಸಂಗ್ರಾಮ: ಪರೀಕ್ಷಾ ಅಕ್ರಮದ ವಿರುದ್ಧ ಉದ್ಯೋಗಾಕಾಂಕ್ಷಿಗಳ ರಣಕಹಳೆ…
    ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳು …ಮಕ್ಕಳ ಶಾಲೆಯಾ? ನ್ಯೂಸ್ ಚಾನೆಲ್ಲಾ? ಬ್ರೇಕಿಂಗ್ ನ್ಯೂಸ್…ಪಠ್ಯಪುಸ್ತಕದಿಂದ ಪ್ರೈಮ್‌ಟೈಮ್‌ವರೆಗೆ..!
    ಇಂದು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಂದ ಪ್ರತಿಭಟನೆ
    ಉಡುಪಿಯಲ್ಲಿ ಟ್ರೇಡಿಂಗ್ ಹೆಸರಲ್ಲಿ ಲಕ್ಷಗಟ್ಟಲೆ ಧೋಕಾ….
    ರೇಪ್ ಆರೋಪಿಗೆ ಹೂಮಳೆ, ಹೂವಿನಹಾರ,ಘೋಷಣೆ, ರಾಜಕೀಯ ರೀತಿ ರೋಡ್ ಶೋ! ಉತ್ತರ ಪ್ರದೇಶದ ವೈರಲ್ ವಿಡಿಯೋಗೆ ದೇಶಾದ್ಯಂತ ಆಕ್ರೋಶ
    “ಪ್ರಜಾಪ್ರಭುತ್ವದ ಮೇಲೆ ದಾಳಿ”ಸುಪ್ರೀಂ ಕೋರ್ಟ್ ಕಿಡಿ: ಇದು ಪ್ರತಿಭಟನೆ ಅಲ್ಲ, ಸಂಚು!”
    ಉಡುಪಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕಾನೂನುಬಾಹಿರ ಚಟುವಟಿಕೆ
    ಮೀನು ಮಾರುವ ಮಹಿಳೆಯರ ಮೇಲೆ ಹಲ್ಲೆ :ಬೈಂದೂರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗೆ ಭರ್ಜರಿ ಒದೆ
    ಮಿಜಾರಿನಲ್ಲಿ ರಸ್ತೆ ಕುಸಿತ, ಸಾರ್ವಜನಿಕರಲ್ಲಿ ಆತಂಕ ಮೊದಲ ಮಳೆಯಲ್ಲೇ ಕೊಚ್ಚಿಹೋಯ್ತು ಹೆದ್ದಾರಿ! ಕೋಟಿ ಕೋಟಿ ಕಾಮಗಾರಿಯ ಅಸಲಿ ಮುಖ ಬಯಲು? 
    ಧೂಮಪಾನ ಮಾಡುತ್ತಿದ್ದೀರಾ? ನಿಮ್ಮ ಮುಖ ನಿಧಾನವಾಗಿ ನಾಶವಾಗುತ್ತಿದೆ…
    “ಜೈನ ಧರ್ಮಕ್ಕೆ ಮೇನಕಾ ಗಾಂಧಿಯಿಂದ ಅಪಮಾನ!? ಹೇಳಿಕೆಗೆ ಶಿವಮೊಗ್ಗದಲ್ಲಿ ಆಕ್ರೋಶದ ಜ್ವಾಲೆ – ಬೇಷರತ್ ಕ್ಷಮೆಯಾಚನೆಗೆ ಆಗ್ರಹ”
    “ಬೆಡ್‌ರೂಮ್ ರಾಜಕೀಯ”ಪಪ್ಪು ಯಾದವ್ ಹೇಳಿಕೆ ಸ್ಫೋಟಕ ಚರ್ಚೆ…!ಪಪ್ಪು ತಪ್ಪಾಗ್ ಮಾತಾಡಿದ್ದು ತಪ್ಪು 
    ಅಳಕೆ ಮಾರುಕಟ್ಟೆ ಬಳಿ ಕಸ ಸುರಿದ ಮಹಿಳೆಗೆ ₹1,000 ದಂಡ..ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆದರೆ ದಂಡ ಖಚಿತ! 
    ತೈಲ, ಯುದ್ಧ ಮತ್ತು ಆರ್ಥಿಕತೆ: ಭಾರತದ ಮುಂದೆ ಹೊಸ ಸವಾಲು
    ಡಿಜಿಟಲ್ ಡಿಟಾಕ್ಸ್‌ಗೆ ಮಾದರಿಯಾದ ಸಿಇಒ: ಯುವಜನತೆಗೆ ಹೊಸ ಸಂದೇಶ!
    ಆಹಾರ ಬೆಲೆ ಏರಿಕೆ: ಸಾಮಾನ್ಯರ ಅಡಿಗೆ ಮನೆಗೆ ಮತ್ತೆ ಹೊರೆ?
    Must read…ನಾಗಪ್ರಸನ್ನರ ನ್ಯಾಯಾಲಯದಲ್ಲಿ ‘ಸುಳ್ಳು ಜಾತಿ-ಆದಾಯ ಪ್ರಮಾಣಪತ್ರ ಮುಂದಿಟ್ಟ ಸಾಹುಕಾರ್ ಪುತ್ರಿಗೆ ಕ್ಲಾಸ್! ಅರುಣ್ ಶ್ಯಾಮ್ ವಾದಕ್ಕೆ ನಾಗಪ್ರಸನ್ನರ ಒಂದೊಂದು ಪ್ರಶ್ನೆಯೂ ವ್ಯವಸ್ಥೆಗೆ ಕನ್ನಡಿಯಾಯಿತು!”