📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಖಾಸಗಿ ಆಸ್ಪತ್ರೆಯ ಜೊತೆಗಿನ ಒಪ್ಪಂದ ರದ್ದುಪಡಿಸಲು ಆಗ್ರಹಿಸಿ ಪ್ರತಿಭಟನೆ

    ಮಂಗಳೂರು ದಕ್ಷಿಣ ಕನ್ನಡ ಜಿಲ್ಲೆಯ ಸರಕಾರಿ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗಳೊಂದಿಗಿನ  ಕರಾರು ಒಪ್ಪಂದ ರದ್ದುಗೊಳಿಸಲು, ಜಿಲ್ಲೆಗೊಂದು ಸರಕಾರಿ ಮೆಡಿಕಲ್ ಕಾಲೇಜು,, ಸರಕಾರಿ ವೆನ್ಲಾಕ್ ಆಸ್ಪತ್ರೆಯನ್ನು ಪ್ರಾದೇಶಿಕ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಿ,  ಸರಕಾರಿ ಆಸ್ಪತ್ರೆಗಳ ಬಲಪಡಿಸಿ ಖಾಸಗೀ ಆಸ್ಪತ್ರೆಗಳನ್ನು ನಿಯಂತ್ರಿಸಲು ಒತ್ತಾಯಿಸಿ ಇಂದು ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿವರೆಗೆ ಆಯೋಜಿಸಿದ ಉಸ್ತುವಾರಿ ಕಚೇರಿ ಚಲೋ ಹೆಸರಿನಲ್ಲಿ ಹೋರಾಟ ನಡೆಯಿತು..

    ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಡಿವೈಎಫ್ಐ ದ.ಕ ಜಿಲ್ಲಾಧ್ಯಕ್ಷರಾದ ಬಿ ಕೆ ಇಮ್ತಿಯಾಜ್ ಕಳೆದ ಹಲವು ವರುಷಗಳಿಂದ ಸಂಘಟನೆ ಇಟ್ಟಿರುವ ಬೇಡಿಕೆಯನ್ನು ರಾಜ್ಯದ ಕಾಂಗ್ರೇಸ್ ಸರಕಾರ ಕಡೆಗಣಿಸಿದೆ . ಆರೋಗ್ಯ ಇಲಾಖೆ ಸರಕಾರಿ ಆಸ್ಪತ್ರೆಗಳನ್ನು ಬಲಪಡಿಸುವ ಬದಲು ಖಾಸಗೀ ಆಸ್ಪತ್ರೆಗಳ ಲಾಭಿಗೆ ಶರಣಾಗಿದೆ. ವಿರೋಧ ಪಕ್ಷ ಬಿಜೆಪಿ ಕೂಡ ಈ ಬಗ್ಗೆ ಮೌನ ವಹಿಸಿದ್ದು. ಜಿಲ್ಲೆಯ ಕಾಂಗ್ರೇಸ್ ಮತ್ತು ಬಿಜೆಪಿ ಖಾಸಗೀ ಆಸ್ಪತ್ರೆಗಳ ಲಾಭಿಯ ಬಗೆಗೆ ಒಂದೇ ತರವಾದ ಒಲವನ್ನು ಹೊಂದಿಕೊಂಡಿದೆ. ಡಿವೈಎಫ್ಐ ಮುಂದಿಟ್ಟಿರುವ ಬೇಡಿಕೆ ಈಡೇರುವವರೆಗೂ ಚಳುವಳಿ ಮುನ್ನಡೆಯಲಿದೆ ಎಂದರು.

    Also Read  ಹಾವು ಮುಂಗುಸಿ ಅಂತಾಗಿದ್ದವರು ಒಂದಾದರು

    ಡಿವೈಎಫ್ಐ ದ.ಕ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಮಾತನಾಡುತ್ತಾ, ಜಿಲ್ಲೆಯಲ್ಲಿ ಸರಕಾರಿ ಆಸ್ಪತ್ರೆಗಳಲ್ಲೇ ಹೃದಯ ಮತ್ತು ಕ್ಯಾನ್ಸರ್ ಕಾಯಿಲೆಗಳಿಗೆ ಒಳಗಾದವರ ದಾಖಲಾತಿಯು ಒಂದೇ ವರುಷದಲ್ಲಿ ನೂರುಪಟ್ಟು ಹೆಚ್ಚಳಗೊಂಡಿದೆ.  ಇಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗಳ ರೀತಿಯ ಸಕಲ ಸೌಲಭ್ಯವನ್ನು ಹೊಂದಿರುವಂತಹ ಆಸ್ಪತ್ರೆಗಳ ಬೇಡಿಕೆ ಇದ್ದರೂ, ಆರೋಗ್ಯ ಮಂತ್ರಿ ಜಿಲ್ಲೆಯ ಜನರ ಆರೋಗ್ಯದ ಹಕ್ಕನ್ನು ಕಡೆಗಣಿಸಿದ್ದಾರೆ. ಸರಕಾರಿ ಆಸ್ಪತ್ರೆ ಬಲಪಡಿಸಲು ನಡೆಸುವ ಹೋರಾಟಗಳಿಗೆ ಅನುಮತಿ ನಿರಾಕರಿಸುವ ಮೂಲಕ ಹತ್ತಿಕ್ಕಲು ಮಾಡಿರುವ ಪ್ರಯತ್ನದಿಂದ ಡಿವೈಎಫ್ಐ ಹಿಂದೆ ಸರಿಯೋದಿಲ್ಲ. ಜನರ ಆರೋಗ್ಯ ಹಕ್ಕನ್ನು ಖಾತ್ರಿಪಡಿಸಲು ಆರೋಗ್ಯ ಮಂತ್ರಿ ಗುಂಡುರಾವ್ಗೆ ಸಾದ್ಯವಿಲ್ಲ ಎಂದಾದರೆ ರಾಜೀನಾಮೆ ಕೊಟ್ಟು ತೊಲಗಿ ಬಿಡಲಿ ಎಂದು ಆಕ್ರೋಶದಿಂದ ಮಾತನಾಡಿದರು

    ಪ್ರತಿಭಟನಾ ಪಾದಯಾತ್ರೆಯನ್ನು ಹಿರಿಯ ವಿಚಾರವಾದಿ ಪ್ರೋ ನರೇಂದ್ರ ನಾಯಕ್ ಚಾಲನೆ ನೀಡಿದರು. ಸರಕಾರಿ ವೆನ್ಲಾಕ್ ಆಸ್ಪತ್ರೆಯಿಂದ ಚಾಲನೆಗೊಂಡ ಯುವಜನರ ನಡಿಗೆಯು ಖಾಸಗೀ ಆಸ್ಪತ್ರೆಗಳ ಕಾರಿಡಾರ್ ಅಥೆನಾ, ಇಂದಿರಾ, ಯುನಿಟಿ, ಹೈಲ್ಯಾಂಡ್ ಆಸ್ಪತ್ರೆಗಳ ಮುಂಭಾಗದಿಂದ ಸಾಗಿತು. ಉಸ್ತುವಾರಿ ಮಂತ್ರಿಗಳ ಕಚೇರಿ ತಲುಪುವ ಮೊದಲೇ ಪೊಲೀಸರು ಯುವಜನರ ನಡಿಗೆಯನ್ನು ತಡೆಯಲು ಪ್ರಯತ್ನಿಸಿದರು. ಪೊಲೀಸರ ಮತ್ತು ಹೋರಾಟಗಾರರ ನಡುವೆ ತಿಕ್ಕಾಟ ನಡೆದು ಡಿವೈಎಫ್ಐ ನಾಯಕರು ಸಹಿತ ನೂರಾರು ಕಾರ್ಯಕರ್ತರನ್ನು ಬಂಧಿಸಿದರು. ಬಂಧನದ ವೇಳೆ ಪ್ರತಿಭಟನಾಕಾರರು ಉಸ್ತುವಾರಿ ಮಂತ್ರಿ ದಿನೇಶ್ ಗುಂಡುರಾವ್, ಮುಖ್ಯಮಂತ್ರಿ ಸಿದ್ದರಾಮಯ್ಯರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

    Also Read  ಕಾಂಗ್ರೆಸ್–ಮುಸ್ಲಿಂ ಸಮುದಾಯ ಸಂಬಂಧದಲ್ಲಿ ದೊಡ್ಡ ಬಿರುಕು?

    ಪ್ರತಿಭಟನೆಯಲ್ಲಿ ಡಿವೈಎಫ್ಐ ಜಿಲ್ಲಾ ಮುಖಂಡರಾದ ಮನೋಜ್ ವಾಮಂಜೂರು, ನಿತಿನ್ ಕುತ್ತಾರ್, ರಿಜ್ವಾನ್ ಹರೇಕಳ, ನವೀನ್ ಕೊಂಚಾಡಿ, ಜಗದೀಶ್ ಬಜಾಲ್, ಅಶ್ರಫ್ ಹರೇಕಳ, ರಜಾಕ್ ಮುಡಿಪು, ಹನೀಫ್ ಬೆಂಗರೆ, ಕಾರ್ಮಿಕ ಮುಖಂಡರಾದ ಸುನೀಲ್ ಕುಮಾರ್ ಬಜಾಲ್, ಬಿ.ಎಮ್ ಭಟ್, ಶಶಿಧರ್ ಶಕ್ತಿನಗರ, ಮಹಿಳಾ ಸಂಘಟನೆಯ ಮುಖಂಡರಾದ ಕಿರಣ ಪ್ರಭಾ, ಪ್ರಮಿಳಾ ಶಕ್ತಿನಗರ, ಅಸುಂತ ಡಿಸೋಜ, ರೋಹಿಣಿ ಜಲ್ಲಿಗುಡ್ಡೆ, ದಲಿತ ಹಕ್ಕುಗಳ ಸಮಿತಿಯ ಕೃಷ್ಣ ತಣ್ಣೀರುಬಾವಿ, ಕೃಷ್ಣ ಇನ್ನಾ, ಸಮುದಾಯದ ವಾಸುದೇವ ಉಚ್ಚಿಲ, ರಮೇಶ್ ಉಳ್ಳಾಲ, ಮಹಾಬಲ ಟಿ ದೆಪ್ಪೆಲಿಮಾರ್, ಶೇಖರ್ ಕುಂದರ್, ಇಬ್ರಾಹಿಂ ಮದಕ, ಅಬೂಬಕ್ಕರ್ ಜಲ್ಲಿ, ನಾಸಿರ್ ಬಾಸ್, ಬಿಲಾಲ್ , ಸುನೀಲ್ ತೇವುಲ, ಶ್ರೀನಾಥ್ ಕಾಟಿಪಳ್ಳ, ಮಕ್ಸೂದು ಸುರತ್ಕಲ್, ಅಜ್ಮಲ್ ಕಾನ, ತಸ್ರೀಫ್ ಬೆಂಗರೆ, ನೌಶದ್ ಬೆಂಗರೆ, ಯಶ್ ರಾಜ್ ಬಜಾಲ್, ದಿರಾಜ್ ಬಜಾಲ್, ದೀಪಕ್ ಬಜಾಲ್ , ವಿದ್ಯಾರ್ಥಿ ಸಂಘಟನೆಯ ವಿನುಶ ರಮಣ ಭಟ್, ಅಭಿಶೇಕ್ ಬೆಳ್ತಂಗಡಿ, ನಝೀರ್ ಕಕ್ಕಿಂಜೆ, ರಜಾಕ್ ಮೊಂಟೆಪದವು, ಸಂಕೇತ್ ಕುತ್ತಾರ್ , ಅಲೆಮಾರಿ ಸಮುದಾಯದ ವೆಂಕಟೇಶ್, ಲಕ್ಷ್ಮಣ ಮುಂತಾದವರು ಉಪಸ್ಥಿತರಿದ್ದರು.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ದವಳ ಕೋ- ಆಪರೇಟಿವ್ನ ಈ ಸಾಲಿನ ವ್ಯವಹಾರ ಎರಡುನೂರು ಕೋಟಿ
    ಬೀದಿ ನಾಯಿಗಳ ಹಾವಳಿ ಮಾನವ ಜೀವ ರಕ್ಷಣೆಗೆ ಮೊದಲ ಆದ್ಯತೆ — ಸುಪ್ರೀಂ ಕೋರ್ಟ್‌ನ ಕಠಿಣ ನಿಲುವು
    ಅಕ್ರಮ ಗಡಿ ದಾಟಿದವರಿಗೆ ಈಗ ಭಾರತದಲ್ಲಿ ನೋ ಎಂಟ್ರಿ!ಬಾಂಗ್ಲಾ ಗಡಿಯಲ್ಲಿ ಎನ್‌ಆರ್‌ಸಿ ಅಸ್ತ್ರ: ರಾಜಕೀಯಕ್ಕಿಂತ ರಾಷ್ಟ್ರೀಯ ಭದ್ರತೆ ಮುಖ್ಯ
    80 ಲಕ್ಷ ವಂಚನೆ ಪ್ರಕರಣ ದೂರು ದಾಖಲು
    ಪಹಲ್ಗಾಂಮ್ ದಾಳಿಯ ಒಂದು ವರ್ಷ: ಇನ್ನೂ ಮುಗಿಯದ ನೋವು, ಮರೆಯಲಾಗದ ನೆನಪುಗಳು
    ವರದಕ್ಷಿಣೆ ಕಿರುಕುಳ ಪ್ರಕರಣ ಹೈಕೋರ್ಟ್‌ನ ಮಹತ್ವದ ತೀರ್ಪು…!ಕಾನೂನಿನ ದುರುಪಯೋಗಕ್ಕೆ ಹೈಕೋರ್ಟ್ ಬ್ರೇಕ್..!
    ಟೇಕಾಫ್‌ ಬಳಿಕ RAF ಯುದ್ಧವಿಮಾನ ಪತನ: ಪೈಲಟ್‌ಗಳು ಪಾರು
    ಕಿಡ್ನಿ ಕಾಯಿಲೆಯ ಬಗ್ಗೆ ಎಚ್ಚರಿಕೆ ಅಗತ್ಯ- ಡಾಕ್ಟರ್ ಅಶೋಕ್ ಭಟ್
    HSRP ರಿಲೀಫ್ + PUCC ಫೈನ್ ಮುಕ್ತ…ಡೀಟೇಲ್ಸ್ ಇಲ್ಲಿದೆ ಕರ್ನಾಟಕದ ಎಲ್ಲ ಡ್ರೈವರ್‌ಗಳಿಗೆ ಡಬಲ್ ಗುಡ್ ನ್ಯೂಸ್!???
    ಜೈನ ಸನ್ಯಾಸ ದೀಕ್ಷೆ ನಿಯಮಗಳು ಏನು ಗೊತ್ತಾ?
    ಇನ್ಮುಂದೆ ಏರ್‌ಪೋರ್ಟ್‌ನಲ್ಲಿ ಇಷ್ಟ ಬಂದಂತೆ ವಿಡಿಯೋ ಮಾಡುವಂತಿಲ್ಲ! ಇನ್ಸ್ಟಾರೀಲ್ಸ್, ವಿಡಿಯೋ ಮಾಡಿದರೆ ‘ನೋ-ಫ್ಲೈ ಲಿಸ್ಟ್’ ಸೇರುವ ಮುನ್ನೆಚ್ಚರಿಕೆ ನೀಡಿದ DGCA! ಲೇಟೆಸ್ಟ್ ಅಪ್ಡೇಟ್ ಹೊಸ ರೂಲ್ಸ್ ಇಲ್ಲಿದೆ.. ಓದಿ..
    ಐಸ್‌ಕ್ರೀಂ ಲೋಕಕ್ಕೆ ಅಂಬಾನಿ ಎಂಟ್ರಿ…“ಕೋಲ್ಡ್ ವಾರ್”. ದಿಗ್ಗಜರ ಟೆನ್ಷನ್!₹10ಕ್ಕೆ ಅಂಬಾನಿ ಐಸ್‌ಕ್ರೀಂ…‘ಬಾಂಬೆ ಕ್ರೀಮರಿ’ ಧಮಾಕಾ!
    ಕಾರ್ಕಳದ ವೈದ್ಯಕೀಯ ವಿದ್ಯಾರ್ಥಿನಿ ಭೀಕರ  ಅಪಘಾತಕ್ಕೆ ಬಲಿ
    ಮಂಗಳೂರು, ಮೈಸೂರಿಗೂ ‘Amazon Now’ 2,800 ಕೋಟಿ ಹೂಡಿಕೆ-
    ಸಿಟಿ ಬಸ್ ಫೋಲ್ಡಿಂಗ್ ಬಾಗಿಲು ಕಡ್ಡಾಯ: ಸುರಕ್ಷತೆಗೆ ಹೆಜ್ಜೆ, ಆದರೆ ಸವಾಲುಗಳೇನು? ಪರಿಹಾರ ಹೇಗೆ?
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ
    “ನನ್ನ ಮಗಳನ್ನೂ ಅದೇ ಕೋಟೆಯಿಂದ ಕೆಳಗೆ ತಳ್ಳಿ!” – ನಿಶ್ಚಿತ ವರನ ಹತ್ಯೆಗೈದ ಸಿಯಾ ಹೆತ್ತವರ ಆಕ್ರೋಶದ ಹೇಳಿಕೆ
    30 ದಿನ, 13 ನಗರಗಳು, ₹10 ಲಕ್ಷ ಖರ್ಚು! ಅಮೆರಿಕದ ದಂಪತಿಯ ಭಾರತ ಯಾತ್ರೆ ವೈರಲ್….ವೈರಲ್ ವಿಡಿಯೋದಲ್ಲಿ ಹೊರಬಿದ್ದ ಅಚ್ಚರಿಯ ಲೆಕ್ಕ!
    ಅಂಡಮಾನ್ ಜೈಲಿನ ಕರಾಳ ಕೋಣೆಯಿಂದ ಹೊರಬರಲಿದೆ ಕರ್ನಾಟಕದ 59 ರಕ್ತೇತಿಹಾಸ’ಯಾರೂ ಅರಿಯದ ವೀರರು’ …!
    ರಷ್ಯಾದಲ್ಲಿ ಪ್ಲೇಗ್ ಆತಂಕ! ಲ್ಯಾಬ್ ಸಿಬ್ಬಂದಿ ಸಾವು, 200 ಮಂದಿಗೆ ನಿಗಾ…!ರಷ್ಯಾದಲ್ಲಿ ಕಟ್ಟೆಚ್ಚರ!
    2 ಲಕ್ಷಕ್ಕೆ ಮಗುವಿನ ಜೀವದ ಬೆಲೆ ಕಟ್ಟಬೇಡಿ!” – ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನರ ಮಾನವೀಯ ನಿಲುವಿಗೆ ದೇಶಾದ್ಯಂತ ಮೆಚ್ಚುಗೆ
    ಬ್ರಹ್ಮಾವರ, ಮಂದಾರ್ತಿ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಹೇಳೋರು ಕೇಳೋರು ಯಾರು ಇಲ್ವಾ?
     ಇಂದಿನ ಪೋಷಕರ ಅತಿಮುದ್ದು…ಕೇಳಿದ್ದನ್ನೆಲ್ಲ ಕೊಡಿಸುವ ಪೋಷಕರು ಒಳ್ಳೆಯವರೇ…???ಇದೇ ಮಕ್ಕಳ ಭವಿಷ್ಯಕ್ಕೆ ದೊಡ್ಡ ಅಪಾಯವೇ?
    2026 ವಿಧಾನಸಭೆ ಚುನಾವಣೆ – ಮುಖ್ಯ ಮಾಹಿತಿ
    RSS ಕಾರ್ಯಕ್ರಮಕ್ಕೆ ಹೋದದ್ದಕ್ಕೆ ಅಮಾನತು: ಸರ್ಕಾರಿ ನೌಕರನ ಪರ ನಿಂತ KAT
    ‘₹1ಕ್ಕೆ ಫ್ಯಾಷನ್’ ಜಾಹೀರಾತು ವೈರಲ್… ಮಾಲಾಡ್ ಮಾಲ್‌ನಲ್ಲಿ ನಿಯಂತ್ರಣ ತಪ್ಪಿದ ಜನಸಾಗರ-ಸ್ಟ್ಯಾಂಪೀಡ್ ಭೀತಿ ಮೂಡಿಸಿದ ಜನಸಂದಣಿ!
    🚨 ದೇಶಾದ್ಯಂತ ಉಗ್ರ ಜಾಲದ ಮೇಲೆ ದೊಡ್ಡ ದಾಳಿ: ಕರ್ನಾಟಕದ ಬಳ್ಳಾರಿಯ ಅಬ್ದುಲ್ ಸಲಾಂ ಸೇರಿದಂತೆ 7 ರಾಜ್ಯಗಳಲ್ಲಿ 12 ಮಂದಿ ಬಂಧನ — ಯುವಕರಿಗೆ ಎಚ್ಚರಿಕೆ!
    108 ಆಂಬ್ಯುಲೆನ್ಸ್ ಸೇವೆಗೆ ಬ್ರೇಕ್ ಬೀಳುತ್ತಾ? ನೌಕರರ ಸಾಮೂಹಿಕ ರಾಜೀನಾಮೆ ಎಚ್ಚರಿಕೆ…
    ಶಿರಸಿ ಮಾರಿಯಮ್ಮನ ಜಾತ್ರೆ ಪ್ರಾರಂಭ
    ಶಿರಾಡಿ ಗ್ರಾ.ಪಂ PDO ಸಹಿ ನಕಲು ….6 ತಿಂಗಳಾದರೂ ದೂರು ದಾಖಲಾಗಿಲ್ಲ!