📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಜಿಲ್ಲಾ ಆಸ್ಪತ್ರೆಗೆ ಹಳೆಯ ವೈದ್ಯಕೀಯ ಉಪಕರಣ ಅಳವಡಿಕೆ ವಿರೋಧಿಸಿ ತುಳುನಾಡ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ

    ಹೊಸ ಆಸ್ಪತ್ರೆಯಲ್ಲಿ ಅಗತ್ಯ ಸೌಲಭ್ಯ, ವೈದ್ಯರು ಹಾಗೂ ಸಿಬ್ಬಂದಿ ನೇಮಕಕ್ಕೆ ಆಗ್ರಹ

    ಉಡುಪಿ, ಅ. 20: ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಹಳೆಯ ವೈದ್ಯಕೀಯ ಉಪಕರಣಗಳು ಹಾಗೂ ಹಳೆಯ ಸಿಬ್ಬಂದಿಯನ್ನೇ ಬಳಸಿಕೊಳ್ಳುವ ಕ್ರಮವನ್ನು ವಿರೋಧಿಸಿ ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ಘಟಕದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.

    ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾಧ್ಯಕ್ಷ ಫ್ರ್ಯಾಂಕಿ ಡಿಸೋಜ ಅವರ ನೇತೃತ್ವದಲ್ಲಿ ನೂತನ ಜಿಲ್ಲಾ ಆಸ್ಪತ್ರೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.

    ಐದು ಅಂತಸ್ತುಗಳ 250 ಹಾಸಿಗೆ ಸಾಮರ್ಥ್ಯದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡಲು ಅಗತ್ಯವಿರುವ ಆಧುನಿಕ ವೈದ್ಯಕೀಯ ಉಪಕರಣಗಳು, ಶಸ್ತ್ರಚಿಕಿತ್ಸಾ ಕೊಠಡಿಗಳಿಗೆ ಬೇಕಾದ ಹೊಸ ಯಂತ್ರೋಪಕರಣಗಳು, ಬೆಡ್‌ಗಳು ಹಾಗೂ ಇತರ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಬೇಕು. ಹಳೆಯ ಆಸ್ಪತ್ರೆಯಲ್ಲಿರುವ ವೈದ್ಯಕೀಯ ಉಪಕರಣಗಳು, ಶಸ್ತ್ರಚಿಕಿತ್ಸಾ ಯಂತ್ರಗಳು, ಬೆಡ್‌ಗಳು ಮತ್ತು ಇತರ ಪರಿಕರಗಳನ್ನು ನೂತನ ಆಸ್ಪತ್ರೆಗೆ ಸ್ಥಳಾಂತರಿಸುವ ಬದಲು ಹೊಸ ಉಪಕರಣಗಳನ್ನು ಅಳವಡಿಸಬೇಕು. ಅಲ್ಲದೆ, ಆಸ್ಪತ್ರೆಗೆ ಅಗತ್ಯವಿರುವ ವೈದ್ಯರು ಹಾಗೂ ಸಿಬ್ಬಂದಿಯನ್ನು ಹೊಸದಾಗಿ ನೇಮಕ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

    Also Read  ಅರೆಬೈಲ್ ಘಾಟ್ ನ ಕಾರು ಅಫಘಾತ ವ್ಯವಸ್ಥಿತ ಕೊಲೆ…!

    ಪ್ರತಿಭಟನೆಯ ಬಳಿಕ ವೇದಿಕೆಯ ಮುಖಂಡರು ಜಿಲ್ಲಾ ಆಸ್ಪತ್ರೆಗೆ ತೆರಳಿ, ಆರ್‌ಎಂಒ ಹಾಗೂ ಡೆಪ್ಯುಟಿ ಡಾ. ವಾಸುದೇವ ಎಸ್. ಅವರ ಮೂಲಕ ಉಡುಪಿ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಿದರು.

    ಹೊಸ ಆಸ್ಪತ್ರೆಗೆ ಹೊಸ ಉಪಕರಣಗಳೇ ಬೇಕು: ಫ್ರ್ಯಾಂಕಿ ಡಿಸೋಜ

    ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾಧ್ಯಕ್ಷ ಫ್ರ್ಯಾಂಕಿ ಡಿಸೋಜ, ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಜಿಲ್ಲಾ ಆಸ್ಪತ್ರೆಯಲ್ಲಿ ಹಳೆಯ ವೈದ್ಯಕೀಯ ಉಪಕರಣಗಳನ್ನು ಅಳವಡಿಸುವ ಕ್ರಮ ಸರಿಯಲ್ಲ ಎಂದು ಆಕ್ಷೇಪಿಸಿದರು.

    ಸರ್ಕಾರ ಈಗಾಗಲೇ ಒಂಬತ್ತು ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ ಎಂದು ಉಲ್ಲೇಖಿಸಿದ ಅವರು, ಈ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಆಸ್ಪತ್ರೆಗೆ ಅಗತ್ಯವಿರುವ ಹೊಸ ವೈದ್ಯಕೀಯ ಉಪಕರಣಗಳನ್ನು ಖರೀದಿಸಿ ಅಳವಡಿಸಬೇಕು ಎಂದು ಒತ್ತಾಯಿಸಿದರು.

    ಈಗಾಗಲೇ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಯ ಮೇಲೆ ಹೆಚ್ಚುವರಿ ಒತ್ತಡ ಹೇರದೆ, ನೂತನ ಆಸ್ಪತ್ರೆಯ ಅಗತ್ಯಕ್ಕೆ ಅನುಗುಣವಾಗಿ ವೈದ್ಯರು ಮತ್ತು ಸಿಬ್ಬಂದಿಯನ್ನು ನೇಮಕ ಮಾಡಬೇಕು. ಎಲ್ಲ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿದ ಬಳಿಕವಷ್ಟೇ ಆಸ್ಪತ್ರೆಯನ್ನು ಉದ್ಘಾಟಿಸಬೇಕು. ಹಳೆಯ ಉಪಕರಣಗಳನ್ನು ಅಳವಡಿಸಿ ತರಾತುರಿಯಲ್ಲಿ ಉದ್ಘಾಟನೆ ಮಾಡಲು ಮುಂದಾದರೆ ಅದನ್ನು ವಿರೋಧಿಸಲಾಗುವುದು ಎಂದು ಅವರು ಎಚ್ಚರಿಸಿದರು.

    Also Read  ಹೈಕೋರ್ಟ್‌ ಅಂಗಳಕ್ಕೆ ಮೂವರು ಹೊಸ ಮುಖ!ಆ ಮೂವರು ನ್ಯಾಯಾಂಗ ಅಧಿಕಾರಿಗಳು ಯಾರೆಲ್ಲಾ..ಹೇಗೆ ಆಯ್ಕೆ..

    ಸಂಪೂರ್ಣ ಸೌಲಭ್ಯ ಕಲ್ಪಿಸಿದ ಬಳಿಕವೇ ಉದ್ಘಾಟನೆಗೆ ಆಗ್ರಹ

    ಉಡುಪಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ನಾಗಲಕ್ಷ್ಮಿ ಸುಬ್ರಮಣ್ಯನಗರ ಮಾತನಾಡಿ, ಜಿಲ್ಲಾ ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಹಾಗೂ ನೂತನ ಆಸ್ಪತ್ರೆಯನ್ನು ತರಾತುರಿಯಲ್ಲಿ ಉದ್ಘಾಟಿಸುವ ಪ್ರಯತ್ನವನ್ನು ವಿರೋಧಿಸಿದರು. ನೂತನ ಆಸ್ಪತ್ರೆಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಒದಗಿಸಿದ ಬಳಿಕವೇ ಉದ್ಘಾಟನೆ ಮಾಡಬೇಕು ಎಂದು ಆಗ್ರಹಿಸಿದರು.

    ಕಾಪು ಘಟಕದ ಅಧ್ಯಕ್ಷ ನಿತೀನ್ ಕುಮಾರ್ ಶೆಟ್ಟಿ ಮಾತನಾಡಿ, 250 ಹಾಸಿಗೆಗಳ ಸಾಮರ್ಥ್ಯವಿರುವ ಐದು ಅಂತಸ್ತಿನ ನೂತನ ಆಸ್ಪತ್ರೆಗೆ ಹೊಸ ವೈದ್ಯಕೀಯ ಉಪಕರಣಗಳು ಹಾಗೂ ಅಗತ್ಯ ಸಿಬ್ಬಂದಿಯನ್ನು ಒದಗಿಸಬೇಕು. ಹಳೆಯ ಉಪಕರಣಗಳನ್ನು ಸ್ಥಳಾಂತರಿಸಿ, ಹಳೆಯ ಸಿಬ್ಬಂದಿಯನ್ನೇ ನಿಯೋಜಿಸಿ ಆಸ್ಪತ್ರೆಯನ್ನು ಉದ್ಘಾಟಿಸುವ ಕ್ರಮವನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.

    ಈ ಬೇಡಿಕೆಗಳನ್ನು ನಿರ್ಲಕ್ಷಿಸಿದರೆ ತುಳುನಾಡ ರಕ್ಷಣಾ ವೇದಿಕೆಯ ವತಿಯಿಂದ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದರು.

    Also Read  ಮನೆಯ ಲಾಕ್ ವ್ಯವಸ್ಥೆ ಇದ್ದರೂ, ಸುರಕ್ಷತೆ ಭೇದಿಸಲಾಗಿದೆ….!ಕುಟುಂಬ ದೇವಸ್ಥಾನಕ್ಕೆ -ಕಳ್ಳರು ಅದೇ ಮನೆ ಟಾರ್ಗೆಟ್..!

    ನಿರ್ಮಲ ಮೆಂಡನ್ ಹಾಗೂ ಶ್ಯಾಮಲ ಅವರು ಮಾತನಾಡಿ, ನೂತನ ಜಿಲ್ಲಾ ಆಸ್ಪತ್ರೆಯನ್ನು ತರಾತುರಿಯಲ್ಲಿ ಉದ್ಘಾಟಿಸುವ ಬದಲು ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ದೊರೆಯುವಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಆಗ್ರಹಿಸಿದರು.

    ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದವರು

    ಪ್ರತಿಭಟನೆಯಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಫ್ರ್ಯಾಂಕಿ ಡಿಸೋಜ ಕೊಳಲಗಿರಿ, ಕಾರ್ಮಿಕ ಘಟಕದ ಅಧ್ಯಕ್ಷ ಜಯ ಪೂಜಾರಿ ಲಕ್ಷ್ಮಿನಗರ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ನಾಗಲಕ್ಷ್ಮಿ ಸುಬ್ರಮಣ್ಯನಗರ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶಂಕರ್ ಉಡುಪಿ, ಕಾಪು ಘಟಕದ ಅಧ್ಯಕ್ಷ ನಿತೀನ್ ಕುಮಾರ್ ಶೆಟ್ಟಿ, ಕಾಪು ಮಹಿಳಾ ಘಟಕದ ಅಧ್ಯಕ್ಷೆ ಅನುಸೂಯ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪವಿತ್ರ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ನಿರ್ಮಲ ಮೆಂಡನ್, ಜೊತೆ ಕಾರ್ಯದರ್ಶಿ ವನಿತಾ, ಜಿಲ್ಲಾ ಉಪಾಧ್ಯಕ್ಷೆ ಗಾಯತ್ರಿ, ಜಿಲ್ಲಾ ಜೊತೆ ಕಾರ್ಯದರ್ಶಿ ಪ್ರೀತಮ್ ಡಿಕೋಸ್ಟ, ಬೈರಂಪಳ್ಳಿ ಘಟಕದ ಉಪಾಧ್ಯಕ್ಷ ಗುಣಕರ ಹಾಲಕ್ಕಿ ಸೇರಿದಂತೆ ಉದಯ್, ರವಿ, ರಮೇಶ್, ಸಂತೋಷ್ ಭಂಡಾರಿ, ಗುಲಾಬಿ ಕೋಟ್ಯಾನ್, ಹರಿಣಾಕ್ಷಿ, ರಾಜಶ್ರೀ, ಶಮಲ, ಉಷಾ ಸೋಮಶೇಖರ್ ಮತ್ತಿತರರು ಉಪಸ್ಥಿತರಿದ್ದರು.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಸಾಧನೆ ಇಲ್ಲದೆ ಸತ್ತರೆ ಸಾವಿಗೂ ಅಪಮಾನ!
    ರಾಜಕೀಯದಲ್ಲಿ ಅನುಭವ ಎಷ್ಟು ಮುಖ್ಯ?…  ತಮಿಳುನಾಡು ರಾಜಕಾರಣ ತೋರಿಸುತ್ತಿದೆ ನೋಡಿ
    ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ, ನಿರೀಕ್ಷಿತ ತನಿಖೆ
    ಕಾಸರಗೋಡು ಕನ್ನಡ ಶಾಲೆಗಳ ಉಳಿವಿಗೆ ಆಗ್ರಹ — ಜಿಲ್ಲಾಧಿಕಾರಿಗೆ ಮನವಿ
    ಪಿಸ್ತೂಲ್ ತೋರಿಸಿ ಬೆದರಿಸಿ ಪರಾರಿಯಾಗಿದ್ದ ಯುವಕ ಬಂಧನ
    ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ
    ದ.ಕ ಜಿಲ್ಲಾಡಳಿತದ ಆದೇಶ “ಮಳೆ ರಜೆ “ಉಲ್ಲಂಘಿಸಿ ರಜೆ ಕೊಟ್ಟರೂ class ನಡೆಸಿದ ಹತ್ತಕ್ಕೂ ಹೆಚ್ಚು ಶಾಲೆ-ಕಾಲೇಜುಗಳು ! ಇದೀಗ ನೋಟಿಸ್ ಶಾಕ್..!
    ಪಾಕಿಸ್ತಾನದಿಂದ ನೀರಿನ ವಿಚಾರದಲ್ಲಿ ಕಠಿಣ ಎಚ್ಚರಿಕೆ; ನೀರಿಗಾಗಿ ಯುದ್ದಕ್ಕೂ ಸಿದ್ದವೆಂದ ಪಾಕ್ ….!
    ಸೋಶಿಯಲ್ ಮೀಡಿಯಾ ಮೂಲಕ ಸಾರ್ವಜನಿಕರಲ್ಲಿ ಭಯ ಸೃಷ್ಠಿ -45 ಜನರ ಬಂಧನ
    ಐಸಿಸಿ ಟ್ವೆಂಟಿ-20 ವಿಶ್ವಕಪ್ ಮೂಡಿಗೇರಿಸಿಕೊಂಡ ಭಾರತ
     ಡಿಗ್ರಿಗೂ ಮುನ್ನ ಹ್ಯಾಕರ್ ಗೆ IIT ಉದ್ಯೋಗ! ಪ್ರತಿಭೆ ಇದ್ದರೆ ಅವಕಾಶವೇ ನಿಮ್ಮ ಮನೆ ಬಾಗಿಲು ತಟ್ಟುತ್ತದೆ!” ಅನ್ನೋದಕ್ಕೆ ಸ್ಫೂರ್ತಿ ಈ ನಿಸರ್ಗ ಅಧಿಕಾರಿ..
    17 ವರ್ಷದ ಯುವಕ ಸಂಸತ್ತಿನ ಕದ ತಟ್ಟಬಲ್ಲ ಎಂದಾದರೆ, ನಿಮ್ಮ ಧ್ವನಿಗೆ ಎಷ್ಟು ಶಕ್ತಿಯಿದೆ ಯೋಚಿಸಿ!..ವ್ಯವಸ್ಥೆಯ ಲೋಪದ ವಿರುದ್ಧ ಧ್ವನಿ ಎತ್ತದಿದ್ದರೆ ಬದಲಾವಣೆ ಸಾಧ್ಯವಿಲ್ಲ.
    ಬೆಂಗಳೂರು ಮಾತ್ರವಲ್ಲ… ಮಂಗಳೂರಿನಿಂದಲೂ Startup ಹಾರಾಟ! ₹9.5 ಕೋಟಿಗೂ ಅಧಿಕ ಹೂಡಿಕೆಯ K-Combinatorಗೆ ಚಾಲನೆ
    ಗುಂಡಿನ ದಾಳಿ ನಡೆಸಿದ ಹಂತಕರ ಬಂಧನ??
    50ಕ್ಕೂ ಹೆಚ್ಚು ಆಟೋ ಚಾಲಕರ ದಿನನಿತ್ಯದ ಆರೋಗ್ಯದ ಬದುಕಿಗೆ ಮುಳುವಾದ ದೇರಳಕಟ್ಟೆ ಜಂಕ್ಷನ್ ದುರ್ನಾತ! 
    ಜನಗಣತಿ 2026–27 – Self Enumeration ಮುಗಿದು ಈಗ ಮನೆ ಮನೆ ಭೇಟಿ ಹಂತ ಆರಂಭ!ನಮ್ಮ ಮಾಹಿತಿ = ನಮ್ಮ ದೇಶದ ಬೆಳವಣಿಗೆ…
    ರಾಪಿಡೊ ಚಾಲಕನ ಖಾತೆಯಲ್ಲಿ 300 ಕೋಟಿ ರೂ. ವಹಿವಾಟು! ಶಾಕ್ ಅದ ED
    ಮೂಡಬಿದ್ರೆ ಪೊಲೀಸ್ ಅಧಿಕಾರಿಯ ಮಾನ ಹರಾಜಿಗೆ ನಿಂತವರು ಯಾರು?
    PG ಊಟದ ಮೇಲೆ FDA ಕಣ್ಣು; 64 ಕಡೆ ತಪಾಸಣೆ, 23ಕ್ಕೆ ನೋಟಿಸ್!
    ಎಚ್ಚರ… ನಿಮ್ಮಸುತ್ತಮುತ್ತ ಏನು ನಡೆಯುತ್ತಿದೆ ಗೊತ್ತಿರಲಿ! 🚨Be Aware… Stay Alert… Save Youth!
    ಉಡುಪಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕಾನೂನುಬಾಹಿರ ಚಟುವಟಿಕೆ
    ಮುದ್ದಾದ ಅವಳಿ ಹೆಣ್ಣು ಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ಅಪ್ಪ
    ಸೌದಿ–ಹೌತಿ ಸಂಘರ್ಷ ತೀವ್ರ: ಭಾರತೀಯ ಬಲಿ, 4 ಸಾವಿರ ಉಮ್ರಾ ಯಾತ್ರಿಕರ ವಾಪಸಾತಿಗೆ ಸವಾಲು!
    ಫ್ರಿಡ್ಜ್ ರಿಪೇರಿಗೆ ಬಂದವ ಮನೆ ಲೂಟಿ ಪರಾರಿ…!ಬಿ ಅಲರ್ಟ್ ‼️
    ಕಾಕ್ರೋಜ್ ಎಫೆಕ್ಟ್, ಉನ್ನತ ಶಿಕ್ಷಣ ಇಲಾಖೆಯಲ್ಲಿ ಪ್ರಮುಖ  ಬದಲಾವಣೆ.
    ಕನಕಪುರ ಬಂಡೆ ಬಿಜೆಪಿಗೆ ಎಂಬ ಬೋಗಸ್ ಸುದ್ದಿ
    ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ? ದೆಹಲಿ–ಬೆಂಗಳೂರು ರಾಜಕೀಯ ಚಟುವಟಿಕೆ ಜೋರು, ಹೈಕಮಾಂಡ್ ನಿರ್ಧಾರದತ್ತ ರಾಜ್ಯದ ಚಿತ್ತ
    🚨 ಮಂಗಳೂರು ನಿವಾಸಿಗಳಿಗೆ ಮಹತ್ವದ ಮಾಹಿತಿ – 2026 ಘನತ್ಯಾಜ್ಯ ನಿರ್ವಹಣೆ ಹೊಸ ನಿಯಮ  🚨
    ದೆಹಲಿಯಲ್ಲಿ ಬಸ್‌ನಲ್ಲಿ ನಿರ್ಭಯಾ ನೆನಪಿಸುವ ಘಟನೆ -30 ವರ್ಷದ ಮಹಿಳೆ ಗ್ಯಾಂಗ್‌ರೇಪ್ ಶಾಕ್
    ಆಸಿಡ್ ದಾಳಿಗೊಳಗಾದ ಮಹಿಳೆಯರಿಗೆ ₹50 ಸಾವಿರ ಮಾಸಾಶನ: ಆಸಿಡ್ ಮಾರಾಟಕ್ಕೆ ಕಡಿವಾಣ ಹಾಕಲು ಸರ್ಕಾರ ಕ್ರಮ