📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ದಕ್ಷಿಣ ಕನ್ನಡದಲ್ಲಿ ಮಳೆ ದುರಂತ: ಎರಡು ಮೃತದೇಹಗಳು ನೀರಲ್ಲಿ ಪತ್ತೆ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯ ನಡುವೆಯೇ ನಡೆದ ಎರಡು ಪ್ರತ್ಯೇಕ ದುರಂತಗಳಲ್ಲಿ ಇಬ್ಬರ ಮೃತದೇಹಗಳು ನೀರಲ್ಲಿ ಪತ್ತೆಯಾಗಿವೆ. ಬಂಟ್ವಾಳ ಮತ್ತು ಉಪ್ಪಿನಂಗಡಿ ಭಾಗಗಳಲ್ಲಿ ನಡೆದ ಈ ಘಟನೆಗಳು ಆತಂಕಕ್ಕೆ ಕಾರಣವಾಗಿವೆ.

    ಬಂಟ್ವಾಳ ತಾಲೂಕಿನ ರಾಯಿ ಗ್ರಾಮದ ಪಾಂಚಕೋಡಿಯಲ್ಲಿ ನಾಪತ್ತೆಯಾಗಿದ್ದ ಜೀವನ್ ಪಿಂಟೋ ಅವರ ಮೃತದೇಹ ಸಂಗಬೆಟ್ಟು ಬಳಿ ನೀರಿನಲ್ಲಿ ಪತ್ತೆಯಾಗಿದೆ. ಮೊನ್ನೆ ರಾತ್ರಿ ಭಾರೀ ಮಳೆಯ ವೇಳೆ ಮಾವನ ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ತೋಡಿನ ಮೇಲೆ ನಿರ್ಮಿಸಲಾಗಿದ್ದ ಕಾಲು ಸಂಕದ ಬಳಿ ಕಾಲು ಜಾರಿ ಹರಿಯುತ್ತಿದ್ದ ನೀರಿಗೆ ಬಿದ್ದಿದ್ದರು ಎಂದು ತಿಳಿದುಬಂದಿದೆ. ಸ್ಥಳದಲ್ಲಿ ಟಾರ್ಚ್ ಹಾಗೂ ಚಪ್ಪಲಿ ಪತ್ತೆಯಾಗಿದ್ದು, ಎನ್‌ಡಿಆರ್‌ಎಫ್ ತಂಡ ನಿನ್ನೆ ದಿನವಿಡೀ ನಡೆಸಿದ ತೀವ್ರ ಶೋಧ ಕಾರ್ಯಾಚರಣೆಯ ಬಳಿಕ ಮೃತದೇಹ ಪತ್ತೆಯಾಯಿತು.

    Also Read  ಗ್ಯಾಸ್ ಸೋರಿಕೆ ಎಷ್ಟು ಅಪಾಯಕಾರಿ? ಕ್ಷಣದ ನಿರ್ಲಕ್ಷ್ಯ ಮನೆ ಸುಟ್ಟು, ಶೇ.60 ಸುಟ್ಟ ಗಾಯಾಳುವಿಗೆ ಶಾಸಕ ಭರತ್ ಶೆಟ್ಟಿ ನೆರವಿನ ಭರವಸೆ..

    ಇನ್ನೊಂದೆಡೆ, ಉಪ್ಪಿನಂಗಡಿಯ ಮಠ ಸಮೀಪ ನೇತ್ರಾವತಿ ನದಿಯಲ್ಲಿ ಕೊಚ್ಚಿಕೊಂಡು ಬಂದಿದ್ದ ಅಪರಿಚಿತ ಪುರುಷನ ಮೃತದೇಹ ನದಿ ದಡದ ಪೊದೆಯಲ್ಲಿ ಪತ್ತೆಯಾಗಿದೆ. ಸ್ಥಳೀಯರು ಮಾಹಿತಿ ನೀಡಿದ ಬಳಿಕ ಪೊಲೀಸರು ಮೃತದೇಹವನ್ನು ದಡಕ್ಕೆ ತಂದು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ. ಮೃತ ವ್ಯಕ್ತಿಯ ವಯಸ್ಸು ಸುಮಾರು 30ರಿಂದ 40 ವರ್ಷ ಎಂದು ಅಂದಾಜಿಸಲಾಗಿದ್ದು, ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಗುರುತು ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ.

    ಸಾರಾಂಶ

    ಭಾರೀ ಮಳೆಯ ಅಬ್ಬರದಿಂದ ದಕ್ಷಿಣ ಕನ್ನಡದಲ್ಲಿ ನೀರಿನ ಹರಿವು ಅಪಾಯಕಾರಿಯಾಗಿ ಹೆಚ್ಚಿದ್ದು, ಎರಡು ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಮೃತಪಟ್ಟಿರುವುದು ಮಳೆ ದುರಂತದ ತೀವ್ರತೆಯನ್ನು ಮತ್ತೊಮ್ಮೆ ಬಯಲಿಗೆಳೆದಿದೆ. ಅಧಿಕಾರಿಗಳು ನದಿ, ತೋಡು ಹಾಗೂ ನೀರು ಹರಿಯುವ ಪ್ರದೇಶಗಳ ಬಳಿ ಸಾರ್ವಜನಿಕರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಮನವಿ ಮಾಡಿದ್ದಾರೆ.

    ##ದಕ್ಷಿಣಕನ್ನಡ #ಮಂಗಳೂರು #ಬಂಟ್ವಾಳ #ಉಪ್ಪಿನಂಗಡಿ #ಮಳೆದುರಂತ #RainTragedy #KarnatakaNews

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    2029ರೊಳಗೆ 21 ಎನ್‌ಡಿಎ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಅಮಿತ್ ಶಾ
    “ಕುಂಡೆ(ತಿಕ)ಯಲ್ಲಿ ಲಕ್ಷ್ಮಿ ಇರುತ್ತಾಳೆ” ಎಂಬ ಹೇಳಿಕೆ ವೈರಲ್! ಆರ್ಯವರ್ಧನ್ ಗುರೂಜಿ ವಿರುದ್ಧ ದೂರು, ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ
    ಕಾರ್ಕಳದ ವಂಚನೆ ಪ್ರಕರಣ, ದೂರುದಾರನ ಮೇಲೂ ಶಂಕೆ
    ಹವ್ಯಕ ಭಾಷಾ ಅಕಾಡೆಮಿ ಅಸ್ತಿತ್ವಕ್ಕೆ ಗ್ರೀನ್ ಸಿಗ್ನಲ್ 
    🚀 ಸ್ಪೇಸ್‌ನಲ್ಲಿ ಪೆಟ್ರೋಲ್ ಬಂಕ್‌ನಿಂದ..ಔಷಧ ತಯಾರಿಕೆಯವರೆಗೆ!
    ಇತಿಹಾಸ ಸೃಷ್ಟಿಸಿದ ಈಶಾಂಕ್ ಸಮುದ್ರವನ್ನೇ ಸವಾಲಾಗಿ ತೆಗೆದುಕೊಂಡ 7 ವರ್ಷದ ಹೀರೋ ..!
    ತಾಯಿಯನ್ನೇ ಮದುವೆಗೆ ಆಹ್ವಾನಿಸದ ಕಾರಣಕ್ಕೆ ಉದ್ಯೋಗ ಕಳೆದುಕೊಂಡ ಯುವಕ…!
    ಮಹಿಳೆಯ ಸ್ಕೂಟಿಯನ್ನೇ ಕದ್ದ ಕಳ್ಳರು….. ಹೆಚ್ಚುತ್ತಿರುವ ವಾಹನ ಕಳ್ಳತನ
    ಭಾರತದ ಹಡಗಿಗೆ ಗ್ರೀನ್ ಸಿಗ್ನಲ್ ನೀಡಿದ ಇರಾನ್ 
    ಡಾನ್ ಹೇಮಂತ್ ಪೂಜಾರಿ ಸಹೋದರ ವಶಕ್ಕೆ?!?
    ಮಹಿಳೆಯರೇ, ಬಿರುಬಿಸಿಲು ಹಾಗಂತ ನೀರು ಕೇಳ್ಕೊಂಡು ಬಂದ್ರು… ಯಾರೋ ಪಾಪ ಅಂದ್ರೆ ಅಪರಿಚಿತರಿಗೆ…!ಒಂಟಿಯಾಗಿ ಇದ್ದಾಗ ಹೆಚ್ಚು ಜಾಗ್ರತಾಗಿರಿ.
    ನಿದ್ದೆಯಲ್ಲಿದ್ದ ವಿದ್ಯಾರ್ಥಿಗಳ ಮೇಲೆ ಕುಸಿದ ಕಟ್ಟಡ ಸಾವು ಆರಕ್ಕೆ..!ದಿಲ್ಲಿ ಪಿಜಿ ದುರಂತ ದೇಶದ ಹಳೆಯ ಕಟ್ಟಡಗಳಿಗೆ ಎಚ್ಚರಿಕೆಯ ಗಂಟೆ..!
    ಬ್ಯಾಂಕುಗಳ ಮೇಲೆ ಭೀಕರ ದಾಳಿಯ ಮುನ್ಸೂಚನೆ ನೀಡಿದ ಇರಾನ್- ಮಿನಿಮಮ್ 1000 ಮೀಟರ್ ದೂರವಿರಿ
    ಶಿಶಿಲದಲ್ಲಿ ವಿಷಪೂರಿತ ಹಾವು ಕಚ್ಚಿ 65 ವರ್ಷದ ರೈತ ಮೃತ್ಯು
    ಸ್ಪೇನ್‌ಗೆ 2ನೇ FIFA ವಿಶ್ವಕಪ್ ಕಿರೀಟ!ನ್ಯೂಯಾರ್ಕ್‌ನಲ್ಲಿ ಮೆಸ್ಸಿಯ ಅರ್ಜೆಂಟೀನಾವನ್ನು ಮಣಿಸಿದ ಸ್ಪೇನ್ ನ ಲಾ ರೋಜಾ ಗೆ ಐತಿಹಾಸಿಕ ಜಯ! 
    ‘ಈದ್’ ರಜಾ ತೀರ್ಮಾನ ಕೈಗೊಳ್ಳಲು ಜಿಲ್ಲಾಡಳಿತ ಸಂಜೆ 6.30ರ ವರೆಗೂ ವಿಫಲ!
    ದ್ವಿತೀಯ ಪಿ.ಯು.ಸಿ ಪರೀಕ್ಷಾ ಹಾಜರಾತಿ
    ಮೂಡಬಿದಿರೆ ಇನ್‌ಸ್ಪೆಕ್ಟರ್ ಪ್ರಕರಣಕ್ಕೆ ಟ್ವಿಸ್ಟ್: ಆರೋಪ ಮಾಡಿದ ಮಹಿಳೆಯ ವಿರುದ್ಧವೇ ಸಹೋದರಿಯ ಬಾಂಬ್!
    ಒಂದು ಸಹಿ… ಲಕ್ಷಾಂತರ ರೂ. ಹೊಣೆಗಾರಿಕೆಯ ಶಾಕ್!ಸಹಕಾರ ಸಂಸ್ಥೆಯಲ್ಲಿ ನಡೆದ ಅಕ್ರಮದ ಸತ್ಯ ಬಯಲು..
    ತಮಿಳು ರಾಜಕೀಯ ರಣರಂಗದಲ್ಲಿ “ವಿಜಯ”ಗಾಥೆ 118 ದಾಟಿದ TVK  ವಿಜಯ್ ಕೈ ಹಿಡಿದ ಮೈತ್ರಿ ಪಕ್ಷಗಳು!
    ಅಯೋಧ್ಯೆಯಲ್ಲಿ ನ್ಯಾಯಕ್ಕಾಗಿ ವಕೀಲರ ಮೆರವಣಿಗೆ..ಭುಗಿಲೆದ್ದ ಪ್ರತಿಭಟನೆ..ಕಠಿಣ ಕ್ರಮಕ್ಕೆ ಆಗ್ರಹ
    ಮಾಜಿ ಮುಖ್ಯಮಂತ್ರಿಯ ಮೇಲೆ ಗುಂಡಿನ ದಾಳಿ,- Z+ ಭದ್ರತೆಯ ನಡುವೆ ದಾಳಿಕೋರ ಹೇಗೆ  ಬಂದ?
    ಮನುಷ್ಯನಿಗಿಂತ AI ನಿಯಂತ್ರಣ ತಪ್ಪಿ ಶಕ್ತಿಶಾಲಿಯಾದ್ರೆ…ಚೀನಾದ ಎಚ್ಚರಿಕೆ ಬೆಚ್ಚಿಬೀಳಿಸುವಂತಿದೆ!ರಾಷ್ಟ್ರೀಯ ಭದ್ರತೆ ಬಗ್ಗೆ ಶುರುವಾಯ್ತು ಭಾರೀ ಆತಂಕ!
    ಕೆಸರೆರಚಾಟದ ನಡುವೆ SIR-ಪ್ರಜಾಪ್ರಭುತ್ವದ ಹಬ್ಬವೋ, ರಾಜಕೀಯ ಗೊಂದಲದ ಗೂಡೋ?
    ಚುನಾವಣಾ ಆಯೋಗ ಸರ್ವಾಧಿಕಾರಿಯಾಗುತ್ತಿದೆ ಎಂಬ ಅನುಮಾನದ ಸುತ್ತ….
    ಉರ್ವಸ್ಟೋರ್ ಮೈದಾನದಲ್ಲಿ ಕತ್ತಿಯಿಂದ ಕಡಿದು ಹತ್ಯೆಗೆ ಯತ್ನ : ಆರೋಪಿ ಬಂಧನ
    ಕರಾವಳಿಯಲ್ಲಿ ಶುರುವಾಯ್ತು MESCOM ಮಹಾಸಮರ!ಬಯಲಾಗುತ್ತಾ “ಬ್ರಹ್ಮಾಂಡ ಭ್ರಷ್ಟಾಚಾರ”..!?
    ಮೋದಿ ನೇತೃತ್ವದಲ್ಲಿ ಇತಿಹಾಸಕ್ಕೆ ಮರಳಿದ ರಾಜರಾಜಚೋಳರ ಹೆಮ್ಮೆ — ಆನೈಮಂಗಲಂ ತಾಮ್ರಶಾಸನಗಳು! 1000 ವರ್ಷದ ಇತಿಹಾಸ 100 ವರ್ಷಗಳ ಬಳಿಕ ಚೋಳರ ಕಾಲದ ಅಪರೂಪದ ದಾಖಲೆ ನೆದರ್‌ಲ್ಯಾಂಡ್ಸ್‌ನಿಂದ ಭಾರತಕ್ಕೆ ವಾಪಸ್….
    ಬಿಡದಿ ಟೌನ್‌ಶಿಪ್ ಯೋಜನೆ ಜಾರಿಗೆ ಸ್ಥಳೀಯ ರೈತರಿಂದಲೇ ಆಗ್ರಹ
    ಗೃಹಲಕ್ಷ್ಮಿ ಹಣ ಪಡೆಯೋರೇ ಗಮನಿಸಿ! ಪತಿ ಆಧಾರ್‌ನಿಂದ ಬ್ಯಾಂಕ್ ಖಾತೆವರೆಗೆ ಹೊಸ ರೂಲ್ಸ್