📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ದಕ್ಷಿಣ ಕನ್ನಡದ 14 ವರ್ಷದ ಎಲ್ಲ ಬಾಲಕಿಯರು ಉಚಿತ HPV ಲಸಿಕೆ ಹಾಕಿಸಿಕೊಳ್ಳಲು ಸಂಸದರ ಕರೆ

ಗರ್ಭಕಂಠದ ಕ್ಯಾನ್ಸರ್ ತಡೆಗೆ ಕೇಂದ್ರ ಸರ್ಕಾರದಿಂದ HPV ಲಸಿಕೆ ಅಭಿಯಾನ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ಹೆಣ್ಣುಮಕ್ಕಳ ಆರೋಗ್ಯದ ಶ್ರೀರಕ್ಷೆಗೆ ಹಮ್ಮಿಕೊಂಡಿರುವ ಮಹತ್ವಾಕಾಂಕ್ಷೆಯ ಉಚಿತ ಹೆಚ್.ಪಿ.ವಿ. ಲಸಿಕಾ ಅಭಿಯಾನದ ಪೂರ್ಣ ಸದುಪಯೋಗವನ್ನು ಪಡೆದುಕೊಳ್ಳುವಂತೆ ದಕ್ಷಿಣ ಕನ್ನಡದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ವಿಶೇಷ ಕರೆ ನೀಡಿದ್ದಾರೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಸಂಸದರು, ನಮ್ಮ ಜಿಲ್ಲೆಯ 14ರಿಂದ 15 ವರ್ಷದೊಳಗಿನ ಎಲ್ಲಾ ಕಿಶೋರಿಯರು ಸ್ವಯಂಪ್ರೇರಿತರಾಗಿ ಈ ಲಸಿಕೆಯನ್ನು ಪಡೆದುಕೊಳ್ಳುವ ಮೂಲಕ ‘ಆರೋಗ್ಯವಂತ ಭಾರತ – ಆರೋಗ್ಯವಂತ ದಕ್ಷಿಣ ಕನ್ನಡ’ ನಿರ್ಮಾಣಕ್ಕೆ ಸಹಕರಿಸಬೇಕು. ವಿಶೇಷವಾಗಿ ಹೆಣ್ಣುಮಕ್ಕಳ ತಾಯಂದಿರಲ್ಲಿ ವಿನಂತಿಸಿರುವ ಅವರು, ಶಾಲಾ ಪರೀಕ್ಷೆಗಳು ಮುಗಿದ ತಕ್ಷಣ ಹತ್ತಿರದ ಸರ್ಕಾರಿ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ, ತಮ್ಮ ಮಕ್ಕಳಿಗೆ ಈ ಹೆಚ್.ಪಿ.ವಿ. ಲಸಿಕೆಯನ್ನು ಕೊಡಿಸುವಂತೆ ಕೋರಿದ್ದಾರೆ.
ದ.ಕ. ಜಿಲ್ಲೆಯಲ್ಲಿ 22,473 ಕಿಶೋರಿಯರಿಗೆ ಲಸಿಕೆ ನೀಡುವ ಗುರಿ ಹಾಕಿಕೊಳ್ಳಲಾಗಿದ್ದು, ಈಗಾಗಲೇ ರಾಜ್ಯಕ್ಕೆ 2.54 ಲಕ್ಷ ಡೋಸ್ ಎಚ್‌ಪಿವಿ ಲಸಿಕೆ ಉಚಿತವಾಗಿ ಸರಬರಾಜಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಈ ಲಸಿಕೆಗೆ ಗರಿಷ್ಟ 8000 ರೂ.ವರೆಗೆ ದರ ಇದ್ದು, ಆದರೆ ಕೇಂದ್ರ ಸರ್ಕಾರದ ರಾಷ್ಟ್ರೀಯ ಆರೋಗ್ಯ ಮಿಷನ್ ನಡಿಯಲ್ಲಿ ಉಚಿತವಾಗಿ ನೀಡಲಾಗುತ್ತದೆ. ಜಿಲ್ಲೆಯ ಎಲ್ಲಾ ಪ್ರಾಥಮಿಕ, ಸಮುದಾಯ ಆರೋಗ್ಯ ಕೇಂದ್ರಗಳು ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಹೆಚ್.ಪಿ.ವಿ. ಲಸಿಕೆಯು ಪಡೆದುಕೊಳ್ಳಬಹುದು. ಮುಂದಿನ ಮೂರು ತಿಂಗಳು ಅಂದರೆ ಮೇ ತಿಂಗಳಾಂತ್ಯದವರೆಗೆ ಈ ಲಸಿಕೀಕರಣ ಅಭಿಯಾನ ಮುಂದುವರಿಯಲಿದೆ. ಈ ಅಭಿಯಾನವು ಹದಿಹರೆಯದ ಬಾಲಕಿಯರ ಭವಿಷ್ಯದ ಜೀವನ ಸುರಕ್ಷಿತಗೊಳಿಸುವ ದೃಷ್ಟಿಯಿಂದ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ಪ್ರಮುಖ ಮೈಲಿಗಲ್ಲು ಆಗಲಿದೆ ಎಂದು ಹೇಳಿದ್ದಾರೆ.

ಜಿಲ್ಲೆಯ ಪ್ರತಿಯೊಬ್ಬ ಅರ್ಹ ಹೆಣ್ಣುಮಗುವಿಗೂ ಈ ಲಸಿಕೆ ತಲುಪುವಂತೆ ಹಾಗೂ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಲಸಿಕೆಯ ಬಗ್ಗೆ ಇರುವ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಿ, ಪೋಷಕರಲ್ಲಿ ಜಾಗೃತಿ ಮೂಡಿಸಲು ಆಶಾ ಕಾರ್ಯಕರ್ತರು ಸೇರಿದಂತೆ ಆರೋಗ್ಯ ಇಲಾಖೆಯು ಇದನ್ನು ಆಂದೋಲನದಂತೆ ಕೈಗೆತ್ತಿಕೊಳ್ಳಬೇಕು. ಜಿಲ್ಲೆಯ ಜನಪ್ರತಿನಿಧಿಯಾಗಿ ಈ ಅಭಿಯಾನಕ್ಕೆ ನನ್ನ ಸಂಪೂರ್ಣ ಬೆಂಬಲವಿರಲಿದೆ ಎಂದು ಸಂಸದ ಕ್ಯಾ. ಚೌಟ ತಿಳಿಸಿದ್ದಾರೆ.

U-WIN ಪ್ಲಾಟ್‌ಫಾರ್ಮ್‌ನಲ್ಲಿ ಪೂರ್ವ-ನೋಂದಣಿಗೆ ಅವಕಾಶ:
ಫಲಾನುಭವಿಗಳು U-WIN ಡಿಜಿಟಲ್ ಪ್ಲಾಟ್‌ಫಾರ್ಮ್‌ನಲ್ಲಿ ಪೂರ್ವ-ನೋಂದಣಿ ಮಾಡಿ ಈ ಲಸಿಕೆ ಹಾಕಿಸಿಕೊಳ್ಳುವುದಕ್ಕೆ ಅಪಾಯಿಂಟ್‌ಮೆಂಟ್‌ ನಿಗದಿಪಡಿಸಬಹುದು ಅಥವಾ ನೇರವಾಗಿ ಗೊತ್ತುಪಡಿಸಿದ ಸರ್ಕಾರಿ ಆರೋಗ್ಯ ಕೇಂದ್ರಗಳಿಗೆ ತೆರಳಿ ಲಸಿಕೆಯನ್ನು ಪಡೆದುಕೊಳ್ಳಬಹುದು. ಲಸಿಕೆ ಪಡೆಯಲು ಪೋಷಕರ ಒಪ್ಪಿಗೆ ಕಡ್ಡಾಯವಾಗಿದೆ.

##FreeVaccination##HealthyIndia #DakshinaKannada

COMMENTS

Login with Gmail to comment

ಇನ್ನಷ್ಟು ಸುದ್ದಿ

ಮಂಗಳೂರು ಬೆಂಗಳೂರು ಮಧ್ಯೆ ಇನ್ನು ತಡರಾತ್ರಿಯೂ ವಿಮಾನ ಯಾನ
ಎಸ್ ಪಿ ಅರುಣ್ ಕುಮಾರ್ ಗೆ ಮುಖ್ಯಮಂತ್ರಿ ಪದಕ
ಬ್ಯಾಂಕಿಂಗ್ ಸೇವೆ ಸ್ಮಾರ್ಟ್‌ಫೋನ್ ನೇ ಬೇಕಂತಿಲ್ಲ .ಕೀಪ್ಯಾಡ್ ಫೋನ್ ಸಾಕು ಈಗ “ಸ್ಮಾರ್ಟ್” ಆಗಿದ್ದರೆ ಸಾಕು! 
ವಿಶ್ವಸಂಸ್ಥೆಗೆ ಜೀವ ಬಂತು ನೋಡಿ…
BRICS ನ ಡಿಜಿಟಲ್ ಕರೆನ್ಸಿ ವಿಶ್ವ ಆರ್ಥಿಕತೆಯನ್ನೇ ಬೆರಗಾಗಿಸುತ್ತಾ..?
ಧೂಮಪಾನ ಮಾಡುತ್ತಿದ್ದೀರಾ? ನಿಮ್ಮ ಮುಖ ನಿಧಾನವಾಗಿ ನಾಶವಾಗುತ್ತಿದೆ…
“ಗ್ಯಾರಂಟಿ “ಹಣದ ಮೇಲೆ ಆಯೋಗದ ಕಣ್ಣು: ಸಿಎಂ ಸಿಡಿಮಿಡಿ ..ರಾಜಕೀಯ ಕಿಡಿ!
ಪ್ರತೀಕಾರದ ದಾಳಿಗೆ ‘ ರೌಡಿಶೀಟರ್ ಟ್ಯಾಬ್ಲೆಟ್’ ಆರೀಫ್ ಖತಂ .!
ಮಂಗಳೂರು ಸಿಟಿ ಪೊಲೀಸರ ಭರ್ಜರಿ ಬೇಟೆ – ನಿಷೇಧಿತ ಎಂಡಿಎಂ, ಗಾಂಜಾ ಮರಾಟಗಾರರ ಬಂಧನ
ಗಂಡನ ಮನೆಯಿಂದ ಯುವತಿಯನ್ನು ಎಳೆದೊಯ್ದರು
ಯುದ್ಧದ ಹೊಡೆತ: ಹಣ ಕೊಟ್ಟರೂ ಗ್ಯಾಸ್ ಇಲ್ಲ! ಕಾರವಾರ ಬಂದರು ಸ್ತಬ್ಧ — ಜನಜೀವನ ಅಸ್ತವ್ಯಸ್ತ 🔥
ಐಟಿ ಕ್ಷೇತ್ರದಲ್ಲಿ ಮತ್ತೆ ಲೇಆಫ್ ಭೀತಿ!
ಅಮೆರಿಕಾ ಭಾರತವನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದೆ” – ಕೆ.ಸಿ. ವೇಣುಗೋಪಾಲ್
AI ಹವಾ-ಬೇಗನೆ ಫೈನಾನ್ಷಿಯಲ್ ಇಂಡಿಪೆಂಡೆಂಟ್ ಆಗೋ ಟ್ರೆಂಡ್- ಕೈಬಿಟ್ಟ  ಓದು!! ಇದು ಗಂಭೀರ ಸೂಚನೆ….
ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿ ಕಳೆದ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಕೊನೆಗೂ ಪತ್ತೆ ಹಚ್ಚಲಾಗಿದೆ.
“ಬರ್ಕಾಸ್ತು ಘಟಕಕ್ಕೆ ‘ಬೋಗಸ್ ನಾಯಕತ್ವ’ – ಕರವೇ ಮಹಿಳಾ ಘಟಕದಲ್ಲಿ ಭಿನ್ನಮತ ಸ್ಫೋಟ!”
ವಿದ್ಯಾರ್ಥಿಯೊಬ್ಬ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ..
ಕೊನೆಕ್ಷಣದ ಹೃದಯ ಕಲುಕುವ ಹರೀಶ್ ರಾಣಾ – ದಯಾಮರಣvedio
ಕಾರ್ಕಳ ಮಹಾಮಸ್ತಕಾಭಿಷೇಕಕ್ಕೆ ₹1.59 ಕೋಟಿ ಅನುದಾನ: ಮೊದಲ ಕಂತು ಬಿಡುಗಡೆ…
ಕೊಲೆ ಆರೋಪಿಗಳ ಕಾರು ಮಾಣಿಯಲ್ಲಿ ಪತ್ತೆ ….!
ತಪ್ಪೊಪ್ಪಿಕೊಂಡ ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಆರೋಪಿ ಶಾರೀಕ್…!ಶಿಕ್ಷೆ ಏನು?
ಪಂಚ ಗ್ಯಾರಂಟಿ ಯೋಜನೆಯಿಂದ ಕರ್ನಾಟಕ ಸಾಲದ ಸುಳಿಗೆ……..
ಭಾರತದ ಹಡಗಿಗೆ ಗ್ರೀನ್ ಸಿಗ್ನಲ್ ನೀಡಿದ ಇರಾನ್ 
ರಾಜ್ಯದ 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳಾಗಿ ಉನ್ನತೀಕರಿಸಲು 3900 ಕೋಟಿ ಮೀಸಲು
ಗುರು ಬ್ರಹ್ಮ – ಗುರು ವಿಷ್ಣು ಅನ್ನುವ ಕಾಲ ಮುಗಿದು ಹೋಯ್ತೇ?
AI ಡೀಪ್‌ಫೇಕ್ ಕೇವಲ ಸಿನಿಮಾ ನಟಿಯರಿಗೆ ಸೀಮಿತವಾಗಿಲ್ಲ .
Lokayukta Raid In Hassan: ಬಾಗಿಲು ತೆರೆಯದೆ AEE ಹೈಡ್ರಾಮಾ, ಮನೆ ಏರಿದ ಲೋಕಾ ಪೊಲೀಸರು | AEE Satyanarayan
ಆಸಿಡ್ ದಾಳಿಗೊಳಗಾದ ಮಹಿಳೆಯರಿಗೆ ₹50 ಸಾವಿರ ಮಾಸಾಶನ: ಆಸಿಡ್ ಮಾರಾಟಕ್ಕೆ ಕಡಿವಾಣ ಹಾಕಲು ಸರ್ಕಾರ ಕ್ರಮ
ಅಕ್ರಮ ಡಿಸೇಲ್ ದಾಸ್ತಾನು ಪ್ರಕರಣ: 4,175 ಲೀಟರ್ ಡಿಸೇಲ್ ಕಂದಾಯ ಇಲಾಖೆಯಿಂದ ಹರಾಜು – ₹2.35 ಲಕ್ಷಕ್ಕೆ ಮಾರಾಟ!
ಟೀಕೆಗಳು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿನ ಸೌಂದರ್ಯ – ಖಾದರ್