📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ದೊಡ್ಡ ಬಜೇಟ್  ತುಳು ಸಿನಿಮಾ`ಗಜಾನನ ಕ್ರಿಕೆಟರ್ಸ್’ ಮೇ 22 ರಂದು ತೆರೆಗೆ

    ಮಂಗಳೂರು: ಪ್ರಜ್ವಲ್ ಫಿಲಂಸ್ ಲಾಂಛನದಲ್ಲಿ ತಯಾರಾದ ಪ್ರಜ್ವಲ್ ಶೆಟ್ಟಿ ನಿರ್ಮಾಣ ಹಾಗೂ ಕೀರ್ತನ್ ಭಂಡಾರಿ ನಿರ್ದೇಶನದ `ಗಜಾನನ ಕ್ರಿಕೆಟರ್ಸ್ (ಜಂತೊಟ್ಟು ಸಿನ್ಸ್ 1983)’
    ತುಳು ಚಲನಚಿತ್ರವು ಮೇ 22 ರಂದು ತುಳು ನಾಡಿನಾದ್ಯಂತ ತೆರೆಕಾಣಲಿದೆ.
    ಇದು ತುಳು ಭಾಷೆಯಲ್ಲಿನ ದೊಡ್ಡ ಬಜೆಟ್ ಚಿತ್ರವಾಗಿದ್ದು, ಕ್ರಿಕೆಟ್ ಮತ್ತು ಆಟಗಾರರ ಬದುಕಿನ ಹಿನ್ನಲೆ ಆಧಾರಿತ ಕತೆ ಹೊಂದಿದೆ. ಚಿತ್ರದಲ್ಲಿ ಹಾಸ್ಯ, ಪ್ರೇಮಪೂರಿತ ಭಾವನೆಗಳು ಮತ್ತು ಸಮಾಜಮುಖಿ ಸಂದೇಶವಿರುವ ಚಿತ್ರವಾಗಿದೆ.
    ಇದೇ ಮೊದಲ ಬಾರಿಗೆ ನಿರ್ದೇಶನದ ಜವಾಬ್ದಾರಿಯನ್ನು ಹೊತ್ತು ಕೆಲಸ ಮಾಡಿರುವ ಕೀರ್ತನ್ ಭಂಡಾರಿಯವರೇ ಕಥೆ, ಚಿತ್ರಕಥೆಯನ್ನೂ ಬರೆದಿದ್ದಾರೆ. ಹಾಗಾಗಿ ಈ ಚಿತ್ರದ ವಿಚಾರದಲ್ಲಿ ನಿರ್ದೇಶಕರು ಸಾಕಷ್ಟು ಶ್ರಮವನ್ನು ಹಾಕಿದ್ದಾರೆ ಅನ್ನೋದರಲ್ಲಿ ಎರಡು ಮಾತಿಲ್ಲ. ಮಂಗಳೂರು ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಚಿತ್ರೀಕರಣ ನಡೆದಿದೆ. ಈ ಚಿತ್ರದಲ್ಲಿ ನಿರ್ಮಾಪಕರಾದ ಪ್ರಜ್ವಲ್ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
    ಚಿತ್ರದ ತಾರಾಗಣದಲ್ಲಿ ವಿನೀತ್ ಕುಮಾರ್, ನವೀನ್ ಡಿ. ಪಡೀಲ್, ಅರವಿಂದ ಬೋಳಾರ್, ಭೋಜರಾಜ್ ವಾಮಂಜೂರು, ದೀಪಕ್ ರೈ ಪಾಣಾಜೆ, ಪ್ರಕಾಶ್ ತುಮಿನಾಡು, ಉಮೇಶ್ ಮಿಜಾರು, ಸಮತಾ ಅಮೀನ್, ಅನ್ವಿತಾ ಸಾಗರ್, ಸರ್ವೋತ್ತಮ ಶೆಟ್ಟಿ, ವಾಲ್ಟರ್ ನಂದಳಿಕೆ, ರೂಪಾ ವರ್ಕಾಡಿ, ಲಂಚೂ ಲಾಲ್, ಪ್ರಸನ್ನ ಶೆಟ್ಟಿ ಬೈಲೂರು, ಸಂದೀಪ್ ಶೆಟ್ಟಿ ಮಾಣಿಬೆಟ್ಟು, ಪುಷ್ಪರಾಜ್ ಬೊಳ್ಳಾರು, ಸಚಿನ್ ಮಾಡ, ಜೇಮ್ಸ್ ಮೆಂಡೋನ್ಸಾ, ಕರಣ್ ಪೂಜಾರಿ ಸೇರಿದಂತೆ ಅನೇಕ ಸ್ಥಳೀಯ ಕಲಾವಿದರು ನಟಿಸಿದ್ದಾರೆ.
    ವಿನುತ್ ಕೆ. ಸುವರ್ಣ ಅವರ ಛಾಯಾಗ್ರಹಣ, ಸುಜಯ್ ಶಿವರಾಮ್ ಹಾಗೂ ಕೌಶಿಕ್ ಭಂಡಾರಿ ಅವರ ಸಂಕಲನ ಚಿತ್ರದ ತಂತ್ರಜ್ಞಾನ ಮಟ್ಟವನ್ನು ಉತ್ತುಂಗಕ್ಕೆ ಕೊಂಡೊಯ್ಯುತ್ತದೆ ಅನ್ನೋದು ನಿರ್ದೇಶಕರ ಪ್ರಾಮಿಸ್ ಆಗಿದೆ.
    ಗೀತಾ ಸಾಹಿತ್ಯವನ್ನು ಕೀರ್ತನ್ ಭಂಡಾರಿ, ಸೃಜನ್ ಮಾನವ್, ಶ್ರೀನಿಧಿ ಶೆಟ್ಟಿ ರಚಿಸಿದ್ದಾರೆ.
    ಸಹ ನಿರ್ಮಾಪಕರು: ರೋಹನ್ ಪಿರೇರ ವಾಮಂಜೂರು ಮತ್ತು ಸಂತೋಷ್ ಲಾಡ್, ಸಂಗೀತ: ಸೃಜನ್ ಕುಮಾರ್ ತೋನ್ಸೆ.
    ಚಿತ್ರದ ಟೀಸರ್ ಮತ್ತು ಹಾಡು ಬಿಡುಗಡೆಗೊಂಡಿದ್ದು,
    ಸಾಮಾಜಿಕ ಜಾಲತಾಣಗಳಲ್ಲಿ ವೀಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಬಂದಿದೆ ಎನ್ನುವುದು ಚಿತ್ರತಂಡದ ಹೆಮ್ಮೆಯ ಹೇಳಿಕೆ.
    ತುಳುನಾಡು ಚಿತ್ರರಂಗಕ್ಕೆ ಹೊಸ ಸಂಚಲನ ನೀಡಬಲ್ಲ ಚಿತ್ರವೆಂದು ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
    ದುಬೈಯಲ್ಲಿ ಅದ್ಧೂರಿಯಾದ ಆಡಿಯೋ ಲಾಂಚ್
    ದುಬೈಯನ ಟೈಮ್ ಓಕ್ ಹೋಟೆಲ್‌ನ ಫಿಶರ್‌ಮ್ಯಾನ್ಸ್ ಹಬ್‌ನಲ್ಲಿ ‘ಗಜಾನನ ಕ್ರಿಕೆಟರ್ಸ್’ ಚಿತ್ರದ ಆಡಿಯೋ ಲಾಂಚ್ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.
    ಪ್ರಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು ಆಡಿಯೋ ಬಿಡುಗಡೆ ಮಾಡಿದರು. ಅವರು ಈ ಚಿತ್ರದ ಒಂದು ಹೃದಯಸ್ಪರ್ಶಿ ಗೀತೆಯನ್ನು ತಮ್ಮ ಸುವರ್ಣ ಧ್ವನಿಯಲ್ಲಿ ಹಾಡಿದ್ದಾರೆ.
    ಗಣ್ಯ ಅತಿಥಿಗಳ ಸಮಾಗಮ
    ಬಿ.ಆರ್. ಶೆಟ್ಟಿ, ಸರ್ವೋತ್ತಮ ಶೆಟ್ಟಿ (ಅಬುದಾಬಿ), ಹರೀಶ್ ಶೇರಿಗಾರ್, ಪ್ರತಾಪ್ ಮೆಂಡೋನ್ಸಾ, ಜೇಮ್ಸ್ ಮೆಂಡೋನ್ಸಾ, ಸುಧರ್ಶನ್ ಹೆಗ್ಡೆ, ಹಿದಾಯತ್ ಅಡೂರು ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
    ವಿದೇಶಗಳಲ್ಲಿ ಪ್ರೀಮಿಯರ್ ಶೋ
    ಯುಎಇ, ಸೌದಿ ಅರೇಬಿಯಾ, ಕತಾರ್, ಓಮಾನ್, ಬಹ್ರೇನ್, ಕುವೈತ್ ಹಾಗೂ ಇತರ ದೇಶಗಳಲ್ಲಿ ಚಿತ್ರವು ಪ್ರೀಮಿಯರ್ ಶೋ ಮೂಲಕ ಪ್ರದರ್ಶನಗೊಂಡು ಪ್ರೇಕ್ಷಕರ ಮೆಚ್ಚುಗೆ ಗಳಿಸಿದೆ ಎಂದು ನಟ, ನಿರ್ಮಾಪಕ ಪ್ರಜ್ವಲ್ ಶೆಟ್ಟಿ ತಿಳಿಸಿದ್ದಾರೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಕಾಂಗ್ರೆಸ್–ಮುಸ್ಲಿಂ ಸಮುದಾಯ ಸಂಬಂಧದಲ್ಲಿ ದೊಡ್ಡ ಬಿರುಕು?
    ಸ್ಪೇನ್ ಅಧ್ಯಕ್ಷರ ವಿರುದ್ಧ ಟ್ರಂಪ್ ಗುಡುಗು 
    ನಿವೇಶನ ಮೋಸದ ಆರೋಪ: ಶಾಸಕ ಎಸ್ ಟಿ ಸೋಮಶೇಖರ್ ಬೆಂಬಲಿಗ ಕೇಬಲ್ ಕೃಷ್ಣನ ಮೇಲೆ ಹಿಗ್ಗಾಮುಗ್ಗಾ ಹಲ್ಲೆ..!
    ಶಾಲೆಗಳ ದುಸ್ಥಿತಿ ತೋರಿಸಲು CJP ಸಜ್ಜು; ‘ಹೊರಗಿನವರಿಗೆ ನೋ ಎಂಟ್ರಿ’ ಎಂದ ರಾಜಸ್ಥಾನ ಸರ್ಕಾರ!
    ರಾಜ್ಯಸಭೆಗೆ ಬಿಜೆಪಿಯಿಂದ 9 ಜನರ ಪಟ್ಟಿ ಬಿಡುಗಡೆ
    ದೆಹಲಿ ಹೋಟೆಲ್ ಭೀಕರ ಅಗ್ನಿ ದುರಂತ!ಹೊತ್ತಿ ಉರಿದ ಹೋಟೆಲ್‌ನಲ್ಲಿ 21 ಮಂದಿ ಸಜೀವ ದಹನ..
    ಅಧಿಕಾರಕ್ಕಿಂತ ಕೆಲಸ ಮುಖ್ಯ ಎನ್ನುವ ನಾಯಕ? ಕೃಷ್ಣ ಬೈರೇಗೌಡರ ನಡೆ, ಕೆಲಸ ಈಗ ಎಲ್ಲರ ಗಮನ ಸೆಳೆತಿದೆ..
    ಡೇಟಾ ಬೇಡವೇ? ಕರೆ-SMS ಬಳಕೆದಾರರಿಗೆ ಟ್ರಾಯ್‌ನಿಂದ ಹೊಸ ಆಯ್ಕೆ
    ವಿದ್ಯಾರ್ಥಿ ಪ್ರತಿಭಟನಾ ಪ್ರಕರಣಗಳು: ಎಫ್‌ಐಆರ್‌ ಹಿಂಪಡೆಯಲು ಸುಪ್ರೀಂ ಕೋರ್ಟ್‌ ಮಹತ್ವದ ಸ್ಪಷ್ಟನೆ
    ದಕ್ಷಿಣ ಕನ್ನಡದಲ್ಲಿ ಮಳೆ ದುರಂತ: ಎರಡು ಮೃತದೇಹಗಳು ನೀರಲ್ಲಿ ಪತ್ತೆ
    ಪೊಲೀಸರಿಂದ ಕ್ರೂರವಾಗಿ ತಳಿಸಲ್ಪಟ್ಟ ವಿದ್ಯಾರ್ಥಿಗಳಲ್ಲಿ ಕ್ಷಮೆ ಕೇಳಿದ ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ
    “ಧುರಂಧರ್ “ಸಿನಿಮಾವನ್ನೂ ಮೀರಿದ ಪಾಕ್ ಸಂಚನ್ನ ಭೇದಿಸಿದ ಕೇಂದ್ರ ಗುಪ್ತಚರ ಇಲಾಖೆ ಮತ್ತು ಕರ್ನಾಟಕ ಖಾಕಿ..
    ಜಾಗತಿಕ ಯುದ್ಧ ಭೀತಿ:ಟ್ರಂಪ್ ಎಫೆಕ್ಟ್‌ಗೆ ಭಾರೀ ಆರ್ಥಿಕ ಭೂಕಂಪ! — ಒಂದೇ ದಿನ ₹6 ಲಕ್ಷ ಕೋಟಿ ನಷ್ಟ!ಸೆನ್ಸೆಕ್ಸ್ ಧರೆಗುರುಳಿ, ರೂಪಾಯಿ ದಾಖಲೆ ಪತನ!
    ಒಂದು ಕ್ಷಣದಲ್ಲಿ ನಗು, ಇನ್ನೊಂದು ಕ್ಷಣದಲ್ಲಿ ನಿಶ್ಶಬ್ದ ಕಣ್ಣೀರು…
    ಗೃಹ ಜ್ಯೋತಿ ….ಯೋಜನೆ ಪರಿಶೀಲನೆಗೆ ಜುಲೈ 31 ಅಂತಿಮ ಗಡುವಲ್ಲ; ಮೆಸ್ಕಾಂ ವ್ಯಾಪ್ತಿಯಲ್ಲೂ ಆಗಸ್ಟ್ ಅಂತ್ಯದವರೆಗೆ ಸರ್ವೇ ಮುಂದುವರಿಕೆ
    ಇಬ್ಬರ ಸಣ್ಣ ಜಗಳದ ಎಫೆಕ್ಟ್ ನೋಡಿ..ಕಡಬದಲ್ಲಿ ಹೈಡ್ರಾಮಾ!ಸಿಲ್ಲಿAngry ಮೂಡ್‌ನಲ್ಲಿ ಎಸೆದ car ಕೀ ಚರಂಡಿಗೆ…
    ಪ್ರಶಸ್ತಿಗಾಗಿ ಹಂಬಲಿಸಿದ ಟ್ರಂಪ್‌ಗೆ ನಿರಾಸೆ; ನ್ಯಾಯಕ್ಕಾಗಿ ಹೋರಾಡಿದ ನವಿ ಪಿಳ್ಳೆಗೆ ನೊಬೆಲ್!
    ಗಂಡನನ್ನು ಕೊಂದ ಪತಿವ್ರತೆ… ಮೂರು ವರ್ಷದ ಮಗು ಅನಾಥ
    ಪೊಲೀಸ್ ಇಲಾಖೆಯ ಜಯಶ್ರೀ ನೀಡಿದ ದೂರಿನಲ್ಲಿ ಮತ್ತೊಬ್ಬ ರೌಡಿ ಶೀಟರ್ ಹೆಸರು: ವಿಡಿಯೋ ಕಾಲ್ ಪ್ರಕರಣಕ್ಕೆ ಹೊಸ ತಿರುವು
    ಮೈ ಜುಮ್ಮೆನ್ನಿಸುವ ಬೈಕ್–ಲಾರಿ ಡಿಕ್ಕಿ ಅಪಘಾತ… ಕ್ಷಣಾರ್ಧದಲ್ಲೇ ಜೀವ ಹೋದ ಹೃದಯವಿದ್ರಾವಕ ರಸ್ತೆ ದುರಂತ
    🚨 ಬ್ರೇಕಿಂಗ್ ‼️ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ: ಜುಲೈ 2 (ಗುರುವಾರ) ರಜೆ ಘೋಷಣೆ
    ವಿಶ್ವದ ನಂಬರ್ ವನ್ ಜನನಾಯಕನಾದ ಪ್ರಧಾನಿ ಮೋದಿ
    ಜೂನ್ 30,ಪ್ಲಾಸ್ಟಿಕ್ ನೋಟುಗಳು ಬರುತ್ತಿವೆಯೇ? – ವೈರಲ್ ಸುದ್ದಿಯ ಹಿಂದಿನ ವಿಷಯ
    “ಮಾಜಿ RSS ಕಾರ್ಯಕರ್ತನಿಗೆ ಮುಸ್ಲಿಂ ಮಹಿಳೆ ಅಗ್ನಿಸ್ಪರ್ಶ”ವಾಸ್ತವ ಏನು?ಮಾನವೀಯತೆಗೆ ಧರ್ಮದ ಗಡಿ ಇಲ್ಲ!
    NEET ಹಂಗಾಮ ನೀಟಾಗಿ ಅಂತ್ಯ ಕಾಣುತ್ತಾ…?!ಮೋದಿಯ ‘ತಡವಾದ ಪ್ರತಿಕ್ರಿಯೆ’-ಕೊನೆಗೂ ವಾಂಗ್ಚುಕ್ ಉಪವಾಸ ಅಂತ್ಯ… ಆದರೆ … ‘ಕಾಕ್ರೋಚ್’ ಹೋರಾಟ ಮುಂದುವರಿಕೆ!ಮುಂದೇನು??
    ಬಿಜೆಪಿಯನ್ನು ಹಿಂದಿಕ್ಕಿದ   ಜಿರಳೆ ಪಕ್ಷ..”ಕಾಕ್ರೋಚ್ ಜನತಾ ಪಾರ್ಟಿ”
    ಡಿ.ಕೆ. ಶಿವಕುಮಾರ್ ಪ್ರಮಾಣ ವಚನ  ಜೂನ್ 3ಕ್ಕೆ, ರಾಜ್ಯಪಾಲರಿಂದ ಆಹ್ವಾನ
    ಭಾರತದಲ್ಲಿ ಮೊದಲ ಬಾರಿಗೆ ಭಾರೀ ಕ್ಯಾಪ್ಟಾಗನ್ “ಜಿಹಾದಿ ಡ್ರಗ್”ಜಾಲ ಬಯಲಾಗಿದ್ದು, ಸುಮಾರು ₹182 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ!ಅಪಾಯಕಾರಿ ಡ್ರಗ್ ದೇಶದೊಳಗೆ ಹೇಗೆ ಪ್ರವೇಶಿಸಿತು ಎಂಬುದರ ಬಗ್ಗೆ ತನಿಖೆ ತೀವ್ರವಾಗಿದೆ.
    “ಭಾರತೀಯ ಕುಟುಂಬ ಆಸ್ತಿ ವಿವಾದಗಳಲ್ಲಿ ಮಧ್ಯಸ್ಥಿಕೆಯ ಮಹತ್ವವನ್ನು ಮತ್ತೊಮ್ಮೆ ಎತ್ತಿಹಿಡಿದ ಸುಪ್ರೀಂ ಕೋರ್ಟ್”
    ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹಿಗ್ಗಾಮುಗ್ಗ ಜಾಡಿಸಿದ ಹೆಚ್ ವಿಶ್ವನಾಥ್