📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ದ.ಕ ಜಿಲ್ಲಾಡಳಿತದಿಂದ ಮಂಗಳಮುಖಿಯರಲ್ಲದವರಿಗೂ ಗುರುತಿನ ಚೀಟಿ ವಿತರಣೆ – ಗಂಭೀರ ಆರೋಪ

    ಮಂಗಳೂರು ನಗರದಲ್ಲಿ ಬೆಳಕಿಗೆ ಬಂದಿರುವ ನಕಲಿ ಮಂಗಳಮುಖಿಯರ ಕಾರಣದಿಂದ ನೈಜ ಮಂಗಳ ಮುಖಿಯರಿಗೆ ಅನ್ಯಾಯ ಆಗುತ್ತಿದೆ ಎಂದು ಪತ್ರಕ್ರತರ ಮುಂದೆ ತಮ್ಮ ಅಲಳನ್ನು ತೋಡಿಕೊಂಡಿದ್ದಾರೆ.

    ಮಂಗಳಮುಖಿಯರನ್ನು ಗುರುತಿಸುವ ಗುರುತಿನ ಚೀಟಿ (ID) ಯನ್ನು ಅನರ್ಹರಿಗೂ ವಿತರಿಸುವ ಕಾರ್ಯ ನಡೆಯುತ್ತಿದೆ. ಇದರಿಂದ ಗಂಭೀರ ಸಮಸ್ಯೆಗಳು ಉದ್ಭವ ಆಗುತ್ತಿದೆ. ಇದು ಕೇವಲ ಒಂದು ಸಂಘಟನೆ ಅಥವಾ ಕೆಲವು ವ್ಯಕ್ತಿಗಳ ವಿಷಯವಲ್ಲ — ಇದು ನಮ್ಮ ಸಮಾಜದ ವಿಶ್ವಾಸ, ಸರ್ಕಾರಿ ವ್ಯವಸ್ಥೆಗಳ ದುರುಪಯೋಗಕ್ಕೆ ಸಂಬಂದಿಸಿದ್ದು. ನೈಜ ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ಮೇಲೆ ನೇರವಾಗಿ ಪರಿಣಾಮ ಬೀರುವ ಗಂಭೀರ ವಿಷಯ ಇದಾಗಿದೆ ಎಂದು ಅವರು ಹೇಳಿದರು.

    ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ “ನವಹಸಜ ಸಮುದಾಯ ಸಂಘಟನೆ” ಈ ಪ್ರಕರಣವನ್ನು ತೀವ್ರವಾಗಿ ಖಂಡಿಸಿದ್ದು, ಸಮಗ್ರ ತನಿಖೆ ನಡೆಸುವಂತೆ ಸರ್ಕಾರ ಮತ್ತು ಜಿಲ್ಲಾಡಳಿತವನ್ನು ಒತ್ತಾಯಿಸಿದೆ. ಸಂಘಟನೆಯ ಅಧ್ಯಕ್ಷೆ ನಿಖಿಲಾ ನೀಡಿದ ಮಾಹಿತಿಯ ಪ್ರಕಾರ, ಕೆಲವು ವ್ಯಕ್ತಿಗಳು ನಕಲಿ ದಾಖಲೆಗಳನ್ನು ಸೃಷ್ಟಿಸಿ, ಟ್ರಾನ್ಸ್‌ಜೆಂಡರ್ ಸಮುದಾಯದ ಹೆಸರಿನಲ್ಲಿ ಸರ್ಕಾರದ ಸೌಲಭ್ಯಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಇದರಿಂದ ನೈಜ ಹಾಗೂ ಅರ್ಹರು ತಮ್ಮ ಹಕ್ಕುಗಳಿಂದ ವಂಚಿತರಾಗುತ್ತಿದ್ದಾರೆ.

    Also Read  ಮಂಗಳೂರಿಗರಿಗೆ ಎಚ್ಚರಿಕೆ: ನೀರನ್ನು ಜಾಣ್ಮೆಯಿಂದ ಬಳಸಿ –ಮಾರ್ಚ್ ನಲ್ಲೇ ರೇಷನಿಂಗ್ ಮಾಡುವ ಪರಿಸ್ಥಿತಿ ಇದೆ…

    ಇದು ಕೇವಲ ಗುರುತಿನ ಚೀಟಿಗಳ ದುರುಪಯೋಗವಲ್ಲ — ಇದು ಸಮಾಜದ ನೈತಿಕ ಮೌಲ್ಯಗಳ ಮೇಲೆ ದಾಳಿ. ನಕಲಿ ಆಧಾರ್ ಕಾರ್ಡ್‌ಗಳು, ತಪ್ಪು ಮಾಹಿತಿಯ ಮೂಲಕ ಪಡೆದ ಟ್ರಾನ್ಸ್‌ಜೆಂಡರ್ ಗುರುತಿನ ಚೀಟಿಯಿಂದಾಗಿ ಅನೇಕ ಸಮಸ್ಯೆಗಳು ಉದ್ಭವವಾಗಿದೆ. ಅದರಿಂದ ಸಾಮಾಜಿಕ ಜಾಲತಾಣಗಳಲ್ಲಿ ಸಮುದಾಯದ ಬಗ್ಗೆ ಅಪಪ್ರಚಾರಕ್ಕೆ ಕಾರಣವಗುತ್ತಿದೆ. ಮಂಗಳೂರಿನಲ್ಲಿ ಸಮುದಾಯದ ಒಳಗೆ ಅಭದ್ರತೆಗೆ ಕಾರಣವಗ್ತಿದೆ. ಸಾಮಾಜಿಕ ಸಮತೋಲನವನ್ನು ಕದಡುತ್ತಿದೆ.

    ಈ ಪ್ರಕರಣದಲ್ಲಿ ಮತ್ತೊಂದು ಆತಂಕಕಾರಿ ಅಂಶವೆಂದರೆ, ಕೆಲವು ಜನರು ಸುಲಭವಾಗಿ ಹಣ ಗಳಿಸಲು ಭಿಕ್ಷಾಟನೆ ಅಥವಾ ಇತರ ಚಟುವಟಿಕೆಗಳಿಗೆ ಈ ನಕಲಿ ಗುರುತಿನ ಚೀಟಿಗಳನ್ನು ಬಳಸುತ್ತಿದ್ದಾರೆ ಎಂಬ ಆರೋಪ ಇದೆ. ಇದರಿಂದ ಸಾರ್ವಜನಿಕರ ಮನಸ್ಸಿನಲ್ಲಿ ಸಂಪೂರ್ಣ ಸಮುದಾಯದ ಬಗ್ಗೆ ತಪ್ಪು ಕಲ್ಪನೆಗಳು ಮೂಡುತ್ತಿವೆ. ಇದರಿಂದ ನೈಜ ಮಂಗಳಮುಖಿಯರು ಸಾಮಾಜಿಕ ತಿರಸ್ಕಾರಕ್ಕೆ ಒಳಗಾಗುತ್ತಿದ್ದಾರೆ.

    Also Read  ವಿಪರೀತ ಸೆಕೆಯಿಂದ ಬಳಲುತ್ತಿರುವಾಗಲೇ ಕರೆಂಟ್ ತೆಗೆದ ದುಷ್ಟ ಮೆಸ್ಕಾಂ

    ಜಿಲ್ಲಾಧಿಕಾರಿಗಳ ಸಭೆಯಲ್ಲಿ 50 ಮಂದಿಗೆ ಟ್ರಾನ್ಸ್‌ಜೆಂಡರ್ ಕಾರ್ಡ್‌ಗಳು ನೀಡಲಾಗಿದೆ ಎಂಬ ಮಾಹಿತಿ ಬಹಿರಂಗವಾಗಿದ್ದು, ಅದರಲ್ಲಿ ಹಲವಾರು ಕಾರ್ಡ್‌ಗಳು ನಕಲಿಯಾಗಿರುವ ಅನುಮಾನ ವ್ಯಕ್ತವಾಗಿದೆ. ಇದು ಆಡಳಿತ ವ್ಯವಸ್ಥೆಯಲ್ಲಿಯೇ ಇರುವ ದೌರ್ಬಲ್ಯವನ್ನು ತೋರಿಸುತ್ತದೆ. ಸೂಕ್ತ ಪರಿಶೀಲನೆ ಇಲ್ಲದೆ ನೀಡಲಾಗುತ್ತಿರುವ ದಾಖಲೆಗಳು ಭವಿಷ್ಯದಲ್ಲಿ ಇನ್ನಷ್ಟು ದೊಡ್ಡ ಅಪಾಯಕ್ಕೆ ಕಾರಣವಾಗಬಹುದು.

    ಈ ಹಿನ್ನೆಲೆಯಲ್ಲಿ ತಕ್ಷಣ ಕ್ರಮ ಕೈಗೊಳ್ಳಬೇಕಾಗಿದೆ.

    ನೀಡಲಾದ ಎಲ್ಲಾ ಟ್ರಾನ್ಸ್‌ಜೆಂಡರ್ ಗುರುತಿನ ಚೀಟಿಗಳ ಸಮಗ್ರ ಪರಿಶೀಲನೆ ಆಗಬೇಕು.

    ನಕಲಿ ದಾಖಲೆಗಳನ್ನು ಸೃಷ್ಟಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಆಗಬೇಕು.

    ಅದಕ್ಕೆ ಸಹಕರಿಸಿದ ಅಧಿಕಾರಿಗಳ ವಿರುದ್ಧವೂ ತನಿಖೆಯಾಗಿ ಕ್ರಮವಗಬೇಕು.

    ನೈಜ ಸಮುದಾಯದವರಿಗೆ ನ್ಯಾಯ ಒದಗಿಸುವ ಭರವಸೆ ಬೇಕಾಗಿದೆ.

    ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅಭಿಯಾನದಿಂದಾಗಿ,

    ಯಾರೂ ಮಾಡಿದ ತಪ್ಪಿನಿಂದ ಸಂಪೂರ್ಣ ಸಮುದಾಯದ ಗೌರವ ಹಾಳಾಗಬಾರದು. ಮಂಗಳೂರಿನಂತಹ ನಗರದಲ್ಲಿ ಇಂತಹ ದಂಧೆಗಳು ಮುಂದುವರಿದರೆ, ಅದು ಕೇವಲ ಒಂದು ಸಮುದಾಯವಲ್ಲ, ಪ್ರತಿಯೊಬ್ಬ ಸಾಮಾನ್ಯ ನಾಗರಿಕನಿಗೂ ಅಪಾಯಕಾರಿಯೇ.

    Also Read  MRPLನಲ್ಲಿ ಭಾರೀ ಸ್ಫೋಟದ ಸದ್ದು “ಬಾಯ್ಲರ್ ಬ್ಲಾಸ್ಟ್”…!ಕಾಟಿಪಳ್ಳ, ಜೋಕಟ್ಟೆ , ಕೃಷ್ಣಾಪುರದ ಜನರಲ್ಲಿ ಆತಂಕ — ಫೇಸ್‌-3 ಘಟಕದ ಬಳಿ ಘಟನೆ ಶಂಕೆ

    ಸಮಾಜ, ಸರ್ಕಾರ ಮತ್ತು ನಾಗರಿಕರು ಒಟ್ಟಾಗಿ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣವೇ ಕ್ರಮ ಕೈಗೊಳ್ಳಬೇಕು ಅನ್ನುವುದು ಅವ್ರ ಬೇಡಿಕೆ.

    ಫೋಟೋ- ಎಸ್ಕೆ

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ರಾಜ್ಯವ್ಯಾಪಿ ಖೋಟಾ ನೋಟು ಜಾಲ ಭೇದಿಸಿದ ಖಾಕಿಯ ಚಾಣಾಕ್ಷ ಕಾರ್ಯಾಚರಣೆ..!
    AYS TROPHY–2026 ಯಶಸ್ವಿಯಾಗಿಸಲು ನಿಮ್ಮ ಉಪಸ್ಥಿತಿ ಅಗತ್ಯ.
    ಜಾಗತಿಕ ಯುದ್ಧ ಭೀತಿ:ಟ್ರಂಪ್ ಎಫೆಕ್ಟ್‌ಗೆ ಭಾರೀ ಆರ್ಥಿಕ ಭೂಕಂಪ! — ಒಂದೇ ದಿನ ₹6 ಲಕ್ಷ ಕೋಟಿ ನಷ್ಟ!ಸೆನ್ಸೆಕ್ಸ್ ಧರೆಗುರುಳಿ, ರೂಪಾಯಿ ದಾಖಲೆ ಪತನ!
    ಒಂದು ವಾಟ್ಸ್ಯಾಪ್ ಮೆಸೇಜ್… ಕೋರ್ಟ್ ವರೆಗೂ ಎಳೆದ ಶಾಕ್ ಘಟನೆಯ ಸುತ್ತ..
    ನಾರ್ವೇ ಪತ್ರಕರ್ತರಿಗೆ ತಿರುಗೇಟು: “ಭಾರತದ ವಾಸ್ತವತೆ ಅರಿವಿಲ್ಲ” ಎಂದ MEA ಕಾರ್ಯದರ್ಶಿ ಸಿಬಿ ಜಾರ್ಜ್…
    ಉಡುಪಿ ಮಹಿಳೆಗೆ ಮುಂಬೈನಲ್ಲಿ ಕಂಬಿ! ₹3.10 ಕೋಟಿ ವಂಚನೆ ಉಡುಪಿ ಮೂಲದ ಮಹಿಳೆ ಅರೆಸ್ಟ್!
    *ಬೈಕಂಪಾಡಿ ಹೆದ್ದಾರಿ ಡಕಾಯಿತಿ, 23 ಲಕ್ಷ ಮೌಲ್ಯದ ಸೊತ್ತು ದರೋಡೆ ಪ್ರಕರಣ: 3 ಆರೋಪಿಗಳು ಸೆರೆ.
    ತುಳು ವಿಕಿಪೀಡಿಯಾಗೆ ದಶಮಾನೋತ್ಸವ ಸಂಭ್ರಮ
    ಕಣ್ಣೀರಾದ ಕಣ್ಣಾಲಿಗಳು ಹೊಟ್ಟೆ ತುಂಬಾ ಊಟ ಮಾಡಿ ನಿದ್ರಿಸುವಂತೆ ಮಾಡುವ  “ಕಾರುಣ್ಯ ಸೇವಾಕ್ಕೀಗ 3000 ದಿನಗಳು…!!!”
    KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ ಅಮಾನತ್
    ಫ್ಲೈದುಬೈ ವಿಮಾನ ಘಟನೆ ಪ್ರಾರ್ಥನೆ ನೆಪದಲ್ಲಿ ಹಮ್ಮಾಮಿ ದಾಳಿ; ಅಲ್‌ಖೈದಾ ಬೆಂಬಲ-ನಂಟು ಬಹಿರಂಗ ! ಇತ್ತ ಸ್ಮಿತ್ ಮಚ್ಚಾರ್‌ಗೆ ಇಸ್ರೇಲ್ ವಿಶೇಷಗೌರವ ಮೋದಿ ಜೊತೆಗೆ ಆಹ್ವಾನ…!!
    🚀 ಸ್ಪೇಸ್‌ನಲ್ಲಿ ಪೆಟ್ರೋಲ್ ಬಂಕ್‌ನಿಂದ..ಔಷಧ ತಯಾರಿಕೆಯವರೆಗೆ!
    💊 ಜೀವರಕ್ಷಕ ಕ್ಯಾನ್ಸರ್ ಔಷಧಗಳು ದುಬಾರಿ: ಏಕೆ ಬೆಲೆ ಹೆಚ್ಚಳ ಅನಿವಾರ್ಯವಾಯಿತು?ಅಸಲಿ ಕಾರಣ ಗೊತ್ತೇ?
    ಗೃಹಲಕ್ಷ್ಮಿ ಹಣ ಪಡೆಯೋರೇ ಗಮನಿಸಿ! ಪತಿ ಆಧಾರ್‌ನಿಂದ ಬ್ಯಾಂಕ್ ಖಾತೆವರೆಗೆ ಹೊಸ ರೂಲ್ಸ್
    ರಾಜ್ಯ ಪೊಲೀಸ್ ಇಲಾಖೆಯಲ್ಲಿ “ಕಲೋನಿಯಲ್ ಆರ್ಡರ್ಲಿ” ‘ಆಡಲ್’ (Adal) ಪದ್ದತಿ ರದ್ದು
    ನನ್ನನ್ನು ದುರ್ಬಲ ವ್ಯಕ್ತಿ ಅಂದುಕೊಳ್ಳಬೇಡಿ- U.T ಖಾದರ್
    ವೇಣೂರಿನಲ್ಲಿ ಬಾಲಕಿಗೆ ಶಾಲಾ ರಿಕ್ಷಾಚಾಲಕನಿಂದಲೇ ಲೈಂಗಿಕದೌರ್ಜನ್ಯ: ಮಕ್ಕಳಿಗೆ ಯಾರನ್ನು ನಂಬಬೇಕು? ಯಾರಿಗೆ ಹೇಳಬೇಕು? — ಪೋಷಕರೇ ಎಚ್ಚರ
    ಇರಾನ್–ಇಸ್ರೇಲ್ ಯುದ್ಧ: ಯುದ್ಧ ನಿಲ್ಲಿಸಲು ಇರಾನ್‌ನ 3 ಷರತ್ತುಗಳು… ಅಮೇರಿಕಾ ಕಂಗಾಲು
    ವಂದೇ ಮಾತರಂ ವಿವಾದ ದೇಶಭಕ್ತಿಯ ಸಂಕೇತವೇ, ರಾಜಕೀಯ ಅಸ್ತ್ರವೇ?
    ಜಮ್ಮು-ಕಾಶ್ಮೀರದಲ್ಲಿ ಖಾಕಿ ಮೇಲೆ ಖಾಕಿ ದಾಳಿ? ಹೈಡ್ರಾಮಾ: ಕರ್ನಲ್, ಮೇಜರ್ ಸೇರಿ 40 ಸೇನಾ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲು.
    21 ದಿನ ಹಸಿದ ಹೋರಾಟಗಾರ ಆಸ್ಪತ್ರೆಗೆ..ಸರ್ಕಾರ ಏಕೆ ಇನ್ನೂ ಮೌನ!?????ಯುವಜನರ ಆಕ್ರೋಶದ ಕಟ್ಟೆ ಒಡೆಯುವ ಮೊದಲೇ ಮೋದಿ ಸರ್ಕಾರ ಎಚ್ಚೆತ್ತುಕೊಳ್ಳುತ್ತಾ….!!??
    ಕೊನೆಗೂ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಿತೀಶ್ ಕುಮಾರ್
    14 ಮುಖ್ಯಮಂತ್ರಿಗಳ ವಿರುದ್ಧ ಕ್ರಿಮಿನಲ್ ಕೇಸ್….!!!!!!ಸುಪ್ರೀಂ ಕೋರ್ಟ್‌ಗೆ ಶಾಕಿಂಗ್ ವರದಿ!
    ಪ್ರಕೃತಿಯ ಮುನಿಸಿಗೆ ಕರಗುತ್ತಿದೆ ಯುರೋಪ್ ….!ತಂತ್ರಜ್ಞಾನದ ಅಹಂಕಾರವನ್ನು ಸುಟ್ಟು ಬೂದಿ ಮಾಡುತ್ತಿರುವ ಯುರೋಪ್ ಹೀಟ್‌ವೇವ್!
    ಅಳಕೆ ಮಾರುಕಟ್ಟೆ ಬಳಿ ಕಸ ಸುರಿದ ಮಹಿಳೆಗೆ ₹1,000 ದಂಡ..ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆದರೆ ದಂಡ ಖಚಿತ! 
    ಡಿಜಿಟಲ್ ದಿಗ್ಗಜರಿಗೆ ₹2 ಕೋಟಿ ಲೀಗಲ್ ನೋಟಿಸ್ ಶಾಕ್!ಯೂಟ್ಯೂಬ್ ಸ್ಟಾರ್ vs ಟಿವಿ ಸ್ಟಾರ್ ನಡುವಿನ ಕಾನೂನು ಸಮರ!
    ಬೃಹತ್ ಅಭಿಯಾನ….5.51 ಟನ್ ವಸ್ತುಗಳು..!5000ಕ್ಕೂ ಹೆಚ್ಚು ದೇವರ ಫೋಟೋಗಳು
    ಶಿರ್ತಾಡಿ ಭಾಗದಲ್ಲಿ ಮರಗಳ್ಳತನ ಆರೋಪ:  ತನಿಖೆ ನಡೆಸಿ ಕ್ರಮ ಕೈಗೊಳ್ಳಲು ಆಗ್ರಹ
    ಗ್ರಾಹಕರ ಮಾತು ಕೇಳಿ, ₹900 ಕೋಟಿಯ ರೆಸ್ಟೋರೆಂಟ್ ಸಾಮ್ರಾಜ್ಯ ನಿರ್ಮಿಸಿದ ಉದ್ಯಮಿ..
    ದಾವೂದ್ ಇಬ್ರಾಹಿಂನ ಆಪ್ತ. ಸಲೀಂ ಡೋಲಾ ಬಂದನ ವಿದೇಶದಲ್ಲಿ ಅಡಗಿದ್ದರೂ ಕಾನೂನಿನಿಂದ ತಪ್ಪಿಸಿಕೊಳ್ಳಲಾಗಲಿಲ್ಲ