📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ನಕಲಿ ಲೇಡಿ PSI ಅರೆಸ್ಟ್

    25ಕ್ಕೂ ಹೆಚ್ಚು ಮಂದಿಗೆ ಕೋಟ್ಯಂತರ ರೂ. ವಂಚನೆ ಆರೋಪ; ದೋಚಿದ ಹಣ–ಚಿನ್ನ ಪ್ರಿಯಕರನಿಗೆ ನೀಡುತ್ತಿದ್ದಳು!

    ಚಿಕ್ಕಮಗಳೂರು: ತಾನು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (PSI) ಎಂದು ನಂಬಿಸಿ 25ಕ್ಕೂ ಹೆಚ್ಚು ಮಂದಿಗೆ ಕೋಟ್ಯಂತರ ರೂಪಾಯಿ ಹಣ ಹಾಗೂ ಚಿನ್ನಾಭರಣ ವಂಚಿಸಿದ ಆರೋಪದ ಮೇಲೆ ನಕಲಿ ಲೇಡಿ PSIಯನ್ನು ಚಿಕ್ಕಮಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.

    ಬಂಧಿತೆಯನ್ನು ಮೂಲತಃ ರಾಮನಗರ ಜಿಲ್ಲೆಯ ನಿವೇದಿತಾ ಗೌಡ ಎಂದು ಗುರುತಿಸಲಾಗಿದೆ. ಚಿಕ್ಕಮಗಳೂರು ನಗರದಲ್ಲಿ ಕೆಫೆಯೊಂದನ್ನು ನಡೆಸುತ್ತಿದ್ದ ಈಕೆ, ಕೆಫೆಗೆ ಬರುತ್ತಿದ್ದ ಯುವಕರು ಹಾಗೂ ಮಹಿಳೆಯರನ್ನು ಪರಿಚಯ ಮಾಡಿಕೊಂಡು, ತಾನು ಪೊಲೀಸ್ ಅಧಿಕಾರಿ ಎಂದು ಹೇಳಿಕೊಂಡು ವಂಚನೆಯ ಜಾಲ ಬೀಸುತ್ತಿದ್ದಳು ಎನ್ನಲಾಗಿದೆ.

    ಪೊಲೀಸ್ ಅಧಿಕಾರಿಯಂತೆ ಬಿಂಬಿಸಿಕೊಂಡಿದ್ದಳು

    ತಾನು ಬೆಂಗಳೂರಿನ ರಾಜಗೋಪಾಲನಗರ ಪೊಲೀಸ್ ಠಾಣೆಯ PSI, ಸದ್ಯ ರಜೆಯಲ್ಲಿದ್ದೇನೆ ಎಂದು ಪರಿಚಯಸ್ಥರನ್ನು ನಂಬಿಸುತ್ತಿದ್ದಳು ಎನ್ನಲಾಗಿದೆ. ಪೊಲೀಸರ ರೀತಿಯಲ್ಲೇ ಕೂದಲು ಕತ್ತರಿಸಿಕೊಂಡು, ಅದಕ್ಕೆ ತಕ್ಕ ವೇಷಭೂಷಣ ಧರಿಸಿ ಪೊಲೀಸ್ ಅಧಿಕಾರಿಯಂತೆ ಬಿಂಬಿಸಿಕೊಳ್ಳುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

    Also Read  ಅಮೆರಿಕದಲ್ಲಿ ಭಾರತದ ಧ್ವಜಕ್ಕೆ ಅವಮಾನ…ವೈರಲ್ ವಿಡಿಯೋಗೆ ಕೇಂದ್ರದ ಆಕ್ರೋಶ!

    ಪರಿಚಯವಾದವರಿಂದ ಐಷಾರಾಮಿ ಕಾರುಗಳನ್ನು ಓಡಾಟಕ್ಕಾಗಿ ಪಡೆದುಕೊಂಡು, ಅವುಗಳನ್ನು ಮತ್ತೊಬ್ಬರಿಗೆ ಮಾರಾಟ ಮಾಡುತ್ತಿದ್ದಳು ಎಂಬ ಆರೋಪವೂ ಕೇಳಿಬಂದಿದೆ. ಈ ಮೂಲಕ ಹಲವು ಜಿಲ್ಲೆಗಳಲ್ಲಿ 25ಕ್ಕೂ ಹೆಚ್ಚು ಮಂದಿಗೆ ಕೋಟ್ಯಂತರ ರೂಪಾಯಿ ವಂಚಿಸಿರುವುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎನ್ನಲಾಗಿದೆ.

    20ಕ್ಕೂ ಹೆಚ್ಚು ಸಂತ್ರಸ್ತರಿಂದ ದೂರು

    ವಂಚನೆಗೊಳಗಾದ 20ಕ್ಕೂ ಹೆಚ್ಚು ಮಂದಿ ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಬಸವನಹಳ್ಳಿ ಹಾಗೂ ನಗರ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ.

    ತನಿಖೆ ವೇಳೆ ನಿವೇದಿತಾ ನೀಡಿದ ಹೇಳಿಕೆಯಂತೆ, ತಾನು ವಂಚಿಸಿ ಪಡೆದ ಹಣ ಹಾಗೂ ಚಿನ್ನಾಭರಣವನ್ನು ತನ್ನ ಪ್ರಿಯಕರ ದೇವು ಎಂಬಾತನಿಗೆ ನೀಡಿರುವುದಾಗಿ ತಿಳಿಸಿದ್ದಾಳೆ ಎನ್ನಲಾಗಿದೆ.

    ಮೊಬೈಲ್‌ನಲ್ಲಿ ನಕಲಿ ಆಧಾರ್ ಕಾರ್ಡ್‌ಗಳು ಪತ್ತೆ

    ಪೊಲೀಸರ ತನಿಖೆಯಲ್ಲಿ ನಿವೇದಿತಾ ಗೌಡಳ ಮೊಬೈಲ್‌ನಲ್ಲಿ ವಿವಿಧ ಹೆಸರುಗಳಿರುವ ನಕಲಿ ಆಧಾರ್ ಕಾರ್ಡ್‌ಗಳು ಪತ್ತೆಯಾಗಿವೆ ಎನ್ನಲಾಗಿದೆ. ಈ ದಾಖಲೆಗಳನ್ನು ಆಕೆ ಯಾವ ಉದ್ದೇಶಕ್ಕಾಗಿ ಬಳಸುತ್ತಿದ್ದಳು ಎಂಬುದರ ಕುರಿತು ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

    Also Read  ಕುಮಾರಸ್ವಾಮಿ ನೆನೆದ ಗುಬ್ಬಿ ವಾಸು: ಮತ್ತೆ ಜೆಡಿಎಸ್ ಸೇರ್ಪಡೆಗೆ ಮುನ್ನುಡಿಯೇ ಈ ಹೇಳಿಕೆ?

    ಪ್ರಸ್ತುತ ನಿವೇದಿತಾ ಗೌಡಳನ್ನು ಬಂಧಿಸಿರುವ ಪೊಲೀಸರು, ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆಕೆಯ ಪ್ರಿಯಕರ ದೇವುಗಾಗಿ ಪೊಲೀಸರು ಹುಡುಕಾಟ ಮುಂದುವರಿಸಿದ್ದಾರೆ.

    ಪ್ರಕರಣದ ತನಿಖೆ ಮುಂದುವರಿದಿದ್ದು, ವಂಚನೆಗೊಳಗಾದವರ ಸಂಖ್ಯೆ ಹಾಗೂ ವಂಚನೆಯ ಮೊತ್ತ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    79% ಹಾಲು ಅಶುದ್ಧ! ಹಾಲಿನ ಮಾಫಿಯಾಗೆ ಸಿಂಹಸ್ವಪ್ನವಾದ ಐಎಎಸ್ ತುಕಾರಾಂ ಮುಂಧೆ…350 ಬಂಧನ, 360 ದಾಳಿ!
    ರಾಷ್ಟ್ರೀಯ ಹೆದ್ದಾರಿ ಪೊಳಲಿ ದ್ವಾರದ ಸಮೀಪ ಭಾರೀ ಗಾತ್ರದ ಮರ ಬಿದ್ದು ಕಾರ್ ಜಖಂ, ಚಾಲಕ ಆಸ್ಪತ್ರೆಗೆ ದಾಖಲು
    ಕೊನೆಕ್ಷಣದ ಹೃದಯ ಕಲುಕುವ ಹರೀಶ್ ರಾಣಾ – ದಯಾಮರಣvedio
    ಶಾಲಾ ಶಿಕ್ಷಕಿಯರ ಹೆಸರಿನಲ್ಲಿ ಡ್ರಗ್ಸ್ ಜಾಲ ..! ತನಿಖೆಯಲ್ಲಿ ಬೆಚ್ಚಿಬೀಳಿಸುವ ಕೊಂಡಿಗಳು ಇನ್‌ಸ್ಟಾಗ್ರಾಮ್‌ನಿಂದ ಗ್ರಾಹಕರ ಸೆಳೆತ, ಗಲ್ಫ್ ನಂಬರ್ ಮೂಲಕ ಬುಕ್ಕಿಂಗ್
    ಆರು ಲಕ್ಷ ರೂ. ಶುಲ್ಕದ ಸಂಕಷ್ಟಕ್ಕೆ ಮಾನವೀಯ ಸ್ಪಂದನೆ: ವಿದ್ಯಾರ್ಥಿನಿಯ ಕನಸಿಗೆ ಸಚಿವ ಬಾಲಕೃಷ್ಣ ಬೆನ್ನೆಲುಬು
    ಪುತ್ತೂರಿನ ದೇವಸ್ಥಾನ ಪದಾಧಿಕಾರಿಗಳ ವಿರುದ್ಧ FIR ..!
    “ವಚನಾನಂದ ಶ್ರೀ ಸರದಿ ಸಾಲಿನಲ್ಲಿ ಮಕ್ಕಳನ್ನು ಕರೆಯುತ್ತಿದ್ದರು”– ಪೀಠದಿಂದ ಉಚ್ಚಾಟನೆ ಬಳಿಕ ಪೋಕ್ಸೋ ಕೇಸ್ ಶಾಕ್..ಮಠದಲ್ಲಿ ಭಾರೀ ಸಂಚಲನ .. ಭೇಟಿ ನೀಡಿದ ಮಕ್ಕಳ ಕಲ್ಯಾಣ ಸಮಿತಿ
    ಬೆಂಗಳೂರಿನಲ್ಲಿ ಉದ್ಯಮಿಯ₹1.9 ಕೋಟಿ ದರೋಡೆ:ಬೆಚ್ಚಿಬೀಳಿಸಿದ ಥ್ರಿಲ್ಲರ್ ಸಿನಿಮಾವನ್ನೇ ಮೀರಿಸಿದ ಸಸ್ಪೆನ್ಸ್!
    ಉಡುಪಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕಾನೂನುಬಾಹಿರ ಚಟುವಟಿಕೆ
    50ಕ್ಕೂ ಹೆಚ್ಚು ಆಟೋ ಚಾಲಕರ ದಿನನಿತ್ಯದ ಆರೋಗ್ಯದ ಬದುಕಿಗೆ ಮುಳುವಾದ ದೇರಳಕಟ್ಟೆ ಜಂಕ್ಷನ್ ದುರ್ನಾತ! 
    ಮತ್ತೆ ಜಾರುತ್ತಿದೆ ಕೆತ್ತಿಕಲ್ ಗುಡ್ಡ: ಕೋಟ್ಯಂತರ ವೆಚ್ಚದ ತಡೆ ಕಾಮಗಾರಿಯೂ ವಿಫಲವೇ? ಹೆದ್ದಾರಿ 169ರ ಸುರಕ್ಷತೆ ಮತ್ತೆ ಪ್ರಶ್ನಾರ್ಥಕ
    ಕರ್ನಾಟಕದಲ್ಲಿ ಬೇಸಿಗೆ ಬೆಂಕಿ ತೀವ್ರ ಬಿಸಿಗಾಳಿ ಹೈ ಅಲರ್ಟ್
    ರಾಮನ ಹೆಸರಲ್ಲಿ ‘ರಾವಣ’ ರಾಜ್ಯ-ಕರ್ನಾಟಕಕ್ಕೂ ತಟ್ಟಿದ ಕಳಂಕ!ರಾಮನ ಹೆಸರಲ್ಲಿ ಭಕ್ತರಿಗೇ ನಾಮ-ಅಯೋಧ್ಯೆಯ ಕೋಟಿಕೋಟಿ ಲೂಟಿಗೆ ಬೀದರ್ ಕನೆಕ್ಷನ್!
    ಚೀನಾಗೆ ಮಾತುಕತೆ, ರಷ್ಯಾ–ಉಕ್ರೇನ್‌ಗೆ ಸಂಧಾನ; ವಿಶ್ವ ವೇದಿಕೆಯಲ್ಲಿ ಭಾರತದ ಡಬಲ್ ಡಿಪ್ಲೊಮಸಿ!
    ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್!
    ಕಂದಾಯ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ
    2 ಲಕ್ಷಕ್ಕೆ ಮಗುವಿನ ಜೀವದ ಬೆಲೆ ಕಟ್ಟಬೇಡಿ!” – ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನರ ಮಾನವೀಯ ನಿಲುವಿಗೆ ದೇಶಾದ್ಯಂತ ಮೆಚ್ಚುಗೆ
    ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ – 10 ರೋಗಿಗಳ ದುರ್ಮರಣ-11 ಸಿಬ್ಬಂದಿಗೆ ಗಾಯ
    ಸುಬ್ರಹ್ಮಣ್ಯದಲ್ಲಿ ಭಟ್ಟರಿಗೆ ದಕ್ಷಿಣೆ ಕೊಡುವoತಿಲ್ಲ- ಸಿಟ್ಟಿಗೆಳುತ್ತಿರುವ ಪುರೋಹಿತರು
    ಮಂಗಳೂರಿನಲ್ಲಿ ವಕೀಲರೊಬ್ಬರ ನಕಲಿ ದುಷ್ಕೃತ್ಯ ಬಯಲಿಗೆ?
    17 ವರ್ಷದ ಯುವಕ ಸಂಸತ್ತಿನ ಕದ ತಟ್ಟಬಲ್ಲ ಎಂದಾದರೆ, ನಿಮ್ಮ ಧ್ವನಿಗೆ ಎಷ್ಟು ಶಕ್ತಿಯಿದೆ ಯೋಚಿಸಿ!..ವ್ಯವಸ್ಥೆಯ ಲೋಪದ ವಿರುದ್ಧ ಧ್ವನಿ ಎತ್ತದಿದ್ದರೆ ಬದಲಾವಣೆ ಸಾಧ್ಯವಿಲ್ಲ.
    “ಡಾಲರ್ ಐಡಿ” ಹೆಸರಿನಲ್ಲಿ ಶೇರ್ ಮಾರ್ಕೆಟಿಂಗ್ ವಂಚನೆ – 30.90 ಲಕ್ಷ ರೂ. ವಂಚನೆ- ನಾಲ್ವರ ಮೇಲೆ ಪ್ರಕರಣ ದಾಖಲು
    ಎಲ್ಪಿಜಿ ಗ್ಯಾಸ್ ದರದಲ್ಲಿ ಏರಿಕೆ:  ಮಧ್ಯಮ ವರ್ಗದವರಲ್ಲಿ ಹತಾಶೆ
    ಆಯುಷ್ ಎಚ್ಚರಿಕೆ ಬಳಿಕ ಅಶ್ವಗಂಧ ನಿಯಂತ್ರಣ ಕ್ರಮಕ್ಕೆ ತಡೆ: ಹೈಕೋರ್ಟ್ ಮಹತ್ವದ ಆದೇಶ
    “ಭಾರತೀಯ ಕುಟುಂಬ ಆಸ್ತಿ ವಿವಾದಗಳಲ್ಲಿ ಮಧ್ಯಸ್ಥಿಕೆಯ ಮಹತ್ವವನ್ನು ಮತ್ತೊಮ್ಮೆ ಎತ್ತಿಹಿಡಿದ ಸುಪ್ರೀಂ ಕೋರ್ಟ್”
    ವಾಲ್ಮೀಕಿ ಹಗರಣಕ್ಕೆ ನಾಗೇಂದ್ರ ತಲೆದಂಡ? ರಾಜೀನಾಮೆ ಚರ್ಚೆ ನಡುವೆ ಕಾಂಗ್ರೆಸ್‌ಗೆ ಹೊಸ ಸಂಕಷ್ಟ!
    ಮದುವೆ -ಜೀವನ ಬೇಸರವಾಯ್ತು ಆಸಕ್ತಿ ಇಲ್ಲ ಅಂದ್ರೆ ವಿಚ್ಛೇದನ ಸಿಗುತ್ತಾ ..! ಮಗಳು18 ದಾಟಿದರೂ ಶಿಕ್ಷಣದ ಹೊಣೆ ಯಾರಿಗೆ?
    ಅಪ್ಪಿಕೊಳ್ಳುವ ಅಮ್ಮನ ಕೈಗಳೇ ಕತ್ತು ಹಿಸುಕಿ ಉಸಿರು ನಿಲ್ಲಿಸಿದ್ರೆ … ಎಂಥ ದುರ್ವಿಧಿ..!
    ಬಿಡದಿಗಾಗಿ ಗೌಡರ ಗುಡುಗು! ಹೋರಾಟ ನಿಲ್ಲದು ತೀವ್ರಗೊಳ್ಳಲಿದೆ“ಸುಮ್ಮನಿರಲ್ಲ” ಗೌಡರ ಖಡಕ್ ಎಚ್ಚರಿಕೆ..!
    ಕುಂದಾಪುರ ಗಂಗೊಳ್ಳಿಯಲ್ಲಿ ಕತ್ತಿ  ದೊಣ್ಣೆಗಳಿಂದ ಮಾರಾಮಾರಿ; ವೈರಲ್ ವಿಡಿಯೋದಿಂದ ಪ್ರಕರಣಕ್ಕೆ ಹೊಸ ತಿರುವು?