📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಪಶ್ಚಿಮ ಘಟ್ಟದ ಕಸ್ತೂರಿರಂಗನ್ ವರದಿಗೆ ಬ್ರೇಕ್?…ವಿಶೇಷ ಅಧಿವೇಶನಕ್ಕೆ ಸರ್ಕಾರ ಸಿದ್ಧತೆ

    ಬಡವರಿಗೆ ಭರ್ಜರಿ ಗಿಫ್ಟ್!
    ಪ್ರತಿ ಜಿಲ್ಲೆಯಲ್ಲಿ 50 ಸಾವಿರ ಸೈಟ್ ಹಂಚಿಕೆಗೆ ಸರ್ಕಾರ ಸಜ್ಜು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಶಾಸಕರಿಗೆ ಅಧಿಕಾರಿಗಳಿಗೆ ಟಾಸ್ಕ್ ಕೊಟ್ಟಿದ್ದಾರೆ

    ಬೆಂಗಳೂರು: ರಾಜ್ಯದ ಬಡವರಿಗೆ ನಿವೇಶನ ಒದಗಿಸುವ ಉದ್ದೇಶದಿಂದ ಪ್ರತಿ ಜಿಲ್ಲೆಯಲ್ಲಿ 50 ಸಾವಿರ ಸೈಟ್‌ಗಳನ್ನು ಹಂಚಿಕೆ ಮಾಡಲು ಸರ್ಕಾರ ಸಿದ್ಧತೆ ನಡೆಸಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

    ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ಫಲಾನುಭವಿಯ ಹಿಂದಿನ ಹಾಗೂ ಪ್ರಸ್ತುತ ಪರಿಸ್ಥಿತಿ ಸೇರಿದಂತೆ ಅಗತ್ಯ ಮಾಹಿತಿಯನ್ನು ಪಡೆದು ಅರ್ಹರಿಗೆ ನಿವೇಶನ ಹಂಚಿಕೆ ಮಾಡಬೇಕು ಎಂದು ಶಾಸಕರಿಗೆ ಸೂಚಿಸಲಾಗಿದೆ ಎಂದರು. ಅಭಿವೃದ್ಧಿ ಕಾಮಗಾರಿಗಳಲ್ಲಿ ಬೋಗಸ್ ಬಿಲ್ ಹಾಗೂ ಕಳಪೆ ಕಾಮಗಾರಿಗಳಿಗೆ ಯಾವುದೇ ಅವಕಾಶ ನೀಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ನಿವೇಶನ ಹಂಚಿಕೆಗಾಗಿ ಸರ್ಕಾರಿ ಜಮೀನುಗಳನ್ನು ಗುರುತಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಹೇಳಿದರು.

    ಕಸ್ತೂರಿರಂಗನ್ ವರದಿ ಕುರಿತು ವಿಶೇಷ ಅಧಿವೇಶನ

    ಪಶ್ಚಿಮ ಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸುವ ಸಂಬಂಧ ಕೇಂದ್ರ ಸರ್ಕಾರ ಹೊರಡಿಸಿರುವ 7ನೇ ಕರಡು ಅಧಿಸೂಚನೆ ಕುರಿತು ಚರ್ಚಿಸಲು ಒಂದು ದಿನದ ವಿಶೇಷ ಅಧಿವೇಶನ ಕರೆಯಲಾಗುವುದು ಎಂದು ಶಿವಕುಮಾರ್ ತಿಳಿಸಿದರು.

    ಕಸ್ತೂರಿರಂಗನ್ ವರದಿ ಆಧರಿಸಿ ಹೊರಡಿಸಿರುವ ಅಧಿಸೂಚನೆಯನ್ನು ಪ್ರಸ್ತುತ ರೂಪದಲ್ಲಿ ಅಂತಿಮಗೊಳಿಸಬಾರದು ಎಂಬುದು ರಾಜ್ಯದ ನಿಲುವಾಗಿದೆ. ಕೇಂದ್ರದ ಪ್ರಸ್ತಾವನೆಯಂತೆ ಆರು ರಾಜ್ಯಗಳ ಸುಮಾರು 56 ಸಾವಿರ ಚದರ ಕಿ.ಮೀ. ಪ್ರದೇಶವನ್ನು ESA ವ್ಯಾಪ್ತಿಗೆ ತರಲು ಉದ್ದೇಶಿಸಲಾಗಿದೆ. ಕರ್ನಾಟಕದ 20,668 ಚದರ ಕಿ.ಮೀ. ಪ್ರದೇಶ, 10 ಜಿಲ್ಲೆಗಳ 33 ತಾಲ್ಲೂಕುಗಳು ಹಾಗೂ 1,449 ಗ್ರಾಮಗಳು ಇದರ ವ್ಯಾಪ್ತಿಗೆ ಬರಲಿದ್ದು, ಇದರಿಂದ ಕೃಷಿಕರ ಜೀವನೋಪಾಯ ಮತ್ತು ಭವಿಷ್ಯದ ಅಭಿವೃದ್ಧಿಗೆ ತೊಂದರೆಯಾಗುವ ಸಾಧ್ಯತೆ ಇದೆ ಎಂದರು.

    Also Read  ಮಂಗಳೂರಲ್ಲಿ 10ನೇ ತರಗತಿ ತಾಯಿಯಿಲ್ಲದ ಬಾಲಕಿ ಮೇಲೆ ಜಲೀಲ್ ಎಂಬಾತ 7 ತಿಂಗಳು ನಿರಂತರ ದೌರ್ಜನ್ಯ! 

    ಕಸ್ತೂರಿರಂಗನ್ ಸಮಿತಿಯ ಶಿಫಾರಸುಗಳನ್ನು ತಿರಸ್ಕರಿಸಿ, 2024ರ ಜುಲೈ 31ರ ಕರಡು ಅಧಿಸೂಚನೆಯನ್ನು ಹಿಂಪಡೆಯುವಂತೆ ಕೇಂದ್ರವನ್ನು ಒತ್ತಾಯಿಸಲು ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸಚಿವ ಸಂಪುಟ ಒಮ್ಮತದ ನಿರ್ಧಾರ ಕೈಗೊಂಡಿತ್ತು. ಆದರೆ ಕೇಂದ್ರ ಸರ್ಕಾರ ಏಕಪಕ್ಷೀಯವಾಗಿ ಮುಂದುವರಿಯುತ್ತಿದೆ. ರಾಜ್ಯ ಸರ್ಕಾರ ಇದನ್ನು ಒಪ್ಪುವುದಿಲ್ಲ ಎಂದು ಸ್ಪಷ್ಟಪಡಿಸಿದರು.

    ಈ ವಿಚಾರವನ್ನು ಸಚಿವ ಸಂಪುಟದಲ್ಲಿ ಚರ್ಚಿಸಿ ಜನಾಭಿಪ್ರಾಯವನ್ನೂ ಪಡೆಯಲಾಗುವುದು. ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರದ ವತಿಯಿಂದ ಜನಜಾಗೃತಿ ಮೂಡಿಸಲಾಗುವುದು. ಕರ್ನಾಟಕದ ನಿಲುವನ್ನು ಕೇಂದ್ರ ಸರ್ಕಾರ ಗೌರವಿಸಬೇಕು. ಈ ಸಂಬಂಧ ಕಾನೂನು ಚೌಕಟ್ಟಿನಲ್ಲಿಯೂ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.

    100ಕ್ಕೂ ಹೆಚ್ಚು ತಾಲ್ಲೂಕು ಬರಪೀಡಿತ ಘೋಷಣೆ ಸಾಧ್ಯತೆ

    ಬರ ಪರಿಸ್ಥಿತಿ ನಿರ್ವಹಣೆಯಲ್ಲಿ ಶಾಸಕರ ಪಾತ್ರದ ಕುರಿತು ಸಭೆಯಲ್ಲಿ ಮಾರ್ಗದರ್ಶನ ನೀಡಲಾಗಿದೆ. ರಾಜ್ಯದ 100ಕ್ಕೂ ಹೆಚ್ಚು ತಾಲ್ಲೂಕುಗಳನ್ನು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಿಸುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸುವ ಕುರಿತು ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದರು.

    ಕೇಂದ್ರದಿಂದ ಬರ ಪರಿಹಾರ ಪಡೆಯಲು ನಿಯೋಗದೊಂದಿಗೆ ತೆರಳಿ ಮನವಿ ಸಲ್ಲಿಸಲಾಗುವುದು. ಈಗಾಗಲೇ ಕುಡಿಯುವ ನೀರಿಗಾಗಿ 1 ಕೋಟಿ ರೂ. ಒದಗಿಸಲಾಗಿದೆ. 102 ತಾಲ್ಲೂಕುಗಳ ಪ್ರವಾಸ ಹಾಗೂ ಅಧ್ಯಯನ ಪೂರ್ಣಗೊಂಡ ಬಳಿಕ ಬರಪೀಡಿತ ಪ್ರದೇಶಗಳ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

    Also Read  ಎಲಾನ್ ಮಸ್ಕ್: ವಿಶ್ವದ ಮೊದಲ ಟ್ರಿಲಿಯನೇರ್‌ನಿಂದ ಇನ್ನೂ ಎತ್ತರದತ್ತ!

    ಅರ್ಹ ಮತದಾರರ ಹಕ್ಕು ರಕ್ಷಣೆಗೆ ಸರ್ಕಾರ ಬದ್ಧ

    ಎಸ್‌ಐಆರ್ ಪ್ರಕ್ರಿಯೆಯಲ್ಲಿ ಒಂದು ಕೋಟಿಗೂ ಹೆಚ್ಚು ಜನರನ್ನು ಮತಪಟ್ಟಿಯಿಂದ ಕೈಬಿಡಲಾಗಿದೆ ಎಂದು ಹೇಳಿದ ಶಿವಕುಮಾರ್, ಅರ್ಹ ಮತದಾರರಿಗೆ ಯಾವುದೇ ಅನ್ಯಾಯವಾಗದಂತೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದರು.

    ಖಾಯಂ ನಿವಾಸ ಪತ್ರ ಹಾಗೂ ಜಾತಿ ಪ್ರಮಾಣಪತ್ರ ಸೇರಿದಂತೆ ಅಗತ್ಯ ದಾಖಲೆಗಳನ್ನು ಸರ್ಕಾರದ ವತಿಯಿಂದ ಒದಗಿಸುವ ವ್ಯವಸ್ಥೆ ಮಾಡಲಾಗುತ್ತಿದೆ. ಬೂತ್ ಮಟ್ಟದಲ್ಲಿ ಸಭೆ ನಡೆಸಿ ಮತಪಟ್ಟಿ ಪ್ರಕಟಿಸುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಲಾಗಿದೆ. ಜನರಿಗೆ ಮತದಾನದ ಶಕ್ತಿ ಹಾಗೂ ಹಕ್ಕಿನ ಕುರಿತು ಶಾಸಕರು ಅರಿವು ಮೂಡಿಸಬೇಕು ಎಂದು ಸೂಚಿಸಲಾಗಿದೆ.

    ‘ಭಾರತ್ ಜೋಡೋ ಯುವಸಂಘ’ಕ್ಕೆ 7 ಲಕ್ಷ ನೋಂದಣಿ

    ಯುವಕರಿಗಾಗಿ ಹೊಸ ಪೀಳಿಗೆಯ ಕಾರ್ಯಕ್ರಮ ರೂಪಿಸಲಾಗಿದ್ದು, ‘ಭಾರತ್ ಜೋಡೋ ಯುವಸಂಘ’ದಡಿ ಈಗಾಗಲೇ ಆನ್‌ಲೈನ್‌ನಲ್ಲಿ 7 ಲಕ್ಷಕ್ಕೂ ಹೆಚ್ಚು ಮಂದಿ ನೋಂದಾಯಿಸಿಕೊಂಡಿದ್ದಾರೆ ಎಂದು ಶಿವಕುಮಾರ್ ಹೇಳಿದರು.

    ಪಂಚಾಯಿತಿ ಮಟ್ಟದಲ್ಲಿ ಕ್ರೀಡೆ, ಯೋಗ, ಸಮುದಾಯ ಸೇವೆ, ನಾಯಕತ್ವ, ವಿಪತ್ತು ನಿರ್ವಹಣೆ, ಡ್ರಗ್ಸ್ ಮುಕ್ತ ಸಮಾಜ, ದೇಶದ ಸಮಗ್ರತೆ ಹಾಗೂ ಸಂವಿಧಾನದ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಜಾತಿ, ಧರ್ಮದ ಭೇದ ಮರೆತು ಯುವಕರು ಭಾಗವಹಿಸುವಂತೆ ಮಾರ್ಗದರ್ಶನ ನೀಡಬೇಕು. ಪ್ರತಿ ಸಂಘಕ್ಕೆ 10 ಲಕ್ಷ ರೂ. ನೆರವು ನೀಡಲಾಗುವುದು. ಗ್ರಾಮೀಣ ಪ್ರತಿಭೆಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸಲಾಗುವುದು ಎಂದರು.

    Also Read  “ಅಪ್ರಾಪ್ತ ಅತ್ಯಾಚಾರ ಸಂತ್ರಸ್ತರಿಗೆ ಅಬಾರ್ಷನ್ ಮಾಡಲು ಆದ್ಯತೆ ,ಕಾನೂನು ತಿದ್ದುಪಡಿ”- ಸುಪ್ರೀಂ ಕೋರ್ಟ್

    ಎಸ್‌ಐಆರ್ ಬಳಿಕ ಸ್ಥಳೀಯ ಸಂಸ್ಥೆಗಳ ಚುನಾವಣೆ

    ಎಸ್‌ಐಆರ್ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಕ್ರಮ ಕೈಗೊಳ್ಳಲಾಗುವುದು. ನವೆಂಬರ್ ಒಳಗೆ ಪಂಚಾಯಿತಿ ಹಾಗೂ ಪಾಲಿಕೆ ಚುನಾವಣೆಗಳನ್ನು ನಡೆಸುವ ಉದ್ದೇಶವಿದ್ದು, ಎಸ್‌ಐಆರ್ ಮುಗಿದ ತಕ್ಷಣ ಚುನಾವಣೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಪತ್ರ ಬರೆಯಲಾಗುವುದು ಎಂದು ತಿಳಿಸಿದರು.

    ಗ್ರಾಮೀಣ ಹಾಗೂ ತಾಲ್ಲೂಕು ಪ್ರದೇಶಗಳಿಂದ ಜನರ ವಲಸೆ ತಡೆಯಲು ಸ್ಥಳೀಯ ಮಟ್ಟದಲ್ಲೇ ಕೈಗಾರಿಕೆಗಳನ್ನು ಸ್ಥಾಪಿಸಲು ಆದ್ಯತೆ ನೀಡುವಂತೆ ಶಾಸಕರಿಗೆ ಸೂಚಿಸಲಾಗಿದೆ ಎಂದರು.

    ವಿರೋಧ ಪಕ್ಷಕ್ಕೆ ಬಡವರು, ಬರದ ಬಗ್ಗೆ ಕಾಳಜಿ ಇಲ್ಲ

    ವಿರೋಧ ಪಕ್ಷದವರಿಗೆ ಬಡವರು ಹಾಗೂ ಬರ ಪರಿಸ್ಥಿತಿಯ ಬಗ್ಗೆ ಕಾಳಜಿ ಇಲ್ಲ. ಅವರಿಗೆ ರಾಜಕೀಯವೇ ಮುಖ್ಯವಾಗಿದೆ ಎಂದು ಶಿವಕುಮಾರ್ ಆರೋಪಿಸಿದರು. ಸರ್ಕಾರ ಬರ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದರು.

    ಬೆಂಗಳೂರಿನಲ್ಲಿ 5 ಸಾವಿರಕ್ಕೂ ಹೆಚ್ಚು ಎಕರೆ ಪ್ರದೇಶದಲ್ಲಿ ಉದ್ಯಾನಗಳು

    ಬೆಂಗಳೂರು ನಗರದ ಹಸಿರು ಹೊದಿಕೆಯನ್ನು ಹೆಚ್ಚಿಸುವ ಉದ್ದೇಶದಿಂದ ತುರಹಳ್ಳಿ ಅರಣ್ಯ, ತೊಟ್ಟಿಕಲ್ಲು ಜಲಪಾತ, ಬಿಎಂ ಕಾವಲ್ ಅರಣ್ಯ, ಬಸವಂತಪುರ, ಮಂಡೂರು ಹಾಗೂ ಜ್ಯೋತಿಪುರ ಸೇರಿದಂತೆ 5 ಸಾವಿರಕ್ಕೂ ಹೆಚ್ಚು ಎಕರೆ ಪ್ರದೇಶದಲ್ಲಿ ಹೊಸ ಉದ್ಯಾನಗಳನ್ನು ಅಭಿವೃದ್ಧಿಪಡಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

    ಇದರಿಂದ ಬೆಂಗಳೂರಿನಲ್ಲಿ ಹಸಿರು ಪ್ರದೇಶ ವಿಸ್ತರಣೆ, ಪರಿಸರ ಸಂರಕ್ಷಣೆ ಹಾಗೂ ಭವಿಷ್ಯದ ನೀರಿನ ಭದ್ರತೆಗೆ ಹೆಚ್ಚಿನ ಒತ್ತು ನೀಡಲು ಸಾಧ್ಯವಾಗಲಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಎಲ್ಲೆಡೆ LPG ಗ್ಯಾಸ್ ಸಿಲಿಂಡರ್ ಸಂಕಷ್ಟ: ಇದು ಜೀವನೋಪಾಯದ ಪ್ರಶ್ನೆ… ತಕ್ಷಣ ಸಮರ್ಪಕ ಕ್ರಮ ಸರ್ಕಾರದ ಹೊಣೆ.
    ಹೆಸರು ಬದಲಾವಣೆ ಪಶ್ಚಿಮ ಬಂಗಾಳ ಪೆಂಡಿಂಗ್, ಕೇರಳ ಪ್ರಗತಿಯಲ್ಲಿ
    “ಅಮ್ಮಾ… ಉಸಿರಾಡಲು ಆಗ್ತಿಲ್ಲ!” — 2 ಗಂಟೆಯ ಕೊನೆಯ ಕರೆ ಬಳಿಕ 4:30ಕ್ಕೆ ಶವ… ನಿಮಿಷಾಳಿಗೆ ಏನಾಯ್ತು?
    ವಿಶಾಖಪಟ್ಟಣಂ ಉಕ್ಕಿನ ಕಾರ್ಖಾನೆ ದುರಂತ:ಕೆಲವೇ ಕ್ಷಣಗಳಲ್ಲಿ ಎಂಟು ಜೀವಗಳನ್ನು ನುಂಗಿದ ಉಕ್ಕಿನ ಬೆಂಕಿ!ಕೆಲಸಕ್ಕೆ ಹೋದವರು ಮನೆಗೆ ಮರಳಲಿಲ್ಲ… 
    ಟೀಕೆಗಳು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿನ ಸೌಂದರ್ಯ – ಖಾದರ್
    ಹತ್ತು ವರ್ಷದಿಂದ ಪೊಲೀಸರಿಗೆ ಬೇಕಾದ ಆರೋಪಿಯನ್ನು ಕೊನೆಗೂ ಬಂಧಿಸಿದ ಪೊಲೀಸರು
    50ಕ್ಕೂ ಹೆಚ್ಚು ಆಟೋ ಚಾಲಕರ ದಿನನಿತ್ಯದ ಆರೋಗ್ಯದ ಬದುಕಿಗೆ ಮುಳುವಾದ ದೇರಳಕಟ್ಟೆ ಜಂಕ್ಷನ್ ದುರ್ನಾತ! 
    PoKನಲ್ಲಿ ರಕ್ತಪಾತ-ಪಾಕಿಸ್ತಾನದ ವಿರುದ್ಧ ಭಾರತದ ತೀವ್ರ ಆಕ್ರೋಶ!ಗುಂಡಿನ ಮಳೆಯ ನಡುವೆ ಜೀವ ಕಳೆದುಕೊಂಡ ಪ್ರತಿಭಟನಾಕಾರರು!
    ಅಂಡಮಾನ್ ಸಮುದ್ರದಲ್ಲಿ ಸಿಕ್ಕಿದ ಖಜಾನೆ! ಭಾರತದ ಇಂಧನ ಭವಿಷ್ಯ ಬದಲಾಗುತ್ತಿದೆಯೇ?
    ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಬಿಸಿಲಿಗೆ ಎಚ್ಚರ!
    ಗೋವಾದಲ್ಲಿ ಪ್ರವಾಸಿಗರ ಬೋಟ್ ಮುಳುಗಡೆ?!!??ವೈರಲ್ ವಿಡಿಯೋದ ಹಿಂದಿನ ಅಸಲಿ ಸತ್ಯ ಬಿಚ್ಚಿಟ್ಟ ಗೋವಾ ಪೊಲೀಸರು!
    UAEಯಲ್ಲಿ ಉಡುಪಿ ವ್ಯಕ್ತಿಯ ನಿಗೂಢ ಸಾವು – ಪತ್ನಿ, ಮಗ ಎಲ್ಲಿದ್ದಾರೆ?UAE ,ಭಾರತದಲ್ಲಿ?
    ಕಪ್ಪು ಸಮುದ್ರದಲ್ಲಿ ಸರಕು ಹಡಗಿನ ಮೇಲೆ ರಷ್ಯಾ ದಾಳಿ: ನಾಲ್ವರು ಭಾರತೀಯರು ಸಾವು
    “ಜೈನ ಸಮುದಾಯದ ಪೂಜ್ಯ ಭಟ್ಟಾರಕರು,ಪ್ರಮುಖ ಗಣ್ಯರು ಡಿ.ಕೆ. ಶಿವಕುಮಾರ್ ಭೇಟಿ-ವಿಧಾನಸೌಧದಲ್ಲಿ ಮಹತ್ವದ ಚರ್ಚೆ…!
    “ಅಪ್ಪಾ” ಎಂದು ಕರೆದವನ ಕೈಯಿಂದಲೇ 18 ತಿಂಗಳ ಕಂದಮ್ಮನ ದೇಹದ ಮೇಲೆ 91 ಗಾಯದ ಗುರುತು – ಅಮಾನುಷ ಹತ್ಯೆ!..
    ಮೂಡುಬಿದಿರೆಯಲ್ಲಿ ಖರೀದಿಸಿದ ಕೆಲವೇ ಗಂಟೆಗಳಲ್ಲಿ ಕಾರಿಗೆ ಬೆಂಕಿ! ತಪ್ಪಿದ ಭಾರೀ ದುರಂತ ..ಏಕಾಏಕಿ ಬೆಂಕಿ.ಕಾರಿನಲ್ಲಿದ್ದ ಕುಟುಂಬ ಅಪಾಯದಿಂದ ಪಾರು.
    ಕರಾವಳಿಯಲ್ಲಿ ಮತ್ತೆ ಸೈಬರ್ ವಂಚಕರ ಅಟ್ಟಹಾಸ: 3 ಪ್ರಕರಣಗಳಲ್ಲಿ ₹12 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡ ಜನ!
    ಗ್ಯಾಸ್ ಅಭಾವ ಮತ್ತು ಬೆಲೆ ಏರಿಕೆ, ಸುಳ್ಳು ಎನ್ನುತ್ತಿದೆ-HPCL
    ಅಣ್ಣಾಮಲೈ ಸಿಡಿಸಿದ ಬಾಂಬ್: ವಿಜಯ್ ಸರ್ಕಾರದ ಸಚಿವರ ವಿರುದ್ಧ 2–4% ಕಿಕ್‌ಬ್ಯಾಕ್ ಆರೋಪ!
    ಕಾಂಗ್ರೆಸ್‌ಗೆ ಹೊಸ ತಲೆನೋವು? ಅಹಿಂದ ಸಂಘಟನೆಯಿಂದ ‘ಪಕ್ಷ ವಿಭಜನೆ’ ಎಚ್ಚರಿಕೆ!
    ಉಡುಪಿಯ ಆರು ತಹಶೀಲ್ದಾರ್ ಕಚೇರಿಗಳಿಗೆ ಲೋಕಾಯುಕ್ತ ಪೊಲೀಸರ ದಾಳಿ… ದಾಳಿಯ ಬಿಸಿ ತಟ್ಟುತ್ತದಾ ಅಧಿಕಾರಿಗಳಿಗೆ?
    *ಬೈಕಂಪಾಡಿ ಹೆದ್ದಾರಿ ಡಕಾಯಿತಿ, 23 ಲಕ್ಷ ಮೌಲ್ಯದ ಸೊತ್ತು ದರೋಡೆ ಪ್ರಕರಣ: 3 ಆರೋಪಿಗಳು ಸೆರೆ.
    ಐಪಿಎಲ್ ಇತಿಹಾಸದಲ್ಲೇ ಸುಮಾರು ₹230 ಕೋಟಿಗೂ ಅಧಿಕ ಒಟ್ಟು ಸಂಭಾವನೆ ಪಡೆದ ಆಟಗಾರನಾಗಿ ಕೊಹ್ಲಿ ದಾಖಲೆ…ಯ ಹಿಂದಿರುವ ಅಸಲಿ ಕಥೆ…!
    ಮನೆಯವರಿಂದಲೇ 16 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು! ಪೊಲೀಸರಿಗೆ ದೂರು 🚨
    ಕುಂದಾಪುರದಲ್ಲಿ ಗುಂಡಿನ ದಾಳಿ: ಬಾರ್ಕೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್ ಹತ್ಯೆ
    ಗ್ಯಾಸ್ ಸೋರಿಕೆ ಎಷ್ಟು ಅಪಾಯಕಾರಿ? ಕ್ಷಣದ ನಿರ್ಲಕ್ಷ್ಯ ಮನೆ ಸುಟ್ಟು, ಶೇ.60 ಸುಟ್ಟ ಗಾಯಾಳುವಿಗೆ ಶಾಸಕ ಭರತ್ ಶೆಟ್ಟಿ ನೆರವಿನ ಭರವಸೆ..
    ಸ್ಪೀಕರ್ ಯುಟಿ ಖಾದರ್‌ಗೆ ಮುತ್ತಿಗೆ: 11 ಜನರ ವಿರುದ್ಧ FIR
    ಕೊನೆಗೂ ಸೋತ ಖಾಕಿ….!!!
    ಮಂಗಳೂರು ಬಸ್‌ನಲ್ಲಿ ಗುಪ್ತಾಂಗ ತೋರಿಸಿ ಕಂಡಕ್ಟರ್ ವಿಕೃತ ವರ್ತನೆ: ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ – ಬಂಧನ
    ಕರ್ನಾಟಕದ ಮಾಜಿ ಸಚಿವರಿಗೆ ಜೈಲು ಜೈಲು ಶಿಕ್ಷೆಗೆ ಉಪಮುಖ್ಯಮಂತ್ರಿ ಡಿಕೆಯ ಶಾಕ್ ಸ್ಟೇಟ್ಮೆಂಟ್