📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಪ್ರತೀಕಾರದ ದಾಳಿಗೆ ‘ ರೌಡಿಶೀಟರ್ ಟ್ಯಾಬ್ಲೆಟ್’ ಆರೀಫ್ ಖತಂ .!


ಉಳ್ಳಾಲ, ಮಾ.27: ಮಂಗಳೂರಿನ ತೊಕ್ಕೊಟ್ಟು ಫ್ಲೈಓವರ್ ಮೇಲ್ಸೇತುವೆಯಲ್ಲಿ ನಸುಕಿನ ಹೊತ್ತಿನಲ್ಲಿ ನಡೆದ ಕ್ರೂರ ದಾಳಿಯಲ್ಲಿ ರೌಡಿಶೀಟರ್ ಒಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಭೀತಿ ಮೂಡಿಸಿದೆ. ಉಚ್ಚಿಲ ಮುಳ್ಳುಗುಡ್ಡೆ ನಿವಾಸಿ ಆರೀಫ್ ಹುಸೇನ್ (42), ಅಲಿಯಾಸ್ ‘ಟ್ಯಾಬ್ಲೆಟ್ ಆರೀಫ್’, ದಾಳಿಯಲ್ಲಿ ಸಾವನ್ನಪ್ಪಿದ ವ್ಯಕ್ತಿ.

ಆರೀಫ್ ಮಂಗಳೂರಿನ ಬಂದರು ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದು, ಧಕ್ಕೆಯಲ್ಲಿ ಮೀನಿನ ವ್ಯಾಪಾರ ನಡೆಸುತ್ತಿದ್ದ. ಶುಕ್ರವಾರ ಬೆಳಗಿನ ಜಾವ ಸುಮಾರು 3.30ರ ಸುಮಾರಿಗೆ ತನ್ನ ಬುಲೆಟ್ ಬೈಕ್‌ನಲ್ಲಿ ಮಂಗಳೂರಿನತ್ತ ತೆರಳುತ್ತಿದ್ದ ವೇಳೆ, ತೊಕ್ಕೊಟ್ಟು ಓವರ್‌ಬ್ರಿಡ್ಜ್ ಮೇಲೆ ದುಷ್ಕರ್ಮಿಗಳ ತಂಡ ದಾಳಿ ನಡೆಸಿದೆ. ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದಿದ್ದ ಆರೋಪಿಗಳು, ಆತನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಸ್ಥಳದಲ್ಲೇ ಹತ್ಯೆಗೈದು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಈ ಹಿಂದೆ 2022ರ ಮೇ ತಿಂಗಳಲ್ಲಿ ಕೂಡ ಇದೇ ರೀತಿಯಲ್ಲಿ ಆರೀಫ್ ಮೇಲೆ ಕೊಲೆ ಯತ್ನ ನಡೆದಿತ್ತು. ಆಗ ಬಜಾಲಿನ ಟೊಪ್ಪಿ ನೌಫಾಲ್ ಮತ್ತು ತಂಡವು ಆತನ ಮೇಲೆ ಚೂರಿಯಿಂದ ದಾಳಿ ನಡೆಸಿದ್ದರೂ, ಆತ ಪಾರಾಗಿದ್ದ. ಈ ಹಿಂದಿನ ವೈಷಮ್ಯವೇ ಇಂದಿನ ಹತ್ಯೆಗೆ ಕಾರಣವಾಗಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.

ಮೂಲತಃ ಕುದ್ರೋಳಿ ನಿವಾಸಿಯಾಗಿದ್ದ ಆರೀಫ್, ಕಳೆದ ಆರೇಳು ವರ್ಷಗಳಿಂದ ಅಜ್ಜಿನಡ್ಕ ಬಳಿಯ ಮುಳ್ಳುಗುಡ್ಡೆ ಪ್ರದೇಶದಲ್ಲಿ ಕುಟುಂಬ ಸಮೇತ ವಾಸವಿದ್ದ. ಘಟನೆ ಸ್ಥಳಕ್ಕೆ ಡಿಸಿಪಿ ಮಿಥುನ್ ಹಾಗೂ ಸೋಕೋ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಮೃತ ಆರೀಫ್ ತನ್ನ ಪತ್ನಿ, ಮೂವರು ಪುತ್ರರು ಹಾಗೂ ಒಬ್ಬ ಪುತ್ರಿಯನ್ನು ಅಗಲಿದ್ದಾನೆ.

#breaking ನ್ಯೂಸ್ mangalore#Tablet Arif#thokkottu stab#ಕ್ರೈಂ news

COMMENTS

Login with Gmail to comment

ಇನ್ನಷ್ಟು ಸುದ್ದಿ

ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿ ಗಡಿಪಾರು ಆದೇಶ….
ರಾಜ್ಯಮಟ್ಟದಲ್ಲಿ ಸದ್ದು ಮಾಡಿದ ತೆರಿಗೆ ವಂಚನೆ ಪ್ರಕರಣದ ನಂತರವೂ ಅಧಿಕಾರಿಗಳು ಪಾಠ ಕಲಿತಿಲ್ಲವೇ….!?
ವಿಶ್ವ ಸಂಸ್ಥೆಯು ಯಾವ ಪುರುಷಾರ್ಥಕ್ಕೆ? ಬಲವರ್ಧನೆಯ  ಅಗತ್ಯತೆ
ಕಾರ್ಕಳದ ವೈದ್ಯಕೀಯ ವಿದ್ಯಾರ್ಥಿನಿ ಭೀಕರ  ಅಪಘಾತಕ್ಕೆ ಬಲಿ
ಮಸೀದಿ ಹುಂಡಿಗೂ ಲಗ್ಗೆ ಇಟ್ಟ ಕಳ್ಳರು….!
ಜನರ ಹಾಹಾ ಕಾರಕ್ಕೆ ಬೆಚ್ಚಿಬಿದ್ದ ಸರ್ಕಾರ –  ಎಸ್ಮ ಕಾಯ್ದೆ ಜಾರಿಗೆ
ಸಾರ್ವಜನಿಕ ಸ್ಥಳದಲ್ಲಿ ಕೈಕೈ ಮಿಲಾಯಿಸಿ ಜಗಳ ಮಾಡಿದ್ರೇ ಹುಷಾರ್…!
ಮನೆ ಬಾಡಿಗೆ ಕೊಡುವಾಗ ನಿಗಾ ಇರಿಸಲು ಮಾಲಕರಿಗೆ ಎಚ್ಚರಿಕೆ ..!ಗಾಂಜಾ ಸೇವಿಸಿದ ಐದು ನರ್ಸಿಂಗ್ ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ….
“ಕಾಂತರಾ” ಖ್ಯಾತಿಯ ಸಪ್ತಮಿ ಗೌಡ, ದುಮುಕಿದ್ದು  ಹೋರಾಟದ ಅಂಗಳಕ್ಕೆ
ಟ್ರಂಪ್-“Strait of Hormuz ತಕ್ಷಣ ತೆರೆಯಿರಿ…! “ ಇರಾನ್-“ಕೀ ಗಳನ್ನು ಕಳೆದುಕೊಂಡಿದ್ದೇವೆ…!”
📣3 ತಿಂಗಳಲ್ಲಿ LPG ಸಂಪರ್ಕ ರದ್ದು ??– PNGಗೆ ಬದಲಾವಣೆ ಕಡ್ಡಾಯ” ಈಗಲೇ ಸತ್ಯ ತಿಳಿದುಕೊಳ್ಳಿ..! ಗ್ಯಾಸ್ ಬಗ್ಗೆ ಗೊಂದಲಕ್ಕೆ ಸ್ಪಷ್ಟ ಉತ್ತರ ಇಲ್ಲಿದೆ.
ಇದು IPLನಲ್ಲಿ ಹೊಸ ಹೀರೋ ಹುಟ್ಟಿದಂತೇ…ಆದ್ರೆ ಕ್ರಿಕೆಟ್ ಅಲ್ಲ, ಬಾಕ್ಸಿಂಗ್‌ನಲ್ಲಿ! 🥊🔥
ವಿಷ ಸೇವನೆ ಸ್ವಯಂ ಆಗಿತ್ತೇ ಅಥವಾ ಪ್ರಚೋದನೆ ಕಾರಣವೇ ….?!
book ಮಾಡಿದ ನಿಮ್ಮ ಹೊಸ ಕಾರು-ಬೈಕ್ ಇನ್ನೂ ಬಂದಿಲ್ವಾ?ಪಶ್ಚಿಮ ಏಷ್ಯಾ ಯುದ್ಧದಿಂದ ಸರಬರಾಜು ವಿಳಂಬ…!
“ವಾಹನ ಮಾರಾಟ-RC ಬದಲಾವಣೆ  ಅಗತ್ಯ.. ಇಲ್ಲವಾದರೆ ಕಾನೂನು ಸಮಸ್ಯೆಗಳು ತಪ್ಪಿದ್ದಲ್ಲ..!” ಹೈಕೋರ್ಟ್
ಉದ್ಯಮಿ ಧೀರಜ್ ಜೈನ್ ಗಪ್ ಚುಪ್ಪಾಗಿ ನಡೆಸಿದ ಮಾನವೀಯ ನಡೆಗೆ ಸಾಕ್ಷಿ ನೋಡಿ
ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ದಯಾ ಮರಣಕ್ಕೆ ಅನುಮತಿ
ಸಚಿವ ಜಮೀರ್ ಅಹಮದ್ ಹಚ್ಚಿದ ಪಟಾಕಿಗೆ ಕಾಂಗ್ರೆಸ್ ಕೋಟೆಯಲ್ಲಿ ಬಿರುಕು..!?
ಹಳ್ಳಿಯಿಂದ ಡೆಲ್ಲಿ ತನಕ ಉರಿ ಬಿಸಿಲು, ಮಾರ್ಚ್ ಆರಂಭದಲ್ಲೇ ಜನ ತತ್ತರ”
ಕಾಂಗ್ರೆಸ್ ದೇಶದ ಹಿತಾಸಕ್ತಿಯ ವಿರುದ್ಧ ನಡೆದುಕೊಳ್ಳುತ್ತಿದೆ- ಪ್ರಧಾನಿ ಮೋದಿ ಆರೋಪ
ಪೂಜೆಗಾಗಿ ತೆರಳಿದ ಅರ್ಚಕರ ಶವ ನಾಲೆಯಲ್ಲಿ ಪತ್ತೆ
ಪರಸ್ತ್ರೀ ಹುಂಡಿಗೆ  ಒಂದುವರೆ ಕೋಟಿ ಅಪಾರ್ಟ್ಮೆಂಟ್, ಮಾಜಿ ಶಾಸಕನ ರಂಗಿನಾಟ 
🛑 ನಾಗರಮಠದಲ್ಲಿ ಅವೈಜ್ಞಾನಿಕ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರ ಆಕ್ರೋಶ
ಹವ್ಯಕ ಭಾಷಾ ಅಕಾಡೆಮಿ ಅಸ್ತಿತ್ವಕ್ಕೆ ಗ್ರೀನ್ ಸಿಗ್ನಲ್ 
Top 5, ಹೆಚ್ಚು ಅನುದಾನ ಪಡೆದ ಇಲಾಖೆಗಳು ಯಾವವು ಗೊತ್ತಾ?
ಉದ್ಯಮಿ, ಕಾಲೇಜ್ topper,  ಕೋಟ್ಯದೀಶರೇ…ಕಠಿಣ ಜೈನ ಸನ್ಯಾಸದತ್ತ…!
ರಾಜ್ಯದ 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳಾಗಿ ಉನ್ನತೀಕರಿಸಲು 3900 ಕೋಟಿ ಮೀಸಲು
ಕೊನೆಕ್ಷಣದ ಹೃದಯ ಕಲುಕುವ ಹರೀಶ್ ರಾಣಾ – ದಯಾಮರಣvedio
ದರೆಗುಡ್ಡೆಯಲ್ಲಿ ಬಾರಿ ಅಗ್ನಿ ಅವಗಡ…!
ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ….