📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಫೇಸ್‌ಬುಕ್ ಜಾಹೀರಾತು ನಂಬಿ ₹32.68 ಲಕ್ಷ ಕಳೆದುಕೊಂಡ ಕಾರ್ಕಳದ ವ್ಯಕ್ತಿ!

    ‘ಡಬಲ್ ಲಾಭಾಂಶ’ದ ಆಮಿಷವೊಡ್ಡಿ ಷೇರು, IPO ಹೂಡಿಕೆ ಹೆಸರಿನಲ್ಲಿ ವಂಚನೆ

    ಕಾರ್ಕಳ: ಫೇಸ್‌ಬುಕ್‌ನಲ್ಲಿ ಬಂದ ‘ಡಬಲ್ ಲಾಭಾಂಶ’ದ ಜಾಹೀರಾತನ್ನು ನಂಬಿ ಷೇರು ಹಾಗೂ IPOಗಳಲ್ಲಿ ಹೂಡಿಕೆ ಮಾಡಿದ ವ್ಯಕ್ತಿಯೊಬ್ಬರು ಬರೋಬ್ಬರಿ ₹32.68 ಲಕ್ಷ ಕಳೆದುಕೊಂಡಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ.

    ಕಾರ್ಕಳದ ಲಕ್ಷ್ಮಣ್ ಎಂಬವರು ವಂಚನೆಗೊಳಗಾದವರು. ಜುಲೈ 17ರಂದು ಅವರ ಫೇಸ್‌ಬುಕ್‌ಗೆ JB (Julius Baer VIP Group) ಮತ್ತು 5paisa ಆ್ಯಪ್‌ನಲ್ಲಿ ಹಣ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾಭಾಂಶ ನೀಡುವುದಾಗಿ ಹೇಳುವ ವೀಡಿಯೊವೊಂದು ಬಂದಿತ್ತು ಎನ್ನಲಾಗಿದೆ.

    ವೀಡಿಯೊದಲ್ಲಿದ್ದ ಲಿಂಕ್‌ ಕ್ಲಿಕ್‌ ಮಾಡಿದಾಗ ಲಕ್ಷ್ಮಣ್ ಅವರು JB (Julius Baer VIP Group) ಮತ್ತು 5paisa ಹೆಸರಿನ ವಾಟ್ಸ್‌ಆಪ್‌ ಗ್ರೂಪ್‌ಗೆ ಸೇರ್ಪಡೆಯಾಗಿದ್ದಾರೆ. ಬಳಿಕ ಗ್ರೂಪ್‌ನಲ್ಲಿದ್ದ ಅಪರಿಚಿತರು ಹೆಚ್ಚಿನ ಲಾಭಾಂಶ ನೀಡುವ ಷೇರುಗಳು ಹಾಗೂ IPOಗಳಲ್ಲಿ ಹಣ ಹೂಡಿಕೆ ಮಾಡುವಂತೆ ಸೂಚಿಸಿದ್ದಾರೆ.

    Also Read  ಮುಖವಾಡ ಧರಿಸಿದವರನ್ನು ನಂಬುವ ಮುನ್ನ ನೂರು ಬಾರಿ ಯೋಚಿಸಿ…!

    ಅವರ ಮಾತನ್ನು ನಂಬಿದ ಲಕ್ಷ್ಮಣ್ ಅವರು 2026ರ ಜುಲೈ 17ರಿಂದ ಆಗಸ್ಟ್ 4ರವರೆಗೆ ಹಂತ ಹಂತವಾಗಿ ಒಟ್ಟು ₹32,68,000 ಹಣವನ್ನು ವರ್ಗಾಯಿಸಿದ್ದಾರೆ. ಆದರೆ ಹಣ ಪಡೆದ ಬಳಿಕ ಆರೋಪಿಗಳು ಹೂಡಿಕೆ ಮಾಡಿದ ಮೊತ್ತವಾಗಲಿ, ಯಾವುದೇ ಲಾಭಾಂಶವಾಗಲಿ ಹಿಂದಿರುಗಿಸದೆ ವಂಚಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

    ಈ ಸಂಬಂಧ ಲಕ್ಷ್ಮಣ್ ನೀಡಿದ ದೂರಿನ ಮೇರೆಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 63/2026 ದಾಖಲಿಸಲಾಗಿದೆ. ಐಟಿ ಕಾಯ್ದೆಯ ಕಲಂ 66(D) ಹಾಗೂ BNS ಕಲಂ 318(4) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆನ್‌ಲೈನ್‌ ವಂಚನೆಯ ಜಾಲದ ಕುರಿತು ತನಿಖೆ ಮುಂದುವರಿಸಿದ್ದಾರೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

     ಡೊನಾಲ್ಡ್ ಟ್ರಂಪ್ ಟೆರರ್ ನಡೆ      ವಿಶ್ವದ ಆರ್ಥಿಕತೆ ಪಾತಾಳದ ಕೆಡೆ
    ಬಿಜೆಪಿಯ ಹೊಸ ರಾಷ್ಟ್ರೀಯ ಪದಾಧಿಕಾರಿಗಳ ತಂಡ ready…!
    ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ!
    ಮೇ 20ರ ಬಸ್ ಸ್ಟ್ರೈಕ್‌ಗೆ ಹೈಕೋರ್ಟ್ ಬ್ರೇಕ್..! KSRTC-BMTC ಬಸ್‌ಗಳು ನಿಲ್ಲೋದಿಲ್ಲ! ಹೈಕೋರ್ಟ್ ಮಹತ್ವದ ಆದೇಶ..
    ಕನ್ನಡದ ನೆಲದಲ್ಲಿ ಕನ್ನಡಕ್ಕೇ ಗೇಟ್ ಪಾಸ್: ಇವರು ಕರ್ನಾಟಕದ ಸಚಿವರೊ⁉️ಇಂಗ್ಲೆಂಡಿನ ಪ್ರತಿನಿಧಿಯೋ?
    ಕರ್ನಾಟಕ ಪ್ರವಾಸೋದ್ಯಮದ ರಾಯಭಾರಿಯಾಗಿ ರಿಷಬ್ ಶೆಟ್ಟಿ…
    ಭಾರತದಲ್ಲಿ ಮೊದಲ ಬಾರಿಗೆ ಭಾರೀ ಕ್ಯಾಪ್ಟಾಗನ್ “ಜಿಹಾದಿ ಡ್ರಗ್”ಜಾಲ ಬಯಲಾಗಿದ್ದು, ಸುಮಾರು ₹182 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ!ಅಪಾಯಕಾರಿ ಡ್ರಗ್ ದೇಶದೊಳಗೆ ಹೇಗೆ ಪ್ರವೇಶಿಸಿತು ಎಂಬುದರ ಬಗ್ಗೆ ತನಿಖೆ ತೀವ್ರವಾಗಿದೆ.
    ಬೆಂಗಳೂರಿನಲ್ಲಿ ಉದ್ಯಮಿಯ₹1.9 ಕೋಟಿ ದರೋಡೆ:ಬೆಚ್ಚಿಬೀಳಿಸಿದ ಥ್ರಿಲ್ಲರ್ ಸಿನಿಮಾವನ್ನೇ ಮೀರಿಸಿದ ಸಸ್ಪೆನ್ಸ್!
    ತಮಿಳುನಾಡು ರಾಜಕೀಯದಲ್ಲಿ ದಿನಕ್ಕೊಂದು ಟ್ವಿಸ್ಟ್ -TVK wave ಎಷ್ಟು ದೂರ ಸಾಗುತ್ತದೆ?
    ಭಾರತ ಬಗ್ಗೆ ಟ್ರಂಪ್ ಡಬಲ್ ಸ್ಟ್ಯಾಂಡ್…!ವಿವಾದ ಸೃಷ್ಟಿಸಿ, ಬಳಿಕ ಸಮಾಧಾನದ ಮಾತು
    ಶೃಂಗೇರಿ ವಿಧಾನಸಭೆಯ ಮರುಕೌಂಟಿಂಗ್ ನಲ್ಲಿ ನಡೆದ ಲಪಡಾಗಳೇನು?
    ವಿಮಾನ ಪ್ರಯಾಣ ದುಬಾರಿ: ಟಿಕೆಟ್ ದರ ಏರಿಕೆ ವಿರುದ್ಧ PIL: ಸರ್ಕಾರಕ್ಕೆ ಸುಪ್ರೀಂ ನೋಟಿಸ್
     ಡಿಗ್ರಿಗೂ ಮುನ್ನ ಹ್ಯಾಕರ್ ಗೆ IIT ಉದ್ಯೋಗ! ಪ್ರತಿಭೆ ಇದ್ದರೆ ಅವಕಾಶವೇ ನಿಮ್ಮ ಮನೆ ಬಾಗಿಲು ತಟ್ಟುತ್ತದೆ!” ಅನ್ನೋದಕ್ಕೆ ಸ್ಫೂರ್ತಿ ಈ ನಿಸರ್ಗ ಅಧಿಕಾರಿ..
    ಗೃಹಲಕ್ಷ್ಮಿ ಹಣ ಪಡೆಯೋರೇ ಗಮನಿಸಿ! ಪತಿ ಆಧಾರ್‌ನಿಂದ ಬ್ಯಾಂಕ್ ಖಾತೆವರೆಗೆ ಹೊಸ ರೂಲ್ಸ್
    ವಿಶಾಖಪಟ್ಟಣಂ ಉಕ್ಕಿನ ಕಾರ್ಖಾನೆ ದುರಂತ:ಕೆಲವೇ ಕ್ಷಣಗಳಲ್ಲಿ ಎಂಟು ಜೀವಗಳನ್ನು ನುಂಗಿದ ಉಕ್ಕಿನ ಬೆಂಕಿ!ಕೆಲಸಕ್ಕೆ ಹೋದವರು ಮನೆಗೆ ಮರಳಲಿಲ್ಲ… 
    ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ನಿರ್ಧಾರ ಬದಲಾಗುತ್ತದೆಯೇ? ಕರಾವಳಿ ಕಾದಿದೆ ಉಸಿರು ಹಿಡಿದು!
    ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯ ಬಂಧನ
    ಹೊರಗೆ ಕ್ಯಾಂಟೀನ್…ಆದ್ರೆ ಒಳಗೆ ನಡೆಯುತ್ತಿತ್ತು ಬೇರೆದ್ದೇ ಆಟ..!ಬಯಲಾಯ್ತು ಬೆಚ್ಚಿಬೀಳಿಸುವ ದಂಧೆ. 
    Cocktail 2 ಸುತ್ತ ರಶ್ಮಿಕಾ ಮಂದಣ್ಣ ಕ್ರಿಯೇಟ್ ಮಾಡಿದ ಹೈಪ್ ಎಷ್ಟು ಗೊತ್ತಾ?ಅನ್ಟೋಲ್ಡ್ ಮಸಾಲೆ ಸ್ಟೋರಿಗಳು ಇಲ್ಲಿವೆ!
    ದ.ಕ ಜಿಲ್ಲಾಡಳಿತದಿಂದ ಮಂಗಳಮುಖಿಯರಲ್ಲದವರಿಗೂ ಗುರುತಿನ ಚೀಟಿ ವಿತರಣೆ – ಗಂಭೀರ ಆರೋಪ
    ಕೊಡಗು ಬ್ರೇಕಿಂಗ್: ಮಾಜಿ ಸೈನಿಕನ ಮನೆಗೆ ನುಗ್ಗಿದ ಕಳ್ಳರು – ಚಿನ್ನ, ನಗದು ಸೇರಿ ಅಮೂಲ್ಯ ವಸ್ತುಗಳ ದೋಚಾಟ
    ಕರಾವಳಿಯಲ್ಲಿಲೋಕಾಯುಕ್ತ ಕಣ್ಣು ಪಂಚಾಯಿತಿಗಳ ಮೇಲೆ; ಸರ್ಕಾರದ ಕಣ್ಣು ಕರಾವಳಿ ಕೃಷಿಯತ್ತ?ಕರಾವಳಿ ಕೃಷಿಗೆ ಪ್ರತ್ಯೇಕ ನೀತಿಗೆ ಡಿಮ್ಯಾಂಡ್!
    ಬಿಡದಿ “ಸಮಗ್ರ ಉಪನಗರ” ಯೋಜನೆ ಕೈಬಿಡಿ: ಸಿಎಂ ಡಿಕೆ ಶಿಗೆ ಎಚ್.ಡಿ. ದೇವೇಗೌಡ ಪತ್ರ
    ತಮಿಳು ರಾಜಕೀಯ ರಣರಂಗದಲ್ಲಿ “ವಿಜಯ”ಗಾಥೆ 118 ದಾಟಿದ TVK  ವಿಜಯ್ ಕೈ ಹಿಡಿದ ಮೈತ್ರಿ ಪಕ್ಷಗಳು!
    ಎಲ್ಪಿಜಿ ಗ್ಯಾಸ್ ದರದಲ್ಲಿ ಏರಿಕೆ:  ಮಧ್ಯಮ ವರ್ಗದವರಲ್ಲಿ ಹತಾಶೆ
    ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ
    ಡೈಪರ್‌ನಲ್ಲಿ ಚಿನ್ನ! ಚಿನ್ನ ಕಳ್ಳಸಾಗಣೆಗೆ ಏನೆಲ್ಲಾ‘ಐಡಿಯಾ’? 8 ತಿಂಗಳ ಮಗುವನ್ನೂ ಬಿಟ್ಟಿಲ್ಲ!
    ಮುಗ್ಧ ಮಗು ಮೇಲೆ ನಡೆದ ಅಮಾನವೀಯ ಕ್ರೌರ್ಯ… ನ್ಯಾಯಕ್ಕಾಗಿ ಸಮಾಜದ ಒಕ್ಕೊರಲ ಹೋರಾಟ
    ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಎನ್‌ಐಎ ಬಲೆಗೆ ಮತ್ತೋರ್ವ ಪ್ರಮುಖ ಆರೋಪಿ; ಬಂಧಿತರ ಸಂಖ್ಯೆ 25ಕ್ಕೆ ಏರಿಕೆ
    ಕಾರಿಗೆ ಮಹಿಳೆ ಡಿಕ್ಕಿ..ಗುಳಿಗಜ್ಜನೆ ಕಾಪಾಡಿದ್ದ..! ಎದೆ ಜಲ್ಲೆನಿಸುವ ದೃಶ್ಯ