📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಪುಟ್ಟ ಜೀವವೊಂದು ಬಲಿ.. ಕೆಲವು ಮಕ್ಕಳಿಗೆ ಗಾಯ..

    ಮಗುವಿನ ಬರುವಿಕೆಗಾಗಿ ಕಾಯುತ್ತಿದ್ದ ಅಪ್ಪ ಅಮ್ಮನಿಗೆ ವಿಧಿಯ ಭೀಕರ ಈ ದುರಂತದ ಕಿಂಚಿತ್ ಯೋಚನೆಯೂ ಇರದು..

    ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಮತ್ತು ಗಾಳಿಯ ಅಬ್ಬರ ಮುಂದುವರಿದಿರುವ ನಡುವೆಯೇ ಬಂಟ್ವಾಳ ತಾಲೂಕಿನ ಬರಿಮಾರು ಸಮೀಪದ ಕಲ್ಲೆಟ್ಟಿ ಶ್ರೀ ಕಾನಲ್ತಾಯ ದೈವಸ್ಥಾನದ ಬಳಿ ಬುಧವಾರ ಸಂಜೆ ಹೃದಯವಿದ್ರಾವಕ ದುರಂತ ಸಂಭವಿಸಿದೆ. ಶಾಲೆ ಮುಗಿಸಿ ಮಕ್ಕಳನ್ನು ಮನೆಗೆ ಕರೆದೊಯ್ಯುತ್ತಿದ್ದ ಶಾಲಾ ಬಸ್ ಮೇಲೆ ಬೃಹತ್ ಗಾತ್ರದ ಮರ ಏಕಾಏಕಿ ಉರುಳಿ ಬಿದ್ದ ಪರಿಣಾಮ, ಕಲ್ಲಡ್ಕ ಶ್ರೀರಾಮ ಶಾಲೆಯ ಸುಮಾರು 6 ವರ್ಷದ ವಿದ್ಯಾರ್ಥಿನಿ ಚಿರಾ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

    ಮರ ಬಿದ್ದ ವೇಳೆ ಬಸ್‌ನಲ್ಲಿ ಹಲವಾರು ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು. ಘಟನೆಯಲ್ಲಿ ನಾಲ್ವರು ಮಕ್ಕಳು ಗಾಯಗೊಂಡಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಗೊಂಡ ಮಕ್ಕಳಲ್ಲಿ ಓರ್ವ ವಿದ್ಯಾರ್ಥಿಯ ಸ್ಥಿತಿ ಗಂಭೀರವಾಗಿತ್ತು ಎನ್ನಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ಪ್ರಾಥಮಿಕ ಮಾಹಿತಿ ತಿಳಿಸಿದೆ. ಘಟನೆಗೆ ಸಂಬಂಧಿಸಿದಂತೆ ಅಧಿಕೃತವಾಗಿ ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.

    Also Read  Top 5, ಹೆಚ್ಚು ಅನುದಾನ ಪಡೆದ ಇಲಾಖೆಗಳು ಯಾವವು ಗೊತ್ತಾ?

    ಶಾಲೆ ಮುಗಿದ ಬಳಿಕ ಮಕ್ಕಳನ್ನು ಮನೆಗಳಿಗೆ ತಲುಪಿಸುವ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ. ಬುಧವಾರ ಸಂಜೆ ಮಳೆ ಮತ್ತು ಬಿರುಗಾಳಿ ತೀವ್ರವಾಗಿದ್ದ ಸಮಯದಲ್ಲಿ ಮರ ಏಕಾಏಕಿ ರಸ್ತೆಯಲ್ಲಿ ಚಲಿಸುತ್ತಿದ್ದ ಶಾಲಾ ವಾಹನದ ಮೇಲೆ ಬಿದ್ದಿದೆ. ಪ್ರಕೃತಿ ವಿಕೋಪದ ಈ ಕ್ಷಣ ಯಾರೂ ಊಹಿಸಲು ಸಾಧ್ಯವಾಗದ ರೀತಿಯಲ್ಲಿ ಸಂಭವಿಸಿದ್ದು, ಕ್ಷಣಾರ್ಧದಲ್ಲಿ ಮಕ್ಕಳ ಕುಟುಂಬಗಳ ಬದುಕಿನಲ್ಲಿ ಕತ್ತಲೆ ಆವರಿಸಿದೆ.

    ಮರ ಬಿದ್ದ ತಕ್ಷಣ ಸ್ಥಳೀಯರು ಸ್ಥಳಕ್ಕೆ ಧಾವಿಸಿ, ಬಸ್‌ನೊಳಗೆ ಸಿಲುಕಿದ್ದ ಮಕ್ಕಳನ್ನು ಹೊರತೆಗೆದು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದರು. ಬಳಿಕ ಗಾಯಗೊಂಡ ಮಕ್ಕಳನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಘಟನೆಯ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.

    Also Read  ಅಮ್ಮಾ, ನನ್ನನ್ನು ಕ್ಷಮಿಸು’ ಎಂದು ಡೆತ್‌ನೋಟ್ ಬರೆದು ಯುವಕ ಆತ್ಮಹತ್ಯೆ

    ಮಗುವಿನ ದುರಂತ ಸಾವು ಕಲ್ಲಡ್ಕ ಶ್ರೀರಾಮ ಶಾಲೆಯ ಆಡಳಿತ ಮಂಡಳಿ, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಇಡೀ ಬಂಟ್ವಾಳ ತಾಲೂಕಿನಲ್ಲಿ ತೀವ್ರ ಶೋಕದ ವಾತಾವರಣವನ್ನು ಸೃಷ್ಟಿಸಿದೆ. ಶಾಲಾ ವಾಹನದ ಚಾಲಕ ಹಾಗೂ ಸಿಬ್ಬಂದಿಯ ಕುರಿತ ಹೆಚ್ಚಿನ ವಿವರಗಳು ಮತ್ತು ಘಟನೆಯ ನಿಖರ ಕಾರಣದ ಬಗ್ಗೆ ಅಧಿಕಾರಿಗಳಿಂದ ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಭಾರೀ ಮಳೆ ಮತ್ತು ಬಿರುಗಾಳಿ ಮುಂದುವರಿದಿರುವ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸುವುದು ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಕೈಗೊಳ್ಳುವ ಮುನ್ನೆಚ್ಚರಿಕಾ ಕ್ರಮವಾಗಿದೆ. ಆದರೆ, ಪ್ರಕೃತಿಯ ಅಬ್ಬರದ ನಡುವೆ ಇಂತಹ ದುರಂತ ಸಂಭವಿಸಿರುವುದು ಎಲ್ಲರನ್ನೂ ಬೆಚ್ಚಿಬೀಳಿಸಿದೆ. ಯಾವುದೇ ಮುನ್ನೆಚ್ಚರಿಕೆಯಿದ್ದರೂ ಪ್ರಕೃತಿಯ ಅನಿರೀಕ್ಷಿತ ದುರಂತವನ್ನು ಯಾರೂ ಊಹಿಸಲು ಸಾಧ್ಯವಿಲ್ಲ ಎಂಬುದನ್ನು ಈ ಘಟನೆ ಮತ್ತೊಮ್ಮೆ ನೆನಪಿಸಿದೆ.

    Also Read  ಕಳುವಾದ ವಾಹನ ಸಮೇತ ಕಳ್ಳರ ಬಂಧನ…!

    ಪುಟ್ಟ ಜೀವವನ್ನು ಕಳೆದುಕೊಂಡ ಕುಟುಂಬದ ನೋವು ತುಂಬಲಾರದದ್ದು. ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ಕುಟುಂಬಕ್ಕೆ ಭಗವಂತ ನೀಡಲಿ. ಗಾಯಗೊಂಡಿರುವ ಎಲ್ಲಾ ಮಕ್ಕಳು ಶೀಘ್ರ ಗುಣಮುಖರಾಗಲಿ ಎಂಬುದು ಎಲ್ಲರ ಪ್ರಾರ್ಥನೆ.

    ##ಬಂಟ್ವಾಳ #ಶಾಲಾಬಸ್ #ಮರಉರುಳಿ #ವಿದ್ಯಾರ್ಥಿನಿಮೃತ್ಯು #ದಕ್ಷಿಣಕನ್ನಡ #ಭಾರೀಮಳೆ #ಮಳೆಅಪಘಾತ

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    594 ಕಿಮೀ ಗಂಗಾ ಎಕ್ಸ್‌ಪ್ರೆಸ್‌ ವೇ ..!ಮೀರಟ್‌ನಿಂದ ಪ್ರಯಾಗರಾಜ್‌ವರೆಗೆ -ದೇಶದ ಪ್ರಗತಿಗೆ ಮತ್ತೊಂದು ಮೈಲುಗಲ್ಲು 
    ಉಡುಪಿ ಜಿಲ್ಲಾಆಸ್ಪತ್ರೆಯಲ್ಲಿ ಹಗರಣ, ತಾರತಮ್ಯದ ಆರೋಪ: ವೀಣಾದೇವಿ ವಿರುದ್ಧದಕ್ರಮ ಕಣ್ಣೊರೆಸುವ ತಂತ್ರ
    ಮಂಗಳೂರುಗೆ ಹೈಕೋರ್ಟ್ ಸರ್ಕ್ಯೂಟ್ ಬೆಂಚ್: ಕರಾವಳಿಗೆ ಐತಿಹಾಸಿಕ ನ್ಯಾಯಾಂಗ ಶಕ್ತಿ ನೀಡುವ ಮಹತ್ವದ ಹೆಜ್ಜೆ..
    ನಿರ್ಮಾಣ ಹಂತ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು-  ಶಣೈ ಮೇಲೆ ಕೇಸು
    UPIಗೆ ಶುಲ್ಕ ಬರಲಿದೆಯೇ? – ಲೋಕಸಭೆಯಲ್ಲಿ ಅಂಗೀಕಾರವಾದ bill ಮಸೂದೆ ಏನು ಹೇಳುತ್ತದೆ?
    ಶಾಲಾ ವಾಹನಗಳ ಸುರಕ್ಷತೆ ಬಗ್ಗೆ ಜೆಡಿಎಸ್ ಆಗ್ರಹ
    ಹಾವು ಮುಂಗುಸಿ ಅಂತಾಗಿದ್ದವರು ಒಂದಾದರು
    ‘ಕಾಮುಕರಿಗೆ ಪೊಲೀಸರ ಭಯ ಹುಟ್ಟಬೇಕು’ — ಮಹಿಳಾ ಸುರಕ್ಷತೆ ಬಗ್ಗೆ ಸುಪ್ರೀಂ ಕೋರ್ಟ್ ಕಠಿಣ ಸಂದೇಶ
    ತನ್ನ ಹಾಗೂ ನಾದಿನಿಯ ಮೂರುವರೇ ವರ್ಷದ ಮಕ್ಕಳನ್ನು ಬಾವಿಗೆ ಎಸೆದ ತಾಯಿ…!
    ಭರ್ಜರಿ ಬಿಜೆಪಿ ವಿಜಯೋತ್ಸವ ಬೆಂಗಳೂರಲ್ಲಿ ..!ಪ್ರಧಾನಿ ಮೋದಿ ಬರ್ತಿದ್ದಾರೆ.
    40 ವರ್ಷದ ಹಳೆಯ ಕೊಲೆಕೇಸ್‌ಗೆ ಅಂತಿಮ ಕೀ ಆಗಿ ಸಾಕ್ಷಿ ಆಗಿದ್ದು ತಿಂದು ಉಗುಳಿದ ಚೂಯಿಂಗ್ ಗಮ್ …!ಏನಿದು realstory..
    ಸೋಶಿಯಲ್ ಮೀಡಿಯಾ ಮೂಲಕ ಸಾರ್ವಜನಿಕರಲ್ಲಿ ಭಯ ಸೃಷ್ಠಿ -45 ಜನರ ಬಂಧನ
    ಆಪಲ್‌ಗೆ ಭಾರತದಲ್ಲಿ ದೊಡ್ಡ ಕಾನೂನು ಶಾಕ್? App Store ನಿಯಮಗಳ ಮೇಲೆ ಆಪಲ್ vs ಭಾರತ CCI ಜಟಾಪಟಿ 
    ಸಚಿನ್ ತೆಂಡೂಲ್ಕರ್ ಮಗಳ ಜಪಾನೀಸ್ ಕನೆಕ್ಷನ್ ಈಗ ದೇಶದ ಗಮನ ಸೆಳೆಯುತ್ತಿದೆ…ಸಾರಾ ಹೊಸ ಒಪ್ಪಂದ ಚರ್ಚೆಯಲ್ಲಿ
    ಬೆಂಗಳೂರಿನಿಂದ ಚೆನ್ನೈಗೆ ಹೊರಟ ವಿಮಾನದಲ್ಲಿ ಹೊಗೆ — ಎಲ್ಲಾ ವಿಮಾನಗಳು ವಿಳಂಬ ಪ್ರಯಾಣಿಕರಿಗೆ ತೊಂದರೆ
    ಇಡುಕ್ಕಿಯಲ್ಲಿ Landslide ಆರ್ಭಟ!ಇಬ್ಬರು ಸಾವು, ಮಹಿಳೆಗೆ ಗಂಭೀರ ಗಾಯ
    ಕುಂದಾಪುರ ಗಂಗೊಳ್ಳಿಯಲ್ಲಿ ಕತ್ತಿ  ದೊಣ್ಣೆಗಳಿಂದ ಮಾರಾಮಾರಿ; ವೈರಲ್ ವಿಡಿಯೋದಿಂದ ಪ್ರಕರಣಕ್ಕೆ ಹೊಸ ತಿರುವು?
    ಮುಂದಿನ ಕೆಲವು ದಿನ ಭಾರಿ ಗಾಳಿ ಮಳೆ ಗುಡುಗು -ಮಿಂಚಿನ ಎಚ್ಚರಿಕೆ 
    ಹತ್ತು ವರ್ಷದ ಮಗಳ ಹುಟ್ಟುಹಬ್ಬದ ಸಂಭ್ರಮ…  ವಿಧಿಯಾಟದಲ್ಲಿ ಕಣ್ಣೀರಾಗಿ ಮಾರ್ಪಟ್ಟ ದುರಂತ ಕಥೆ
    ಉಡುಪಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕಾನೂನುಬಾಹಿರ ಚಟುವಟಿಕೆ
    ಬರದ ಭೀತಿ ಎದುರಿಸುತ್ತಿರುವ ಕರ್ನಾಟಕ ,ಮಳೆ ಇಲ್ಲ… ಬೆಳೆ ಇಲ್ಲ… ಅನ್ನ ಇಲ್ಲ!,ಕೇಂದ್ರಕ್ಕೆ ನೆರವಿಗಾಗಿ ಡಿ ಕೆ ಶಿ ಮನವಿ
    ಚಿನ್ನ ಖರೀದಿಸುವ ಕಾಲ ಹೋಯ್ತಾ? ಗಗನಕ್ಕೇರಿದ ದರ ಕೇಳಿ ಬೆಚ್ಚಿಬಿದ್ದ ಜನ!ಒಂದೂವರೆ ಲಕ್ಷ ರೂಪಾಯಿ ಗಡಿದಾಟಿತಾ …?ಬೆಳ್ಳಿಎರಡೇ ದಿನದಲ್ಲಿ ಆರು ಸಾವಿರ ಏರಿಕೆ
    ಪರಮೇಶ್ವರ ವಿರುದ್ಧ FIR-₹500 ಬೆಟ್ಟಿಂಗ್ ಹೇಳಿಕೆಗೆ ಕಾನೂನು ಕ್ರಮ.
    ಉಡುಪಿ ನಗರಸಭೆಗೆ ನೂತನ ಪೌರಾಯುಕ್ತರಾಗಿ ಸಂತೋಷ್ ಡಿ.ಎಸ್. ನೇಮಕ
    ದೆಹಲಿ ಹೋಟೆಲ್ ಭೀಕರ ಅಗ್ನಿ ದುರಂತ!ಹೊತ್ತಿ ಉರಿದ ಹೋಟೆಲ್‌ನಲ್ಲಿ 21 ಮಂದಿ ಸಜೀವ ದಹನ..
    ಕನಸು ಹೊತ್ತ ಯುವತಿಯರ ಮೇಲೆ ಕಾಮುಕ ಸಮಾಜದ ಕಣ್ಣು! ಮೌನವಾಗಿರುವ ಸಾವಿರಾರು ಕಥೆಗಳಲ್ಲೊಂದು ಬೆಂಗಳೂರು ಘಟನೆ!
    ಜಾಗತಿಕ ಸಂಘರ್ಷದ ಮಧ್ಯೆ ಭಾರತ–ಯುಎಇ ಬಿಗ್ ಡೀಲ್! ತಂತ್ರಜ್ಞಾನ, ಇಂಧನ ಮತ್ತು ಭದ್ರತೆಯಲ್ಲಿ ಐತಿಹಾಸಿಕ ಒಗ್ಗಟ್ಟು.
    Trump ಮಾತಿಗೆ Iran ಸಂಸತ್ ಸ್ಪೀಕರ್‌ನ ಕಠಿಣ ಸಂದೇಶ ವಿಶ್ವದ ಗಮನ ಸೆಳೆದಿದೆ!
    ಕರಾವಳಿಯಲ್ಲಿಲೋಕಾಯುಕ್ತ ಕಣ್ಣು ಪಂಚಾಯಿತಿಗಳ ಮೇಲೆ; ಸರ್ಕಾರದ ಕಣ್ಣು ಕರಾವಳಿ ಕೃಷಿಯತ್ತ?ಕರಾವಳಿ ಕೃಷಿಗೆ ಪ್ರತ್ಯೇಕ ನೀತಿಗೆ ಡಿಮ್ಯಾಂಡ್!
    ಆಂಬುಲೆನ್ಸ್ ಡ್ರೈವರ್ ನ ಸಮಾಜ ಸೇವೆಯ ಕಾರ್ಯ ಶ್ಲಾಘನಿಯ – ಸುದೇಶ್ ಕುಮಾರ್