📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಬಾಲಕಾರ್ಮಿಕ ಪತ್ತೆ : ಮಾಲೀಕನಿಗೆ ಜೈಲು, ದಂಡ

ಮೂಡಬಿದ್ರಿ:
ಅಪ್ರಾಪ್ತ ವಯಸ್ಕ ಬಾಲಕನನ್ನು ದುಡಿಸುತ್ತಿದ್ದ ಮಾಲೀಕನಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ಮೂಡಬಿದ್ರೆ ನ್ಯಾಯಾಲಯ ತೀರ್ಪು ನೀಡಿದೆ.
2024 ರ ಸೆ. 19 ರಂದು ಜಿಲ್ಲಾ ಮಟ್ಟದ ಟಾಸ್ಕ್ ಪೋರ್ಸ್ ಸಮಿತಿ ಸದಸ್ಯರು ಮೂಡಬಿದ್ರೆ ಕಡಲಕೆರೆಯಲ್ಲಿ ಅನೀರೀಕ್ಷಿತ ತಪಾಸಣೆ ನಡೆಸಿದ ಸಂದರ್ಭದಲ್ಲಿ ಅಲ್ಯುಮಿನಿಯಂ ಫ್ಯಾಬ್ರಿಕೇಶನ್ ಸಂಸ್ಥೆಯೊಂದರಲ್ಲಿ 16 ವಯಸ್ಸಿನ ಕಿಶೋರ ಕಾರ್ಮಿಕನು ಕೆಲಸ ಮಾಡುತ್ತಿರುವುದು ಪತ್ತೆಯಾಗಿತ್ತು, ನಂತರ ಬಾಲಕನನ್ನು ಪುನರ್ವಸತಿಗಾಗಿ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಲಾಗಿತ್ತು.
ಪ್ರಕರಣದ ವಿಚಾರಣೆ ನಡೆಸಿದ ಮೂಡಬಿದ್ರೆ ನ್ಯಾಯಾಲಯವು, ಕಾಯ್ದೆಯನ್ನು ಉಲ್ಲಂಘಿಸಿದ ಮಾಲೀಕರಿಗೆ ರೂ.10 ಸಾವಿರ ದಂಡ ಹಾಗೂ 1 ದಿನ ಜೈಲು ಶಿಕ್ಷೆಯನ್ನು ವಿಧಿಸಿ ತೀರ್ಪನ್ನು ನೀಡಿದೆ. ಅಲ್ಲದೇ ಕಿಶೋರ ಕಾರ್ಮಿಕನ ಪುನರ್ವಸತಿಗಾಗಿ ರೂ.20 ಸಾವಿರ ಕಾರ್ಪಸ್ ನಿಧಿಯನ್ನು ಸಹ ವಸೂಲಾತಿ ಮಾಡಲಾಗಿರುತ್ತದೆ.
ದಾಳಿಯಲ್ಲಿ ಕಾರ್ಮಿಕ ಇಲಾಖೆಯ ಕಾರ್ಮಿಕ ಅಧಿಕಾರಿ ಕುಮಾರ್ ಬಿ.ಆರ್, ಕಾರ್ಮಿಕ ನಿರೀಕ್ಷಕ ವಿರೇಂದ್ರ ಎಸ್ ಕುಂಬಾರ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಶ್ರೀನಿವಾಸ್ ಹಾಗೂ ಇತರೆ ಇಲಾಖೆಯ ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಬಾಲಕಾರ್ಮಿಕ ಪದ್ಧತಿ ಒಂದು ಸಾಮಾಜಿಕ ಅನಿಷ್ಟ ಪಿಡುಗು ಆಗಿದ್ದು, ಬಾಲ್ಯಾವಸ್ಥೆ, ಕಿಶೋರಾವಸ್ಥೆ ಕಾರ್ಮಿಕ (ನಿಷೇಧ& ನಿಯಂತ್ರಣ)ಕಾಯ್ದೆ-1986ರನ್ವಯ 14 ವರ್ಷದೊಳಗಿನ ಬಾಲ್ಯಾವಸ್ಥೆ ಕಾರ್ಮಿಕರನ್ನು ಯಾವುದೇ ಸಂಸ್ಥೆಯಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿರುತ್ತದೆ.
15 ವರ್ಷದಿಂದ 18 ವರ್ಷದೊಳಗಿನ ಕಿಶೋರಾವಸ್ಥೆಯ ಕಾರ್ಮಿಕರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ದುಡಿಸಿಕೊಳ್ಳುವುದನ್ನು ನಿಷೇಧಿಸಲಾಗಿದೆ. ಅಲ್ಲದೇ ಅಪಾಯಕಾರಿ ಅಲ್ಲದ ಉದ್ದಿಮೆಗಳಲ್ಲಿ ಕಿಶೋರಾವಸ್ಥೆಯ ಕಾರ್ಮಿಕರನ್ನು ದುಡಿಸಿಕೊಳ್ಳುವುದನ್ನು ನಿಯಂತ್ರಿಸಲಾಗಿರುತ್ತದೆ.
ಕಾಯ್ದೆಯನ್ನು ಉಲ್ಲಂಘಿಸಿದ ಮಾಲೀಕರಿಗೆ ರೂ.50,000 ಯವರೆಗೆ ದಂಡ ಹಾಗೂ 2 ವರ್ಷದವರೆಗೆ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ. ತಪ್ಪಿತಸ್ಥ ಮಾಲೀಕರ ಮೇಲೆ ಪೊಲೀಸ್ ಇಲಾಖೆಯಿಂದ ಎಫ್.ಐ.ಆರ್‍ನ್ನು ಸಹ ದಾಖಲಿಸಲಾಗುತ್ತದೆ.
ಸಾರ್ವಜನಿಕರು ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕ ಕಾಯಿದೆ 1986 ಪ್ರಕಾರ ಬಾಲಕರಿಗೆ ಕೆಲಸ ಕೊಡುವುದು ಹಾಗೂ ಕೆಲಸಕ್ಕೆ ನೇಮಕ ಮಾಡಿಕೊಳ್ಳುವುದೇರಡನ್ನು  ಸಂಪೂರ್ಣವಾಗಿ ನಿಷೇಧಸಲಾಗುದೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಮಹಿಳಾ ದಿನಾಚರಣೆಯಲ್ಲಿ ಮಹಿಳಾ ಸಂಪನ್ಮೂಲ ಕೇಂದ್ರ ಉದ್ಘಾಟನೆ, ಜಾಗೃತಿ ಕಾರ್ಯಕ್ರಮ
ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆಯ ಪೋಸ್ಟ್ ಗಳನ್ನು ಹಾಕಿದ ಆರೋಪಿಯ ಬಂಧನ
ಕನ್ನಡದ ನೆಲದಲ್ಲಿ ಕನ್ನಡಕ್ಕೇ ಗೇಟ್ ಪಾಸ್: ಇವರು ಕರ್ನಾಟಕದ ಸಚಿವರೊ⁉️ಇಂಗ್ಲೆಂಡಿನ ಪ್ರತಿನಿಧಿಯೋ?
🚨 “ಮಂಗಳೂರು ಜಿಲ್ಲಾಕಾರಾಗೃಹದಲ್ಲಿ ಗಲಾಟೆ: ಜೈಲು ಅಧೀಕ್ಷಕರ ಮೇಲೆಯೇ ಕೈದಿಗಳ ಹಲ್ಲೆಯತ್ನ!”
ಭೀಕರ ಅಪಘಾತಕ್ಕೆ ಸ್ಥಳೀಯ ನಾಯಕ ಸೇರಿ ಇಬ್ಬರು ದುರ್ಮರಣ 
ಆಸಿಡ್ ದಾಳಿಗೊಳಗಾದ ಮಹಿಳೆಯರಿಗೆ ₹50 ಸಾವಿರ ಮಾಸಾಶನ: ಆಸಿಡ್ ಮಾರಾಟಕ್ಕೆ ಕಡಿವಾಣ ಹಾಕಲು ಸರ್ಕಾರ ಕ್ರಮ
Online payments ಹೊಸ ಸುರಕ್ಷತಾ ನಿಯಮಗಳು: ನಿಮ್ಮ ಹಣಕ್ಕೆ ‘ಅದೃಶ್ಯ ಕವಚ’
ಕುಂದಾಪುರದಲ್ಲಿ ಯುವತಿ ಆತ್ಮಹತ್ಯೆಗೆ ಪ್ರಿಯಕರನ ಕುಮ್ಮಕ್ಕು
ಡೇಟಾದಲ್ಲಿ ಸತ್ತಿದ್ದಾರೆ: ಬಡ ಮಹಿಳೆ ತಾನು ಜೀವಂತ ಸಾಬೀತುಪಡಿಸಲು ಹರಸಾಹಸ…ಬಡಜನರು “ಡೇಟಾ” ಅಲ್ಲ — ಅವರು ಜೀವಂತ ಮಾನವರು. 
ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ
“ಪ್ರಜಾಪ್ರಭುತ್ವದ ಮೇಲೆ ದಾಳಿ”ಸುಪ್ರೀಂ ಕೋರ್ಟ್ ಕಿಡಿ: ಇದು ಪ್ರತಿಭಟನೆ ಅಲ್ಲ, ಸಂಚು!”
ರಾಜ್ಯ ಪೊಲೀಸ್ ಇಲಾಖೆಯಲ್ಲಿ “ಕಲೋನಿಯಲ್ ಆರ್ಡರ್ಲಿ” ‘ಆಡಲ್’ (Adal) ಪದ್ದತಿ ರದ್ದು
ಮಧ್ಯಪ್ರಾಚ್ಯದಲ್ಲಿ ಯುದ್ಧ– ಸಂಕಷ್ಟದಲ್ಲಿ ಜಗತ್ತು-ಉಸಿರು ತಡೆದ ಪರಿಸ್ಥಿತಿ!ಏನಾಗ್ತಾ ಇದೆ…
ಬ್ರೇಕಿಂಗ್ ನ್ಯೂಸ್
ನಾಳೆ ಮಂಗಳೂರಲ್ಲಿ ಇಡೀ ದಿನ ಕರೆಂಟಿಲ್ಲ Power Cut.. ಎಲ್ಲೆಲ್ಲಿ?
ಕಿಡ್ನಿ ಕಾಯಿಲೆಯ ಬಗ್ಗೆ ಎಚ್ಚರಿಕೆ ಅಗತ್ಯ- ಡಾಕ್ಟರ್ ಅಶೋಕ್ ಭಟ್
AI ಡೀಪ್‌ಫೇಕ್ ಕೇವಲ ಸಿನಿಮಾ ನಟಿಯರಿಗೆ ಸೀಮಿತವಾಗಿಲ್ಲ .
ಘರ್ ವಾಪ್ಸಿ ಯಾದ ಯೋಗೇಶ್ ಶೆಟ್ಟಿ ಜೆಪ್ಪು
ಏರ್ ಇಂಡಿಯಾ ವಿಮಾನ ಸೇವೆ ಸ್ಥಗಿತ…40,000ಕ್ಕೂ ಹೆಚ್ಚು ಟೆಲ್ ಅವೀವ್‌ ಭಾರತೀಯರ ಪ್ರಯಾಣ ಅತಂತ್ರ…!
ಮರಣದಂಡನೆ ಶಿಕ್ಷೆಗೆ ಈಡಾದ  ತಮಿಳುನಾಡು   ಪೊಲೀಸರು
ಮೂಡಬಿದಿರೆ ಇನ್‌ಸ್ಪೆಕ್ಟರ್ ಪ್ರಕರಣಕ್ಕೆ ಟ್ವಿಸ್ಟ್: ಆರೋಪ ಮಾಡಿದ ಮಹಿಳೆಯ ವಿರುದ್ಧವೇ ಸಹೋದರಿಯ ಬಾಂಬ್!
ಗೃಹ ಸಚಿವರಾದ ಜಿ ಪರಮೇಶ್ವರ್ ರವರ ಒಡೆತನದ ಸಂಸ್ಥೆಯಲ್ಲಿ ನಡೆದಿದೆ ಎಂಬ ವಿಡಿಯೋ ವೈರಲ್….!
ಪಕ್ಷದಿಂದ ಪಕ್ಕಕ್ಕೆ? ರಾಘವ್ ಚಡ್ಡಾ ಹಿಂದೆ ಏನಿದೆ ದೊಡ್ಡ ರಾಜಕೀಯ ಆಟ!”ಮೌನಗೊಳಿಸಿದರೂ ನಿಲ್ಲದ ಧ್ವನಿ – ರಾಘವ್ ಚಡ್ಡಾ!”
ಭಾರತದ ಹಡಗಿಗೆ ಗ್ರೀನ್ ಸಿಗ್ನಲ್ ನೀಡಿದ ಇರಾನ್ 
ತುರ್ತು ಎಚ್ಚರಿಕೆ ‼️ಹಿಪ್ನೋಟೈಸಿಂಗ್ ಸ್ವಾಮಿಗಳು ನಿಮ್ಮ ಬಳಿಯೂ ಬರಬಹುದು
 “ಮೀನುಗಾರರ ಡೀಸೆಲ್ & ಸಿಲಿಂಡರ್ ಸಮಸ್ಯೆಗೆ ಸರ್ಕಾರದ ತುರ್ತು ಹಸ್ತಕ್ಷೇಪ -ಇಂಧನ ಭರವಸೆ: ಮಂಗಳೂರು ಬಂದರಿನಲ್ಲಿ ತುರ್ತು ಕ್ರಮ”-
ಹೆಚ್.ಪಿ.ವಿ. ಚುಚ್ಚು ಮದ್ದಿನ ಬಗ್ಗೆ ಗೊಂದಲ ಬೇಡ: ಜಿಲ್ಲಾ ಆರೋಗ್ಯಾಧಿಕಾರಿ ಸ್ಪಷ್ಟನೆ
ಮಹಿಳೆಯ ಸ್ಕೂಟಿಯನ್ನೇ ಕದ್ದ ಕಳ್ಳರು….. ಹೆಚ್ಚುತ್ತಿರುವ ವಾಹನ ಕಳ್ಳತನ
ಕರ್ನಾಟಕದಲ್ಲಿ ಮಳೆ ಅಲರ್ಟ್! 13 ಜಿಲ್ಲೆಗಳಿಗೆ ಯೆಲ್ಲೋ ವಾರ್ನಿಂಗ್ – ಜನರು ಎಚ್ಚರಿಕೆ ಅಗತ್ಯ
ಎಲ್ಲರಿಗೂ ಯುಗಾದಿ ಹಬ್ಬ… ಆದರೆ ಈ ಗ್ರಾಮಗಳಲ್ಲಿ ಭಯ ಮೌನ…ಹಬ್ಬ ಇಲ್ಲ…!ಒಂದು ವಿಚಿತ್ರ ಕಥೆ!