📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಬಿಡದಿ “ಸಮಗ್ರ ಉಪನಗರ” ಯೋಜನೆ ಕೈಬಿಡಿ: ಸಿಎಂ ಡಿಕೆ ಶಿಗೆ ಎಚ್.ಡಿ. ದೇವೇಗೌಡ ಪತ್ರ

    ಬೆಂಗಳೂರು: ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಪ್ರಸ್ತಾವಿಸಿರುವ ಬಿಡದಿ ಸಮಗ್ರ ಉಪನಗರ ಯೋಜನೆಯನ್ನು ಕೂಡಲೇ ಕೈಬಿಡುವಂತೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

    ಈ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ದೇವೇಗೌಡರು, ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲ್ಲೂಕಿನ ಬಿಡದಿ ಹೋಬಳಿಯ 8 ಗ್ರಾಮಗಳು ಹಾಗೂ ಹಾರೋಹಳ್ಳಿ ತಾಲ್ಲೂಕಿನ 1 ಗ್ರಾಮ ಸೇರಿ ಒಟ್ಟು 7,481 ಎಕರೆ 21.08 ಗುಂಟೆ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಕ್ರಮಕ್ಕೆ ಸ್ಥಳೀಯ ರೈತರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ ಎಂದು ತಿಳಿಸಿದ್ದಾರೆ. ರೈತರು ನಿರಂತರವಾಗಿ ಹೋರಾಟ ನಡೆಸುತ್ತಿರುವುದಾಗಿಯೂ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

    “ಹೊಸ ಯೋಜನೆಗೆ ಅವಶ್ಯಕತೆ ಇಲ್ಲ”

    ರಾಜ್ಯ ಸರ್ಕಾರ ಈಗಾಗಲೇ ಶಿವರಾಮ ಕಾರಂತ ಲೇಔಟ್ ಮತ್ತು ನಾಡಪ್ರಭು ಕೆಂಪೇಗೌಡ ಲೇಔಟ್ಗಳಲ್ಲಿ ಸಾವಿರಾರು ನಿವೇಶನಗಳನ್ನು ಹಂಚಿಕೆ ಮಾಡದೆ ಉಳಿಸಿಕೊಂಡಿದೆ. ಜೊತೆಗೆ ಬೆಂಗಳೂರು ಬಿಸಿನೆಸ್ ಕಾರಿಡಾರ್-2 (PRR-2) ವ್ಯಾಪ್ತಿಯಲ್ಲಿ ಹಲವು ಬಡಾವಣೆಗಳ ನಿರ್ಮಾಣ ಯೋಜನೆಗಳು ಪ್ರಗತಿಯಲ್ಲಿವೆ. ಈ ಹಿನ್ನೆಲೆಯಲ್ಲಿ ಹೊಸದಾಗಿ ಉಪನಗರ ಯೋಜನೆ ರೂಪಿಸುವ ಅಗತ್ಯವೇ ಇಲ್ಲ ಎಂದು ದೇವೇಗೌಡರು ಅಭಿಪ್ರಾಯಪಟ್ಟಿದ್ದಾರೆ.

    Also Read  ಇಬ್ಬರು ಮಕ್ಕಳ ಕಣ್ಣೆದುರೇ ಪತ್ನಿಯನ್ನು ಸುಮಾರು 20 ಬಾರಿ ಚಾಕುವಿನಿಂದ ಇರಿದು ಕೊಂದ ಪತಿ - ಕಾರಣ ಮೊಬೈಲ್‌ನಲ್ಲಿ ಆಟ

    ರೈತರ ಜೀವನೋಪಾಯಕ್ಕೆ ಹೊಡೆತ

    ಬಿಡದಿ ಮತ್ತು ಹಾರೋಹಳ್ಳಿ ಪ್ರದೇಶಗಳಲ್ಲಿ ಈಗಾಗಲೇ KIADB ಕೈಗಾರಿಕಾ ಅಭಿವೃದ್ಧಿಗಾಗಿ ಸಾವಿರಾರು ಎಕರೆ ಕೃಷಿ ಭೂಮಿಯನ್ನು ವಶಪಡಿಸಿಕೊಂಡಿದೆ. ಇದರಿಂದ ಸ್ಥಳೀಯ ರೈತರ ಜೀವನೋಪಾಯಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಮತ್ತೆ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡರೆ ರೈತರ ಬದುಕು ಸಂಪೂರ್ಣವಾಗಿ ಅಸ್ತವ್ಯಸ್ತವಾಗುತ್ತದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

    ರೈತರ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಬಿಡದಿ ಸಮಗ್ರ ಉಪನಗರ ಯೋಜನೆಯನ್ನು ಮರುಪರಿಶೀಲಿಸಿ ಕೈಬಿಡಬೇಕು ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರಿಗೆ ಪತ್ರವನ್ನು ಬರೆಯುವ ಮೂಲಕ ಸರ್ಕಾರವನ್ನು ಆಗ್ರಹಿಸಿದ್ದಾರೆ.


    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಎರಡು ತಿಂಗಳ ಬಳಿಕ ಸಮಾಧಿಯಿಂದ ಹೊರಬಂತು ಆಲ್ಬರ್ಟ್ ರೇಗೋ …ಕೊಲೆ ರಹಸ್ಯ ಬಯಲಾಗುತ್ತಾ ?
    ಬ್ರೇಕಿಂಗ್ ನ್ಯೂಸ್
    ಒಂದು ವಾಟ್ಸ್ಯಾಪ್ ಮೆಸೇಜ್… ಕೋರ್ಟ್ ವರೆಗೂ ಎಳೆದ ಶಾಕ್ ಘಟನೆಯ ಸುತ್ತ..
    ಜೀವನ್ಮರಣ ಹೋರಾಟದಲ್ಲೂ ಗೆಳೆಯರ ಬದುಕಿಸಿದ 14ರ ಬಾಲಕನ ರೋಚಕ  ಸ್ಟೋರಿ 
    ಬೈಂದೂರಿನಲ್ಲಿ ಹಳೆ ವೈಷಮ್ಯದಿಂದ ಮನೆಗೆ ನುಗ್ಗಿ ಹಲ್ಲೆಗೆ ಯತ್ನ
    ಪೊಲೀಸರಿಂದ ಕ್ರೂರವಾಗಿ ತಳಿಸಲ್ಪಟ್ಟ ವಿದ್ಯಾರ್ಥಿಗಳಲ್ಲಿ ಕ್ಷಮೆ ಕೇಳಿದ ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ
    ಜಮ್ಮು-ಕಾಶ್ಮೀರದಲ್ಲಿ ಖಾಕಿ ಮೇಲೆ ಖಾಕಿ ದಾಳಿ? ಹೈಡ್ರಾಮಾ: ಕರ್ನಲ್, ಮೇಜರ್ ಸೇರಿ 40 ಸೇನಾ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲು.
    ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್!
    ರಾಜ್ಯ ಬಿಜೆಪಿಯಲ್ಲಿ ಕೋಲಾಹಲ, ನಾಯಕರ ಒಗ್ಗೂಡಿಸುವಲ್ಲಿ ವಿಫಲ: ರಾಧಾ ಮೋಹನ್ ತಲೆದಂಡಕ್ಕೆ ಸಿದ್ಧತೆ
    ಸಂಸತ್ತಿನಲ್ಲಿ ಪ್ರಶ್ನೆ ಎದುರಿಸಲು ಆಗದೆ,  ಪ್ರಶ್ನೆಯನ್ನೇ ಕೇಳದಂತೆ ಮಾಡಿದರು – ರಾಹುಲ್ ಗಾಂಧಿ
    ಹೆಚ್.ಪಿ.ವಿ. ಚುಚ್ಚು ಮದ್ದಿನ ಬಗ್ಗೆ ಗೊಂದಲ ಬೇಡ: ಜಿಲ್ಲಾ ಆರೋಗ್ಯಾಧಿಕಾರಿ ಸ್ಪಷ್ಟನೆ
    ಆನ್ ಲೈನ್ ವಂಚನೆ ಶಿರ್ವದ ಯುವತಿಗೆ ಲಕ್ಷ ಲಕ್ಷ ಉಂಡೆನಾಮ… ಬ್ಯಾಂಕ್ ನಿಯಮ ವಂಚಕರಿಗೆ  ಸಹಕಾರಿ?
    ಮಂಗಳೂರು ಯೂಟ್ಯೂಬರ್‌ಗಳ ವಿರುದ್ಧ ಬಿಎನ್‌ಎಸ್ ಅಸ್ತ್ರ ಪ್ರಯೋಗಿಸಿದ ಖಾಕಿ!….
    ಫೇಸ್‌ಬುಕ್ ಜಾಹೀರಾತು ನಂಬಿ ₹32.68 ಲಕ್ಷ ಕಳೆದುಕೊಂಡ ಕಾರ್ಕಳದ ವ್ಯಕ್ತಿ!
    ಡೇಟಾ ಬೇಡವೇ? ಕರೆ-SMS ಬಳಕೆದಾರರಿಗೆ ಟ್ರಾಯ್‌ನಿಂದ ಹೊಸ ಆಯ್ಕೆ
    ಸಹೋದರಿಯ ಎಲುಬುಗಳೊಂದಿಗೆ ಬ್ಯಾಂಕ್ ಗೆ ಬಂದ ಅಣ್ಣ…!ದಾಖಲೆ ನಿಯಮಗಳ ನಡುವೆ ಸೋತ ಮಾನವೀಯತೆ”
    ರಾಜಕೀಯ ಬದಲಾಗುತ್ತಿದೆ -ಪಂಚರಾಜ್ಯ election ರಿಸಲ್ಟ್ “ಗೆಲುವು-ಸೋಲಿನ ಶಕ್ತಿ ಪಕ್ಷದಲ್ಲಲ್ಲ… ಜನರ ಕೈಯಲ್ಲಿ”
    NEET ಕಿಚ್ಚಿನ ನಡುವೆ ಶಿಕ್ಷಣ ಖಾತೆ ಪ್ರಹ್ಲಾದ್ ಜೋಶಿಗೆ…!ಈದ್ಗಾ ಹೋರಾಟದ ಮೈದಾನದಿಂದ ಕೇಂದ್ರದ ಮಹತ್ವದ ಹೊಣೆಗಾರಿಕೆಯವರೆಗೆ!
    ಹೆಸರು ಬದಲಾವಣೆ ಪಶ್ಚಿಮ ಬಂಗಾಳ ಪೆಂಡಿಂಗ್, ಕೇರಳ ಪ್ರಗತಿಯಲ್ಲಿ
    ಪಹಲ್ಗಾಮ್ ದಾಳಿಗೆ ವರ್ಷ : ಮೋದಿ ಶ್ರದ್ಧಾಂಜಲಿ, ಉಗ್ರರಿಗೆ ಎಚ್ಚರಿಕೆ
    ಇತಿಹಾಸ ಸೇರಿತು ಮಂಗಳೂರಿನ ಮೋತಿ ಮಹಲ್…..
    ಇಂದು ಬೆಳ್ಳಂ ಬೆಳಗ್ಗೆ ಪಲ್ಟಿ ಯಾದ ಬಸ್… ಒಬ್ಬ ಸಾವು ಹಲವರಿಗೆ ಗಾಯ
    2 ನಿಮಿಷ ತಡವಾದರೆ ಒಂದು ವರ್ಷ ಶಿಕ್ಷೆಯೇ? –ವಿದ್ಯಾರ್ಥಿಯ ಭವಿಷ್ಯಕ್ಕಿಂತ ಗಡಿಯಾರದ ಮುಳ್ಳು ದೊಡ್ಡದಾಯಿತೇ? 
    ಮಹಿಳಾ ಕ್ರಿಕೆಟ್ ವಿಶ್ವಕಪ್ 2026 ಆರಂಭ:ಗಾಯ, ನೋವು, ಟೀಕೆ… ಎಲ್ಲವನ್ನೂ ಮೀರಿ ವಿಶ್ವಕಪ್‌ನಲ್ಲಿ ಭಾರತದ ಮಹಿಳಾ ಪಡೆ!
    ನಿವೇಶನ ಮೋಸದ ಆರೋಪ: ಶಾಸಕ ಎಸ್ ಟಿ ಸೋಮಶೇಖರ್ ಬೆಂಬಲಿಗ ಕೇಬಲ್ ಕೃಷ್ಣನ ಮೇಲೆ ಹಿಗ್ಗಾಮುಗ್ಗಾ ಹಲ್ಲೆ..!
    ದೇಶಾದ್ಯಂತ ಇಂದು ಮೊಬೈಲ್‌ನಲ್ಲಿ ತುರ್ತು ಎಚ್ಚರಿಕೆ ಡ್ರಿಲ್ – ಗಾಬರಿ ಬೇಡ
    ದುರಂತ ಸಂಭವಿಸುವ ಮುನ್ನ ಮೆಸ್ಕಾಂ ಎಚ್ಚೆತ್ತುಕೊಳ್ಳುವುದೇ? ಮಂಗಳೂರಿನ PVS ರಸ್ತೆಯಲ್ಲೇ ಮೆಸ್ಕಾಂ ಟ್ರಾನ್ಸ್‌ಫಾರ್ಮರ್ ಅಡಿಯಲ್ಲೇ ಸುತ್ತಲೂ ಒಣ ಕಸದ ಪ್ಲಾಸ್ಟಿಕ್ ಟಾರ್ಪಾಲಿನ್ ಮತ್ತು ಬಾಕ್ಸ್ ರಾಶಿ!
    ಪತ್ರಿಕೋದ್ಯಮವೇ? ಪ್ರಚೋದನೆಯೇ? ಸುಳ್ಳು ಸುದ್ದಿಗೆ ಕೋಮು ಬಣ್ಣ ಆರೋಪದಲ್ಲಿ 7 ಮಾಧ್ಯಮಗಳ ವಿರುದ್ಧ FIR…!
    ನೀರು ಪೋಲು ಬೇಡ….ಈಗಲೇ ಎಚ್ಚೆತ್ತುಕೊಳ್ಳಿ!ಇಂದು ನಿರ್ಲಕ್ಷ್ಯ,ನಾಳೆ ಜಲ ಸಂಕಷ್ಟದ ಎಚ್ಚರಿಕೆ…!
    ಕಾರ್ಕಳದ ವೈದ್ಯಕೀಯ ವಿದ್ಯಾರ್ಥಿನಿ ಭೀಕರ  ಅಪಘಾತಕ್ಕೆ ಬಲಿ