📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಭರ್ಜರಿ ಬಿಜೆಪಿ ವಿಜಯೋತ್ಸವ ಬೆಂಗಳೂರಲ್ಲಿ ..!ಪ್ರಧಾನಿ ಮೋದಿ ಬರ್ತಿದ್ದಾರೆ.

    ಬೆಂಗಳೂರು, ಮೇ 10 ನಾಳೆ ಭಾನುವಾರ ದೇಶದ ಪ್ರಧಾನಮಂತ್ರಿ Narendra  Modi ಅವರು ಬೆಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ರಾಜಧಾನಿ ಸಂಪೂರ್ಣ ಕಂಗೊಳಿಸುತ್ತಿದೆ.

    ಹೌದು, ಪ್ರಧಾನಿ ನರೇಂದ್ರ ಮೋದಿ ಅವರು ಮೇ 10, 2026 ರ ಭಾನುವಾರದಂದು ಬೆಂಗಳೂರಿಗೆ ಆರ್ಟ್ ಆಫ್ ಲಿವಿಂಗ್‌ನ 45 ನೇ ವಾರ್ಷಿಕೋತ್ಸವದಲ್ಲಿ ಭಾಗವಹಿಸಲು ಭೇಟಿ ನೀಡುತ್ತಿರುವುದರಿಂದ, ಎಚ್‌ಎಎಲ್ ವಿಮಾನ ನಿಲ್ದಾಣದ ಬಳಿ ಮತ್ತು ಹಳೆಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಬೆಳಿಗ್ಗೆ 8 ರಿಂದ ಮಧ್ಯಾಹ್ನ 3 ರವರೆಗೆ ಸಂಚಾರ ನಿರ್ಬಂಧ ಹೇರಲಾಗಿದೆ.

    ಇತ್ತೀಚಿನ ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದ ಹಿನ್ನೆಲೆ ಕರ್ನಾಟಕ ಬಿಜೆಪಿ ವತಿಯಿಂದ ಪ್ರಧಾನಿ ಮೋದಿಗೆ ಭವ್ಯ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ. ಈ ಮಹತ್ವದ ಕಾರ್ಯಕ್ರಮ ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣ ಆವರಣದಲ್ಲಿ ನಡೆಯಲಿದ್ದು, ಸಾವಿರಾರು ಬಿಜೆಪಿ ಕಾರ್ಯಕರ್ತರು ಮತ್ತು ಅಭಿಮಾನಿಗಳು ಭಾಗವಹಿಸುವ ನಿರೀಕ್ಷೆಯಿದೆ.

    ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮಿಸುತ್ತಿರುವ ಸುದ್ದಿ ಕೇಳುತ್ತಿದ್ದಂತೆಯೇ ಕಾರ್ಯಕರ್ತರಲ್ಲಿ ಉತ್ಸಾಹ ಮತ್ತಷ್ಟು ಹೆಚ್ಚಾಗಿದೆ. ಕಾರ್ಯಕ್ರಮದಲ್ಲಿ ಮೋದಿ ಅವರು ಬಿಜೆಪಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಲಿದ್ದು, ರಾಷ್ಟ್ರ ರಾಜಕೀಯ ಹಾಗೂ ಅಭಿವೃದ್ಧಿ ಕುರಿತ ಮಹತ್ವದ ಸಂದೇಶ ನೀಡುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಭದ್ರತೆ ಕಟ್ಟುನಿಟ್ಟಾಗಿದ್ದು, ಸಂಚಾರದಲ್ಲೂ ತಾತ್ಕಾಲಿಕ ಬದಲಾವಣೆಗಳನ್ನು ಮಾಡಲಾಗಿದೆ.

    Also Read  MRPL ಸ್ಫೋಟ FIR… ದಾಖಲು…MRPL ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಆರೋಪ…!

    ಎಲ್ಲೆಲ್ಲಿ ಸಂಚಾರ ನಿರ್ಬಂಧ?

    ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಕೆಲವು ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ.

    • ಹಳೆ ವಿಮಾನ ನಿಲ್ದಾಣ ರಸ್ತೆಯಿಂದ ಡಿಜಿಸಿಎ ಕಚೇರಿ ವರೆಗೆ
    • ಹೆಚ್‌ಎಎಲ್ ವಿಮಾನ ನಿಲ್ದಾಣ ಗೇಟ್ ನಂ.30 ರಸ್ತೆಯಲ್ಲಿ ಅಂಬ್ರೆಲಾ ಜಂಕ್ಷನ್‌ನಿಂದ ಗೇಟ್ ನಂ.30 ವರೆಗೆ
    • ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿ ಎಸ್‌ಡಿ ರಸ್ತೆ ಜಂಕ್ಷನ್‌ನಿಂದ ಟ್ರಿನಿಟಿ ಜಂಕ್ಷನ್ ವರೆಗೆ

    ಇದಲ್ಲದೆ, ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ನೈಸ್ ರಸ್ತೆಯ ಕೆಲ ಭಾಗಗಳಲ್ಲಿ ಸಂಚಾರ ನಿರ್ಬಂಧ ಇರಲಿದೆ.

    ವಾಹನ ಸವಾರರಿಗೆ ಪರ್ಯಾಯ ಮಾರ್ಗಗಳು

    ನಗರದ ವಿವಿಧ ಭಾಗಗಳಿಂದ ಕನಕಪುರ ರಸ್ತೆಯತ್ತ ತೆರಳುವ ವಾಹನಗಳಿಗೆ ಪೊಲೀಸರು ಪರ್ಯಾಯ ಮಾರ್ಗಗಳನ್ನು ಸೂಚಿಸಿದ್ದಾರೆ.

    • ತುಮಕೂರು ರಸ್ತೆಯಿಂದ ಕನಕಪುರ ರಸ್ತೆಗೆ ತೆರಳುವವರು ಸಿ.ಎಂ.ಟಿ.ಐ ಜಂಕ್ಷನ್ ಬಳಿ ತಿರುಗಿ ರಾಜಕುಮಾರ್ ಪುಣ್ಯಭೂಮಿ ರಸ್ತೆಯ ಮೂಲಕ ಸಾಗಬೇಕು.
    • ಮಾಗಡಿ ರಸ್ತೆಯಿಂದ ಹೋಗುವವರು ಸುಮನ್ ಹಳ್ಳಿ ಜಂಕ್ಷನ್ ಮೂಲಕ ಮಾರ್ಗ ಬದಲಿಸಬೇಕು.
    • ಮೈಸೂರು ರಸ್ತೆ ಹಾಗೂ ಕೆಂಗೇರಿ ಭಾಗದಿಂದ ಹೋಗುವವರು ನಾಯಂಡಹಳ್ಳಿ ಜಂಕ್ಷನ್ ಮೂಲಕ ಔಟರ್ ರಿಂಗ್ ರಸ್ತೆಯನ್ನು ಬಳಸುವಂತೆ ಸೂಚಿಸಲಾಗಿದೆ.
    Also Read  ಮಹಿಳಾ ಕ್ರಿಕೆಟ್ ವಿಶ್ವಕಪ್ 2026 ಆರಂಭ:ಗಾಯ, ನೋವು, ಟೀಕೆ... ಎಲ್ಲವನ್ನೂ ಮೀರಿ ವಿಶ್ವಕಪ್‌ನಲ್ಲಿ ಭಾರತದ ಮಹಿಳಾ ಪಡೆ!

    ಸಾರ್ವಜನಿಕರಿಗೆ ವಿಶೇಷ ಪಾರ್ಕಿಂಗ್ ವ್ಯವಸ್ಥೆ

    ಮಾರತಹಳ್ಳಿ, ಕೆ.ಆರ್.ಪುರ ಮತ್ತು ವೈಟ್‌ಫೀಲ್ಡ್ ಭಾಗಗಳಿಂದ ಕಾರ್ಯಕ್ರಮಕ್ಕೆ ಬರುವವರು ಬೆಳಗ್ಗೆ 8.30ರೊಳಗಾಗಿ ಏರ್‌ಪೋರ್ಟ್ ಎಕ್ಸಿಟ್ ರಸ್ತೆ ಗೇಟ್ ನಂ.02 ಬಳಿ ಪ್ರಯಾಣಿಕರನ್ನು ಇಳಿಸಬೇಕು. ಬಳಿಕ ತಮ್ಮ ವಾಹನಗಳನ್ನು ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಸರ್ ಎಂ. ವಿಶ್ವೇಶ್ವರಯ್ಯ ಕಾಲೇಜು ಮೈದಾನದಲ್ಲಿ ಪಾರ್ಕ್ ಮಾಡಬಹುದಾಗಿದೆ.

    ಗಣ್ಯರು ಮತ್ತು ಹಿರಿಯ ಅಧಿಕಾರಿಗಳಿಗಾಗಿ ಹೆಚ್‌ಎಎಲ್ ಟ್ರಾನ್ಸ್‌ಪೋರ್ಟ್ ಡಿಪಾರ್ಟ್‌ಮೆಂಟ್ ಪಾರ್ಕಿಂಗ್ ಹಾಗೂ ಹೆಚ್‌ಎಎಲ್ ಬಸ್ ಯಾರ್ಡ್‌ನಲ್ಲಿ ವಿಶೇಷ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.

    ಭದ್ರತಾ ವ್ಯವಸ್ಥೆ ಕಠಿಣ

    ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ನಗರದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಹಲವು ಪೊಲೀಸ್ ಸಿಬ್ಬಂದಿ, ಕಮಾಂಡೋ ಪಡೆ ಹಾಗೂ ಟ್ರಾಫಿಕ್ ಪೊಲೀಸರು ವಿವಿಧ ಪ್ರದೇಶಗಳಲ್ಲಿ ನಿಯೋಜನೆಗೊಂಡಿದ್ದಾರೆ. ಹೆಚ್‌ಎಎಲ್ ವಿಮಾನ ನಿಲ್ದಾಣ ಸುತ್ತಮುತ್ತ ಕಟ್ಟುನಿಟ್ಟಿನ ತಪಾಸಣೆ ನಡೆಯುತ್ತಿದೆ.

    Also Read  ಶಾಲಾ ವಾಹನಗಳ ಸುರಕ್ಷತೆ ಬಗ್ಗೆ ಜೆಡಿಎಸ್ ಆಗ್ರಹ

    ಪ್ರಧಾನಿ ಮೋದಿ ಆಗಮನದಿಂದ ಬೆಂಗಳೂರಿನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಬಿಜೆಪಿ ಕಾರ್ಯಕರ್ತರಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ.

    ##NarendraModi #ModiInBengaluru #BJPKarnataka #BengaluruNews #HALAirport #ModiVisit #KarnatakaPolitics #BJPVictory #TrafficAlertBengaluru #ModiSpeech

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ದಂಡ ಕಟ್ಟದವರಿಗೆ ಕರೆಂಟ್ ಬಿಲ್ ಜೊತೆ ಟ್ರಾಫಿಕ್ ದಂಡ….! ಸುಪ್ರೀಂ ಕೋರ್ಟ್‌
    ದಸರಾ ರಜೆಯಲ್ಲೂ ಶಾಲೆ! ಮಳೆ ರಜೆ ಹೊಂದಾಣಿಕೆಗೆ ವಿಶೇಷ ತರಗತಿ
    ಟೀಕೆಗಳು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿನ ಸೌಂದರ್ಯ – ಖಾದರ್
    ಕಳುವಾದ ವಾಹನ ಸಮೇತ ಕಳ್ಳರ ಬಂಧನ…!
    ಎರಡು ಭೀಕರ ಕ್ಷಣಗಳು!ಒಂದು ರನ್‌ವೇಯಲ್ಲಿ ಸಾವು… ಮತ್ತೊಂದು ರನ್‌ವೇಯಲ್ಲಿ ಅದ್ಭುತ ಪಾರು!
    ಅಳಕೆ ಮಾರುಕಟ್ಟೆ ಬಳಿ ಕಸ ಸುರಿದ ಮಹಿಳೆಗೆ ₹1,000 ದಂಡ..ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆದರೆ ದಂಡ ಖಚಿತ! 
    ಸ್ವಯಂಪ್ರೇರಿತ ಲೈಂಗಿಕ ಕೆಲಸ -ವೇಶ್ಯಾವಾಟಿಕೆ ವೃತ್ತಿ ಅಪರಾಧವಲ್ಲ ಕಾನೂನುಬಾಹಿರವಲ್ಲ! -ಇತಿಹಾಸ ಸೃಷ್ಟಿಸಿದ ಸುಪ್ರೀಂ ಕೋರ್ಟ್!
    ಕರ್ನಾಟಕಕ್ಕೆ ಮಳೆ ಅಲರ್ಟ್‌ | ಸೆ.24ರಂದು ಕರಾವಳಿಗೆ ರೆಡ್‌ ಅಲರ್ಟ್‌
    ಮಂಗಳೂರಿನ ಆಡಳಿತ ವೈಫಲ್ಯ ಸರ್ಕಾರಿ ಕಚೇರಿಗಳಲ್ಲಿ ಸಾಲು…ಪಾಲಿಕೆ ಸೇವೆಗಳ ವಿಳಂಬ, ಭೂಪರಿವರ್ತನೆ ಗೊಂದಲ: ರಾಜ್ಯ ಸರ್ಕಾರದ ವಿರುದ್ಧ ಶಾಸಕ ವೇದವ್ಯಾಸ ಕಾಮತ್ ಆಕ್ರೋಶ ..
    ಡೊನಾಲ್ಡ್ ಟ್ರoಪ್ ಮುಂದೆ ಮಂಡಿಯೂರಿ ಕೂತ ಜಗತ್ತು!
    ಅಜ್ಜಿಯ ಚಿನ್ನಕ್ಕೇ ಕನ್ನ! ಮೊಮ್ಮಗ ಅರೆಸ್ಟ್….
    ದುರಂತ ಸಂಭವಿಸುವ ಮುನ್ನ ಮೆಸ್ಕಾಂ ಎಚ್ಚೆತ್ತುಕೊಳ್ಳುವುದೇ? ಮಂಗಳೂರಿನ PVS ರಸ್ತೆಯಲ್ಲೇ ಮೆಸ್ಕಾಂ ಟ್ರಾನ್ಸ್‌ಫಾರ್ಮರ್ ಅಡಿಯಲ್ಲೇ ಸುತ್ತಲೂ ಒಣ ಕಸದ ಪ್ಲಾಸ್ಟಿಕ್ ಟಾರ್ಪಾಲಿನ್ ಮತ್ತು ಬಾಕ್ಸ್ ರಾಶಿ!
    ತುಮಕೂರಿನಲ್ಲಿ 10 ಲಕ್ಷದ ವಜ್ರಾಭರಣ ಕದ್ದ ಈ ಮಹಾಚೋರನ ಕಥೆ ಕೇಳಿದರೆ ನಿಜಕ್ಕೂ ಶಾಕ್ ಆಗ್ತೀರಾ!”
    ಇಬ್ಬರ ಸಣ್ಣ ಜಗಳದ ಎಫೆಕ್ಟ್ ನೋಡಿ..ಕಡಬದಲ್ಲಿ ಹೈಡ್ರಾಮಾ!ಸಿಲ್ಲಿAngry ಮೂಡ್‌ನಲ್ಲಿ ಎಸೆದ car ಕೀ ಚರಂಡಿಗೆ…
    ಬಾಲ್ಯದ ಗೆಳೆಯನ ಬಲೆಗೆ ಬಿದ್ದ ವಾಯುಸೇನೆ ಅಧಿಕಾರಿಯ ಪತ್ನಿ?! ಲೈಂಗಿಕ ಬ್ಲ್ಯಾಕ್‌ಮೇಲ್,’ಕಬೂಲ್ ಹೈ’ ಹೇಳುವಂತೆ ಒತ್ತಾಯ!
    5.5 ವರ್ಷದ ಹೆಣ್ಣುಮಗಳ ಕೊಲೆ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್!ಮಗು ಸತ್ತು 3 ತಿಂಗಳು…ಆದ್ರೆ FIR ಇಲ್ಲ! 3 ಪೊಲೀಸರು ಸಸ್ಪೆಂಡ್
    ಸತೀಶ್’ ಆಗಿ ಹೋದವ, ‘ಸಲೀಂ’ ಆಗಿ ವಾಪಸ್ …!26 ವರ್ಷಗಳ ಬಳಿಕ ತಾಯಿಯ ಮಡಿಲಿಗೆ ಮರಳಿದ ಮಗನ ಭಾವುಕ ಕಥೆ
    AI ವಿಶ್ವವಿದ್ಯಾಲಯಕ್ಕೂ ಮೊದಲು AI ಪರಿಣಾಮಗಳ ಅಧ್ಯಯನ ಅಗತ್ಯವೇ?
    ದ.ಕ ಜಿಲ್ಲಾಡಳಿತದ ಆದೇಶ “ಮಳೆ ರಜೆ “ಉಲ್ಲಂಘಿಸಿ ರಜೆ ಕೊಟ್ಟರೂ class ನಡೆಸಿದ ಹತ್ತಕ್ಕೂ ಹೆಚ್ಚು ಶಾಲೆ-ಕಾಲೇಜುಗಳು ! ಇದೀಗ ನೋಟಿಸ್ ಶಾಕ್..!
    ಶಿರಸಿ ಮಾರಿಯಮ್ಮನ ಜಾತ್ರೆ ಪ್ರಾರಂಭ
    “ಬರ್ಕಾಸ್ತು ಘಟಕಕ್ಕೆ ‘ಬೋಗಸ್ ನಾಯಕತ್ವ’ – ಕರವೇ ಮಹಿಳಾ ಘಟಕದಲ್ಲಿ ಭಿನ್ನಮತ ಸ್ಫೋಟ!”
    ಮರಣದಂಡನೆ ಶಿಕ್ಷೆಗೆ ಈಡಾದ  ತಮಿಳುನಾಡು   ಪೊಲೀಸರು
    ಮಂಗಳೂರು ಏರ್‌ಪೋರ್ಟ್ ಬಳಿ ಬರ್ತಿದೆ ಲಕ್ಸುರಿ ಇಂಟರ್‌ನ್ಯಾಷನಲ್ ಹೋಟೆಲ್!
    21 ದಿನ ಹಸಿದ ಹೋರಾಟಗಾರ ಆಸ್ಪತ್ರೆಗೆ..ಸರ್ಕಾರ ಏಕೆ ಇನ್ನೂ ಮೌನ!?????ಯುವಜನರ ಆಕ್ರೋಶದ ಕಟ್ಟೆ ಒಡೆಯುವ ಮೊದಲೇ ಮೋದಿ ಸರ್ಕಾರ ಎಚ್ಚೆತ್ತುಕೊಳ್ಳುತ್ತಾ….!!??
    💊 ಜೀವರಕ್ಷಕ ಕ್ಯಾನ್ಸರ್ ಔಷಧಗಳು ದುಬಾರಿ: ಏಕೆ ಬೆಲೆ ಹೆಚ್ಚಳ ಅನಿವಾರ್ಯವಾಯಿತು?ಅಸಲಿ ಕಾರಣ ಗೊತ್ತೇ?
    ಸ್ಮಾರ್ಟ್‌ಫೋನ್ ಅಗ್ಗವಾಗುತ್ತಾ? ಮೊಬೈಲ್ ಖರೀದಿಗೆ ಇದು ‘Wait & Watch’ ಟೈಮ್!
    ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ 400 ಬೆಡ್‌ಗಳ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್…!
    ‘ಅಮರ್ ಜವಾನ್ ಪಾರ್ಕ್’ಗೆ ಯುದ್ಧ ಟ್ಯಾಂಕ್, ಯುದ್ಧವಿಮಾನ ಸ್ಥಾಪನೆಗೆ ರಕ್ಷಣಾ ಸಚಿವರಿಗೆ ಸಂಸದೆ ಪ್ರಭಾ ಮಲ್ಲಿಕಾರ್ಜುನ ಮನವಿ
    ಮೂಡಬಿದಿರೆ ಇನ್‌ಸ್ಪೆಕ್ಟರ್ ಪ್ರಕರಣಕ್ಕೆ ಟ್ವಿಸ್ಟ್: ಆರೋಪ ಮಾಡಿದ ಮಹಿಳೆಯ ವಿರುದ್ಧವೇ ಸಹೋದರಿಯ ಬಾಂಬ್!
    ಎಲಾನ್ ಮಸ್ಕ್: ವಿಶ್ವದ ಮೊದಲ ಟ್ರಿಲಿಯನೇರ್‌ನಿಂದ ಇನ್ನೂ ಎತ್ತರದತ್ತ!