📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಮಂಗಳೂರಿನ ಟ್ರಾಫಿಕ್‌ಗೆ ಬ್ರೇಕ್ ಹಾಕಲು ಜಿಲ್ಲಾಡಳಿತದ ಮಾಸ್ಟರ್ ಪ್ಲಾನ್!ಯಾವೆಲ್ಲ ಬದಲಾವಣೆ ಬರಲಿದೆ?

    ಮಂಗಳೂರು ಸಂಚಾರ ಸಮಸ್ಯೆಗಳಿಗೆ ಜಿಲ್ಲಾಡಳಿತದ ತುರ್ತು ಕ್ರಮ: ಜಂಕ್ಷನ್‌, ವೃತ್ತಗಳ ಪರಿಶೀಲನೆಗೆ ಸೂಚನೆ

    ಮಂಗಳೂರು ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಜಂಕ್ಷನ್‌ಗಳು, ವೃತ್ತಗಳು ಮತ್ತು ಮುಖ್ಯ ರಸ್ತೆಗಳಲ್ಲಿ ವಾಹನ ಸಂಚಾರ ಸುಗಮಗೊಳಿಸಲು ಜಿಲ್ಲಾಡಳಿತ ತುರ್ತು ಕ್ರಮ ಕೈಗೊಳ್ಳಲು ಮುಂದಾಗಿದೆ. ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅವರು ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಈ ಕುರಿತು ಸಂಬಂಧಿತ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದ್ದಾರೆ.

    ಜಿಲ್ಲೆಯ ಹಲವು ಕಡೆಗಳಲ್ಲಿ ಅಕ್ರಮ ಪಾರ್ಕಿಂಗ್‌, ರಸ್ತೆ ಒತ್ತುವರಿ ಹಾಗೂ ಬೀದಿ ವ್ಯಾಪಾರದಿಂದ ವಾಹನ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗುತ್ತಿದೆ ಎಂಬ ಸಾರ್ವಜನಿಕ ದೂರುಗಳು ಹೆಚ್ಚಾಗಿವೆ. ಈ ಹಿನ್ನೆಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳು, ಪೊಲೀಸ್ ಇಲಾಖೆ ಹಾಗೂ ಆರ್‌ಟಿಒ ಅಧಿಕಾರಿಗಳು ಜಂಟಿಯಾಗಿ ಸ್ಥಳ ಪರಿಶೀಲನೆ ನಡೆಸಿ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

    ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಮಾಹಿತಿ ಪ್ರಕಾರ, ಹಳೆಯಂಗಡಿಯಿಂದ ತಲಪಾಡಿವರೆಗೆ ಹಲವು ಪ್ರಮುಖ ಜಂಕ್ಷನ್‌ಗಳಲ್ಲಿ ಸಂಚಾರ ನಿಯಂತ್ರಣಕ್ಕಾಗಿ ಟ್ರಾಫಿಕ್ ಸಿಗ್ನಲ್‌, ಝೀಬ್ರಾ ಕ್ರಾಸಿಂಗ್‌, ವೇಗ ನಿಯಂತ್ರಕಗಳು ಸೇರಿದಂತೆ ಹಲವು ಸುರಕ್ಷತಾ ಕ್ರಮಗಳನ್ನು ಜಾರಿಗೊಳಿಸಲಾಗಿದೆ. ಅಪಘಾತಗಳಿಗೆ ಕಾರಣವಾಗುತ್ತಿದ್ದ ಅನೇಕ ಡಿವೈಡರ್ ಕ್ರಾಸಿಂಗ್‌ಗಳನ್ನು ಸಹ ಮುಚ್ಚಲಾಗಿದೆ.

    Also Read  ಖಾಸಗಿ ಆಸ್ಪತ್ರೆಯ ಜೊತೆಗಿನ ಒಪ್ಪಂದ ರದ್ದುಪಡಿಸಲು ಆಗ್ರಹಿಸಿ ಪ್ರತಿಭಟನೆ

    ಬೈಕಂಪಾಡಿ ಕೈಗಾರಿಕಾ ಪ್ರದೇಶಕ್ಕೆ ರಾಷ್ಟ್ರೀಯ ಹೆದ್ದಾರಿಯಿಂದ ಸಂಪರ್ಕ ಕಲ್ಪಿಸುವ ಅಂಡರ್‌ಪಾಸ್ ಕಾಮಗಾರಿ ಪ್ರಗತಿಯಲ್ಲಿದ್ದು, ನಂತೂರು ಜಂಕ್ಷನ್ ಅಗಲೀಕರಣ ಕಾಮಗಾರಿ ನಡೆಯುತ್ತಿದೆ. ಜೊತೆಗೆ ಕೆಪಿಟಿಯಿಂದ ನಂತೂರುವರೆಗೆ ಸರ್ವಿಸ್ ರಸ್ತೆ ನಿರ್ಮಾಣ ಕಾರ್ಯವೂ ಮುಂದುವರಿದಿದೆ.

    ಸಭೆಯಲ್ಲಿ ಸಮಿತಿ ಸದಸ್ಯರು ಕಲ್ಲಾಪು, ಜೆಪ್ಪಿನಮೊಗರು ಹಾಗೂ ತೊಕ್ಕೊಟ್ಟು ಜಂಕ್ಷನ್‌ಗಳಲ್ಲಿ ಹೆದ್ದಾರಿ ಅತಿಕ್ರಮಿಸಿ ನಡೆಯುತ್ತಿರುವ ವ್ಯಾಪಾರ ಚಟುವಟಿಕೆಗಳನ್ನು ತಕ್ಷಣ ತೆರವುಗೊಳಿಸುವಂತೆ ಒತ್ತಾಯಿಸಿದರು.

    ನಗರದಲ್ಲಿ ಮೀನಿನ ಲಾರಿಗಳಿಂದ ರಸ್ತೆಗೆ ನೀರು ಸೋರಿಕೆಯಾಗುತ್ತಿರುವ ಬಗ್ಗೆ ನಿರಂತರ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಈ ವಿಷಯವೂ ಸಭೆಯಲ್ಲಿ ಚರ್ಚೆಗೆ ಬಂದಿತು. ದುರ್ವಾಸನೆ ಹಾಗೂ ರಸ್ತೆ ಸುರಕ್ಷತೆಗೆ ಇದು ಸಮಸ್ಯೆಯಾಗುತ್ತಿರುವುದರಿಂದ ತಲಪಾಡಿ ಮತ್ತು ಮುಲ್ಕಿ ಭಾಗಗಳಲ್ಲಿ ತ್ಯಾಜ್ಯ ನೀರು ವಿಸರ್ಜನೆಗಾಗಿ ಸೆಪ್ಟಿಕ್ ಟ್ಯಾಂಕ್ ನಿರ್ಮಿಸುವ ಪ್ರಸ್ತಾವನೆ ಮುಂದಿಡಲಾಗಿದೆ. ಇದರಿಂದ ರಸ್ತೆಗೆ ನೀರು ಸೋರಿಕೆಯಾಗುವುದನ್ನು ತಡೆಯಬಹುದು ಎಂದು ಉದ್ಯಮಿಗಳು ಅಭಿಪ್ರಾಯಪಟ್ಟಿದ್ದಾರೆ.

    ಮಂಗಳೂರಿನ ಸ್ಟೇಟ್ ಬ್ಯಾಂಕ್ ಹ್ಯಾಮಿಲ್ಟನ್ ವೃತ್ತವನ್ನು ವೈಜ್ಞಾನಿಕವಾಗಿ ಮರು ವಿನ್ಯಾಸಗೊಳಿಸುವ ಕುರಿತು ಎನ್‌ಐಟಿಕೆ ಈಗಾಗಲೇ ವರದಿ ಸಲ್ಲಿಸಿದೆ. ಅದರಂತೆ ಸಿದ್ಧಪಡಿಸಿರುವ ನಕ್ಷೆಯನ್ನು ಪರಿಶೀಲಿಸಿ ಶೀಘ್ರದಲ್ಲಿ ಕಾಮಗಾರಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

    Also Read  ಕಲ್ಲಂಗಡಿ ಹಣ್ಣು ತಪ್ಪು ಮಾಡಲಿಲ್ಲ… ಆದರೆ ಅಪರಾಧಿ ಸುದ್ದಿ ದೊಡ್ಡದಾಗಿದೆ!

    ಪಂಪ್‌ವೆಲ್‌ನಲ್ಲಿ ನಿರ್ಮಾಣವಾಗಲಿರುವ ಬಸ್ ನಿಲ್ದಾಣ ಯೋಜನೆಗೂ ವೇಗ ನೀಡಲು ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದಾರೆ. ಮೀಸಲಿಟ್ಟಿರುವ 7 ಎಕರೆ ಜಾಗದಲ್ಲಿ 2 ಎಕರೆ ಜಮೀನನ್ನು ಕೆಎಸ್‌ಆರ್‌ಟಿಸಿಗೆ ಹಾಗೂ ಉಳಿದ 5 ಎಕರೆ ಜಾಗವನ್ನು ಖಾಸಗಿ ಬಸ್ ನಿಲ್ದಾಣ ನಿರ್ಮಾಣಕ್ಕೆ ಬಳಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಲಾಗಿದೆ.

    ಹಂಪನಕಟ್ಟೆ, ಸ್ಟೇಟ್ ಬ್ಯಾಂಕ್ ಹಾಗೂ ಸೆಂಟ್ರಲ್ ಮಾರ್ಕೆಟ್ ಪ್ರದೇಶಗಳಲ್ಲಿ ಫುಟ್‌ಪಾತ್ ಅತಿಕ್ರಮಿಸಿ ನಡೆಯುತ್ತಿರುವ ಬೀದಿ ವ್ಯಾಪಾರ ವಿರುದ್ಧ ಮಹಾನಗರಪಾಲಿಕೆ ನಿರಂತರ ಕಾರ್ಯಾಚರಣೆ ನಡೆಸುತ್ತಿದೆ. ಪಾಲಿಕೆಯ ಅಧಿಕೃತ ಗುರುತಿನ ಚೀಟಿ ಹೊಂದಿರುವವರನ್ನು ಹೊರತುಪಡಿಸಿ ಇತರರಿಗೆ ವ್ಯಾಪಾರಕ್ಕೆ ಅವಕಾಶವಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

    ಮಂಗಳಾದೇವಿಯಲ್ಲಿ ಹೊಸದಾಗಿ ನಿರ್ಮಿಸಿರುವ ಬಸ್ ನಿಲ್ದಾಣದಿಂದ ಆ ಭಾಗದ ಎಲ್ಲಾ ಬಸ್‌ಗಳ ಸಂಚಾರ ಆರಂಭಿಸಲು ಬಸ್ ಮಾಲೀಕರೊಂದಿಗೆ ಸಭೆ ನಡೆಸಲಾಗಿದ್ದು, ಶೀಘ್ರದಲ್ಲೇ ಕಾರ್ಯಾಚರಣೆ ಆರಂಭವಾಗುವ ನಿರೀಕ್ಷೆಯಿದೆ.

    ಇದೇ ವೇಳೆ ಅಪಘಾತಗಳಿಗೆ ಕಾರಣವಾಗುತ್ತಿರುವ ಅಪಾಯಕಾರಿ ಸ್ಥಳಗಳ ಬಗ್ಗೆ ಪೊಲೀಸ್ ಇಲಾಖೆ ರಾಷ್ಟ್ರೀಯ ಹೆದ್ದಾರಿ ಹಾಗೂ ಲೋಕೋಪಯೋಗಿ ಇಲಾಖೆಗೆ ವರದಿ ಸಲ್ಲಿಸಿದ್ದು, ಕೂಡಲೇ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಒತ್ತಾಯಿಸಿದೆ.

    Also Read  ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಪುಟ್ಟ ಜೀವವೊಂದು ಬಲಿ.. ಕೆಲವು ಮಕ್ಕಳಿಗೆ ಗಾಯ..

    384 ಚಾಲನಾ ಪರವಾನಗಿಗಳು ಅಮಾನತು

    ಸಭೆಯಲ್ಲಿ ನೀಡಲಾದ ಅಂಕಿಅಂಶಗಳ ಪ್ರಕಾರ, 2025ರಿಂದ 2026ರ ಏಪ್ರಿಲ್ 30ರವರೆಗೆ ಜಿಲ್ಲೆಯಲ್ಲಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದ 1,855 ಪ್ರಕರಣಗಳು ದಾಖಲಾಗಿವೆ. ಶಾಲಾ ವಾಹನಗಳಲ್ಲಿ ಮಿತಿಮೀರಿದ ಮಕ್ಕಳ ಸಾಗಣೆ ಮಾಡಿದ 99 ಪ್ರಕರಣಗಳು, ಟಿಂಟೆಡ್ ಗ್ಲಾಸ್ ಅಳವಡಿಸಿದ 12 ಪ್ರಕರಣಗಳು, ಕರ್ಕಶ ಹಾರ್ನ್ ಬಳಕೆಯ 201 ಪ್ರಕರಣಗಳು ಹಾಗೂ ಮಿತಿಮೀರಿದ ಭಾರ ಸಾಗಣೆ ಮಾಡಿದ 184 ಪ್ರಕರಣಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

    ಇದಲ್ಲದೆ, 2025ರಿಂದ ಇಲ್ಲಿಯವರೆಗೆ ಜಿಲ್ಲೆಯಲ್ಲಿ 433 ಮಾರಣಾಂತಿಕ ಅಪಘಾತ ಪ್ರಕರಣಗಳು ದಾಖಲಾಗಿದ್ದು, ಇದರ ಸಂಬಂಧ 384 ಚಾಲನಾ ಪರವಾನಗಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ಸಭೆಯಲ್ಲಿ ಮಾಹಿತಿ ನೀಡಲಾಗಿದೆ.

    ಒಟ್ಟಾರೆಯಾಗಿ, ಮಂಗಳೂರು ನಗರ ಮತ್ತು ಜಿಲ್ಲೆಯ ಸಂಚಾರ ವ್ಯವಸ್ಥೆಯನ್ನು ಸುಧಾರಿಸಲು ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ಇತರ ಸಂಬಂಧಿತ ಸಂಸ್ಥೆಗಳು ಸಮನ್ವಯದೊಂದಿಗೆ ತ್ವರಿತ ಕ್ರಮ ಕೈಗೊಳ್ಳುವ ನಿರ್ಧಾರಕ್ಕೆ ಬಂದಿವೆ.

    ##MangaloreTraffic #DakshinaKannada #RoadSafety #TrafficUpdate #MangaloreNews #DarshanHV

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಸಾಮಾಜಿಕ ಜಾಲತಾಣದ ಹೊಸ ಆತಂಕ!ಕೆಲಸ ಕಡಿಮೆ, Entertainment ಹೆಚ್ಚು! Kids‌ನಿಂದ Adultsವರೆಗೆ Phone ಜಾಲ…!
    “ಆ್ಯಕ್ಷನ್ ಸಿಎಂ” ಡಿಕೆ ಶಿವಕುಮಾರ್ ತಾಳ್ಮೆಯಿಂದ ತಾಕತ್ತಿನವರೆಗೆ…ಆಡಳಿತದ ಅಬ್ಬರ ಶುರು!ಏನೇನ್ ಹೇಳಿದ್ರು ?ಕರ್ನಾಟಕದಲ್ಲಿ ಹೊಸ ಆಡಳಿತ ಶೈಲಿಯ ಆರಂಭವೇ?
    ಶಾಲಾ ವಾಹನಗಳ ಸುರಕ್ಷತೆ ಬಗ್ಗೆ ಜೆಡಿಎಸ್ ಆಗ್ರಹ
    “ಶಾಲಾ ಬಸ್‌ನಲ್ಲಿ ಪ್ರಯಾಣಿಸುವ ಪ್ರತಿಯೊಂದು ಮಗುವಿನ ಸುರಕ್ಷತೆಗೆ ಶಾಲೆಯೇ ಹೊಣೆ!”
    ವಾಲ್ಮೀಕಿ ಹಗರಣಕ್ಕೆ ನಾಗೇಂದ್ರ ತಲೆದಂಡ? ರಾಜೀನಾಮೆ ಚರ್ಚೆ ನಡುವೆ ಕಾಂಗ್ರೆಸ್‌ಗೆ ಹೊಸ ಸಂಕಷ್ಟ!
    Political Heatwave 2026:ದಕ್ಷಿಣದಲ್ಲಿ ಅಧಿಕಾರ ಆಟ, ಅಸ್ಸಾಂನಲ್ಲಿ ಅಬ್ಬರ..!
    ಡೈಪರ್‌ನಲ್ಲಿ ಚಿನ್ನ! ಚಿನ್ನ ಕಳ್ಳಸಾಗಣೆಗೆ ಏನೆಲ್ಲಾ‘ಐಡಿಯಾ’? 8 ತಿಂಗಳ ಮಗುವನ್ನೂ ಬಿಟ್ಟಿಲ್ಲ!
    ಸಂಸದ ಸಂಜಯ್ ಅರೋರ ಬಂಧನ…. ಉಳಿದ ಮೂರು ಸಂಸದರನ್ನು ಸೆಳೆಯಲು ಈ ಅನೈತಿಕ ಮಾರ್ಗ ಎಂದು ಎಎಪಿ.
    ಪೆಟ್ರೋಲ್ ಡೀಸೆಲ್ ದರ ಏರಿಕೆ ತಡೆಯಲು ಕೇಂದ್ರದ ಮಹತ್ವದ ಕ್ರಮ 
    ಟೂರ್ plan ಮಾಡ್ತಿದ್ದೀರಾ ?ಸ್ಥಳವೇ ಇಲ್ಲದ address ಗೆ online book ಮಾಡಿ ಮೋಸ ಹೋಗ್ಬೇಡಿ…
    ಬಂಗಾಳದಲ್ಲಿ ಬಿಜೆಪಿಯ ಯುದ್ಧೋನ್ಮಾದ, ದೀದಿಯ ರಚ್ಚೆ…
    ಹನಿಟ್ರ್ಯಾಪ್ ಕ್ವೀನ್ ಜೀನತ್ ಇಬ್ರಾಹಿಂ ಗೆ ನ್ಯಾಯಾಂಗ ಬಂಧನ- ಟ್ರ್ಯಾಪ್ ನಲ್ಲಿ ಹೊಸ ಹೊಸ ಹೆಸರುಗಳು !!!?
    ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಮತ್ತು ನಗರ ಸಭೆ ಎರಡೂ ಕಮಾಯಿಗೆ ಕುಳಿತು ಕೊಂಡಿದೆಯಾ?
    ದೇವಳದ ಗೋಲ್ಮಾಲ್ ತಡೆಗೆ ಉಪ-ಮುಖ್ಯಮಂತ್ರಿ ಬುಲಾವ್!
    ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹಿಗ್ಗಾಮುಗ್ಗ ಜಾಡಿಸಿದ ಹೆಚ್ ವಿಶ್ವನಾಥ್
    ಮಂಗಳೂರು ದಸರಾ ಮೆರವಣಿಗೆಗೆ ವಿದ್ಯುತ್ ತಂತಿಗಳ ಸಮಸ್ಯೆಗೆ ಗುಡ್‌ಬೈ!
    ವಿಮಾನ ಪ್ರಯಾಣ ದುಬಾರಿ: ಟಿಕೆಟ್ ದರ ಏರಿಕೆ ವಿರುದ್ಧ PIL: ಸರ್ಕಾರಕ್ಕೆ ಸುಪ್ರೀಂ ನೋಟಿಸ್
    ಬಾಗಲಕೋಟೆ ಜಿಲ್ಲೆ ಕೆರೂರು ಠಾಣೆಯಲ್ಲಿ ಪಿಎಸ್ಐ & ಪೇದೆ ₹1.70 ಲಕ್ಷ ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ!
    ಥಾರ್ ಕಾರ್ ನಲ್ಲಿ ಬಂದು ದೇವಸ್ಥಾನದಲ್ಲಿ ವಿಕೃತಿ ಮೆರೆದ ಕಿಡಿಗೇಡಿ!
    ಸಚಿವ ಜಮೀರ್ ಅಹಮದ್ ಹಚ್ಚಿದ ಪಟಾಕಿಗೆ ಕಾಂಗ್ರೆಸ್ ಕೋಟೆಯಲ್ಲಿ ಬಿರುಕು..!?
    ಇಎಸ್ಐ ರೋಗಿಗಳಿಗೆ ತೊಂದರೆ ನೀಡದೇ ಚಿಕಿತ್ಸೆ ನೀಡಿ ಎಂದ ಕೇಂದ್ರ ಸರ್ಕಾರ- ಸಚಿವೆಗೆ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಕೃತಜ್ಞತೆ
    ಫ್ಲೈದುಬೈ ವಿಮಾನ ಘಟನೆ ಪ್ರಾರ್ಥನೆ ನೆಪದಲ್ಲಿ ಹಮ್ಮಾಮಿ ದಾಳಿ; ಅಲ್‌ಖೈದಾ ಬೆಂಬಲ-ನಂಟು ಬಹಿರಂಗ ! ಇತ್ತ ಸ್ಮಿತ್ ಮಚ್ಚಾರ್‌ಗೆ ಇಸ್ರೇಲ್ ವಿಶೇಷಗೌರವ ಮೋದಿ ಜೊತೆಗೆ ಆಹ್ವಾನ…!!
    ಗ್ಯಾಸ್ ಅಭಾವ ಮತ್ತು ಬೆಲೆ ಏರಿಕೆ, ಸುಳ್ಳು ಎನ್ನುತ್ತಿದೆ-HPCL
    ಪೆರ್ವಾಜೆ ಮಹಾಲಿಂಗೇಶ್ವರ ದೇವಸ್ಥಾನದ ಚೆಕ್‌ಗೆ ನಕಲಿ ಸಹಿ! ನಕಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದ ಮಾಜಿ ಸಿಬ್ಬಂದಿ…
    ಮಂಗಳೂರು -ವೆನ್ಲಾಕ್ ಮಾಸ್ಟರ್ ಪ್ಲ್ಯಾನ್…!
    ಭೀಕರ ಅಪಘಾತಕ್ಕೆ ಸ್ಥಳೀಯ ನಾಯಕ ಸೇರಿ ಇಬ್ಬರು ದುರ್ಮರಣ 
    ಕೊನೆಕ್ಷಣದ ಹೃದಯ ಕಲುಕುವ ಹರೀಶ್ ರಾಣಾ – ದಯಾಮರಣvedio
    ಇರಾನ್ ದಾಳಿಗೆ ಬೆಂಜಿಮನೇತನ್ಯಹೋ ಕೊಲ್ಲಲ್ಪಟ್ಟಿದ್ದಾರಾ?
    TVKಗೆ ಟಕ್ಕರ್? ಅಜಿತ್ ಫ್ಯಾನ್ಸ್‌ TMMK ಎಂಟ್ರಿ!ದಳಪತಿಗೆ ಎದುರಾಗಿ ಅಜಿತ್ ಫ್ಯಾನ್ಸ್‌ ಪಕ್ಷ!
    ಉದ್ಯಮಿ ಧೀರಜ್ ಜೈನ್ ಗಪ್ ಚುಪ್ಪಾಗಿ ನಡೆಸಿದ ಮಾನವೀಯ ನಡೆಗೆ ಸಾಕ್ಷಿ ನೋಡಿ