📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಮಂಗಳೂರು ದಸರಾ ರಜೆ ಇಲ್ಲ : ಕಾಲೇಜು ವಿರುದ್ಧ ಬೀದಿಗಿಳಿದ ವಿದ್ಯಾರ್ಥಿಗಳು! ಪೊಲೀಸ್ ಕ್ರಮಕ್ಕೆ ವಿಎಚ್‌ಪಿ ಖಂಡನೆ!

    ಮಂಗಳೂರು: ದಸರಾ ಸಂಭ್ರಮದ ನಡುವೆ ಪರೀಕ್ಷೆ ನಡೆಸಿದ ಸೈಂಟ್ ಆಗ್ನೆಸ್ ಕಾಲೇಜು ಆಡಳಿತದ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ

    ಮೈಸೂರು ಮತ್ತು ಮಂಗಳೂರು ದಸರಾ ಸಂಭ್ರಮದಲ್ಲಿರುವಾಗ, ಮಂಗಳೂರಿನ ಬೆಂದೂರ್‌ವೆಲ್‌ನ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ದಸರಾ ರಜೆ ನೀಡದೆ ಪದವಿ ಸೆಮಿಸ್ಟರ್ ಪರೀಕ್ಷೆ ನಡೆಸುತ್ತಿರುವುದಕ್ಕೆ ವಿದ್ಯಾರ್ಥಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಅಕ್ಟೋಬರ್ 12ರಿಂದ 28ರವರೆಗೆ ಪರೀಕ್ಷೆಗಳನ್ನು ಆಯೋಜಿಸಿರುವುದನ್ನು ಖಂಡಿಸಿದ ನೂರಾರು ವಿದ್ಯಾರ್ಥಿಗಳು, ಪರೀಕ್ಷೆ ಬಹಿಷ್ಕರಿಸಿ ಕಾಲೇಜಿನ ಪ್ರವೇಶದ್ವಾರದ ಎದುರು ಪ್ರತಿಭಟನೆ ನಡೆಸಿದರು.

    ದಸರಾ ಹಬ್ಬದ ಆಚರಣೆಗಳಲ್ಲಿ ಭಾಗವಹಿಸಲು ಅವಕಾಶವಾಗುವಂತೆ ಪರೀಕ್ಷೆಗಳನ್ನು ಮುಂದೂಡಬೇಕೆಂದು ವಿದ್ಯಾರ್ಥಿಗಳು ಮನವಿ ಸಲ್ಲಿಸಿದ್ದರೂ, ಕಾಲೇಜು ಆಡಳಿತ ಸ್ಪಂದಿಸಿಲ್ಲ ಎಂಬುದು ಪ್ರತಿಭಟನಾಕಾರರ ಆರೋಪ. ವಿದ್ಯಾರ್ಥಿಗಳ ಹೋರಾಟಕ್ಕೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಬೆಂಬಲ ನೀಡಿದ್ದು, ಈ ಸಂಬಂಧ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೂ ದೂರು ಸಲ್ಲಿಸಲಾಗಿದೆ.

    Also Read  ಕರ್ನಾಟಕದಲ್ಲಿ ಯುಗಾದಿ ಹಬ್ಬಕ್ಕೂ ಮುನ್ನವೇ  ಮುಂಗಾರು  ಮಳೆರಂಗು – 5 ಜಿಲ್ಲೆಗಳಲ್ಲಿ ಆಲಿಕಲ್ಲು ಅಬ್ಬರ!

    ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯದ ಆರೋಪ

    ಪ್ರತಿಭಟನೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ಪೊಲೀಸರು ಬಲಪ್ರಯೋಗ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಇದನ್ನು ವಿಶ್ವ ಹಿಂದೂ ಪರಿಷತ್‌ (ವಿಎಚ್‌ಪಿ) ತೀವ್ರವಾಗಿ ಖಂಡಿಸಿದೆ. ವಿದ್ಯಾರ್ಥಿಗಳ ಮೇಲೆ ಕೈ ಮಾಡಲು ಆದೇಶ ನೀಡಿದವರು ಯಾರು ಎಂಬುದಕ್ಕೆ ಪೊಲೀಸ್ ಇಲಾಖೆ ಮತ್ತು ಆಡಳಿತ ಯಂತ್ರ ಸ್ಪಷ್ಟನೆ ನೀಡಬೇಕು ಎಂದು ವಿಎಚ್‌ಪಿ ಆಗ್ರಹಿಸಿದೆ. ದೌರ್ಜನ್ಯ ನಡೆಸಿದರೆಂದು ಆರೋಪಿಸಲಾದ ಅಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸಬೇಕು ಹಾಗೂ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದು ಪ್ರಕಟಣೆಯಲ್ಲಿ ಒತ್ತಾಯಿಸಿದೆ.

    ಶಾಸಕರಾದ ಭರತ್ ಶೆಟ್ಟಿ, ವೇದವ್ಯಾಸ ಕಾಮತ್ ಹಾಗೂ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಕೂಡ ಕಾಲೇಜಿನ ಕ್ರಮವನ್ನು ಖಂಡಿಸಿದ್ದಾರೆ ಎಂದು ವರದಿಯಾಗಿದೆ.

    Also Read  7 ಲಕ್ಷದ ಸುಪಾರಿ ನೀಡಿ ತಾಯಿಯನ್ನು accident ಮಾಡಿ ಕೊಂದ ಮಗಳ ವಿಕೃತ ಘಟನೆ..!

    ಹಬ್ಬದ ರಜೆ, ಪರೀಕ್ಷಾ ವೇಳಾಪಟ್ಟಿ ಮತ್ತು ವಿದ್ಯಾರ್ಥಿಗಳ ದಸರಾ ಸಂಭ್ರಮಕ್ಕೆ ಅಡ್ಡಿ ಈ ವಿವಾದ ಈಗ ಸಾರ್ವಜನಿಕ ಚರ್ಚೆಗೆ ಗ್ರಾಸವಾಗಿದೆ. ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಸಂಯಮದಿಂದ ನಿರ್ವಹಿಸುವುದರ ಜೊತೆಗೆ, ಪರೀಕ್ಷಾ ದಿನಾಂಕದ ಕುರಿತು ಕಾಲೇಜು ಆಡಳಿತ ಸ್ಪಷ್ಟನೆ ನೀಡಬೇಕು. ಪೊಲೀಸ್ ಬಲಪ್ರಯೋಗದ ಆರೋಪದ ಬಗ್ಗೆಯೂ ನಿಷ್ಪಕ್ಷಪಾತ ಪರಿಶೀಲನೆ ನಡೆಸಿ ಸತ್ಯಾಸತ್ಯತೆ ಬಹಿರಂಗಪಡಿಸುವ ಅಗತ್ಯವಿದೆ. ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ಕಾನೂನುಬದ್ಧ ಪ್ರತಿಭಟನೆಯ ಹಕ್ಕು ಎರಡನ್ನೂ ಗೌರವಿಸಿ ಸಮಸ್ಯೆಗೆ ಸೂಕ್ತ ಪರಿಹಾರ ಕಂಡುಕೊಳ್ಳುವುದು ಈಗಿನ ಅಗತ್ಯವಾಗಿದೆ.

    ##Mangaluru News#ABVP Protest#Dasara Holiday Controversy#Karnataka news#Police Brutality Allegation#St Agnes College#Student Protest

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಪ್ರತಿಭಟನಾ ಶಕ್ತಿಯನ್ನೇ ಕಳೆದುಕೊಂಡ ಭಾರತ… ನಿಶ್ಯಕ್ತವಾದ ವಿರೋಧ ಪಕ್ಷಗಳು
    ಹಿಂದೂ ಬುಡಕಟ್ಟು ಸಮಾಜದ ರುದ್ರಾಕ್ಷಿ ಸುಂದರಿ ಮುಸ್ಲಿಂ ಹುಡುಗನ ಮದುವೆಯಾದ್ಲು
    ಜನರ ಹಾಹಾ ಕಾರಕ್ಕೆ ಬೆಚ್ಚಿಬಿದ್ದ ಸರ್ಕಾರ –  ಎಸ್ಮ ಕಾಯ್ದೆ ಜಾರಿಗೆ
    ಸೋನಂ ವಾಂಗ್ಚುಕ್ ಹೋರಾಟ ಸರ್ಕಾರದತ್ತ ಹೆಚ್ಚುತ್ತಿರುವ ಒತ್ತಡ: “ಸಂಸತ್ತಿನಲ್ಲಿ ಶಿಕ್ಷಣದ ಹೊಣೆಗಾರಿಕೆ ಬಗ್ಗೆ ಭರವಸೆ ಸಿಕ್ಕರೆ ಉಪವಾಸ ಅಂತ್ಯ!”…?
    ಕೆಸರೆರಚಾಟದ ನಡುವೆ SIR-ಪ್ರಜಾಪ್ರಭುತ್ವದ ಹಬ್ಬವೋ, ರಾಜಕೀಯ ಗೊಂದಲದ ಗೂಡೋ?
    ದುರಂತ ಸಂಭವಿಸುವ ಮುನ್ನ ಮೆಸ್ಕಾಂ ಎಚ್ಚೆತ್ತುಕೊಳ್ಳುವುದೇ? ಮಂಗಳೂರಿನ PVS ರಸ್ತೆಯಲ್ಲೇ ಮೆಸ್ಕಾಂ ಟ್ರಾನ್ಸ್‌ಫಾರ್ಮರ್ ಅಡಿಯಲ್ಲೇ ಸುತ್ತಲೂ ಒಣ ಕಸದ ಪ್ಲಾಸ್ಟಿಕ್ ಟಾರ್ಪಾಲಿನ್ ಮತ್ತು ಬಾಕ್ಸ್ ರಾಶಿ!
    ಬ್ಯಾಂಕುಗಳ ಮೇಲೆ ಭೀಕರ ದಾಳಿಯ ಮುನ್ಸೂಚನೆ ನೀಡಿದ ಇರಾನ್- ಮಿನಿಮಮ್ 1000 ಮೀಟರ್ ದೂರವಿರಿ
    “ಅಪ್ಪಾ” ಎಂದು ಕರೆದವನ ಕೈಯಿಂದಲೇ 18 ತಿಂಗಳ ಕಂದಮ್ಮನ ದೇಹದ ಮೇಲೆ 91 ಗಾಯದ ಗುರುತು – ಅಮಾನುಷ ಹತ್ಯೆ!..
    ಡಾನ್ -3 ಸಿನಿಮಾ ಕಥೆ ಗೋವಿಂದ….!
    ಆಹಾರ ಬೆಲೆ ಏರಿಕೆ: ಸಾಮಾನ್ಯರ ಅಡಿಗೆ ಮನೆಗೆ ಮತ್ತೆ ಹೊರೆ?
    ಇಂದು ಮಂಗಳೂರಲ್ಲಿ ತಲೆಮೇಲೆ ಸುತ್ತು ಹೊಡೆದಂತೆ ಬಾರಿ ಶಬ್ದದೊಂದಿಗೆ ಹೆಲಿಕಾಪ್ಟರ್‌..!ಆಶ್ಚರ್ಯ ಮತ್ತು ಆತಂಕದ ಹಿಂದಿದೆ ಭದ್ರತಾ ‘ಮೆಗಾ ಡ್ರಿಲ್’ ..!ಅಸಲಿ ಕಾರಣವೇನು
    ಅಮೆರಿಕ–ಇರಾನ್ ಸಂಘರ್ಷಕ್ಕೆ ಮತ್ತೆ ಹೊತ್ತಿ ಉರಿದ ಮಧ್ಯಪ್ರಾಚ್ಯ! ಕದನ ವಿರಾಮ ಸಂಪೂರ್ಣ ವಿಫಲ..
    ಕಚೇರಿಯಿಂದ ರಸ್ತೆಗಿಳಿದ ಮನಪಾ ಆಯುಕ್ತ ರಾಹುಲ್ ರತ್ನಂ ಪಾಂಡೆ …….!ಎಲ್ಲಾ ಅಕ್ರಮಕ್ಕೆ ಒಂದ್ಸಲ ಎಚ್ಚರಿಕೆ ನೋಟಿಸ್ , ನೆಕ್ಸ್ಟ್ ಟೈಮ್ ಸೀಜ್…!
    ಕೋವಿಡ್ ಶೀಲ್ಡ್ ಸೈಡ್ ಎಫೆಕ್ಟ್ ಒಪ್ಪಿಕೊಂಡ ಕಂಪನಿ
    ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ, ನಿರೀಕ್ಷಿತ ತನಿಖೆ
    “ತಲೈವಾ”ಗೂ ಭಯವಾ? ಹೂವಿನ ಚೆಂಡು ಕಂಡು ವಿಜಯ್ ರನ್! ಒಂದು ಕ್ಷಣದ ಥ್ರಿಲ್ಲರ್!
    ಕೂದಲೆಳೆ ಅಂತರದಲ್ಲಿ ಪಾರಾದ ಗುಜರಾತ್ ಟೈಟಾನ್ಸ್!ಕ್ಷಣಾರ್ಧ ತಡವಾಗಿದ್ದರೂ ಸಂಭವಿಸುತ್ತಿತ್ತು ಘೋರ ಅಗ್ನಿ ದುರಂತ!
    🎬 ಸೀನ್ ಹಿಂದೆ ಇರುವ ಸೀಕ್ರೆಟ್ ಏನು?ಧುರಂಧರ್ ಚಿತ್ರದ ಈ ಸಣ್ಣ ಕ್ಷಣವೇ ಈಗ ದೊಡ್ಡ ಸೆನ್ಸೇಶನ್ ಆಗಿದೆ…ಮುಸ್ತಫಾ ಫುಲ್ ಖುಷ್
    ವಿಮಾನದಲ್ಲಿ ಭಾರೀ ಟರ್ಬುಲೆನ್ಸ್:300 ಅಡಿ ಹಠಾತ್ ಕುಸಿದ ಏರ್ ಇಂಡಿಯಾ ವಿಮಾನ..!ಪ್ರಯಾಣಿಕರು-ಸಿಬ್ಬಂದಿಗೆ ಗಾಯ..
    ಡಿಕೆಎಮುಲ್‌ನಿಂದ ₹1,270 ಕೋಟಿ ದಾಖಲೆ ಬೆಳವಣಿಗೆ ಹೊಸ ಮೈಲುಗಲ್ಲು..!
    ತಡರಾತ್ರಿ ಭಟ್ಕಳದಲ್ಲಿ ವಿಚ್ಛಿದ್ರಕಾರಿ ಕೋಮುವಾದಿಗಳಿಂದ ದಾಂದಲೆ
    ಸಂಸತ್ ವಿಶೇಷ ಅಧಿವೇಶನ: ಮಹಿಳಾ ಮೀಸಲಾತಿಗೆ ಒಗ್ಗಟ್ಟು, ಡಿಲಿಮಿಟೇಶನ್ ಮೇಲೆ ಭಾರಿ ವಿವಾದ – ಕರ್ನಾಟಕಕ್ಕೂ ಪರಿಣಾಮದ ಚರ್ಚೆ 🔥
    ಕಾಂಗ್ರೆಸ್‌ಗೆ ಹೊಸ ತಲೆನೋವು? ಅಹಿಂದ ಸಂಘಟನೆಯಿಂದ ‘ಪಕ್ಷ ವಿಭಜನೆ’ ಎಚ್ಚರಿಕೆ!
    “ಜಾಗತಿಕ ಸವಾಲುಗಳ ನಡುವೆಯೂ ಭಾರತದ GDP ರಾಕೆಟ್ ವೇಗ! 7.8% ಬೆಳವಣಿಗೆಗೆ ವಿಶ್ವವೇ ಬೆರಗು!”
    ಹೋಟೆಲ್, ಕೆಫೆ ಬಿಸಿ ಬಿಸಿ ಪ್ಲಾಸ್ಟಿಕ್ ಲ್ಲಿ ಪಾರ್ಸೆಲ್‌ಗೆ ಬ್ರೇಕ್ –ಹಾಗೆ 5ರೂ 10ರೂ ಬೀಡಿ ಸಿಗರೇಟ್ ಗುಟ್ಕಾಕ್ಕೆ ₹1000 ದಂಡ ಕಟ್ಟಬೇಕಾದಿತು ಎಚ್ಚರ …!
    ರಾಷ್ಟ್ರಪತಿ ಮುರ್ಮು ಅವರ ADC…ನ್ಯಾಷನಲ್ ಕ್ರಶ್ ಆಗಿದ್ದ ಮೇಜರ್ ರಿಷಭ್ ಸಂಬ್ಯಾಲ್ ಸೇನೆಗೆ ಗುಡ್‌ಬೈ!
    ಗರ್ಭಿಣಿ ವೇಷದಲ್ಲಿ ರಹಸ್ಯ ಕಾರ್ಯಾಚರಣೆ: ಭ್ರೂಣ ಲಿಂಗ ಪತ್ತೆ ಜಾಲಕ್ಕೆ ಬಲೆ
    ಅಸ್ಸಾಂನಲ್ಲಿ ಪ್ರವಾಹದ ಆರ್ಭಟಕ್ಕೆ ಸಾವಿನ ಸಂಖ್ಯೆ 61ಕ್ಕೆ, 7 ಲಕ್ಷಕ್ಕೂ ಹೆಚ್ಚು ಮಂದಿ ಸಂಕಷ್ಟದಲ್ಲಿ …!
    ಭೀಕರ ಅಪಘಾತ ಮಹಿಳೆ ಬಲಿ
    ಚುನಾವಣಾ ಆಯೋಗದ ಪರ ನಿಂತ 42 ನಿವೃತ್ತ ನ್ಯಾಯಮೂರ್ತಿಗಳು,…!ವಿರುದ್ಧ ಬೀದಿಗಿಳಿದ ಪ್ರತಿಪಕ್ಷಗಳು ಹಾಗೂ ಸಂಘಟನೆಗಳು