📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಮೂಡಿಗೆರೆ ತಾಲ್ಲೂಕಿನಲ್ಲಿ ಭಾರಿ ಗಾಳಿ-ಮಳೆ ಅಬ್ಬರ

ಮೂಡಿಗೆರೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಇಂದು ಮಧ್ಯಾಹ್ನ ಏಕಾಏಕಿ ಸುರಿದ ಭಾರಿ ಗಾಳಿ-ಮಳೆಯು ಜನಜೀವನದಲ್ಲಿ ಅಸ್ತವ್ಯಸ್ತತೆ ಉಂಟುಮಾಡಿದೆ. ಸುಮಾರು ಮಧ್ಯಾಹ್ನ 1.30ರ ವೇಳೆಗೆ ಗುಡುಗು-ಮಿಂಚಿನೊಂದಿಗೆ ಆರಂಭವಾದ ಮಳೆ ಕೆಲವೇ ಕ್ಷಣಗಳಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿತು.

ಈ ಗಾಳಿ ಮಳೆಯ ಪರಿಣಾಮವಾಗಿ ಅನೇಕ ಕಡೆಗಳಲ್ಲಿ ಅಡಿಕೆ, ತೆಂಗು ಹಾಗೂ ಬಾಳೆ ತೋಟಗಳಿಗೆ ಹಾನಿಯಾಗಿದೆ. ಬಿರುಸಿನ ಗಾಳಿಗೆ ಹಲವಾರು ಮರಗಳು ಧರೆಗುರುಳಿದ್ದು, ಕೆಲವು ಕಡೆ ವಿದ್ಯುತ್ ಕಂಬಗಳು ಸಹ ಉರುಳಿ ಬಿದ್ದಿರುವುದಾಗಿ ಸ್ಥಳೀಯ ರೈತರು ತಿಳಿಸಿದ್ದಾರೆ.

ಪಟ್ಟಣದ ಮಲ್ನಾಡ್ ಕ್ಲಿನಿಕ್ ಸಮೀಪ ತೆಂಗಿನ ಮರವೊಂದು ಕುಸಿದು ಬಿದ್ದು ವಿದ್ಯುತ್ ತಂತಿಗಳು ಕಡಿತಗೊಂಡ ಘಟನೆ ನಡೆದಿದೆ. ಈ ಹಿನ್ನೆಲೆ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ಸಂಬಂಧಿತ ಸಿಬ್ಬಂದಿ ಮರ ತೆರವು ಹಾಗೂ ದುರಸ್ತಿ ಕಾರ್ಯದಲ್ಲಿ ತೊಡಗಿದ್ದಾರೆ. ಅದೃಷ್ಟವಶಾತ್, ಮರ ಸಮೀಪದ ಅಂಗಡಿಗಳ ಮೇಲೆ ಬೀಳದೇ ತಪ್ಪಿದ ಕಾರಣ ಯಾವುದೇ ದೊಡ್ಡ ಅನಾಹುತ ಸಂಭವಿಸಿಲ್ಲ.

ಇನ್ನು ಬಿದರ ರಹಳ್ಳಿ ಭಾಗದಲ್ಲಿ ಗಾಳಿಯ ತೀವ್ರತೆಗೆ ಕ್ಯಾಂಟೀನ್ ಒಂದರ ಮೇಲ್ಛಾವಣಿ ಹಾರಿ ಹೋಗಿದ್ದು, ಇದರಿಂದ ಆಸ್ತಿಗೆ ಹಾನಿ ಉಂಟಾಗಿದೆ. ಈ ಘಟನೆ ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.

ಇದರಿಂದ ಒಂದು ಕಡೆ ಹಾನಿ ಉಂಟಾದರೂ, ಇತ್ತೀಚಿನ ಬಿಸಿಲಿನ ತಾಪದಿಂದ ಸಂಕಷ್ಟದಲ್ಲಿದ್ದ ತೋಟಗಳಿಗೆ ಈ ಮಳೆ ಸ್ವಲ್ಪ ಮಟ್ಟಿಗೆ ಶಮನ ನೀಡಿದಂತಾಗಿದೆ. ವಿಶೇಷವಾಗಿ ಕಾಫಿ ಬೆಳೆಗಾರರಲ್ಲಿ ಮಳೆಯು ಸ್ವಲ್ಪ ನೆಮ್ಮದಿ ತಂದಿದೆ ಎನ್ನುವುದು ಗಮನಾರ್ಹ.

#heavy rain#moodigere news#RainyWeather

COMMENTS

Login with Gmail to comment

ಇನ್ನಷ್ಟು ಸುದ್ದಿ

ಕಾಂಗ್ರೆಸ್ ದೇಶದ ಹಿತಾಸಕ್ತಿಯ ವಿರುದ್ಧ ನಡೆದುಕೊಳ್ಳುತ್ತಿದೆ- ಪ್ರಧಾನಿ ಮೋದಿ ಆರೋಪ
8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಟಾಟಾ ಸನ್ಸ್ IPOಗೆ ಒತ್ತಾಯ: ಟ್ರಸ್ಟಿಗಳಲ್ಲಿ ಭಿನ್ನಾಭಿಪ್ರಾಯ ಹೆಚ್ಚಳ…!
ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆಯ ಕ್ರೆಡಿಟ್ ಪಡೆದುಕೊಳ್ಳಲು ಶುರುವಾಯಿತು ಫೈಟ್
ವಿದ್ಯಾರ್ಥಿಯೊಬ್ಬ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ..
ಶಿಕ್ಷಣದ ಹೆಸರಿನಲ್ಲಿ ಡ್ರಗ್ ವ್ಯವಹಾರ! ಬೆಚ್ಚಿಬಿದ್ದ ಮಂಗಳೂರು…
ರಾಜ್ಯದ 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳಾಗಿ ಉನ್ನತೀಕರಿಸಲು 3900 ಕೋಟಿ ಮೀಸಲು
ಎಸ್ ಪಿ ಅರುಣ್ ಕುಮಾರ್ ಗೆ ಮುಖ್ಯಮಂತ್ರಿ ಪದಕ
ಉದ್ಯಮಿ ಧೀರಜ್ ಜೈನ್ ಗಪ್ ಚುಪ್ಪಾಗಿ ನಡೆಸಿದ ಮಾನವೀಯ ನಡೆಗೆ ಸಾಕ್ಷಿ ನೋಡಿ
ಆನ್ ಲೈನ್ ವಂಚನೆ ಶಿರ್ವದ ಯುವತಿಗೆ ಲಕ್ಷ ಲಕ್ಷ ಉಂಡೆನಾಮ… ಬ್ಯಾಂಕ್ ನಿಯಮ ವಂಚಕರಿಗೆ  ಸಹಕಾರಿ?
ಸುಬ್ರಹ್ಮಣ್ಯದಲ್ಲಿ ಭಟ್ಟರಿಗೆ ದಕ್ಷಿಣೆ ಕೊಡುವoತಿಲ್ಲ- ಸಿಟ್ಟಿಗೆಳುತ್ತಿರುವ ಪುರೋಹಿತರು
ಕಣ್ಣೀರಾದ ಕಣ್ಣಾಲಿಗಳು ಹೊಟ್ಟೆ ತುಂಬಾ ಊಟ ಮಾಡಿ ನಿದ್ರಿಸುವಂತೆ ಮಾಡುವ  “ಕಾರುಣ್ಯ ಸೇವಾಕ್ಕೀಗ 3000 ದಿನಗಳು…!!!”
“ಪ್ರೇಮ ಕಥೆ ತಿರುವು: ಗಂಡನ ಜೀವವೇ ಟಾರ್ಗೆಟ್!”ಬ್ಯಾಂಕ್ ಅಧಿಕಾರಿ ಪತ್ನಿ taxi ಚಾಲಕನೊಂದಿಗೆ ಸೇರಿ killing plan
ಜೀವನ್ಮರಣ ಹೋರಾಟದಲ್ಲೂ ಗೆಳೆಯರ ಬದುಕಿಸಿದ 14ರ ಬಾಲಕನ ರೋಚಕ  ಸ್ಟೋರಿ 
“ಪಾಲಕ್ಕಾಡ್‌ನಲ್ಲಿ ಮೋದಿ ಚಂಡೆ ಸದ್ದು—ಕೇರಳದಲ್ಲಿ ಚುನಾವಣಾ ಕಹಳೆ!” 
book ಮಾಡಿದ ನಿಮ್ಮ ಹೊಸ ಕಾರು-ಬೈಕ್ ಇನ್ನೂ ಬಂದಿಲ್ವಾ?ಪಶ್ಚಿಮ ಏಷ್ಯಾ ಯುದ್ಧದಿಂದ ಸರಬರಾಜು ವಿಳಂಬ…!
ಇರಾನ್ ಮೇಲೆ ಇಸ್ರೇಲ್-ಅಮೆರಿಕ ದಾಳಿಗೆ  ಪ್ರತಿದಾಳಿ ಯುಎಇ, ಬಹ್ರೇನ್, ಸೌದಿಯಲ್ಲಿ ಅಮೆರಿಕದ ನೆಲೆಗಳಿಗೆ ನಡುಕ.
ಹೈಕೋರ್ಟ್ ತೀರ್ಪಿನಿಂದ ದಕ್ಷಿಣ ಕನ್ನಡ ಇ-ರಿಕ್ಷಾ ಚಾಲಕರಿಗೆ favour
ಕುಂದಾಪುರದಲ್ಲಿ ಯುವತಿ ಆತ್ಮಹತ್ಯೆಗೆ ಪ್ರಿಯಕರನ ಕುಮ್ಮಕ್ಕು
ಕೊನೆಗೂ ಸೋತ ಖಾಕಿ….!!!
ಬ್ಯಾಂಕುಗಳ ಮೇಲೆ ಭೀಕರ ದಾಳಿಯ ಮುನ್ಸೂಚನೆ ನೀಡಿದ ಇರಾನ್- ಮಿನಿಮಮ್ 1000 ಮೀಟರ್ ದೂರವಿರಿ
ಭೀಕರ ಅಪಘಾತಕ್ಕೆ ಸ್ಥಳೀಯ ನಾಯಕ ಸೇರಿ ಇಬ್ಬರು ದುರ್ಮರಣ 
ಆನ್‌ಲೈನ್ ಗೋಲ್ಡ್ ಮಾರ್ಕೆಟ್ ಹೂಡಿಕೆಯಲ್ಲಿ ಮೋಸ- ಮಹಿಳೆಗೆ ₹10.55 ಲಕ್ಷ ನಷ್ಟ
ವೆಟ್-ವೆಲ್‌ಗಳ ಕಳಪೆ ನಿರ್ವಹಣೆಚರಂಡಿ-ಬಾವಿಗಳಿಗೆ ಡ್ರೈನೇಜ್ ನೀರು..
AI ಡೀಪ್‌ಫೇಕ್ ಕೇವಲ ಸಿನಿಮಾ ನಟಿಯರಿಗೆ ಸೀಮಿತವಾಗಿಲ್ಲ .
ಮಹಿಳಾ ದಿನಾಚರಣೆಯಲ್ಲಿ ಮಹಿಳಾ ಸಂಪನ್ಮೂಲ ಕೇಂದ್ರ ಉದ್ಘಾಟನೆ, ಜಾಗೃತಿ ಕಾರ್ಯಕ್ರಮ
ಅಪ್ರಾಪ್ತನ ಕ್ರೌರ್ಯಕ್ಕೆ ಬಳ್ಳಾರಿ ವಸತಿ ಶಾಲೆಯ ದೌರ್ಜನ್ಯವೇ ಸಾಕ್ಷಿ… ಈ ಕ್ರೌರ್ಯದ ಹಿಂದೆ ಮನೋರೋಗ ಅಡಗಿದೆಯಾ? 
ಮೂಡಬಿದಿರೆ ಇನ್‌ಸ್ಪೆಕ್ಟರ್ ಪ್ರಕರಣಕ್ಕೆ ಟ್ವಿಸ್ಟ್: ಆರೋಪ ಮಾಡಿದ ಮಹಿಳೆಯ ವಿರುದ್ಧವೇ ಸಹೋದರಿಯ ಬಾಂಬ್!
ಸರ್ಕಾರಿ ಸ್ವಾಮ್ಯದ ಬೇಲಿ ಕಂಬ ಕಿತ್ತಾಕಲು DYFI ಕುಮ್ಮಕ್ಕು….!