📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಮೂಡುಬಿದಿರೆಯಲ್ಲಿ ಖರೀದಿಸಿದ ಕೆಲವೇ ಗಂಟೆಗಳಲ್ಲಿ ಕಾರಿಗೆ ಬೆಂಕಿ! ತಪ್ಪಿದ ಭಾರೀ ದುರಂತ ..ಏಕಾಏಕಿ ಬೆಂಕಿ.ಕಾರಿನಲ್ಲಿದ್ದ ಕುಟುಂಬ ಅಪಾಯದಿಂದ ಪಾರು.

    ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರು ಸಂಪೂರ್ಣವಾಗಿ ಸುಟ್ಟುಹೋದ ಘಟನೆ ಸೋಮವಾರ ಸಂಜೆ ಮೂಡುಬಿದಿರೆ ಪೇಟೆಯ ಬಸ್ ನಿಲ್ದಾಣ ಸಮೀಪದ ರೈಲ್ವೆ ರಸ್ತೆಯಲ್ಲಿ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಮಕ್ಕಳು, ಮಹಿಳೆಯರು ಸೇರಿದಂತೆ ಕುಟುಂಬದ ಸದಸ್ಯರು ಸಮಯಪ್ರಜ್ಞೆಯಿಂದ ಹೊರಬಂದ ಪರಿಣಾಮ ದೊಡ್ಡ ಅನಾಹುತವೊಂದು ತಪ್ಪಿದೆ.

    ಕೋಟೆಬಾಗಿಲಿನ ಮಸೂದು ಅವರು ಸೋಮವಾರ ಮಧ್ಯಾಹ್ನ ಸುಮಾರು 4 ಗಂಟೆ ವೇಳೆಗೆ ಮೂಡುಮಾರ್ನಾಡಿನ ಅವಿನಾಶ್ ಎಂಬವರಿಂದ ಮಾರುತಿ ಸಿಯಾಜ್ ಕಾರನ್ನು ಖರೀದಿಸಿದ್ದರು. ಬಳಿಕ ತಮ್ಮ ಕುಟುಂಬದ ಸದಸ್ಯರೊಂದಿಗೆ ಮೂಡುಬಿದಿರೆ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಪುರಸಭೆಯ ಹಳೆಯ ಕಟ್ಟಡದ ಸಮೀಪ ಕಾರಿನ ಮುಂಭಾಗದಿಂದ ಹೊಗೆ ಬರುತ್ತಿರುವುದು ಗಮನಕ್ಕೆ ಬಂದಿದೆ.

    ತಕ್ಷಣ ಎಚ್ಚೆತ್ತುಕೊಂಡ ಚಾಲಕರು ವಾಹನವನ್ನು ರಸ್ತೆಯ ಬದಿಗೆ ನಿಲ್ಲಿಸಿ, ಕಾರಿನೊಳಗಿದ್ದ ಪುಟ್ಟ ಮಕ್ಕಳು ಮತ್ತು ಮಹಿಳೆಯರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ಕೆಲವೇ ಕ್ಷಣಗಳಲ್ಲಿ ಕಾರಿನ ಮುಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡು, ಬಳಿಕ ಇಡೀ ವಾಹನವನ್ನು ಆವರಿಸಿದೆ.

    Also Read  ಶಾಲಾ ವಾಹನಗಳ ಸುರಕ್ಷತೆ ಬಗ್ಗೆ ಜೆಡಿಎಸ್ ಆಗ್ರಹ

    ಸ್ಥಳೀಯರು ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಸಾರ್ವಜನಿಕರ ಸಹಕಾರದೊಂದಿಗೆ ಬೆಂಕಿಯನ್ನು ನಿಯಂತ್ರಿಸಿ ನಂದಿಸುವಲ್ಲಿ ಯಶಸ್ವಿಯಾದರು. ಆದರೆ ಅಷ್ಟರಲ್ಲಾಗಲೇ ಕಾರಿನ ಬಹುತೇಕ ಭಾಗ ಬೆಂಕಿಗೆ ಆಹುತಿಯಾಗಿತ್ತು.

    ಪ್ರಾಥಮಿಕ ಮಾಹಿತಿಯ ಪ್ರಕಾರ ಕಾರಿನ ಫಾಗ್ ಲೈಟ್ ಅಥವಾ ವಿದ್ಯುತ್ ವೈರಿಂಗ್ ವ್ಯವಸ್ಥೆಯಲ್ಲಿ ಉಂಟಾದ ತಾಂತ್ರಿಕ ದೋಷದಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆದರೆ ಬೆಂಕಿಗೆ ನಿಖರ ಕಾರಣವೇನು ಎಂಬುದರ ಬಗ್ಗೆ ಪರಿಶೀಲನೆ ನಡೆಯುತ್ತಿದೆ.

    ಘಟನೆಯ ಮಾಹಿತಿ ಪಡೆದ ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯಿಂದ ಕೆಲಕಾಲ ರಸ್ತೆ ಸಂಚಾರದಲ್ಲಿ ಅಸ್ತವ್ಯಸ್ತತೆ ಉಂಟಾಗಿತ್ತು.

    ಹೊಸದಾಗಿ ಖರೀದಿಸಿದ ಕಾರು ಕೆಲವೇ ಗಂಟೆಗಳಲ್ಲಿ ಬೆಂಕಿಗಾಹುತಿಯಾಗಿರುವುದು ಸ್ಥಳೀಯರಲ್ಲೂ ಆಶ್ಚರ್ಯ ಮೂಡಿಸಿದ್ದು, ವಾಹನಗಳ ನಿರ್ವಹಣೆ ಹಾಗೂ ವಿದ್ಯುತ್ ವ್ಯವಸ್ಥೆಯ ಸುರಕ್ಷತೆ ಕುರಿತು ಮತ್ತೆ ಚರ್ಚೆಗೆ ಕಾರಣವಾಗಿದೆ.

    ##Moodbidri #CarFire #MangaluruNews #RoadSafety #BreakingNews

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಹೊಲದಲ್ಲಿ ಹೂತಿಟ್ಟ ₹5 ಲಕ್ಷ… ತೆರೆದಾಗ ಶಾಕ್!
    ಹೋಳಿ ಮತ್ತು ರಂಜಾನ್ ಒಂದು ಜೀವವನ್ನೇ ನುಂಗಿತು..!
    ಮಹಾನಗರಗಳ ಜಲಕಂಠಕ:ಸ್ಮಾರ್ಟ್ ಸಿಟಿಗಳ ಕರಾಳ ಮುಖ: ಕುಡಿಯಲು ನೀರಿಲ್ಲ, ಸಿಗುವ ನೀರು ವಿಷ!
    ಅಪ್ಪಿಕೊಳ್ಳುವ ಅಮ್ಮನ ಕೈಗಳೇ ಕತ್ತು ಹಿಸುಕಿ ಉಸಿರು ನಿಲ್ಲಿಸಿದ್ರೆ … ಎಂಥ ದುರ್ವಿಧಿ..!
    MRPL ಸ್ಫೋಟ FIR… ದಾಖಲು…MRPL ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಆರೋಪ…!
    “ASDDO ಪಟ್ಟಿಯಲ್ಲಿ 1.11 ಕೋಟಿ ಮತದಾರರು…!ನಿಮ್ಮ ಹೆಸರು ಇದೆಯೇ? ವೋಟರ್ ಲಿಸ್ಟ್‌ನಲ್ಲಿ ನಿಮ್ಮ ಹೆಸರು ಮಿಸ್ಸಿಂಗ್?ಫಾರ್ಮ್-6 ಸಲ್ಲಿಸಲು ಮರೆಯಬೇಡಿ!
    Top 5, ಹೆಚ್ಚು ಅನುದಾನ ಪಡೆದ ಇಲಾಖೆಗಳು ಯಾವವು ಗೊತ್ತಾ?
    “ಕುಂಡೆ(ತಿಕ)ಯಲ್ಲಿ ಲಕ್ಷ್ಮಿ ಇರುತ್ತಾಳೆ” ಎಂಬ ಹೇಳಿಕೆ ವೈರಲ್! ಆರ್ಯವರ್ಧನ್ ಗುರೂಜಿ ವಿರುದ್ಧ ದೂರು, ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ
    ‘ಅಮರ್ ಜವಾನ್ ಪಾರ್ಕ್’ಗೆ ಯುದ್ಧ ಟ್ಯಾಂಕ್, ಯುದ್ಧವಿಮಾನ ಸ್ಥಾಪನೆಗೆ ರಕ್ಷಣಾ ಸಚಿವರಿಗೆ ಸಂಸದೆ ಪ್ರಭಾ ಮಲ್ಲಿಕಾರ್ಜುನ ಮನವಿ
    ಐಫೋನ್ ಅಲ್ಲ… ಕಾರು ಅಲ್ಲ… 9 ವರ್ಷ ಉಳಿಸಿ ಜಮೀನು ಖರೀದಿಸಿದ ದೀಕ್ಷಾ!
    ಕಾರ್ಕಳದ ವೈದ್ಯಕೀಯ ವಿದ್ಯಾರ್ಥಿನಿ ಭೀಕರ  ಅಪಘಾತಕ್ಕೆ ಬಲಿ
    ಟೀಕೆಗಳು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿನ ಸೌಂದರ್ಯ – ಖಾದರ್
    ಆರೋಪಿ ಸಮೀರ್ ಮುಲ್ಲಾ ಸ್ಫೋಟಕ ಹೇಳಿಕೆ-ಖುಷಿ ಒಳ್ಳೆ ಹುಡುಗಿ-🔥 ಹುಬ್ಬಳ್ಳಿ ಲವ್ ಜಿಹಾದ್ ಅಲ್ಲ ಎಂದ ಪೊಲೀಸರು : ಇದೀಗ ಹೊಸ ಟ್ವಿಸ್ಟ್!
    ದೇಶದ ಹಲವೆಡೆ ಭಾರೀ ಮಳೆ ಎಚ್ಚರಿಕೆ: ರೆಡ್ ಅಲರ್ಟ್ ಅಂದ್ರೆ ಮಳೆ ಗ್ಯಾರಂಟಿ ಅಲ್ಲ…IMD ಮುನ್ಸೂಚನೆಯನ್ನು ನಿರ್ಲಕ್ಷಿಸಬೇಡಿ!ಅದು  “ಅಪಾಯದ ಸಾಧ್ಯತೆಯ ಎಚ್ಚರಿಕೆ!”
    ಉಡುಪಿಯಲ್ಲಿ ಟ್ರೇಡಿಂಗ್ ಹೆಸರಲ್ಲಿ ಲಕ್ಷಗಟ್ಟಲೆ ಧೋಕಾ….
    ವೋಟರ್ಸ್ ಗಮನಕ್ಕೆಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ: ಸಾರ್ವಜನಿಕರು ತಿಳಿಯಲೇಬೇಕಾದ ಪ್ರಮುಖ ವರದಿ
    ಇಂದಿನ ಆಧುನಿಕ ಯುಗದಲ್ಲೂ ಗಂಡನ ಮನೆಯಲ್ಲಿ ಹೆಣ್ಣೊಬ್ಬಳ ನರಕಯಾತನೆಯ ನೈಜ ದೃಶ್ಯ ತಂದೆಯೇ ಕಣ್ಣಾರೆ ನೋಡಿದರೇ ….ಕಣ್ಣೀರು ತಡೆಯಲು ಸಾಧ್ಯವಿಲ್ಲ…..
    ಕಸ ಸಾಗಾಣಿಕೆ ಟೆಂಡರ್‌ನಲ್ಲಿ ₹133 ಕೋಟಿ ಅಕ್ರಮ ಆರೋಪ
    ಮದುವೆ -ಜೀವನ ಬೇಸರವಾಯ್ತು ಆಸಕ್ತಿ ಇಲ್ಲ ಅಂದ್ರೆ ವಿಚ್ಛೇದನ ಸಿಗುತ್ತಾ ..! ಮಗಳು18 ದಾಟಿದರೂ ಶಿಕ್ಷಣದ ಹೊಣೆ ಯಾರಿಗೆ?
    ಸರ್ವಜನಾಂಗದ ಶಾಂತಿಯ ತೋಟಕ್ಕೆ ಮತ್ತೊಂದು ಸೌಹಾರ್ದದ ಹೆಜ್ಜೆ
    ಬಾಲಗರ್ಭಿಣಿಯರ ಸಂಖ್ಯೆ 5975….!!
    ಇನ್ನು ಮುಂದೆ ದೇವಸ್ಥಾನ ಆಸ್ತಿಗೆ ದಾಖಲೆಗಳಲ್ಲಿ ದೇವರ ಹೆಸರೇ ಮಾಲೀಕ….34 ಸಾವಿರಕ್ಕೂ ಹೆಚ್ಚುಮುಜರಾಯಿ ದೇವಸ್ಥಾನಗಳ ಆಸ್ತಿ ರಕ್ಷಣೆ:
    30 ದಿನ, 13 ನಗರಗಳು, ₹10 ಲಕ್ಷ ಖರ್ಚು! ಅಮೆರಿಕದ ದಂಪತಿಯ ಭಾರತ ಯಾತ್ರೆ ವೈರಲ್….ವೈರಲ್ ವಿಡಿಯೋದಲ್ಲಿ ಹೊರಬಿದ್ದ ಅಚ್ಚರಿಯ ಲೆಕ್ಕ!
    ಗ್ಯಾಸ್ ಪೈಪ್‍ಲೈನ್ ಸೋರಿಕೆ: ಅಣಕು ಪ್ರದರ್ಶನ
    ಚಿನ್ನ ಖರೀದಿಸುವ ಕಾಲ ಹೋಯ್ತಾ? ಗಗನಕ್ಕೇರಿದ ದರ ಕೇಳಿ ಬೆಚ್ಚಿಬಿದ್ದ ಜನ!ಒಂದೂವರೆ ಲಕ್ಷ ರೂಪಾಯಿ ಗಡಿದಾಟಿತಾ …?ಬೆಳ್ಳಿಎರಡೇ ದಿನದಲ್ಲಿ ಆರು ಸಾವಿರ ಏರಿಕೆ
    ಕರ್ನಾಟಕ ಸೇರಿ 16 ರಾಜ್ಯಗಳಲ್ಲಿ SIR ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಅಳಿಸಬಹುದಾ? ಈಗಲೇ ಎಚ್ಚರ!
    ಬ್ರಹ್ಮಾವರ, ಮಂದಾರ್ತಿ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಹೇಳೋರು ಕೇಳೋರು ಯಾರು ಇಲ್ವಾ?
    ಮನೆಗಣತಿ ಮಂಗಳೂರು ಮಹಾನಗರ ಪಾಲಿಕೆ-ಸ್ಪೀಕರ್ ಯು ಟಿ ಖಾದರ್ ಚಾಲನೆ
    ಬೃಹತ್ ಅಭಿಯಾನ….5.51 ಟನ್ ವಸ್ತುಗಳು..!5000ಕ್ಕೂ ಹೆಚ್ಚು ದೇವರ ಫೋಟೋಗಳು
    ಸಂಸತ್ತಿನಲ್ಲಿ ಇತಿಹಾಸ ಸೃಷ್ಟಿಸುವ ಚರ್ಚೆ-ಮಹಿಳಾ ಮೀಸಲು ಬಿಲ್ಲಿನ ಸುತ್ತ ಕಂಗೊಳಿಸಿದ ಸಂಸತ್ !