📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಮೊಬೈಲ್ ನೋಡುತ್ತಿದ್ದ ಉಡುಪಿ ಡಿಸಿ ವಿರುದ್ಧ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಿಡಿ

    ಬರ ಪರಿಸ್ಥಿತಿ ಮತ್ತು ಪರಿಹಾರ ಕಾರ್ಯಗಳ ಕುರಿತು ನಡೆದ ಉನ್ನತ ಮಟ್ಟದ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಯೊಬ್ಬರ ನಿರ್ಲಕ್ಷ್ಯಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಘಟನೆ ನಡೆಯಿತು.

    ಸಭೆಯಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು, ಬರ ಪರಿಸ್ಥಿತಿಯ ಕುರಿತು ಗಂಭೀರವಾಗಿ ಮಾತನಾಡುತ್ತಿದ್ದ ಸಂದರ್ಭದಲ್ಲಿ, ಉಡುಪಿ ಜಿಲ್ಲಾಧಿಕಾರಿ ಸ್ವರೂಪ್ ಅವರು ಮೊಬೈಲ್ ಫೋನ್‌ನಲ್ಲಿ ಮಾತನಾಡುತ್ತಾ ಕುಳಿತಿದ್ದರು. ಇದನ್ನು ಸೂಕ್ಷ್ಮವಾಗಿ ಗಮನಿಸಿದ ಡಿ.ಕೆ. ಶಿವಕುಮಾರ್ ಅವರು ಕೂಡಲೇ ಮಧ್ಯಪ್ರವೇಶಿಸಿ ಅಧಿಕಾರಿ ವಿರುದ್ಧ ಕಿಡಿಕಾರಿದರು.

    “ಸಭೆಗೆ ಗೌರವ ಕೊಡಿ”
    ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಡಿ.ಕೆ. ಶಿವಕುಮಾರ್, “ನಿಮಗೆ ಸಭೆಯ ಮೇಲೆ ಆಸಕ್ತಿ ಇಲ್ಲದಿದ್ದರೆ ದಯವಿಟ್ಟು ಹೊರಗಡೆ ಹೋಗಿ. ಅಷ್ಟೊಂದು ಅರ್ಜೆಂಟ್ ಫೋನ್ ಕರೆ ಇದ್ದರೆ ಹೊರಗೆ ಹೋಗಿ ಮಾತನಾಡಿ ಆಮೇಲೆ ಬಂದು ಸಭೆಯಲ್ಲಿ ಕೂತ್ಕೊಳ್ಳಿ. ಒಬ್ಬ ಜವಾಬ್ದಾರಿಯುತ ಜಿಲ್ಲಾಧಿಕಾರಿಯಾಗಿ ನಿಮಗೆ ಸಭೆಯ ಮರ್ಯಾದೆ ಕಾಪಾಡುವುದು ಗೊತ್ತಿಲ್ಲ ಎಂದರೆ, ನಿಮ್ಮ ಕೆಳಗಿನ ಅಧಿಕಾರಿಗಳು ಇನ್ಯಾವ ರೀತಿ ನಿರ್ಲಕ್ಷ್ಯ ವಹಿಸಬಹುದು?” ಎಂದು ಪ್ರಶ್ನಿಸಿದರು.

    Also Read  ಟೀಕೆಗಳು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿನ ಸೌಂದರ್ಯ - ಖಾದರ್

    “ಇನ್ಮುಂದೆ ಇಂತಹ ನಡವಳಿಕೆಯನ್ನು ಸಹಿಸುವುದಿಲ್ಲ” ಎಂದು ಸಭೆಯಲ್ಲೇ ಖಡಕ್ ಎಚ್ಚರಿಕೆ ನೀಡಿದರು.

    ಬರ ನಿರ್ವಹಣೆಯಲ್ಲಿ ಪಾರದರ್ಶಕತೆ: ಡಿ.ಕೆ. ಸೂಚನೆ

    ಅದೇ ಸಭೆಯಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ರಾಜ್ಯದಲ್ಲಿ ಬರ ನಿರ್ವಹಣೆಯಲ್ಲಿ ಸಂಪೂರ್ಣ ಪಾರದರ್ಶಕತೆ ಇರಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಪ್ರಮುಖ ಅಂಶಗಳು:

    • ಬೋರ್‌ವೆಲ್ ದಾಖಲಾತಿ ಕಡ್ಡಾಯ: ರಾಜ್ಯದಲ್ಲಿ ಇನ್ನು ಮುಂದೆ ಹೊಸದಾಗಿ ಬೋರ್‌ವೆಲ್ ಕೊರೆಯುವಾಗ ಕಡ್ಡಾಯವಾಗಿ ಅದರ ಸಂಪೂರ್ಣ ವಿಡಿಯೋ ರೆಕಾರ್ಡಿಂಗ್ ಮಾಡಬೇಕು. ಎಲ್ಲೋ ಬೋರ್‌ವೆಲ್ ಕೊರೆದಿದ್ದೇವೆ ಎಂದು ಸುಳ್ಳು ಹೇಳಿದರೆ ಒಪ್ಪುವುದಿಲ್ಲ.
    • ನಕಲಿ ಬೋರ್‌ವೆಲ್‌ಗೆ ಕ್ರಮ: ಎಲ್ಲಾದರೂ ನಕಲಿ ಅಥವಾ ಬೋಗಸ್ ಬೋರ್‌ವೆಲ್ ಹಗರಣ ಪತ್ತೆಯಾದರೆ ಆಯಾ ಜಿಲ್ಲಾ ಪಂಚಾಯತ್ ಸಿಇಒಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು.
    • ಫೀಲ್ಡ್ ವರದಿ ಬೇಕು: ಕೇವಲ ಕಚೇರಿಯಲ್ಲಿ ಕುಳಿತು ಪೇಪರ್ ರಿಪೋರ್ಟ್ ನೀಡಿದರೆ ಸಾಲದು. ಅಧಿಕಾರಿಗಳು ಫೀಲ್ಡ್‌ಗೆ ಇಳಿದು ಕೆಲಸ ಮಾಡಿದ ವರದಿ ಬೇಕು.
    • ಬರದ ತೀವ್ರತೆ: ರಾಜ್ಯದ 178 ತಾಲೂಕುಗಳಲ್ಲಿ ಶೇಕಡಾ 60 ರಷ್ಟು ಭೀಕರ ಮಳೆ ಕೊರತೆ ಕಾಣಿಸಿಕೊಂಡಿದೆ. 15 ದಿನಗಳಲ್ಲಿ ಕೇಂದ್ರ ಸರ್ಕಾರಕ್ಕೆ ಬರ ವರದಿ ಸಲ್ಲಿಸಬೇಕಾಗಿರುವುದರಿಂದ ಡಿಸಿ-ಸಿಇಒಗಳು ತ್ವರಿತವಾಗಿ ಸಮಗ್ರ ಮಾಹಿತಿ ನೀಡಬೇಕು.
    • ಕುಡಿಯುವ ನೀರಿಗೆ 1 ಕೋಟಿ: ಗ್ರಾಮೀಣ ಭಾಗದ ತಾಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ತಲಾ 1 ಕೋಟಿ ರೂಪಾಯಿ ಹೆಚ್ಚುವರಿ ಹಣ ಘೋಷಿಸಲಾಗಿದೆ.
    Also Read  ಅಂದೊಮ್ಮೆ ಬಾಲಿವುಡ್‌ನಲ್ಲಿ ಕಡೆಗಣಿಸಿದ  ಪ್ರಿಯಾಂಕಾ ಚೋಪ್ರಾ ಇಂದು ವಿಶ್ವದ ಪ್ರತಿಷ್ಠಿತ ಬ್ರಾಂಡ್ ರೋಲೆಕ್ಸ್‌ನ ಅಂಬಾಸಿಡರ್! 

    ಡಿಸಿಗಳು ರೈತರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಕೃಷಿ ಚಟುವಟಿಕೆಗಳಿಗೆ ಮಾರ್ಗದರ್ಶನ ನೀಡಬೇಕು ಎಂದು ಅವರು ಸೂಚಿಸಿದರು.


    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಒಂದು ದೇಶವನ್ನೇ ಮಟ್ಟಾಶ್ ಮಾಡುವಷ್ಟು ನ್ಯೂಕ್ಲಿಯರ್ ಪವರ್ stock ಇರಾನ್ನಲ್ಲಿ ಇದ್ಯಾ !?
    ಮಕ್ಕಳ ಕೈಗೆ AI ಕೊಡುವ ಮುನ್ನ ಸರ್ಕಾರ ಯೋಚಿಸಬೇಕಾದ ಗಂಭೀರ ವಿಷಯಗಳೇನು…?!!
    ಮುಂಜಾನೆ ಹೊತ್ತಿ ಉರಿದ ಆಸ್ಪತ್ರೆ…ಜೀವ ಉಳಿಸಿಕೊಳ್ಳಲು ರೋಗಿಗಳ ಪರದಾಟ.ಬಿಹಾರದಲ್ಲಿ ಹೃದಯವಿದ್ರಾವಕ ಘಟನೆ.
    AAP ಸದ್ದು ಮಂಗಳೂರಲ್ಲೂ! ಜನರ ಸಮಸ್ಯೆಗೆ ನೇರ ಹೋರಾಟ
    ವೇಣೂರಿನಲ್ಲಿ ಬಾಲಕಿಗೆ ಶಾಲಾ ರಿಕ್ಷಾಚಾಲಕನಿಂದಲೇ ಲೈಂಗಿಕದೌರ್ಜನ್ಯ: ಮಕ್ಕಳಿಗೆ ಯಾರನ್ನು ನಂಬಬೇಕು? ಯಾರಿಗೆ ಹೇಳಬೇಕು? — ಪೋಷಕರೇ ಎಚ್ಚರ
    “ಅಪ್ರಾಪ್ತ ಅತ್ಯಾಚಾರ ಸಂತ್ರಸ್ತರಿಗೆ ಅಬಾರ್ಷನ್ ಮಾಡಲು ಆದ್ಯತೆ ,ಕಾನೂನು ತಿದ್ದುಪಡಿ”- ಸುಪ್ರೀಂ ಕೋರ್ಟ್
    ಡಿಕೆ ಶಿವಕುಮಾರ್ ಪ್ರತಿಷ್ಠೆ ಪಣಕ್ಕಿಟ್ಟ ಪರಿಷತ್ ಚುನಾವಣೆ!
    ತಿಮರೋಡಿ ಸೇರಿ ನಾಲ್ವರಿಗೆ ಕೇಸ್…
    ಕ್ಲೀನ್ ಮಂಗಳೂರು ಕನಸು ನಿಮ್ಮದಾಗಿದ್ದರೆ ಇಲ್ಲಿದೆ ದಾರಿ…ಸ್ವಚ್ಛ ಮಂಗಳೂರು ಅಭಿಯಾನ: ನಾಗರಿಕರ ಕೈಗೆ ಸಿಕ್ಕಿತು ವಾಟ್ಸಾಪ್ ಅಸ್ತ್ರ….!
    ‘₹1ಕ್ಕೆ ಫ್ಯಾಷನ್’ ಜಾಹೀರಾತು ವೈರಲ್… ಮಾಲಾಡ್ ಮಾಲ್‌ನಲ್ಲಿ ನಿಯಂತ್ರಣ ತಪ್ಪಿದ ಜನಸಾಗರ-ಸ್ಟ್ಯಾಂಪೀಡ್ ಭೀತಿ ಮೂಡಿಸಿದ ಜನಸಂದಣಿ!
    ಪತ್ರಿಕೋದ್ಯಮವೇ? ಪ್ರಚೋದನೆಯೇ? ಸುಳ್ಳು ಸುದ್ದಿಗೆ ಕೋಮು ಬಣ್ಣ ಆರೋಪದಲ್ಲಿ 7 ಮಾಧ್ಯಮಗಳ ವಿರುದ್ಧ FIR…!
    ಶಿರ್ತಾಡಿ ಭಾಗದಲ್ಲಿ ಮರಗಳ್ಳತನ ಆರೋಪ:  ತನಿಖೆ ನಡೆಸಿ ಕ್ರಮ ಕೈಗೊಳ್ಳಲು ಆಗ್ರಹ
    ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ!
    ಹೆಡ್‌ಲೈಟ್ ಇಲ್ಲ… ಮೊಬೈಲ್ ಟಾರ್ಚ್‌ನಲ್ಲೇ ಓಡಿದ ಸರ್ಕಾರಿ ಬಸ್!
    ಪ್ರಕೃತಿಯ ಮುನಿಸಿಗೆ ಕರಗುತ್ತಿದೆ ಯುರೋಪ್ ….!ತಂತ್ರಜ್ಞಾನದ ಅಹಂಕಾರವನ್ನು ಸುಟ್ಟು ಬೂದಿ ಮಾಡುತ್ತಿರುವ ಯುರೋಪ್ ಹೀಟ್‌ವೇವ್!
    ₹10,000ಕ್ಕೆ NEET-UG 2026 ಪ್ರಶ್ನೆಪತ್ರಿಕೆ? ದೇಶವೇ ಬೆಚ್ಚಿಬಿದ್ದ ಲೀಕ್ ಸ್ಕಾಂಡಲ್!ಟೆಲಿಗ್ರಾಂ ಸೀಕ್ರೆಟ್ ಚಾಟ್ ವೈರಲ್…22 ಲಕ್ಷ ವಿದ್ಯಾರ್ಥಿಗಳ ಕನಸಿಗೆ ದೊಡ್ಡ ಹೊಡೆತ — NEET 2026 ರದ್ದು!
    ಕರ್ನಾಟಕ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: 123 ಕೇಂದ್ರಗಳ ಪಾಸ್ ವಿತರಣ –ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿದೆ, ಬಸ್‌ಗಳ ಸಂಖ್ಯೆಯೂ ಹೆಚ್ಚುತ್ತದೆಯೇ?
    2028ರ ಬಳಿಕವೂ ಡಿಕೆಶಿ ಕುರ್ಚಿ ಫಿಕ್ಸ್? ಶ್ರೀಗಳ ಭವಿಷ್ಯವಾಣಿ ವೈರಲ್!8–10 ವರ್ಷ ಸಿಎಂ ಪಟ್ಟ? 
    ಫೇಸ್‌ಬುಕ್ ‘ಸುಂದರಿ’ಅವಳಲ್ಲ ಅವನು!ಲವ್ ಮಾಡಿ ಹೆಂಡತಿ ಅಂದುಕೊಂಡವನು ಗಂಡಸು ಅಂತ ಗೊತ್ತಾದಾಗ ನಡೆದಿದ್ದೇ ಬೇರೆ!
    MRPL ಭೀಕರ ಸ್ಫೋಟ: ಮನೀಶ್ ಕರ್ಕೇರ ಬಲಿ; ರಾಜೇಶ್‌ಗೆ 35% ಸುಟ್ಟ ಗಾಯ, 8 ಮಂದಿಗೆ ಗಾಯ
    ಅಹಮದಾಬಾದ್ ಬಾಂಬ್ ಸ್ಫೋಟ:38 ಮಂದಿಗೆ ಗಲ್ಲು ಎತ್ತಿಹಿಡಿದ ಹೈಕೋರ್ಟ್
    ಮನುಷ್ಯನಿಗಿಂತ AI ನಿಯಂತ್ರಣ ತಪ್ಪಿ ಶಕ್ತಿಶಾಲಿಯಾದ್ರೆ…ಚೀನಾದ ಎಚ್ಚರಿಕೆ ಬೆಚ್ಚಿಬೀಳಿಸುವಂತಿದೆ!ರಾಷ್ಟ್ರೀಯ ಭದ್ರತೆ ಬಗ್ಗೆ ಶುರುವಾಯ್ತು ಭಾರೀ ಆತಂಕ!
    ಪುಲ್ವಾಮಾ ದಾಳಿಯ ಮಾಸ್ಟರ್ಮೈಂಡ್ ಹಮ್ಜಾ ಬುರ್ಹಾನ್ ಹತ್ಯೆ: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ರಹಸ್ಯ ಗುಂಡಿನ ದಾಳಿ
    ಹವ್ಯಕ ಭಾಷಾ ಅಕಾಡೆಮಿ ಅಸ್ತಿತ್ವಕ್ಕೆ ಗ್ರೀನ್ ಸಿಗ್ನಲ್ 
    ಶಂಕರಾಚಾರ್ಯರ ಹೊಸ ಯೋಜನೆ ದೇಶವನ್ನೇ ಚರ್ಚೆಗೆ ತಳ್ಳಿದ ಕಾರಣ ಏನು?Go-LXಒಂದು ಕ್ಲಿಕ್‌ನಲ್ಲಿ ಹಸು ಮಾರಾಟ…
    ದೇವಳದ ಗೋಲ್ಮಾಲ್ ತಡೆಗೆ ಉಪ-ಮುಖ್ಯಮಂತ್ರಿ ಬುಲಾವ್!
    ಡಿಜಿಟಲ್ ದಿಗ್ಗಜರಿಗೆ ₹2 ಕೋಟಿ ಲೀಗಲ್ ನೋಟಿಸ್ ಶಾಕ್!ಯೂಟ್ಯೂಬ್ ಸ್ಟಾರ್ vs ಟಿವಿ ಸ್ಟಾರ್ ನಡುವಿನ ಕಾನೂನು ಸಮರ!
    ₹5.85 ಕೋಟಿ ಯೋಜನೆಯ ಜಪ್ಪು ಮಂಗಳಾದೇವಿ ಬಸ್ ಟರ್ಮಿನಲ್ ಉದ್ಘಾಟನೆಗೆ ಎರಡು ಬಾರಿ ಗೌಜಿ ಸಮಾರಂಭ; ಬಸ್ ಸಂಚಾರಕ್ಕೆ ಮಾತ್ರ ಇನ್ನೂ ಮೀನ ಮೇಷ !
    ಮುಖವಾಡ ಧರಿಸಿದವರನ್ನು ನಂಬುವ ಮುನ್ನ ನೂರು ಬಾರಿ ಯೋಚಿಸಿ…!
    ಕಸ ಸಾಗಾಣಿಕೆ ಟೆಂಡರ್‌ನಲ್ಲಿ ₹133 ಕೋಟಿ ಅಕ್ರಮ ಆರೋಪ