📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ರಸ್ತೆಯ ವಿಚಾರಕ್ಕೆ ನೆರೆಹೊರೆಯರ ನಡುವೆ ಬಾರಿ ಗಲಾಟೆ !

ಬಂಟ್ವಾಳ ತಾಲೂಕಿನ ಚೇಳೂರು ಗ್ರಾಮದಲ್ಲಿ ಮನೆಗೆ ಹೋಗುವ ರಸ್ತೆಯ ವಿಚಾರವಾಗಿ ಉಂಟಾದ ತಕರಾರು ನೆರೆಹೊರೆಯರ ನಡುವಿನ ಗಂಭೀರ ಗಲಾಟೆಗೆ ಕಾರಣವಾಗಿದ್ದು, ಇದೀಗ ಎರಡೂ ಪಾರ್ಶ್ವಗಳಿಂದ ಪೊಲೀಸರಿಗೆ ದೂರು ಸಲ್ಲಿಕೆಯಾಗಿದೆ. ಈ ಘಟನೆ ಸಮಾಜದಲ್ಲಿ ಸಹಕಾರ ಮತ್ತು ಸಂವಹನದ ಕೊರತೆಯು ಹೇಗೆ ಸಮಸ್ಯೆಗಳನ್ನು ಹೆಚ್ಚಿಸುತ್ತದೆ ಎಂಬುದಕ್ಕೆ ಉದಾಹರಣೆಯಾಗಿದೆ.

ಚೇಳೂರು ಗ್ರಾಮದ ಕೆದುರು ನಿವಾಸಿ ಡಯಾನಾ ಜೆಸ್ಟಿನ್ ಡಿಸೋಜಾ (51) ಅವರ ದೂರಿನ ಪ್ರಕಾರ, ತಮ್ಮ ಮನೆಗೆ ಹೋಗುವ ರಸ್ತೆಯ ವಿಚಾರವಾಗಿ ಸೈಂಟ್ ಥೋಮಸ್ ಚರ್ಚ್‌ಗೆ ಸಂಬಂಧಿಸಿದವರೊಂದಿಗೆ ಕೆಲವು ದಿನಗಳಿಂದ ತಕರಾರು ನಡೆಯುತ್ತಿತ್ತು. ಮಾರ್ಚ್ 14ರಂದು ಚರ್ಚ್‌ಗೆ ಸಂಬಂಧಿಸಿದವರು ಜೆಸಿಬಿ ಯಂತ್ರವನ್ನು ತಂದು ರಸ್ತೆ ಕಾಮಗಾರಿ ನಡೆಸುವ ವೇಳೆ, ಡಯಾನಾ ಅವರ ಮನೆಗೆ ಹೋಗುವ ದಾರಿಯ ಮಧ್ಯೆ ಹೊಂಡ ತೆಗೆದು ರಸ್ತೆ ಬಂದ್ ಮಾಡಿರುವುದಾಗಿ ಆರೋಪಿಸಲಾಗಿದೆ.

ಸಂಜೆ ಸುಮಾರು 4 ಗಂಟೆಗೆ ಡಯಾನಾ ಹಾಗೂ ಅವರ ಮಕ್ಕಳು ಸ್ಥಳಕ್ಕೆ ಹೋಗಿ “ನಮ್ಮ ಮನೆಗೆ ಹೋಗಲು ದಾರಿ ಬಿಡಿ” ಎಂದು ಕೇಳಿದಾಗ, ಅಲ್ಲಿದ್ದ ಕೆಲವರು ಕೋಪಗೊಂಡು ಗಲಾಟೆ ನಡೆಸಿದ್ದಾರೆ ಎನ್ನಲಾಗಿದೆ. ಜೆಸಿಂತಾ ಡಿಸೋಜಾ, ಜೆಸಿಂತಾ ಕಸ್ತಾ, ಅನಿಷಾ ಡಿಸೋಜಾ, ಹಿಲ್ಲಾ ಮೊಂತೇರೊ, ದೊರಾ ರೊಡ್ರಿಗಸ್, ಅಲೆನ್ ರೋಸ್ ಸೇರಿದಂತೆ ಕೆಲವರು ಸೇರಿ ಅವಾಚ್ಯ ಶಬ್ದಗಳಿಂದ ಬೈದು, ಡಯಾನಾ ಅವರನ್ನು ರಸ್ತೆಯಲ್ಲಿ ಎಳೆದಾಡಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಗಲಾಟೆಯಲ್ಲಿ ಡಯಾನಾ ಅವರ ಕೈಗಳಿಗೆ ಗಾಯವಾಗಿದ್ದು, ಅವರನ್ನು ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಇನ್ನೊಂದೆಡೆ, ಜೆಸಿಂತಾ ಡಿಸೋಜಾ (54) ಅವರು ಕೂಡ ಪ್ರತಿದೂರು ನೀಡಿದ್ದು, ಅವರ ದೂರಿನ ಆಧಾರದ ಮೇಲೆ ಮತ್ತೊಂದು ಪ್ರಕರಣ ದಾಖಲಾಗಿದೆ.

ಈ ಘಟನೆ ಹಿನ್ನೆಲೆಯಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

#civil violence#crime#neighbours#road dispute

COMMENTS

Login with Gmail to comment

ಇನ್ನಷ್ಟು ಸುದ್ದಿ

ಧೂಮಪಾನ ಮಾಡುತ್ತಿದ್ದೀರಾ? ನಿಮ್ಮ ಮುಖ ನಿಧಾನವಾಗಿ ನಾಶವಾಗುತ್ತಿದೆ…
ವರದಕ್ಷಿಣ ಪ್ರಕರಣ:5.5 ತಿಂಗಳ ಮಗುವಿಗೂ ದೈಹಿಕ ಹಿಂಸೆ….!
ಇಂದು ಮಾಜಿ ಸಚಿವರಿಂದ ಸೌಹಾರ್ದ ಇಫ್ತಾರ್ ಕೂಟ 
ದೈವದ ನ್ಯಾಯ ತಡವಾಗಬಹುದು… ಆದರೆ ತಪ್ಪದು!”ತುಳುನಾಡಿನ ದೈವಶಕ್ತಿ – ನಂಬಿಕೆಗೆ ಸಾಕ್ಷಿಯಾದ ನಿಜಘಟನೆ ..
ಹವ್ಯಕ ಭಾಷಾ ಅಕಾಡೆಮಿ ಅಸ್ತಿತ್ವಕ್ಕೆ ಗ್ರೀನ್ ಸಿಗ್ನಲ್ 
ಹಿಂದೂ ಬುಡಕಟ್ಟು ಸಮಾಜದ ರುದ್ರಾಕ್ಷಿ ಸುಂದರಿ ಮುಸ್ಲಿಂ ಹುಡುಗನ ಮದುವೆಯಾದ್ಲು
ಆರೋಪಿ ಸಮೀರ್ ಮುಲ್ಲಾ ಸ್ಫೋಟಕ ಹೇಳಿಕೆ-ಖುಷಿ ಒಳ್ಳೆ ಹುಡುಗಿ-🔥 ಹುಬ್ಬಳ್ಳಿ ಲವ್ ಜಿಹಾದ್ ಅಲ್ಲ ಎಂದ ಪೊಲೀಸರು : ಇದೀಗ ಹೊಸ ಟ್ವಿಸ್ಟ್!
ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆಯ ಕ್ರೆಡಿಟ್ ಪಡೆದುಕೊಳ್ಳಲು ಶುರುವಾಯಿತು ಫೈಟ್
ಭಾರತದಲ್ಲಿ ಎಚ್‌ಪಿವಿ (HPV) ಲಸಿಕೆ ಕಾರ್ಯಕ್ರಮ ಹೆಣ್ಣೆತ್ತವರು ತಿಳಿದುಕೊಳ್ಳಲೇಬೇಕಾದ ವಿಚಾರ
“ಮಂಗಳೂರಲ್ಲಿ ಡ್ರೈ ಡೇ ಘೋಷಣೆ -ಎರಡು ದಿನ ಬಾರ್‌ಗಳಿಗೆ ಲಾಕ್ ..!” ದಕ್ಷಿಣ ಕನ್ನಡದಲ್ಲಿ ಕಟ್ಟುನಿಟ್ಟಿನ ಆದೇಶ
ಒಂದು ಕ್ಷಣದಲ್ಲಿ ನಗು, ಇನ್ನೊಂದು ಕ್ಷಣದಲ್ಲಿ ನಿಶ್ಶಬ್ದ ಕಣ್ಣೀರು…
ಗೃಹಲಕ್ಷ್ಮಿ ಹಣ ಉಳಿಸಿ ದೇವಿಗೆ ₹17 ಲಕ್ಷ ದೇಣಿಗೆ!
ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷದ ಕಮೆಂಟ್ ಗಳನ್ನು ಹಾಕಿದ ಆರೋಪಿಯ ಬಂಧನ
“ಮಂಜಿನ ನಡುವೆ ಕ್ಷಣಾರ್ಧದಲ್ಲಿ ಮಾಯವಾದ ಮಗಳು”ಶ್ರೀನಂದಾ ಶವವಾಗಿ ಪತ್ತೆ…!
ಗುರು ಬ್ರಹ್ಮ – ಗುರು ವಿಷ್ಣು ಅನ್ನುವ ಕಾಲ ಮುಗಿದು ಹೋಯ್ತೇ?
ಅಮೆರಿಕಾ ಭಾರತವನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದೆ” – ಕೆ.ಸಿ. ವೇಣುಗೋಪಾಲ್
ಘರ್ ವಾಪ್ಸಿ ಯಾದ ಯೋಗೇಶ್ ಶೆಟ್ಟಿ ಜೆಪ್ಪು
ಗಂಡನ ಮನೆಯಿಂದ ಯುವತಿಯನ್ನು ಎಳೆದೊಯ್ದರು
ಕಾರ್ಕಳದ ವೈದ್ಯಕೀಯ ವಿದ್ಯಾರ್ಥಿನಿ ಭೀಕರ  ಅಪಘಾತಕ್ಕೆ ಬಲಿ
ಸಚಿವ ಜಮೀರ್ ಕಥೆ ಗೋವಿಂದ!!!?
ಜೈನ ಸನ್ಯಾಸ ದೀಕ್ಷೆ ನಿಯಮಗಳು ಏನು ಗೊತ್ತಾ?
ನಾಗಪ್ರತಿಷ್ಠಾ ಮಂಟಪದ ಎದುರು ನಡೆದಾಡಲು ಸ್ಥಳವಿಲ್ಲದಷ್ಟು ಭಕ್ತಾದಿಗಳು …
ಟೂರಿಸಂ ಡೆವಲಪ್‌ಮೆಂಟ್‌ಗೆ ಅಧಿಕಾರಿಗಳೇ ಮಾರಕ
2026 ವಿಧಾನಸಭೆ ಚುನಾವಣೆ – ಮುಖ್ಯ ಮಾಹಿತಿ
ಕಳುವಾದ ವಾಹನ ಸಮೇತ ಕಳ್ಳರ ಬಂಧನ…!
ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ
ಗ್ಯಾಸ್ ಅಭಾವ ಮತ್ತು ಬೆಲೆ ಏರಿಕೆ, ಸುಳ್ಳು ಎನ್ನುತ್ತಿದೆ-HPCL
ರಾಜ್ಯಸಭೆಗೆ ಬಿಜೆಪಿಯಿಂದ 9 ಜನರ ಪಟ್ಟಿ ಬಿಡುಗಡೆ
ಮಹಿಳೆಯ ಸ್ಕೂಟಿಯನ್ನೇ ಕದ್ದ ಕಳ್ಳರು….. ಹೆಚ್ಚುತ್ತಿರುವ ವಾಹನ ಕಳ್ಳತನ
ಮಂಗಳೂರಿಗರಿಗೆ ಎಚ್ಚರಿಕೆ: ನೀರನ್ನು ಜಾಣ್ಮೆಯಿಂದ ಬಳಸಿ –ಮಾರ್ಚ್ ನಲ್ಲೇ ರೇಷನಿಂಗ್ ಮಾಡುವ ಪರಿಸ್ಥಿತಿ ಇದೆ…