📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ‘ಪೊಲೀಸರಿಗೆ ದೂರು ಕೊಡ್ತೀಯಾ?’… ಗಾಂಜಾ ವ್ಯಸನಕ್ಕೆ ಸೈಜು ಕಲ್ಲಿನಿಂದ ಅಜ್ಜಿಯ ತಲೆ ಪುಡಿ ಮಾಡಿದ ಮೊಮ್ಮಗ!ಅಜ್ಜಿಯೇ ಬಲಿ!

    ಶಿವಮೊಗ್ಗದಲ್ಲಿ ಬೆಚ್ಚಿಬೀಳಿಸಿದ ದುರಂತ:ಗಾಂಜಾ ವಿರುದ್ಧ ದೂರು ನೀಡಲು ಹೊರಟಿದ್ದ ಅಜ್ಜಿಯನ್ನು ಸೈಜುಕಲ್ಲಿನಿಂದ ಹೊಡೆದು ಕೊಂದ ಮೊಮ್ಮಗ

    ಶಿವಮೊಗ್ಗ ನಗರದ ಮಿಳಘಟ್ಟ ವಾರ್ಡಿನ ಆನಂದರಾವ್ ಬಡಾವಣೆಯಲ್ಲಿ ಬುಧವಾರ ಸಂಜೆ ಮನಕಲಕುವ ಹಾಗೂ ಭೀಕರ ಘಟನೆ ನಡೆದಿದ್ದು, ಗಾಂಜಾ ವ್ಯಸನದ ವಿರುದ್ಧ ಪೊಲೀಸರಿಗೆ ದೂರು ನೀಡಲು ಹೊರಟಿದ್ದ ವೃದ್ಧೆಯನ್ನು ಆಕೆಯ ಮೊಮ್ಮಗನೇ ಸೈಜುಕಲ್ಲಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.

    ಆನಂದರಾವ್ ಬಡಾವಣೆಯ ತಖ್ವಾ ಮಸೀದಿ ಸಮೀಪದ ರಸ್ತೆಯಲ್ಲಿ ಈ ಕೃತ್ಯ ನಡೆದಿದ್ದು, ಆರೋಪಿಯನ್ನು ಕಿಶೋರ್ ಎಂದು ಗುರುತಿಸಲಾಗಿದೆ.

    ಮಾಹಿತಿಯ ಪ್ರಕಾರ, ಕಿಶೋರ್ ಗಾಂಜಾ ವ್ಯಸನಕ್ಕೆ ಒಳಗಾಗಿದ್ದ ಎನ್ನಲಾಗಿದ್ದು, ಈ ಕುರಿತು ಆತನ ಅಜ್ಜಿ ಹಲವು ಬಾರಿ ದೊಡ್ಡಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬುಧವಾರ ಸಂಜೆ ಕೂಡ ದೂರು ನೀಡಲು ಮನೆಯಿಂದ ಹೊರಟಿದ್ದ ವೇಳೆ, ಮೊಮ್ಮಗ ಆಕೆಯನ್ನು ತಡೆದು ಹಲ್ಲೆ ನಡೆಸಿದ್ದಾನೆ. ತಳ್ಳಿದ ಪರಿಣಾಮ ವೃದ್ಧೆ ಕೆಳಗೆ ಬಿದ್ದಿದ್ದು, ಬಳಿಕ ಸೈಜುಕಲ್ಲು ಎತ್ತಿ ತಲೆಯ ಮೇಲೆ ಬಡಿದು ಭೀಕರವಾಗಿ ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

    Also Read  ಲೈಂಗಿಕ ಕಿರುಕುಳ ನೀಡಿದ ಬಾಸ್‌ಗೆ ಪೊಲೀಸರ ಮುಂದೆಯೇ ಮುಖಕ್ಕೆ ಮಸಿ ಬಳಿದು ಕೆನ್ನೆಗೆ ಬಾರಿಸಿದ ಮಹಿಳೆ!

    ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದು, ದೊಡ್ಡಪೇಟೆ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲು ಕ್ರಮ ಕೈಗೊಳ್ಳಲಾಗಿದೆ.

    ಸ್ಥಳೀಯರ ಪ್ರಕಾರ, ಮಿಳಘಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗಾಂಜಾ ಮಾರಾಟ ಮತ್ತು ವ್ಯಸನದ ಹಾವಳಿ ಹೆಚ್ಚುತ್ತಿರುವ ಬಗ್ಗೆ ಈ ಹಿಂದೆಯೇ ಪೊಲೀಸ್ ಇಲಾಖೆಗೆ ಹಲವು ಬಾರಿ ದೂರು ಹಾಗೂ ಮನವಿ ಸಲ್ಲಿಸಲಾಗಿತ್ತು. ಆದರೂ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗದ ಹಿನ್ನೆಲೆಯಲ್ಲಿ ಇದೀಗ ಅಮಾಯಕ ವೃದ್ಧೆಯೊಬ್ಬರು ಜೀವ ಕಳೆದುಕೊಂಡಿರುವುದು ಸಾರ್ವಜನಿಕರಲ್ಲಿ ತೀವ್ರ ಆತಂಕ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ.

    ಈ ಘಟನೆ ಶಿವಮೊಗ್ಗ ನಗರದಲ್ಲಿ ಮಾದಕ ವಸ್ತುಗಳ ಹಾವಳಿ ಎಷ್ಟರ ಮಟ್ಟಿಗೆ ಅಪಾಯಕಾರಿ ರೂಪ ಪಡೆದುಕೊಂಡಿದೆ ಎಂಬುದನ್ನು ಮತ್ತೊಮ್ಮೆ ಎತ್ತಿ ತೋರಿಸಿದ್ದು, ಗಾಂಜಾ ಜಾಲದ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಏರ್ ಇಂಡಿಯಾ ವಿಮಾನ ಸೇವೆ ಸ್ಥಗಿತ…40,000ಕ್ಕೂ ಹೆಚ್ಚು ಟೆಲ್ ಅವೀವ್‌ ಭಾರತೀಯರ ಪ್ರಯಾಣ ಅತಂತ್ರ…!
    “ಪತ್ನಿ ಮನೆಗೆಲಸದ ಸೇವಕಿ ಅಲ್ಲ!” — ಮದುವೆ ಎಂದರೆ ಹೆಂಡತಿಯ ಸ್ವಾತಂತ್ರ್ಯ ಕಸಿಯುವ ಪರವಾನಗಿ ಅಲ್ಲ: ಹೈಕೋರ್ಟ್
    ಬೆಂಗಳೂರು ಟು ಮುಂಬೈ  ಐದೇ ಘಂಟೆ ಪ್ರಯಾಣ- ಎಕ್ಸ್ಪ್ರೆಸ್ ಹೈವೇಗೆ ಅಸ್ತು
    ತಮಿಳುನಾಡು ರಾಜಕೀಯದಲ್ಲಿ ದಿನಕ್ಕೊಂದು ಟ್ವಿಸ್ಟ್ -TVK wave ಎಷ್ಟು ದೂರ ಸಾಗುತ್ತದೆ?
    ಸುಬ್ರಹ್ಮಣ್ಯ ಅಭಿವೃದ್ಧಿ — ಸ್ಥಳೀಯರ ಜೊತೆಗೂಡಿ ಮಾತ್ರ ಸಾಧ್ಯ!”
    ಇಂದು ಮಾಜಿ ಸಚಿವರಿಂದ ಸೌಹಾರ್ದ ಇಫ್ತಾರ್ ಕೂಟ 
    ರೈತರಿಗೆ ಬಿಗ್ ರಿಲೀಫ್! ಕೃಷಿ ಸಾಲ ಮರುಪಾವತಿಗೆ 12 ತಿಂಗಳ ಮೊರಟೋರಿಯಂ
    ಗುಜರಾತ್ ಪೊಲೀಸರಲ್ಲಿ ಆಗದ ಕೆಲಸ, ಒಬ್ಬ ಮಂತ್ರವಾದಿಯಿಂದ ಆಯ್ತು
    ಬೆಂಗಳೂರಿನಲ್ಲಿ₹2,384 ಕೋಟಿ GSTದಂಧೆ ಭೇದಿಸಿದ ಇಲಾಖೆ.. ಭರ್ಜರಿ ದಾಳಿ! ಭಾರೀ GST ಸ್ಕ್ಯಾಂ .. ಹಲವರು ಬಲೆಗೆ ಬೀಳುವ ಸಾಧ್ಯತೆ!…
    ಬಿಲ್‌ಗಾಗಿ ಶವ ತಡೆದರೆ ಹುಷಾರ್! ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್‌ ಕ್ರಮ?
    ಮೋದಿ ಪೋಸ್ಟ್‌ನಿಂದ ಮೆಟಾಗೆ ಸಮನ್ಸ್! ಡಿಜಿಟಲ್ ಸುರಕ್ಷತೆ ಕುರಿತು ಕೇಂದ್ರದ ಕಠಿಣ ಪ್ರಶ್ನೆಗಳು
    ಕಾಂಗ್ರೆಸ್ ಹೈಕಮಾಂಡ್ ಖಡಕ್ ವಾರ್ನಿಂಗ್: ಸ್ವಾಮೀಜಿ, ಧಾರ್ಮಿಕ ಮುಖಂಡರ ಶಿಫಾರಸುಗಳಿಗೆ ಸಿಗಲ್ಲ ಮನ್ನಣೆ!
    ಕೊಲೆ ಆರೋಪಿಗಳ ಕಾರು ಮಾಣಿಯಲ್ಲಿ ಪತ್ತೆ ….!
    ಸಭೆಯ ನಡುವೆ ಬ್ಲಾಕ್ ಅಧ್ಯಕ್ಷ ಕಾಣೆ …ಕಾರ್ಯಕರ್ತರು ಗುಸು ಗುಸು – ಪಿಸುಪಿಸು
    ದವಳ ಕೋ- ಆಪರೇಟಿವ್ನ ಈ ಸಾಲಿನ ವ್ಯವಹಾರ ಎರಡುನೂರು ಕೋಟಿ
    ಫೇಸ್‌ಬುಕ್ ಜಾಹೀರಾತು ನಂಬಿ ₹32.68 ಲಕ್ಷ ಕಳೆದುಕೊಂಡ ಕಾರ್ಕಳದ ವ್ಯಕ್ತಿ!
    ಇತಿಹಾಸ ಸೇರಿತು ಮಂಗಳೂರಿನ ಮೋತಿ ಮಹಲ್…..
    ಇರಾನ್ ಬಿಕ್ಕಟ್ಟು ವೀಸಾ ವಿಸ್ತರಿಸಲು ವಿದೇಶಿ ಪ್ರಜೆಗಳು ಹತ್ತಿರದ FRRO ಅನ್ನು ಸಂಪರ್ಕಿಸಲು ಭಾರತ ಸಲಹೆ
    “ನನ್ನ ಮಗಳನ್ನೂ ಅದೇ ಕೋಟೆಯಿಂದ ಕೆಳಗೆ ತಳ್ಳಿ!” – ನಿಶ್ಚಿತ ವರನ ಹತ್ಯೆಗೈದ ಸಿಯಾ ಹೆತ್ತವರ ಆಕ್ರೋಶದ ಹೇಳಿಕೆ
    ದೊಡ್ಡ ಬಜೇಟ್  ತುಳು ಸಿನಿಮಾ`ಗಜಾನನ ಕ್ರಿಕೆಟರ್ಸ್’ ಮೇ 22 ರಂದು ತೆರೆಗೆ
    ಜಿಲ್ಲಾ ಸರ್ಜನ್ ಡಾ. ಅಶೋಕ್ರನ್ನು ತಕ್ಷಣವೇ ಅಮಾನತು ಮಾಡಿ- ದ.ಸಂ.ಸ. ಆಗ್ರಹ
    ಪರಿಸರ ನಾಶಕ್ಕಾಗಿ ಸುಳ್ಳು ಸರ್ಟಿಫಿಕೇಟ್ ರೆಡಿಮಾಡಿಕೊಂಡು ಒಂದು ಊರನ್ನೇ ಭಯದಲ್ಲಿರಿಸಿದ ಉಡುಪಿ ಜಿಲ್ಲಾ ಆಡಳಿತ
    ಜೈಲಿನೊಳಗೆ ಮೊಬೈಲ್ ಮಾಫಿಯಾ: ಖತರ್ನಾಕ್ ಐಡಿಯಾ..!
    ಇದು ಕಾಕ್ರೋಚ್ ಪವರ್, ಯಾರು ಮಾಡಲಾಗದ್ದನ್ನು ಮಾಡಿದ  ಸ್ಟೂಡೆಂಟ್ಸ್
    ರಾಮಮಂದಿರ ಟ್ರಸ್ಟ್‌ನ ಮಹತ್ವದ ಹೇಳಿಕೆ!ಎಲ್ಲಾ ಕಾಣಿಕೆಗಳು ,ದೇಣಿಗೆ,ಚಿನ್ನ-ಬೆಳ್ಳಿ ಸೇರಿ 2,800 ಅಮೂಲ್ಯ ವಸ್ತುಗಳುಸುರಕ್ಷಿತ
    ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ – 10 ರೋಗಿಗಳ ದುರ್ಮರಣ-11 ಸಿಬ್ಬಂದಿಗೆ ಗಾಯ
    ನಾಟಕ ಕಲಾವಿದೆ ಸೌಮ್ಯ ಶೆಟ್ಟಿ ಬಂಧನ
    ಮಂಗಳೂರು ನಗರದಲ್ಲಿ ಭಾರೀ ಪ್ರಮಾಣದ MDMA ವಶ – ಇಬ್ಬರು ಡ್ರಗ್ ಪೆಡ್ಲರ್‌ಗಳ ಬಂಧನ…
    ಚೀನಾಗೆ ಮಾತುಕತೆ, ರಷ್ಯಾ–ಉಕ್ರೇನ್‌ಗೆ ಸಂಧಾನ; ವಿಶ್ವ ವೇದಿಕೆಯಲ್ಲಿ ಭಾರತದ ಡಬಲ್ ಡಿಪ್ಲೊಮಸಿ!
    ₹168 ಕೋಟಿ ಆದಾಯದೊಂದಿಗೆ ಕುಕ್ಕೆ ಸುಬ್ರಹ್ಮಣ್ಯ 15ನೇ ವರ್ಷವೂ ಅಗ್ರಸ್ಥಾನದಲ್ಲಿ… ಕೋಟಿ ಕೋಟಿ ಕಾಣಿಕೆ – ಭಕ್ತಿಯ ಮಹಾಪ್ರವಾಹ ಕುಕ್ಕೆ ದೇವಾಲಯ…