📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಸಂಕಷ್ಟದಲ್ಲಿರುವ ರಾಜ್ಯದ ಜನತೆಗೆ ಬರೆ ಹಾಕಿದ ರಾಜ್ಯ ಸರ್ಕಾರ!

ರಾಜ್ಯದ ಮಾಧ್ಯಮ ವರ್ಗ ವಿಪರೀತ ಅನ್ನುವಷ್ಟು ಸಂಕಷ್ಟದಲ್ಲಿರುವ ಈ ಸಂದರ್ಭದಲ್ಲಿ, ಮಧ್ಯಮ ವರ್ಗದ ಆರ್ಥಿಕತೆಗೆ ಸಹಕಾರಿಯಾಗುವಂತಹ ಯೋಜನೆಯನ್ನು ತರುವುದು ಬಿಟ್ಟು, ಅವರ ಆರ್ಥಿಕ ಅಭಿವೃದ್ಧಿಗೆ ಸಹಕಾರವನ್ನು ಕೊಡುವುದು ಬಿಟ್ಟು ಅದೇ ಮಧ್ಯಮ ವರ್ಗದವರ ತಲೆಯ ಮೇಲೆ ಇನ್ನೊಂದಿಷ್ಟು ಹೊರೆಹೊರಿಸುವ ಕೆಲಸವನ್ನು ರಾಜ್ಯ ಸರ್ಕಾರವು ಈ ಕ್ಷಣದಿಂದಲೇ ಮಾಡಿರುವುದು ಖಂಡನೀಯ. ನಾಡಿನ ಜನಸಾಮಾನ್ಯರ ಹಿತ ದಷ್ಟಿಯಿಂದ ಕೂಡಿಲ್ಲ, ಸರ್ಕಾರದ ಈ ನಡೆ

ಇಂದಿನಿಂದಲೇ ಪೆಟ್ರೋಲ್ ಹಾಗೂ ಡಿಸೈನ್ ಬೆಲೆ ಬರೋಬ್ಬರಿ ಪ್ರತಿ  ಲೀಟರ್ಗೆ ಮೂರು ರೂನಷ್ಟು ಹೆಚ್ಚಳವಾಗಿದೆ. ಈ ಬೆಲೆ ಏರಿಕೆಯು ರಾಜ್ಯ ಸರ್ಕಾರದ ಕಡೆಯಿಂದ ಆಗಿದೆ ಅನ್ನುವ ಮಾಹಿತಿಯು ಬರುತ್ತಿದೆ.

ಕೇಂದ್ರ ಸರ್ಕಾರವು ಈಗಾಗಲೇ ಅಡುಗೆ ಅನಿಲಗಳ ಬೆಲೆ ಹೆಚ್ಚಳ ಮಾಡಿದೆ ಆ ಮೂಲಕ ಸಾಮಾನ್ಯ ಜನರ ತಲೆಯ ಮೇಲೆ ಹೊರೆಯನ್ನು ಹೊರೆಸಿಯಾಗಿದೆ. ಪೆಟ್ರೋಲ್ ಹಾಗೂ ಡಿಸೈನ್ ಬೆಲೆಯನ್ನು ಹೆಚ್ಚಿಸಬಹುದು ಎಂಬ ಅನುಮಾನವಿತ್ತು. ಆ ಕೆಲಸವನ್ನು ಕೇಂದ್ರ ಸರ್ಕಾರವು ಈ ಕ್ಷಣದವರೆಗೆ ಮಾಡಿಲ್ಲ. ಬಹುಶಹ ಕೆಲವು ರಾಜ್ಯಗಳಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯ ಕಾರಣದಿಂದಾಗಿ ಪೆಟ್ರೋಲ್ ಡೀಸೆಲ್ ಬೆಲೆಯ ವಿಚಾರದಲ್ಲಿ ಕೇಂದ್ರ ಸರ್ಕಾರವು ತಾತ್ಕಾಲಿಕ ಮೌನಕ್ಕೆ ಶರಣಾಗಿರಬಹುದು ಎಂದು ಹೇಳಲಾಗುತ್ತದೆ. 

ಅದೇನೇ ಇರಲಿ, ಇದೀಗ ರಾಜ್ಯದಲ್ಲಿ ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆಯನ್ನು ಹೆಚ್ಚಿಸಿ ರಾಜ್ಯದ ಖಜಾನೆಯನ್ನು ಭರ್ತಿ ಮಾಡಿಕೊಳ್ಳಲು ರಾಜ್ಯ ಸರ್ಕಾರವು ಪ್ಲಾನ್ ರೂಪಿಸಿದೆ ಎನ್ನಲಾಗುತ್ತಿದೆ. ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಗಳಿಂದಾಗಿ ಬಹುತೇಕ ಎಲ್ಲಾ  ವಸ್ತುಗಳ ಬೆಲೆಯೂ ಹೆಚ್ಚಳವಾಗುವುದು. ಪ್ರಯಾಣದ ದರದಲ್ಲೂ ಹೆಚ್ಚಳವಾಗಲಿದೆ, ಟ್ರಾನ್ಸ್ಪೋರ್ಟ್ ದರದಲ್ಲೂ ಹೆಚ್ಚಾಗಲಿದೆ. ಇದರ ಪರಿಣಾಮ, ನೇರವಾಗಿ ರಾಜ್ಯದ ಪ್ರತಿಯೊಬ್ಬರ ಮೇಲೂ ಹೊರೆಯಾಗಿ ಪರಿಣಮಿಸಲಿದೆ. 

ರಾಜ್ಯದಲ್ಲಿ ಎರಡು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹೊಸ್ತಿಲಿನಲ್ಲಿ ಇರುವಂತಹ ಸಂದರ್ಭದಲ್ಲಿ  ಇಂತಹದೊಂದು ದರ ಏರಿಕೆಯನ್ನು ರಾಜ್ಯ ಸರ್ಕಾರವು ಮಾಡಿರುವಂತದ್ದು ಬುದ್ಧಿವಂತಿಕೆಯ ನಡೆ ಅಂತೇನೂ ಅನಿಸಿಕೊಳ್ಳಲು ಸಾಧ್ಯವಿಲ್ಲ. ಇದರ ಅರ್ಥ ಪಕ್ಷದ ಅಭ್ಯರ್ಥಿಗಳ ಗೆಲುವು ಯಾರಿಗೋ ಇಷ್ಟವಿಲ್ಲ ಅಂತರ್ಥ ಅಂದುಕೊಳ್ಳಬೇಕೇ? ರಾಜಕೀಯ ಕಚ್ಚಾಟ ಏನೇ ಇರಲಿ, ಸರ್ಕಾರವು ಯಾವುದೇ ಪಕ್ಷದ್ದಿರಲಿ, ಜನರ ಪರವಾಗಿ ಜನರ ಮೇಲಿನ ಹೊರೆಯನ್ನು ಇಳಿಸುವಂತಹ ನಿಟ್ಟಿನಲ್ಲಿ ಮುಂದಡಿ ಇಡಬೇಕಿದ್ದ ಸರ್ಕಾರ ಇವತ್ತಿನ ಆರ್ಥಿಕ ಹಿಂಜರಿತದ ಕೆಟ್ಟ ಸಮಯದಲ್ಲಿ ಬೆಲೆ ಏರಿಕೆಯಂತಹ ನಿರ್ಧಾರಕ್ಕೆ ಹಸಿರು ನಿಶಾನೆ ತೋರಿಸಿರುವಂಥದ್ದು ಅಕ್ಷಮ್ಯವೇ ಸರಿ   

COMMENTS

Login with Gmail to comment

ಇನ್ನಷ್ಟು ಸುದ್ದಿ

ಇಸ್ರೇಲ್ ಸ್ಥಿತಿ ಶೋಚನೀಯ ಸೈನ್ಯದಲ್ಲೇ ಅಸಮಾಧಾನ
ನನ್ನನ್ನು ದುರ್ಬಲ ವ್ಯಕ್ತಿ ಅಂದುಕೊಳ್ಳಬೇಡಿ- U.T ಖಾದರ್
ವಿವಾಹಿತ ದಂಪತಿಗಳಿಗೆ ಜಂಟಿ ITR ವ್ಯವಸ್ಥೆ ತರಲು- ಸಂಸತ್ತಿನಲ್ಲಿ Raghav Chadha ಆಗ್ರಹ.
ಪಾಕಿಸ್ತಾನದಲ್ಲಿ ಹಿಂದೂ ಯುವತಿಯ ಸಾಧನೆ
ವಿಟ್ಲ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಚೇರಿಯಲ್ಲಿ ಗಲಾಟೆ:
ಧೂಮಪಾನ ಮಾಡುತ್ತಿದ್ದೀರಾ? ನಿಮ್ಮ ಮುಖ ನಿಧಾನವಾಗಿ ನಾಶವಾಗುತ್ತಿದೆ…
ಬಾರ್ ಲೆಕ್ಕಾಚಾರ-ಚೂರಿ ದಾಳಿ – ಯುವಕನ ಕುತ್ತಿಗೆಗೆ ಕೊಯ್ದು ಕೊಲೆ ಯತ್ನ
ಕಾರ್ಕಳ ಮಹಾಮಸ್ತಕಾಭಿಷೇಕಕ್ಕೆ ₹1.59 ಕೋಟಿ ಅನುದಾನ: ಮೊದಲ ಕಂತು ಬಿಡುಗಡೆ…
“ಬರ್ಕಾಸ್ತು ಘಟಕಕ್ಕೆ ‘ಬೋಗಸ್ ನಾಯಕತ್ವ’ – ಕರವೇ ಮಹಿಳಾ ಘಟಕದಲ್ಲಿ ಭಿನ್ನಮತ ಸ್ಫೋಟ!”
ಎಸ್.ಎಸ್.ಎಲ್.ಸಿ. ಪರೀಕ್ಷೆ: ಮಂಗಳೂರಲ್ಲಿ ನಿಷೇಧಾಜ್ಞೆ ಜಾರಿ
ಸಭೆಯ ನಡುವೆ ಬ್ಲಾಕ್ ಅಧ್ಯಕ್ಷ ಕಾಣೆ …ಕಾರ್ಯಕರ್ತರು ಗುಸು ಗುಸು – ಪಿಸುಪಿಸು
Top 5, ಹೆಚ್ಚು ಅನುದಾನ ಪಡೆದ ಇಲಾಖೆಗಳು ಯಾವವು ಗೊತ್ತಾ?
ಬೆಳ್ತಂಗಡಿ ಸ್ನಾನಕ್ಕೆ ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವು…
ಕರ್ನಾಟಕದಲ್ಲಿ ಯುಗಾದಿ ಹಬ್ಬಕ್ಕೂ ಮುನ್ನವೇ  ಮುಂಗಾರು  ಮಳೆರಂಗು – 5 ಜಿಲ್ಲೆಗಳಲ್ಲಿ ಆಲಿಕಲ್ಲು ಅಬ್ಬರ!
ಆಸಿಡ್ ದಾಳಿಗೊಳಗಾದ ಮಹಿಳೆಯರಿಗೆ ₹50 ಸಾವಿರ ಮಾಸಾಶನ: ಆಸಿಡ್ ಮಾರಾಟಕ್ಕೆ ಕಡಿವಾಣ ಹಾಕಲು ಸರ್ಕಾರ ಕ್ರಮ
ಹತ್ತು ವರ್ಷದಿಂದ ಪೊಲೀಸರಿಗೆ ಬೇಕಾದ ಆರೋಪಿಯನ್ನು ಕೊನೆಗೂ ಬಂಧಿಸಿದ ಪೊಲೀಸರು
ಸಿದ್ದು vs ಕೃಷ್ಣ -ಸಿದ್ಧು ವಿರುದ್ಧ ನೇರ ಸವಾಲು: ‘ಬಿ’ ರಿಪೋರ್ಟ್ ಪ್ರಶ್ನಿಸಿ ಸ್ನೇಹಮಯಿ ಕೃಷ್ಣನ ನಡೆ ಭ್ರಷ್ಟ ವ್ಯವಸ್ಥೆಗೆ ಬಿಗಿ ಹೊಡೆತ!”
ಮಧ್ಯಪ್ರಾಚ್ಯದಲ್ಲಿ ಯುದ್ಧ– ಸಂಕಷ್ಟದಲ್ಲಿ ಜಗತ್ತು-ಉಸಿರು ತಡೆದ ಪರಿಸ್ಥಿತಿ!ಏನಾಗ್ತಾ ಇದೆ…
“ಕಾಂತರಾ” ಖ್ಯಾತಿಯ ಸಪ್ತಮಿ ಗೌಡ, ದುಮುಕಿದ್ದು  ಹೋರಾಟದ ಅಂಗಳಕ್ಕೆ
ಮರಣದಂಡನೆ ಶಿಕ್ಷೆಗೆ ಈಡಾದ  ತಮಿಳುನಾಡು   ಪೊಲೀಸರು
AI ಡೀಪ್‌ಫೇಕ್ ಕೇವಲ ಸಿನಿಮಾ ನಟಿಯರಿಗೆ ಸೀಮಿತವಾಗಿಲ್ಲ .
ಉಂಡ ಮನೆಗೇ ಕನ್ನ ಹಾಕಿದ ದ್ರೋಹಿಗಳು 
ಜಗಳ ನಿಲ್ಲಿಸಲು ಹೋದವನ ಜೀವ ಹರಣ: ಮಾನವೀಯತೆ ಕುಸಿದರೆ ಸಮಾಜದ ನೆಮ್ಮದಿ ಎಲ್ಲಿ?”
ಮಂಗಳೂರು ಜಾರಂದಾಯ ಸ್ಥಾನದ ದೈವ ನರ್ತನ ವಿವಾದ – ಸ್ಪಷ್ಟನೆ- ಮರುಪ್ರಶ್ನೆ-ಇತ್ಯರ್ಥವಾಗುತ್ತಾ..?!
ಹತ್ತು ವರ್ಷದ ಮಗಳ ಹುಟ್ಟುಹಬ್ಬದ ಸಂಭ್ರಮ…  ವಿಧಿಯಾಟದಲ್ಲಿ ಕಣ್ಣೀರಾಗಿ ಮಾರ್ಪಟ್ಟ ದುರಂತ ಕಥೆ
ಅಮೆರಿಕಾ ಭಾರತವನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದೆ” – ಕೆ.ಸಿ. ವೇಣುಗೋಪಾಲ್
ಸಿಐಡಿ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್: ವಂಚಕರ ಬಲೆಯಿಂದ ಜಸ್ಟ್ ಎಸ್ಕೇಪ್
ಸಾಲದ ಹಣ ಕೇಳಿದ ವಿಚಾರಕ್ಕೆ ಚೂರಿಯಿಂದ ಕೊಲೆ ಯತ್ನ..
ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆಯ ಕ್ರೆಡಿಟ್ ಪಡೆದುಕೊಳ್ಳಲು ಶುರುವಾಯಿತು ಫೈಟ್
 “ಮೀನುಗಾರರ ಡೀಸೆಲ್ & ಸಿಲಿಂಡರ್ ಸಮಸ್ಯೆಗೆ ಸರ್ಕಾರದ ತುರ್ತು ಹಸ್ತಕ್ಷೇಪ -ಇಂಧನ ಭರವಸೆ: ಮಂಗಳೂರು ಬಂದರಿನಲ್ಲಿ ತುರ್ತು ಕ್ರಮ”-