📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಹಾಸನದಲ್ಲಿ ಮೀಸಲಾತಿ ವಿಚಾರಕ್ಕೆ ವಾಕ್ಸಮರ: ರೇವಣ್ಣ–ಶಿವಲಿಂಗೇಗೌಡ ತಿರುಗೇಟು

    ಹಾಸನ: ಗ್ರಾಮ ಪಂಚಾಯಿತಿ ಮೀಸಲಾತಿ ನಿಗದಿ ಹಾಗೂ ಜಿಲ್ಲಾಡಳಿತದ ಅಧಿಕಾರಿಗಳ ಸ್ಪಂದನೆ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಎಚ್.ಡಿ. ರೇವಣ್ಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ನಡುವೆ ವಾಕ್ಸಮರ ತೀವ್ರಗೊಂಡಿದೆ.

    ಜನಪ್ರತಿನಿಧಿಗಳು ಕ್ಷೇತ್ರದ ಅಭಿವೃದ್ಧಿ ಹಾಗೂ ಸಾರ್ವಜನಿಕರ ಸಮಸ್ಯೆಗಳ ಕುರಿತು ಜಿಲ್ಲಾಧಿಕಾರಿಗೆ ಪತ್ರ ಬರೆದರೂ ಕನಿಷ್ಠ ಉತ್ತರ ನೀಡುವ ಸೌಜನ್ಯ ತೋರುತ್ತಿಲ್ಲ ಎಂದು ಶಾಸಕ ಎಚ್.ಡಿ. ರೇವಣ್ಣ ಜಿಲ್ಲಾಧಿಕಾರಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಜಿಲ್ಲಾಧಿಕಾರಿಗೆ ವೈಯಕ್ತಿಕ ಹಾಗೂ ಕಚೇರಿ ದೂರವಾಣಿಗೆ ಕರೆ ಮಾಡಿದರೂ ಸ್ಪಂದಿಸುತ್ತಿಲ್ಲ. ಜನಪ್ರತಿನಿಧಿಗಳೊಂದಿಗೆ ಅಧಿಕಾರಿಗಳು ಈ ರೀತಿಯಾಗಿ ನಡೆದುಕೊಳ್ಳುವುದು ಸರಿಯಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಇದೇ ವೇಳೆ ಗ್ರಾಮ ಪಂಚಾಯಿತಿ ಮೀಸಲಾತಿ ನಿಗದಿಯಲ್ಲಿ ಸರ್ಕಾರದ ಮಾರ್ಗಸೂಚಿ ಮತ್ತು ಜಿಲ್ಲಾಧಿಕಾರಿ ಕಚೇರಿಯ ಸೂಚನೆಗಳ ನಡುವೆ ವ್ಯತ್ಯಾಸವಿದೆ ಎಂದು ಆರೋಪಿಸಿರುವ ರೇವಣ್ಣ, ಸಾರ್ವಜನಿಕರಿಂದ ಬಂದಿರುವ ಆಕ್ಷೇಪಗಳಿಗೆ ಜಿಲ್ಲಾಡಳಿತ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

    Also Read  “ವೇತನಕ್ಕಾಗಿ ಹೋರಾಟದಿಂದ ಆರಂಭವಾದ ಪ್ರತಿಭಟನೆ… ನೋಯ್ಡಾ ರಸ್ತೆಗಳಲ್ಲಿ ಅರಾಜಕತೆ, ಬೆಂಕಿ, ಘರ್ಷಣೆ — ಈಗ ಸರ್ಕಾರವೇ ತನಿಖೆ ನಡೆಸುವಷ್ಟು ಗಂಭೀರ ಪರಿಸ್ಥಿತಿ!” 🔥🚨

    ಎತ್ತಿನಹೊಳೆ ಯೋಜನೆಯಡಿ ಕೆರೆ ತುಂಬಿಸುವ ಕಾಮಗಾರಿ ಹಾಗೂ ಭೂಸ್ವಾಧೀನ ಪರಿಹಾರಕ್ಕೆ ಸಂಬಂಧಿಸಿದ ಸುಮಾರು ₹300 ಕೋಟಿ ಮೊತ್ತದ ಪ್ರಕರಣಗಳ ಕುರಿತು ಬರೆದಿರುವ ಪತ್ರಗಳಿಗೂ ಯಾವುದೇ ಪ್ರತ್ಯುತ್ತರ ಬಂದಿಲ್ಲ ಎಂದು ಅವರು ಆರೋಪಿಸಿದ್ದಾರೆ. ಮೀಸಲಾತಿ ಅಕ್ರಮ ಹಾಗೂ ಆಡಳಿತ ವೈಫಲ್ಯವನ್ನು ಖಂಡಿಸಿ ಸೋಮವಾರ ಬೆಳಗ್ಗೆ 8.30ಕ್ಕೆ ತಾಲ್ಲೂಕು ಮಟ್ಟದಲ್ಲಿ ಪ್ರತಿಭಟನೆ ನಡೆಸಿ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

    ದಾಖಲೆ ಸಹಿತ ಆಕ್ಷೇಪಣೆ ಸಲ್ಲಿಸಿ: ಶಿವಲಿಂಗೇಗೌಡ

    ರೇವಣ್ಣ ಅವರ ಆರೋಪಗಳಿಗೆ ತಿರುಗೇಟು ನೀಡಿರುವ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ, ಮೀಸಲಾತಿ ವಿಚಾರದಲ್ಲಿ ತಕರಾರು ಇದ್ದರೆ ದಾಖಲೆಗಳೊಂದಿಗೆ ಕಾನೂನುಬದ್ಧವಾಗಿ ಆಕ್ಷೇಪಣೆ ಸಲ್ಲಿಸಲಿ ಎಂದು ಹೇಳಿದ್ದಾರೆ.

    ಮೀಸಲಾತಿಯನ್ನು ಚುನಾವಣಾ ಆಯೋಗದ ಮಾರ್ಗಸೂಚಿ ಹಾಗೂ 2015ರ ಅಧಿಸೂಚನೆಯಂತೆ ನಿಯಮಾನುಸಾರ ನಿಗದಿಪಡಿಸಲಾಗಿದೆ. ಇದನ್ನು ಪ್ರಸ್ತುತ ಜಿಲ್ಲಾಧಿಕಾರಿ ಅಥವಾ ಸರ್ಕಾರ ಹೊಸದಾಗಿ ರೂಪಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    Also Read  ಭಾರತದ ಅತ್ಯಂತ ನಿರೀಕ್ಷಿತ ಸಿನಿಮಾ ‘ರಾಮಾಯಣ’: ಟ್ರೇಲರ್ ಬಂದ ಕ್ಷಣದಿಂದಲೇ ದೇಶವ್ಯಾಪಿ ಚರ್ಚೆ!

    ತಹಶೀಲ್ದಾರ್ ಹಂತದಲ್ಲಿ ಯಾವುದೇ ತಪ್ಪಾಗಿದ್ದರೆ ಅದನ್ನು ಪರಿಶೀಲಿಸಿ ತಿದ್ದುಪಡಿ ಮಾಡಿ ಅಂತಿಮ ಅಧಿಸೂಚನೆ ಹೊರಡಿಸುವ ಅಧಿಕಾರ ಜಿಲ್ಲಾಧಿಕಾರಿಗೆ ಇದೆ. ತಪ್ಪು ಸಾಬೀತಾದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿ, ಆದರೆ ಅಧಿಕಾರಿಗಳ ಆತ್ಮಸ್ಥೈರ್ಯ ಕುಗ್ಗಿಸುವ ರೀತಿಯಲ್ಲಿ ಮಾತನಾಡುವುದು ಅಥವಾ ವೈಯಕ್ತಿಕವಾಗಿ ಏಕವಚನದಲ್ಲಿ ನಿಂದಿಸುವುದು ಸರಿಯಲ್ಲ ಎಂದು ಶಿವಲಿಂಗೇಗೌಡ ಹೇಳಿದ್ದಾರೆ.

    ಪ್ರಸ್ತುತ ಜಿಲ್ಲಾಧಿಕಾರಿ ಅಧಿಕಾರ ವಹಿಸಿಕೊಂಡ ಬಳಿಕ ಜಿಲ್ಲೆಯಲ್ಲಿ ಆಡಳಿತ ಕಾರ್ಯಗಳು ಸರಳವಾಗಿ ನಡೆಯುತ್ತಿವೆ ಎಂದು ಸಚಿವರು ಸಮರ್ಥಿಸಿಕೊಂಡಿದ್ದಾರೆ.

    ಮೀಸಲಾತಿ ವಿಚಾರದ ಆರೋಪ–ಪ್ರತ್ಯಾರೋಪಗಳ ನಡುವೆ ಸೋಮವಾರ ನಡೆಯಲಿರುವ ಪ್ರತಿಭಟನೆ ಹಾಗೂ ಚುನಾವಣಾ ಆಯೋಗಕ್ಕೆ ಸಲ್ಲಿಕೆಯಾಗಲಿರುವ ಮನವಿ ಇದೀಗ ಕುತೂಹಲಕ್ಕೆ ಕಾರಣವಾಗಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ವೈದ್ಯನನ್ನು ಅಮಾನತ್ತು ಮಾಡಿದರೆ ಸಾಕೆ?
    ಕಳುವಾದ ವಾಹನ ಸಮೇತ ಕಳ್ಳರ ಬಂಧನ…!
    ಡಾನ್ ಹೇಮಂತ್ ಪೂಜಾರಿ ಸಹೋದರ ವಶಕ್ಕೆ?!?
    ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ
    ಹಿರಿಯಡ್ಕದ ಬಾರಿನಲ್ಲಿ ಸರಿ ಕುಡಿದು ಗುಂಡಾಗಿರಿ, ಬಿಯರ್ ಬಾಟಲಿಯಿಂದ ಹಲ್ಲೆ
    ಮಾಜಿ ಮುಖ್ಯಮಂತ್ರಿಗೆ ಉಂಡೇನಾಮ ತಿಕ್ಕಿದ ಸಚಿವ ಯಾರು?
    ನೈಸ್ ಟೋಲ್ ವಿವಾದ: ಕುಮಾರಸ್ವಾಮಿ ಹೇಳಿಕೆಗೆ ಅಶೋಕ್ ಖೇಣಿ ತಿರುಗೇಟು.. ಇವರಿಬ್ಬರಲ್ಲಿ ಸತ್ಯವಂತರು ಯಾರು?
    ರಾಜಕೀಯ ಸುದ್ದಿ ಅಂದರೆ ಬೋರ್ ಅಂತ ಅನ್ನಿಸುವರಿಗೆ ಇದು ಒಂದು ಪಕ್ಕಾ ಎಂಟರ್‌ಟೈನ್‌ಮೆಂಟ್ ಎಪಿಸೋಡ್!!!
    Train Travel ಇಷ್ಟನಾ? ಹಾಗಾದ್ರೆ ಈ ಸುದ್ದಿ ತಿಳ್ಕೊಳ್ಳಿ!ಬೆಂಗಳೂರು–ಮಂಗಳೂರು ಗೋವಾ ವಂದೇ ಭಾರತ್….!?
    ಬಲಪಂಥೀಯರ ಜೊತೆ ಮುಖ್ಯಮಂತ್ರಿಗಳ ಸ್ನೇಹ : ಅಭದ್ರತೆ ಯಾರಿಗೆಲ್ಲ?
    ಕ್ಲೀನ್ ಮಂಗಳೂರು ಕನಸು ನಿಮ್ಮದಾಗಿದ್ದರೆ ಇಲ್ಲಿದೆ ದಾರಿ…ಸ್ವಚ್ಛ ಮಂಗಳೂರು ಅಭಿಯಾನ: ನಾಗರಿಕರ ಕೈಗೆ ಸಿಕ್ಕಿತು ವಾಟ್ಸಾಪ್ ಅಸ್ತ್ರ….!
    ವಿಧಾನಸೌಧದಲ್ಲಿ ಡಿಕೆಶಿ–ಕಟೀಲ್ ಭೇಟಿ -ರಾಜಕೀಯದಲ್ಲಿ ಬಿಸಿ ಚರ್ಚೆ
    UPIಗೆ ಶುಲ್ಕ ಬರಲಿದೆಯೇ? – ಲೋಕಸಭೆಯಲ್ಲಿ ಅಂಗೀಕಾರವಾದ bill ಮಸೂದೆ ಏನು ಹೇಳುತ್ತದೆ?
    ಅಮೆರಿಕದಲ್ಲಿ ಭಾರತದ ಧ್ವಜಕ್ಕೆ ಅವಮಾನ…ವೈರಲ್ ವಿಡಿಯೋಗೆ ಕೇಂದ್ರದ ಆಕ್ರೋಶ!
    ಹೆಣ್ಣು ಎಂಬ ಕನಿಕರ, ಸಿಗದ ಹಾಗೆ ಮಾಡಿದ ಮಾಯಾಂಗನೇ…
    ಇಬ್ಬರು ಮಕ್ಕಳ ಕಣ್ಣೆದುರೇ ಪತ್ನಿಯನ್ನು ಸುಮಾರು 20 ಬಾರಿ ಚಾಕುವಿನಿಂದ ಇರಿದು ಕೊಂದ ಪತಿ – ಕಾರಣ ಮೊಬೈಲ್‌ನಲ್ಲಿ ಆಟ
    “ಮಂಜಿನ ನಡುವೆ ಕ್ಷಣಾರ್ಧದಲ್ಲಿ ಮಾಯವಾದ ಮಗಳು”ಶ್ರೀನಂದಾ ಶವವಾಗಿ ಪತ್ತೆ…!
    ಆರು ಲಕ್ಷ ರೂ. ಶುಲ್ಕದ ಸಂಕಷ್ಟಕ್ಕೆ ಮಾನವೀಯ ಸ್ಪಂದನೆ: ವಿದ್ಯಾರ್ಥಿನಿಯ ಕನಸಿಗೆ ಸಚಿವ ಬಾಲಕೃಷ್ಣ ಬೆನ್ನೆಲುಬು
    ಕರ್ನಾಟಕದ ಮಾಜಿ ಸಚಿವರಿಗೆ ಜೈಲು ಜೈಲು ಶಿಕ್ಷೆಗೆ ಉಪಮುಖ್ಯಮಂತ್ರಿ ಡಿಕೆಯ ಶಾಕ್ ಸ್ಟೇಟ್ಮೆಂಟ್
    ಡೇಟಾದಲ್ಲಿ ಸತ್ತಿದ್ದಾರೆ: ಬಡ ಮಹಿಳೆ ತಾನು ಜೀವಂತ ಸಾಬೀತುಪಡಿಸಲು ಹರಸಾಹಸ…ಬಡಜನರು “ಡೇಟಾ” ಅಲ್ಲ — ಅವರು ಜೀವಂತ ಮಾನವರು. 
    🛑 ನಾಗರಮಠದಲ್ಲಿ ಅವೈಜ್ಞಾನಿಕ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರ ಆಕ್ರೋಶ
    ಮೋದಿ ಅವರ ನಿರ್ಧಾರಗಳು“ದೀರ್ಘಕಾಲೀನ ಅಭಿವೃದ್ಧಿಗೆ ಜವಾಬ್ದಾರಿಯುತ ನೀತಿಗಳು” ಆತಂಕದ ಸೂಚನೆ ಅಲ್ಲ-ಎಸ್.ಎಸ್. ನಾಯಕ್
    ಮೇ 22 ಮಂಗಳೂರು ಎಂದಿಗೂ ಮರೆಯದ ದಿನ…
    “ಕೃಷ್ಣ ಜೆ. ರಾವ್‌ ಡಿಎನ್ಎ ಸತ್ಯ ಬಯಲು — ಮಗುವಿಗೆ ನ್ಯಾಯ ಬೇಕು ಎಂದ ಹೈಕೋರ್ಟ್!”
    ಇನ್ನು ಮುಂದೆ ದೇವಸ್ಥಾನ ಆಸ್ತಿಗೆ ದಾಖಲೆಗಳಲ್ಲಿ ದೇವರ ಹೆಸರೇ ಮಾಲೀಕ….34 ಸಾವಿರಕ್ಕೂ ಹೆಚ್ಚುಮುಜರಾಯಿ ದೇವಸ್ಥಾನಗಳ ಆಸ್ತಿ ರಕ್ಷಣೆ:
    2 ಲಕ್ಷಕ್ಕೆ ಮಗುವಿನ ಜೀವದ ಬೆಲೆ ಕಟ್ಟಬೇಡಿ!” – ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನರ ಮಾನವೀಯ ನಿಲುವಿಗೆ ದೇಶಾದ್ಯಂತ ಮೆಚ್ಚುಗೆ
    ಮುಂಬಯಿಯಲ್ಲಿ ಪಹಲ್ಗಾಮ್ ಮಾದರಿ ದಾಳಿ ಯತ್ನ: ಉಗ್ರ ಚಟುವಟಿಕೆ ಯತ್ನ ವಿಫಲ…!
    ಮೂಡಬಿದಿರೆ ಇನ್‌ಸ್ಪೆಕ್ಟರ್ ಪ್ರಕರಣಕ್ಕೆ ಟ್ವಿಸ್ಟ್: ಆರೋಪ ಮಾಡಿದ ಮಹಿಳೆಯ ವಿರುದ್ಧವೇ ಸಹೋದರಿಯ ಬಾಂಬ್!
    ಅಸ್ಸಾಂನಲ್ಲಿ ಮತದಾನದ ಹಿನ್ನೆಲೆ ಹಿಂಸಾಚಾರ: 30ಕ್ಕೂ ಹೆಚ್ಚು ಮಂದಿ ಗಾಯ, 7 ಜನರ ಬಂಧನ
    ಅರ್ಧ ಸಂಬಳ ಸಾಕು ಮತ್ತು VIP ಸೌಲಭ್ಯಕ್ಕೆ ‘ನೋ’ ಎಂದ ನ್ಯಾಯಾಧೀಶ!