📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಜೆಡಿಎಸ್  ಜನರಲ್ ಸೆಕ್ರೆಟರಿಯಾಗಿ ಯೋಗೇಶ್ ಶೆಟ್ಟಿ ಜಪ್ಪು ಆಯ್ಕೆಯ ಲೆಕ್ಕಾಚಾರವೇನು?

    ತುಳುನಾಡ ಸಾರಥಿ ಯೋಗಿಶ್ ಶೆಟ್ಟಿ ಜಪ್ಪುಗೆ ಜೆಡಿಎಸ್‌ನಲ್ಲಿ ಮಹತ್ವದ ಹೊಣೆಗಾರಿಕೆಯನ್ನು ಕಲ್ಪಿಸಲಾಗಿದ್ದು,  ಸಮಾಜಸೇವೆಯಿಂದ ರಾಜಕೀಯದವರೆಗಿನ ಮೂರು ದಶಕಗಳ ಹೋರಾಟದ ಪಯಣಕ್ಕೆ ಪ್ರತಿಫಲ ಸಿಗಲಾರಂಬಿಸಿತು ಅಂದುಕೊಳ್ಳೋಣ.

    ದಕ್ಷಿಣ ಕನ್ನಡ ರಾಜಕೀಯ ಹಾಗೂ ಸಮಾಜಸೇವಾ ಕ್ಷೇತ್ರದಲ್ಲಿ, ತನ್ನದೇ ಆದ ಗುರುತನ್ನು ಮೂಡಿಸಿಕೊಂಡಿರುವ ಯೋಗಿಶ್ ಶೆಟ್ಟಿ ಜಪ್ಪು ಅವರು ಇದೀಗ ಜನತಾದಳ (ಜಾತ್ಯಾತೀತ) ಪಕ್ಷದಲ್ಲಿ ಮತ್ತೊಮ್ಮೆ ಸಕ್ರಿಯರಾಗಿದ್ದಷ್ಟೇ ಅಲ್ಲ, ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

    1997ರಲ್ಲಿ ಜಪ್ಪು ಪ್ರದೇಶದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿ ತನ್ನ ಪ್ರಭಾವವನ್ನು ತೋರಿಸಿದ ಯೋಗಿಶ್ ಶೆಟ್ಟಿ ಜಪ್ಪು, ಬಳಿಕ ಅಂದಿನ ಜಿಲ್ಲಾ ಉಸ್ತುವಾರಿ ಸಚಿವರ ಮಾರ್ಗದರ್ಶನದಲ್ಲಿ ಹಾಗೂ ಮಾಜಿ ಮುಖ್ಯಮಂತ್ರಿ J. H. Patel ಅವರ ಉಪಸ್ಥಿತಿಯಲ್ಲಿ ಅವಿಭಜಿತ ಜನತಾದಳಕ್ಕೆ ಸೇರ್ಪಡೆಯಾದರು.

    Also Read  TVKಗೆ ಟಕ್ಕರ್? ಅಜಿತ್ ಫ್ಯಾನ್ಸ್‌ TMMK ಎಂಟ್ರಿ!ದಳಪತಿಗೆ ಎದುರಾಗಿ ಅಜಿತ್ ಫ್ಯಾನ್ಸ್‌ ಪಕ್ಷ!

    ಅದರ ನಂತರ ರಾಜಕೀಯದಲ್ಲಿ ನಿರಂತರವಾಗಿ ಹಂತ ಹಂತವಾಗಿ ಬೆಳೆಯುತ್ತಾ ಬಂದ ಅವರು, ವಿದ್ಯಾರ್ಥಿ ಜನತಾದಳದ ಅವಿಭಜಿತ ದಕ್ಷಿಣ ಕನ್ನಡ-ಉಡುಪಿ ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸಿದರು. ಬಳಿಕ ಯುವ ಜನತಾದಳ ಅಧ್ಯಕ್ಷರೊಂದಿಗೆ ಕಾರ್ಯನಿರ್ವಹಿಸಿ, ಯುವ ಜನತಾದಳ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಸಂಚಾಲಕ ಸೇರಿದಂತೆ ಹಲವು ಪ್ರಮುಖ ಹುದ್ದೆಗಳನ್ನು ನಿರ್ವಹಿಸಿದರು. ನಂತರ ರಾಜ್ಯ ವಿದ್ಯಾರ್ಥಿ ಜನತಾದಳದ ಉಪಾಧ್ಯಕ್ಷರಾಗಿ ತಮ್ಮ ಸಂಘಟನಾ ಸಾಮರ್ಥ್ಯವನ್ನು ತೋರಿದರು.

    ಮಂಗಳೂರಿನಲ್ಲಿ ಕಾರ್ಪರೇಟರ್ ಆಗಿ ಸೇವೆ ಸಲ್ಲಿಸಿದ ಅವರು, ಸುಮಾರು ಎರಡು ದಶಕಗಳ ಕಾಲ ಜನತಾದಳ ಪಕ್ಷದಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸಿದ್ದರು.
    ರಾಜಕೀಯದ ಜೊತೆಗೆ ಸಮಾಜಸೇವೆಯಲ್ಲಿಯೂ ತಮ್ಮನ್ನು ತೊಡಗಿಸಿಕೊಂಡ ಯೋಗಿಶ್ ಶೆಟ್ಟಿ ಜಪ್ಪು, ಹಲವು ಸಾಮಾಜಿಕ ಸಂಘಟನೆಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಿದ್ದಾರೆ. ಅವರ ಸೇವೆಯನ್ನು ಗುರುತಿಸಿ ರಾಜ್ಯ ಸರ್ಕಾರದ ಯುವ ಸಾಧಕ ಪ್ರಶಸ್ತಿ ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೂ ಭಾಜನರಾಗಿದ್ದಾರೆ.

    Also Read  ಮುಗ್ಧ ಮಗು ಮೇಲೆ ನಡೆದ ಅಮಾನವೀಯ ಕ್ರೌರ್ಯ… ನ್ಯಾಯಕ್ಕಾಗಿ ಸಮಾಜದ ಒಕ್ಕೊರಲ ಹೋರಾಟ

    ತುಳುನಾಡಿನಲ್ಲಿ ತುರುವೇ ಎಂಬ ಪ್ರಭಲ ಸಂಘಟನೆಯೊಂದನ್ನು ಸ್ಥಾಪಿಸಿದ ಅವರು, ಸ್ಥಳೀಯ ಸಮಸ್ಯೆಗಳ ಪರಿಹಾರಕ್ಕಾಗಿ ನಿರಂತರ ಹೋರಾಟ ನಡೆಸಿ ಜನಮನ ಗೆದ್ದಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ಸ್ಥಾಪನೆಗೆ ಸಂಬಂಧಿಸಿದ ಹೋರಾಟದಲ್ಲಿಯೂ ಅವರು ಸಕ್ರಿಯವಾಗಿ ಪಾಲ್ಗೊಂಡಿದ್ದು ಇತಿಹಾಸ.

    ವಿಶೇಷವಾಗಿ ಕೊರೋನಾ ಮಹಾಮಾರಿಯ ಸಂದರ್ಭದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ನಿರಂತರ 62 ದಿನಗಳ ಕಾಲ ಹಸಿದವರಿಗೆ ಅನ್ನದಾನ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದು, ಜನರಿಂದ “ತುಳುನಾಡ ಸಾರಥಿ” ಎಂಬ ಬಿರುದನ್ನು ಪಡೆದಿದ್ದಾರೆ.

    ಇತ್ತೀಚಿಗೆ ಜನತಾದಳ (ಜಾತ್ಯಾತೀತ) ಪಕ್ಷದಲ್ಲಿ ಮರು ಸಕ್ರಿಯಗೊಂಡಿರುವ ಯೋಗಿಶ್ ಶೆಟ್ಟಿ ಜಪ್ಪು ಅವರಿಗೆ, ಮಹತ್ವದ ಜವಾಬ್ದಾರಿ ದೊರೆತಿರುವುದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಜನರಲ್ಲಿ ಹೊಸ ನಾಯಕತ್ವದ  ಆಶಾಕಿರಣವನ್ನು ಮೂಡಿಸಿದೆ. ಅವರ ರಾಜಕೀಯ ಅನುಭವ, ಸಂಘಟನಾ ಕೌಶಲ್ಯ ಹಾಗೂ ಜನಪರ ಹೋರಾಟಗಳು ಮುಂದಿನ ದಿನಗಳಲ್ಲಿ ಪಕ್ಷದ ಬಲವರ್ಧನೆಗೆ ಸಹಕಾರಿಯಾಗಲಿದೆ ಎಂಬ ವಿಶ್ವಾಸವು ಜೆಡಿಎಸ್ ಕಾರ್ಯಕರ್ತರಲ್ಲಿ ವ್ಯಕ್ತವಾಗುತ್ತಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    108 ವರ್ಷಗಳ ಇತಿಹಾಸದಲ್ಲಿ ಪಾಟ್ನಾವಿಶ್ವವಿದ್ಯಾಲಯದಲ್ಲಿ ಹೊಸ ಅಧ್ಯಾಯ- ಮಹಿಳೆಯರ ಐತಿಹಾಸಿಕ ಹೆಜ್ಜೆ!
    ಜಾನ್ಸನ್ & ಜಾನ್ಸನ್‌ನಿಂದ ₹52 ಸಾವಿರ ಕೋಟಿ ಪರಿಹಾರ? ಟಾಲ್ಕಮ್ ಪೌಡರ್ ಪ್ರಕರಣಕ್ಕೆ ಐತಿಹಾಸಿಕ ಒಪ್ಪಂದದ ಪ್ರಸ್ತಾವ
    🚨 ಬೈಂದೂರಿನಲ್ಲಿ ಭಯಾನಕ ದಾಳಿ! ಕತ್ತಿಯಿಂದ ಹಲ್ಲೆ – ಆರೋಪಿ ಬಂಧನ
    ಪುತ್ತೂರಿನ ದೇವಸ್ಥಾನ ಪದಾಧಿಕಾರಿಗಳ ವಿರುದ್ಧ FIR ..!
    ಟೇಕಾಫ್‌ ಬಳಿಕ RAF ಯುದ್ಧವಿಮಾನ ಪತನ: ಪೈಲಟ್‌ಗಳು ಪಾರು
    ಶಿರಾಡಿ ಗ್ರಾ.ಪಂ PDO ಸಹಿ ನಕಲು ….6 ತಿಂಗಳಾದರೂ ದೂರು ದಾಖಲಾಗಿಲ್ಲ!
    ಕರ್ನಾಟಕ CM ಬದಲಾವಣೆ ರಾಜಕೀಯ ಕೌಂಟ್‌ಡೌನ್ ಶುರುವಾಗಿದೆ! ತೆರೆಮರೆಯಲ್ಲಿ ಏನೋ ನಡೀತಿದೆ… 
    UPIಗೆ ಶುಲ್ಕ ಬರಲಿದೆಯೇ? – ಲೋಕಸಭೆಯಲ್ಲಿ ಅಂಗೀಕಾರವಾದ bill ಮಸೂದೆ ಏನು ಹೇಳುತ್ತದೆ?
    ಅಹಿಂಸೆ, ಸತ್ಯ ಮತ್ತು ತ್ಯಾಗದ ಮಾರ್ಗವೇ ಮಹಾವೀರರ ದರ್ಶನ — ಇದೇ ಸುಖಿ ಜೀವನದ ಗುಟ್ಟು.
    ಪಶ್ಚಿಮ ಬಂಗಾಳದಲ್ಲಿ ಗುಂಡಾಗಿರಿ ಮುಂದುವರಿಕೆ
    ನಿರ್ಮಾಣ ಹಂತ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು-  ಶಣೈ ಮೇಲೆ ಕೇಸು
    ಬೆಳ್ಳಂಬೆಳಗ್ಗೆ ಸಿದ್ದರಾಮಯ್ಯ ಮನೆಗೆ ಡಿ.ಕೆ. ಶಿವಕುಮಾರ್ ಸರ್ಪ್ರೈಸ್ ವಿಸಿಟ್!
    ‘₹1ಕ್ಕೆ ಫ್ಯಾಷನ್’ ಜಾಹೀರಾತು ವೈರಲ್… ಮಾಲಾಡ್ ಮಾಲ್‌ನಲ್ಲಿ ನಿಯಂತ್ರಣ ತಪ್ಪಿದ ಜನಸಾಗರ-ಸ್ಟ್ಯಾಂಪೀಡ್ ಭೀತಿ ಮೂಡಿಸಿದ ಜನಸಂದಣಿ!
    21 ವರ್ಷದ ಆಡಳಿತಕ್ಕೆ ತೆರೆ: ನಿತೀಶ್ ಕುಮಾರ್ ಹೊರಟರೇ?ಸಿಎಂ ಕುರ್ಚಿ ಖಾಲಿ-ಬಿಜೆಪಿ ಹೊಸ ಮುಖ ಮುಂದಿನ ಸಿಎಂ??
    ಫೇಸ್‌ಬುಕ್ ಜಾಹೀರಾತು ನಂಬಿ ₹32.68 ಲಕ್ಷ ಕಳೆದುಕೊಂಡ ಕಾರ್ಕಳದ ವ್ಯಕ್ತಿ!
    ಗುಂಡಿನ ದಾಳಿ ನಡೆಸಿದ ಹಂತಕರ ಬಂಧನ??
    ಸಿವಿಲ್ ಕೇಸ್‌ನಲ್ಲಿ ಬಂಧನ..!ಎಸ್‌ಐಗೆ ₹3 ಲಕ್ಷ ದಂಡ — ACP, DCP ವಿರುದ್ಧವೂ ತನಿಖೆ!
    ಉಡುಪಿ ಜಿಲ್ಲೆಯಲ್ಲಿ  ಹೆಚ್ಚಾದ  ಚಿರತೆ ಉಪಟಳ : ತುರ್ತು ಕ್ರಮಕ್ಕೆ ತುರವೇ ಮನವಿ
    ಆಂಧ್ರದ ಪುಟ್ಟಪರ್ತಿಯಲ್ಲಿ ಅಡಗಿದೆ ಆ ದೊಡ್ಡ ರಹಸ್ಯ!ಆಕಾಶದಲ್ಲಿ ಕಣ್ಣಿಗೆ ಕಾಣದಂತೆ ಬೇಟೆಯಾಡುವ ಸಮಯ ಹತ್ತಿರದಲ್ಲಿದೆ!
    ಕಾಂಗ್ರೆಸ್ ಹೈಕಮಾಂಡ್ ಖಡಕ್ ವಾರ್ನಿಂಗ್: ಸ್ವಾಮೀಜಿ, ಧಾರ್ಮಿಕ ಮುಖಂಡರ ಶಿಫಾರಸುಗಳಿಗೆ ಸಿಗಲ್ಲ ಮನ್ನಣೆ!
    “ಕುಂಡೆ(ತಿಕ)ಯಲ್ಲಿ ಲಕ್ಷ್ಮಿ ಇರುತ್ತಾಳೆ” ಎಂಬ ಹೇಳಿಕೆ ವೈರಲ್! ಆರ್ಯವರ್ಧನ್ ಗುರೂಜಿ ವಿರುದ್ಧ ದೂರು, ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ
    ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ? ದೆಹಲಿ–ಬೆಂಗಳೂರು ರಾಜಕೀಯ ಚಟುವಟಿಕೆ ಜೋರು, ಹೈಕಮಾಂಡ್ ನಿರ್ಧಾರದತ್ತ ರಾಜ್ಯದ ಚಿತ್ತ
    ಸ್ಟೇಟ್ ಬ್ಯಾಂಕ್ ಮೀನು ಮಾರುಕಟ್ಟೆಗೆ ಭೇಟಿ ನೀಡಿದ ಡಾ. ನಾಗಲಕ್ಷ್ಮಿ ಚೌಧರಿ – ಮಹಿಳಾ ಮೀನುಗಾರರ ಸಮಸ್ಯೆ ಆಲಿಕೆ
    ಎರಡು ಭೀಕರ ಕ್ಷಣಗಳು!ಒಂದು ರನ್‌ವೇಯಲ್ಲಿ ಸಾವು… ಮತ್ತೊಂದು ರನ್‌ವೇಯಲ್ಲಿ ಅದ್ಭುತ ಪಾರು!
    ‘ಕಾಮುಕರಿಗೆ ಪೊಲೀಸರ ಭಯ ಹುಟ್ಟಬೇಕು’ — ಮಹಿಳಾ ಸುರಕ್ಷತೆ ಬಗ್ಗೆ ಸುಪ್ರೀಂ ಕೋರ್ಟ್ ಕಠಿಣ ಸಂದೇಶ
    ಮಂಗಳೂರು ಶಾಲಾ ದಾಖಲಾತಿ ಅಂದೋಲನ-ಎಲ್ಲ ಮಕ್ಕಳಿಗೂ ಶಾಲೆಯ ಹಕ್ಕು …
    ಮಂಗಳೂರು ಹೆದ್ದಾರಿಗಳಲ್ಲಿ ರಾತ್ರಿ ಟ್ರಾನ್ಸ್ಜೆಂಡರ್ ಕಿರುಕುಳಕ್ಕೆ ಕಡಿವಾಣ ಹಾಕಲು ಜಿಲ್ಲಾಧಿಕಾರಿ ಸೂಚನೆ..!
    “ಕಾಂತರಾ” ಖ್ಯಾತಿಯ ಸಪ್ತಮಿ ಗೌಡ, ದುಮುಕಿದ್ದು  ಹೋರಾಟದ ಅಂಗಳಕ್ಕೆ
    ಕಂದಾಯ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ
    ಸಿಖ್ ವಿರೋಧಿ ದಂಗೆಯ ಆರೋಪಿ, ಸಜ್ಜನ್ ಕುಮಾರ್ ಜೈಲಿನಲ್ಲಿ ನಿಧನ