📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ದಕ್ಷಿಣ ಕನ್ನಡ:ಮಂಗಳೂರು ನಗರದ ಹೊರವಲಯದ ಮುಲ್ಕಿ ಕಿಲ್ಪಾಡಿ ಗ್ರಾಮದ ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆಕುಖ್ಯಾತ ಅಂತರ ಜಿಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿತರಿಂದ 17.20 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
    ದಿನಾಂಕ 01-09-2026 ರಂದು ಮಧ್ಯರಾತ್ರಿ, ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿಲ್ಪಾಡಿ ಗ್ರಾಮದ ಆದಿ ಕಿಲ್ಲಾಡಿ ಕೊರ್ದಬ್ಬು ದೈವಸ್ಥಾನದ ಗರ್ಭಗುಡಿಯ ಮುಖ್ಯ ದ್ವಾರಕ್ಕೆ ಹಾಕಲಾಗಿದ್ದ ಬೀಗವನ್ನು ತುಂಡರಿಸಿ, ಗರ್ಭಗುಡಿಯಲ್ಲಿದ್ದ ಬೆಲೆಬಾಳುವ ಕೊರ್ದಬ್ಬು ದೈವದ ಮೂರ್ತಿಗಳು ಹಾಗೂ ದೈವದ ಚಿನ್ನಾಭರಣಗಳನ್ನು ಕಳವು ಮಾಡಲಾಗಿತ್ತು. ಈ ಬಗ್ಗೆ ಮುಲ್ಕಿ ಠಾಣೆಯಲ್ಲಿ ಅ.ಕ್ರ 65/2026 ಕಲಂ 331(3), 331(4), 305 ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಾಗಿತ್ತು.

    ಪೊಲೀಸರ ಚಾಕಚಕ್ಯ ಕಾರ್ಯಾಚರಣೆಗೆ ಶ್ಲಾಘನೆ:
    ದೈವಸ್ಥಾನದ ಪಾವಿತ್ರ್ಯವನ್ನೇ ಸವಾಲು ಹಾಕಿ, ಕೊರ್ದಬ್ಬು ದೈವದ ಕಾಣಿಕೆ ಡಬ್ಬಿ ಹಾಗೂ ಚಿನ್ನಾಭರಣ ಕದಿಯಲು ಮುಂದಾದವರನ್ನು ಬೆನ್ನಟ್ಟಿದ ಪೊಲೀಸರ ಕಾರ್ಯಾಚರಣೆ ನಿಜಕ್ಕೂ ಶ್ಲಾಘನೀಯ.

    ಪ್ರಕರಣದ ಪತ್ತೆಯ ಕುರಿತು ವಿಶೇಷ ತಂಡವನ್ನು ರಚಿಸಿ ಆರೋಪಿ ಜಾಹೀದ್ ಸಿನಾನ್ ಮತ್ತು ಯಾಸೀನ್ ಎಂಬಾತನ್ನು ಮುಲ್ಕಿ ಕಾರ್ನಾಡು ಎಂಬಲ್ಲಿ ಹಾಗೂ ಆರೋಪಿ ಮಹಮದ್ ಅಫ್ರಿದಿ ಮತ್ತು ಎಸ್.ಕೆ. ಅಬ್ದುಲ್ ಜುಮ್ಮಾನ್ ಎಂಬಾತನನ್ನು ದಾವಣಗೆರೆಯಲ್ಲಿ ಪತ್ತೆಹಚ್ಚಿ ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
    ಬಂಧಿತ ಆರೋಪಿಗಳನ್ನು ಜಾಹೀದ್ ಸಿನಾನ್, ಯಾಸೀನ್, ಮಹಮದ್ ಅಫ್ರಿದಿ, ಎಸ್.ಕೆ. ಅಬ್ದುಲ್ ಜುಮ್ಮಾನ್ ಎಂದು ಗುರುತಿಸಲಾಗಿದೆ.
    ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಪಡೆದುಕೊಂಡು ಆರೋಪಿಗಳಿಂದ ಕಳವು ಮಾಡಲಾದ ಸುಮಾರು 4 ಕೆ.ಜಿ. 521 ಗ್ರಾಂ ತೂಕದ ಬೆಳ್ಳಿ ಹಾಗೂ 34.820 ಗ್ರಾಂ ತೂಕದ ಚಿನ್ನ, ಒಟ್ಟು ಅಂದಾಜು ₹11,20,000/- ಮೌಲ್ಯದ ಚಿನ್ನಾಭರಣ/ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ, ಕೃತ್ಯಕ್ಕೆ ಬಳಸಿದ ಬೈಕ್ ಮತ್ತು ಕಾರು ಸೇರಿದಂತೆ ಸುಮಾರು ₹6,00,000/- ಮೌಲ್ಯದ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೀಗಾಗಿ, ಆರೋಪಿಗಳಿಂದ ಒಟ್ಟು ₹17,20,000/- ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

    ಕರಾವಳಿಯ ದೈವ ದೇವರ ನಂಬಿಕೆಗೆ ಕೈ ಹಾಕಿದರೆ?
    ಕರಾವಳಿಯ ದೈವ-ದೈವಸ್ಥಾನಗಳ ಶಕ್ತಿ ಮತ್ತು ಜನರ ಅಚಲ ನಂಬಿಕೆಯನ್ನು ಲಘುವಾಗಿ ಕಾಣಬಾರದು; ಕಾನೂನಿನ ಕೈಗೂ, ದೈವದ ಮೇಲಿನ ಜನರ ನಂಬಿಕೆಗೂ ಕಳ್ಳತನದ ಸವಾಲು ಕೊನೆಗೂ ಸೋಲಲೇಬೇಕು.

    ಆರೋಪಿಗಳ ಪತ್ತೆಯಿಂದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಾಪು ಶ್ರೀ ಮಹಾಲಕ್ಷ್ಮೀ ಮಹಾಗಣಪತಿ ದೇವಸ್ಥಾನದಲ್ಲಿ ನಡೆದ ಕಳವು ಪ್ರಕರಣ, ಅ.ಕ್ರ.154/2026, ಕಲಂ 331(1), 305 ಬಿಎನ್ಎಸ್, ಹಾಗೂ ಉಡುಪಿ ಜಿಲ್ಲೆಯ ಪಡುಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯ ಇನ್ನಾ ಗ್ರಾಮದ ವ್ಯಾಘ್ರ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಡೆದ ಕಳವು ಪ್ರಕರಣ, ಅ.ಕ್ರ.88/2026, ಕಲಂ 331(4), 305 ಬಿಎನ್ಎಸ್ ಪ್ರಕರಣಗಳು ಸಹ ಪತ್ತೆಯಾಗಿರುತ್ತವೆ.
    ಪ್ರಕರಣದ 1ನೇ ಆರೋಪಿಯಾದ ಜಾಹೀದ್ ಸಿನಾನ್ ಎಂಬಾತನ ವಿರುದ್ಧ ಈ ಹಿಂದೆ ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ದಾವಣಗೆರೆ ಹಾಗೂ ಮಂಗಳೂರು ನಗರ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 18 ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ.
    ಈ ಪತ್ತೆ ಕಾರ್ಯದಲ್ಲಿ ಮಂ.ಉತ್ತರ ಉಪ ವಿಭಾಗದ ಎ.ಸಿ.ಪಿ ಶ್ರೀ ಶೀಕಾಂತ್.ಕೆ ರವರ ನೇತೃತ್ವದಲ್ಲಿ ಸುರತ್ಕಲ್ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಪ್ರಮೋದ್ ಕುಮಾರ್, ಮುಲ್ಕಿ ಠಾಣಾ ಪಿ.ಎಸ್.ಐ ರಾಘವೇಂದ್ರ ನಾಯಕ್ ಹಾಗೂ ಮುಲ್ಕಿ ಪೊಲೀಸ್ ಠಾಣೆಯ ಸಿಬ್ಬಂದಿಯವರು ಪ್ರಕರಣವನ್ನು ಯಶಸ್ವಿಯಾಗಿ ಪತ್ತೆಹಚ್ಚಿ ಆರೋಪಿಗಳನ್ನು ಬಂಧಿಸಿ, ಕಳವು ಮಾಡಲಾದ ಹಾಗೂ ಕೃತ್ಯಕ್ಕೆ ಬಳಸಿದ ಸ್ವತ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಶ್ರಮಿಸಿದ್ದಾರೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಆಯುಷ್ ಎಚ್ಚರಿಕೆ ಬಳಿಕ ಅಶ್ವಗಂಧ ನಿಯಂತ್ರಣ ಕ್ರಮಕ್ಕೆ ತಡೆ: ಹೈಕೋರ್ಟ್ ಮಹತ್ವದ ಆದೇಶ
    ಮಿಸೆಸ್ ಕೇರಳ ಈಗ ‘ಡ್ರಗ್ ಕ್ವೀನ್’…!?ಕೋಟಿ ಮೌಲ್ಯದ ಡ್ರಗ್ಸ್ ಜೊತೆ ಮಾಜಿ ‘ಮಿಸೆಸ್ ಕೇರಳ’ ಅರೆಸ್ಟ್!”
    ಶಾಸಕ ಸ್ಥಾನಕ್ಕೆ ರಾಜೀನಾಮೆ, ಯಶ್ವಂತರಾಯಗೌಡರ ನಡೆ  ಸಸ್ಪೆನ್ಸ್
    ಬಿಡದಿಗಾಗಿ ಗೌಡರ ಗುಡುಗು! ಹೋರಾಟ ನಿಲ್ಲದು ತೀವ್ರಗೊಳ್ಳಲಿದೆ“ಸುಮ್ಮನಿರಲ್ಲ” ಗೌಡರ ಖಡಕ್ ಎಚ್ಚರಿಕೆ..!
    ವೆಟ್-ವೆಲ್‌ಗಳ ಕಳಪೆ ನಿರ್ವಹಣೆಚರಂಡಿ-ಬಾವಿಗಳಿಗೆ ಡ್ರೈನೇಜ್ ನೀರು..
    ಮಂಗಳೂರು ನೀರಿನ ಸಂಕಷ್ಟ:ಮಳೆಯಿಲ್ಲದೆ ಮುಂದಿನ 1–2 ತಿಂಗಳು ಗಂಭೀರ ನೀರಿನ ಕೊರತೆ ಸಂಭವ ಸಾಧ್ಯತೆ.
    ಹೆಸರು ಬದಲಾವಣೆ ಪಶ್ಚಿಮ ಬಂಗಾಳ ಪೆಂಡಿಂಗ್, ಕೇರಳ ಪ್ರಗತಿಯಲ್ಲಿ
    ಮಂಗಳೂರು: ಖಚಿತ ಮಾಹಿತಿಗೆ ಖಾಕಿ ಆಕ್ಷನ್! ಮುಕ್ಕದ ಕಟ್ಟಡದಲ್ಲಿ 8 ಅಕ್ರಮ ಬಾಂಗ್ಲಾದೇಶಿ ಪ್ರಜೆಗಳ ಬಂಧನ
    ಸಂಸತ್ತಿನಲ್ಲಿ ಪ್ರಶ್ನೆ ಎದುರಿಸಲು ಆಗದೆ,  ಪ್ರಶ್ನೆಯನ್ನೇ ಕೇಳದಂತೆ ಮಾಡಿದರು – ರಾಹುಲ್ ಗಾಂಧಿ
    ಪಿವಿ ಎಸ್ ಸಂಸ್ಥೆಯ ಆಡಳಿತದಲ್ಲಿ ಯಾರ ಹಸ್ತಕ್ಷೇಪವು ಇಲ್ಲ – ಸರೋಜಿನಿ ಕುಶೆ
    ನಾಟೆಕಲ್ ತಿರುವಿನಲ್ಲಿ ಪಿ.ಎ. ಕಾಲೇಜು ಬಸ್ ಅಪಘಾತ: ಬಸ್‌ನಡಿ ಸಿಲುಕಿ ಬೈಕ್ ಸವಾರ ಗಂಭೀರ ಗಾಯಗೊಂಡು ಸಾವು
    ಆಸಿಡ್ ದಾಳಿಗೊಳಗಾದ ಮಹಿಳೆಯರಿಗೆ ₹50 ಸಾವಿರ ಮಾಸಾಶನ: ಆಸಿಡ್ ಮಾರಾಟಕ್ಕೆ ಕಡಿವಾಣ ಹಾಕಲು ಸರ್ಕಾರ ಕ್ರಮ
    ಕೊಲೆ ಆರೋಪಿಗಳ ಕಾರು ಮಾಣಿಯಲ್ಲಿ ಪತ್ತೆ ….!
    ನಾಲ್ಕು ಮಕ್ಕಳನ್ನು ಹೆತ್ತ ಮಹಾತಾಯಿ, ಸದ್ಯಕ್ಕೆ ತಾಯಿ ಮಕ್ಕಳು ಸೇಫ್
    ಬ್ರೇಕಿಂಗ್ ನ್ಯೂಸ್..!final‘ಸಚಿವರ ಪಟ್ಟಿ’ ವೈರಲ್: ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ!
    ಉಡುಪಿ ನಗರಸಭೆಗೆ ನೂತನ ಪೌರಾಯುಕ್ತರಾಗಿ ಸಂತೋಷ್ ಡಿ.ಎಸ್. ನೇಮಕ
    ಕರಾವಳಿಯಲ್ಲಿ ಮತ್ತೆ ಸೈಬರ್ ವಂಚಕರ ಅಟ್ಟಹಾಸ: 3 ಪ್ರಕರಣಗಳಲ್ಲಿ ₹12 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡ ಜನ!
    ಇನ್ನೂ ಏಳು ದಿನ ಕರ್ನಾಟಕದ ಸಿಎಂ ಕುರ್ಚಿ ಕಾಲಿ… ಜೂನ್ 5 ರಂದು ಡಿಕೆ ಶಿವಕುಮಾರ್ ಪ್ರಮಾಣ ವಚನ!
    ಬಂಟ್ಸ್ ಹಾಗೂ ಬಿಲ್ಲವ ಸಮುದಾಯವನ್ನೇ ಅವಹೇಳಿಸಿ ಮಾತಾಡಿ ವಿಡಿಯೋ ವೈರಲ್ ರಾತ್ರೋರಾತ್ರಿ… ..ಫೇಮಸ್ ಆದ ಅನಿತಾಳ ಬಂಧನ ..!
    ಕ್ರಿಕೆಟ್ pad gloves ಒಳಗೆ ಕೋಟಿ ಕೋಟಿ ಕೊಕೇನ್!
    ಎಲ್ಲರಿಗೂ ಯುಗಾದಿ ಹಬ್ಬ… ಆದರೆ ಈ ಗ್ರಾಮಗಳಲ್ಲಿ ಭಯ ಮೌನ…ಹಬ್ಬ ಇಲ್ಲ…!ಒಂದು ವಿಚಿತ್ರ ಕಥೆ!
    ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ನಿರ್ಧಾರ ಬದಲಾಗುತ್ತದೆಯೇ? ಕರಾವಳಿ ಕಾದಿದೆ ಉಸಿರು ಹಿಡಿದು!
    ಅಣ್ಣಾಮಲೈ ಸಿಡಿಸಿದ ಬಾಂಬ್: ವಿಜಯ್ ಸರ್ಕಾರದ ಸಚಿವರ ವಿರುದ್ಧ 2–4% ಕಿಕ್‌ಬ್ಯಾಕ್ ಆರೋಪ!
    ಬ್ಯಾಂಕಿಂಗ್ ಸೇವೆ ಸ್ಮಾರ್ಟ್‌ಫೋನ್ ನೇ ಬೇಕಂತಿಲ್ಲ .ಕೀಪ್ಯಾಡ್ ಫೋನ್ ಸಾಕು ಈಗ “ಸ್ಮಾರ್ಟ್” ಆಗಿದ್ದರೆ ಸಾಕು! 
    5.5 ವರ್ಷದ ಹೆಣ್ಣುಮಗಳ ಕೊಲೆ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್!ಮಗು ಸತ್ತು 3 ತಿಂಗಳು…ಆದ್ರೆ FIR ಇಲ್ಲ! 3 ಪೊಲೀಸರು ಸಸ್ಪೆಂಡ್
    ತಸ್ಲಿಮಳ ಹಣೆಗೆ ಸಿಂಧೂರವಿಟ್ಟ ಕೇಶವ, ಬುರ್ಖಾ ತೆಗೆದಿಟ್ಟ ತಸ್ಲೀಮಾ
    ಬಾಲಕಾರ್ಮಿಕ ಪತ್ತೆ : ಮಾಲೀಕನಿಗೆ ಜೈಲು, ದಂಡ
    ಇಂದು ಮಂಗಳೂರಲ್ಲಿ ತಲೆಮೇಲೆ ಸುತ್ತು ಹೊಡೆದಂತೆ ಬಾರಿ ಶಬ್ದದೊಂದಿಗೆ ಹೆಲಿಕಾಪ್ಟರ್‌..!ಆಶ್ಚರ್ಯ ಮತ್ತು ಆತಂಕದ ಹಿಂದಿದೆ ಭದ್ರತಾ ‘ಮೆಗಾ ಡ್ರಿಲ್’ ..!ಅಸಲಿ ಕಾರಣವೇನು
    ₹10,000ಕ್ಕೆ NEET-UG 2026 ಪ್ರಶ್ನೆಪತ್ರಿಕೆ? ದೇಶವೇ ಬೆಚ್ಚಿಬಿದ್ದ ಲೀಕ್ ಸ್ಕಾಂಡಲ್!ಟೆಲಿಗ್ರಾಂ ಸೀಕ್ರೆಟ್ ಚಾಟ್ ವೈರಲ್…22 ಲಕ್ಷ ವಿದ್ಯಾರ್ಥಿಗಳ ಕನಸಿಗೆ ದೊಡ್ಡ ಹೊಡೆತ — NEET 2026 ರದ್ದು!
    ಮುಖವಾಡ ಧರಿಸಿದವರನ್ನು ನಂಬುವ ಮುನ್ನ ನೂರು ಬಾರಿ ಯೋಚಿಸಿ…!