📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

Lokayukta Raid In Hassan: ಬಾಗಿಲು ತೆರೆಯದೆ AEE ಹೈಡ್ರಾಮಾ, ಮನೆ ಏರಿದ ಲೋಕಾ ಪೊಲೀಸರು | AEE Satyanarayan

ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಹಾಸನ ಮಹಾನಗರ ಪಾಲಿಕೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸತ್ಯನಾರಾಯಣ ಎಂ.ಸಿ. ಅವರ ನಿವಾಸದ ಮೇಲೆ ಗುರುವಾರ ಬೆಳಗಿನ ಜಾವ ದಾಳಿ ನಡೆಸಿದರು. ಬೆಳಿಗ್ಗೆ 5.15ರ ಸುಮಾರಿಗೆ ಡಿವೈಎಸ್‌ಪಿ ಸುರೇಶ್ ಕುಮಾರ್ ಮತ್ತು ಇನ್ಸ್‌ಪೆಕ್ಟರ್ ಶಿಲ್ಪಾ ನೇತೃತ್ವದ ತಂಡ ರಕ್ಷಣಾಪುರಂನಲ್ಲಿರುವ ಮನೆಗೆ ತೆರಳಿತು.


ಅಧಿಕಾರಿಗಳು ಬಂದ ಕೂಡಲೇ ಮನೆಯ ದೀಪಗಳನ್ನು ಆರಿಸಿ ಬಾಗಿಲು ತೆರೆಯದ ಕಾರಣ ಸುಮಾರು ನಾಲ್ಕು ಗಂಟೆಗಳ ಕಾಲ ಉದ್ವಿಗ್ನತೆ ಉಂಟಾಯಿತು. ಕಿಟಕಿಗಳನ್ನು ಬಡಿದು, ಕರೆ ನೀಡಿದರೂ ಪ್ರತಿಕ್ರಿಯೆ ಸಿಗಲಿಲ್ಲ. ನಂತರ ಸತ್ಯನಾರಾಯಣ ಅವರ ಸಹೋದರಿ ಸ್ಥಳಕ್ಕೆ ಬಂದು ಮನವಿ ಮಾಡಿದ ಬಳಿಕ ಬಾಗಿಲು ತೆರೆಯಲಾಯಿತು. ಬಳಿಕ ಅಧಿಕಾರಿಗಳು ಮನೆಯೊಳಗೆ ಪ್ರವೇಶಿಸಿ ಶೋಧ ಕಾರ್ಯ ಆರಂಭಿಸಿದರು.
ಲೋಕಾಯುಕ್ತ ಎಸ್ಪಿ ನಂದಿನಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಾಗಿಲು ತೆರೆಯದಿದ್ದರೆ ಕಾನೂನು ಪ್ರಕಾರ ಒಡೆದು ತೆರೆಯುವ ಕುರಿತು ಅಧಿಕಾರಿಗಳು ಚರ್ಚಿಸಿದ್ದರು. ಹಾಸನ ನಗರ ಠಾಣೆ ಪೊಲೀಸರು ಸಹ ಸ್ಥಳದಲ್ಲಿದ್ದರು.
ಅಕ್ರಮ ಆಸ್ತಿ ಗಳಿಕೆ ಸಂಬಂಧ ಎಫ್‌ಐಆರ್ ದಾಖಲಿಸಿ ಶೋಧ ವಾರಂಟ್‌ನೊಂದಿಗೆ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸತ್ಯನಾರಾಯಣ ಅವರ ಮನೆ ಜೊತೆಗೆ ಅವರ ಪತ್ನಿ ನಡೆಸುತ್ತಿರುವ ಯೂರೋಕಿಡ್ಸ್ ಶಾಲೆ ಮತ್ತು ಪಾಂಡಿತ್ಯ ಎಜುಕೇಷನ್ ಸೊಸೈಟಿಯ ಮೇಲೂ ಏಕಕಾಲದಲ್ಲಿ ಪರಿಶೀಲನೆ ನಡೆಸಲಾಗಿದೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಸಿದ್ದು vs ಕೃಷ್ಣ -ಸಿದ್ಧು ವಿರುದ್ಧ ನೇರ ಸವಾಲು: ‘ಬಿ’ ರಿಪೋರ್ಟ್ ಪ್ರಶ್ನಿಸಿ ಸ್ನೇಹಮಯಿ ಕೃಷ್ಣನ ನಡೆ ಭ್ರಷ್ಟ ವ್ಯವಸ್ಥೆಗೆ ಬಿಗಿ ಹೊಡೆತ!”
ಅಮೆರಿಕ–ಇಸ್ರೇಲ್ ದಾಳಿ ಬಳಿಕ ಇರಾನ್‌ನಲ್ಲಿ ಉದ್ವಿಗ್ನತೆ ತಾರಕಕ್ಕೆ
ಇಂದು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಂದ ಪ್ರತಿಭಟನೆ
BRICS ನ ಡಿಜಿಟಲ್ ಕರೆನ್ಸಿ ವಿಶ್ವ ಆರ್ಥಿಕತೆಯನ್ನೇ ಬೆರಗಾಗಿಸುತ್ತಾ..?
ಪರಸ್ತ್ರೀ ಹುಂಡಿಗೆ  ಒಂದುವರೆ ಕೋಟಿ ಅಪಾರ್ಟ್ಮೆಂಟ್, ಮಾಜಿ ಶಾಸಕನ ರಂಗಿನಾಟ 
ಸ್ಪೇನ್ ಅಧ್ಯಕ್ಷರ ವಿರುದ್ಧ ಟ್ರಂಪ್ ಗುಡುಗು 
ಅಸ್ಸಾಂನಲ್ಲಿ ಮತದಾನದ ಹಿನ್ನೆಲೆ ಹಿಂಸಾಚಾರ: 30ಕ್ಕೂ ಹೆಚ್ಚು ಮಂದಿ ಗಾಯ, 7 ಜನರ ಬಂಧನ
ರಾಜಿ ಮಾಡಲು ಬಂದವನಿಗೇ ಚೂರಿ ಇರಿತ
ಮಂಗಳೂರು ಸರ್ಕಾರಿ ಕಾಲೇಜಿನಲ್ಲಿ ಎಬಿವಿಪಿ, ಎನ್ ಎಸ್ ಯು ಐ ವಿದ್ಯಾರ್ಥಿಗಳ ಘರ್ಷಣೆ 
ನಿಶ್ಚಿತಾರ್ಥ ಮಾಡಿಕೊಂಡು, ಫೈನಾನ್ಸಿಯಲ್ ವಂಚನೆ ದೂರು ದಾಖಲು
ದೇವಳದ ಗೋಲ್ಮಾಲ್ ತಡೆಗೆ ಉಪ-ಮುಖ್ಯಮಂತ್ರಿ ಬುಲಾವ್!
ಸುರತ್ಕಲ್ ಹುಡುಗಿ ವಿಚಾರದಲ್ಲಿ ಹಲ್ಲೆ
ಮಂಗಳೂರು ಗ್ರಾಮಾಂತರ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರ
ಬೆಂಗಳೂರು ಟು ಮುಂಬೈ  ಐದೇ ಘಂಟೆ ಪ್ರಯಾಣ- ಎಕ್ಸ್ಪ್ರೆಸ್ ಹೈವೇಗೆ ಅಸ್ತು
ಸುಬ್ರಹ್ಮಣ್ಯ ಅಭಿವೃದ್ಧಿ — ಸ್ಥಳೀಯರ ಜೊತೆಗೂಡಿ ಮಾತ್ರ ಸಾಧ್ಯ!”
ಆಸಿಡ್ ದಾಳಿಗೊಳಗಾದ ಮಹಿಳೆಯರಿಗೆ ₹50 ಸಾವಿರ ಮಾಸಾಶನ: ಆಸಿಡ್ ಮಾರಾಟಕ್ಕೆ ಕಡಿವಾಣ ಹಾಕಲು ಸರ್ಕಾರ ಕ್ರಮ
ಸಚಿವ ಜಮೀರ್ ಕಥೆ ಗೋವಿಂದ!!!?
ರಾಜ್ಯಮಟ್ಟದಲ್ಲಿ ಸದ್ದು ಮಾಡಿದ ತೆರಿಗೆ ವಂಚನೆ ಪ್ರಕರಣದ ನಂತರವೂ ಅಧಿಕಾರಿಗಳು ಪಾಠ ಕಲಿತಿಲ್ಲವೇ….!?
ಸಿಐಡಿ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್: ವಂಚಕರ ಬಲೆಯಿಂದ ಜಸ್ಟ್ ಎಸ್ಕೇಪ್
ಹವ್ಯಕ ಭಾಷಾ ಅಕಾಡೆಮಿ ಅಸ್ತಿತ್ವಕ್ಕೆ ಗ್ರೀನ್ ಸಿಗ್ನಲ್ 
ಕಂದಾಯ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ
ಜೀತಕ್ಕಿಟ್ಟುಕೊಂಡು ದರ್ಬಾರ್ ನಡೆಸುತ್ತಿದ್ದ ರಜನಿಶೆಟ್ಟಿಯ ಬಂಧನ
ಮಸೀದಿ ಹುಂಡಿಗೂ ಲಗ್ಗೆ ಇಟ್ಟ ಕಳ್ಳರು….!
ಘರ್ಷಣೆಗಳ ನಡುವೆಯೂ ಜನರ ಮತದ ಹಕ್ಕು ಅಚಲ…ಸಂಕ್ಷಿಪ್ತ ನೋಟ..
ಡೇಟಾದಲ್ಲಿ ಸತ್ತಿದ್ದಾರೆ: ಬಡ ಮಹಿಳೆ ತಾನು ಜೀವಂತ ಸಾಬೀತುಪಡಿಸಲು ಹರಸಾಹಸ…ಬಡಜನರು “ಡೇಟಾ” ಅಲ್ಲ — ಅವರು ಜೀವಂತ ಮಾನವರು. 
ಅಕ್ರಮ ಡಿಸೇಲ್ ದಾಸ್ತಾನು ಪ್ರಕರಣ: 4,175 ಲೀಟರ್ ಡಿಸೇಲ್ ಕಂದಾಯ ಇಲಾಖೆಯಿಂದ ಹರಾಜು – ₹2.35 ಲಕ್ಷಕ್ಕೆ ಮಾರಾಟ!
ಹೈಕೋರ್ಟ್ ತೀರ್ಪಿನಿಂದ ದಕ್ಷಿಣ ಕನ್ನಡ ಇ-ರಿಕ್ಷಾ ಚಾಲಕರಿಗೆ favour
ಮೊಸಾದ್ ಏಜೆಂಟ್ ಇಸ್ಮಾಯಿಲ್ ಖಾನಿಯಿಂದ ಇರಾನಿ ಸರ್ವೋಚ್ಛ ನಾಯಕನ  ಹತ್ಯೆ
ಮ್ಯಾರಥಾನ್ ನಲ್ಲಿ ಇರುವಾಗಲೇ ಹೃದಯಾಘಾತದಿಂದ  ಸಬ್ ಇನ್ಸ್ಪೆಕ್ಟರ್ ನಿಧನ